ವರಿಷ್ಠರಿಗೆ ಸೆಡ್ಡು ಹೊಡೆದ ಈಶ್ವರಪ್ಪ: ಬ್ರಿಗೇಡ್ ಚಟುವಟಿಕೆ ಚುರುಕು
Team Udayavani, May 2, 2017, 10:21 AM IST
ರಾಯಚೂರು: ಪಕ್ಷದ ಚಟುವಟಿಕೆ ಹೊರತು ಪಡಿಸಿ ಬೇರೆ ಯಾವುದೇ ಸಂಘಟನೆಗಳಲ್ಲಿ ತೊಡಗಿಸಿಕೊಳ್ಳಬಾರದು ಎಂದು ವರಿಷ್ಠರು ಕಟ್ಟಪ್ಪಣೆ ಹೊರಡಿಸಿದ ಹೊರತಾಗಿಯೂ ಕೆ.ಎಸ್.ಈಶ್ವರಪ್ಪ ಅವರು ಸೆಡ್ಡು ಹೊಡೆದು ಸಂಗೊಳ್ಳಿ ರಾಯಣ್ಣ ಬ್ರಿಗೇಡ್ ಚಟುವಟಿಕೆ ಚುರುಕುಗೊಳಿಸಿದ್ದಾರೆ.
ಮಂಗಳವಾರ ರಾಯಚೂರು ಪ್ರವಾಸದಲ್ಲಿರುವ ಈಶ್ವರಪ್ಪ ಅವರು ಮೇ 8 ರಂದು ನಡೆಯುವ ರಾಜ್ಯ ಮಟ್ಟದ ಬ್ರಿಗೆಡ್ ಕಾರ್ಯಕರ್ತರ ಅಭ್ಯಾಸವರ್ಗದ ಪೂರ್ವ ಭಾವಿ ಸಭೆಯಲ್ಲಿ ಪಾಲ್ಗೊಂಡರು.
ಯಡಿಯೂರಪ್ಪ ಸಿಎಂ ಆಗುವುದು ಖಚಿತ!
ಈ ವೇಳೆ ಸುದ್ದಿಗಾರರೊಂದಿಗೆ ಮಾಡತನಾಡಿದ ಅವರು ‘ಕಳೆದ ಚುನಾವಣೆ ವೇಳೆ ಯಡಿಯೂರಪ್ಪ ಕೆಜೆಪಿ ಕಟ್ಟಿದರು ಹೀಗಾಗಿ ಕಾಂಗ್ರೆಸ್ ಅಧಿಕಾರಕ್ಕೆ ಬಂತು. ಬಿಜೆಪಿಗೆ 40 ,ಕೆಜೆಪಿಗೆ 6 ಸ್ಥಾನಗಳು ಬಂದವು. ಯಡಿಯೂರಪ್ಪ ಬಿಜೆಪಿ ವಾಪಾಸಾಗಿದ್ದು, ಲೋಕಸಭಾ ಚುನಾವಣೆಯಲ್ಲಿ 17 ಸ್ಥಾನ ಪಡೆದಿದ್ದೇವೆ. ಸಂಘಟನೆ ಬಲವಾಗಿದೆ.ಮೋದಿ , ಯಡಿಯೂರಪ್ಪ ಅವರ ಪ್ರಭಾವದಿಂದ ಬಿಜೆಪಿ ಅಧಿಕಾರಕ್ಕೆ ಬಂದಿದೆ. ಮುಂದಿನ ಚುನಾವಣೆಯಲ್ಲಿ ಬಿಜೆಪಿ ಅಧಿಕಾರಕ್ಕೆ ಬರಲಿದ್ದು ಯಡಿಯೂರಪ್ಪ ಸಿಎಂ ಆಗುವುದು ನಿಶ್ಚಿತ’ ಎಂದರು.
ರಾಯಚೂರು ಸಭೆಗೂ ಮುನ್ನ ಮಂತ್ರಾಲಯ ರಾಘವೇಂದ್ರ ಸ್ವಾಮಿಗಳ ಮಠಕ್ಕೆ ತೆರಳಿದ ಅವರು ವಿಶೇಷ ಪೂಜೆ ಸಲ್ಲಿಸಿದರು. ರಾಯರ ಬೃಂದಾವನದ ಬಳಿ ಕೆಲಕಾಲ ಧ್ಯಾನವನ್ನೂ ಮಾಡಿದರು.
ಮೇ 8 ರಂದು ರಾಯಣ್ಣ ಬ್ರಿಗೆಡ್ ಅಭ್ಯಾಸವರ್ಗ ರಾಯಚೂರಿನಲ್ಲಿ ಆಯೋಜಿಸಲಾಗಿದ್ದು, ಯುವ ಬ್ರಿಗೇಡ್‌ನ ಸದಸ್ಯರು ಸೇರಿದಂತೆ 224 ವಿಧಾನಸಭಾ ಕ್ಷೇತ್ರಗಳ ಪ್ರತಿನಿಧಿಗಳು ಭಾಗವಹಿಸುತ್ತಿದ್ದಾರೆ ಎಂದು ಈಶ್ವರಪ್ಪ ತಿಳಿಸಿದ್ದಾರೆ.
ಮಂತ್ರಾಲಯದಲ್ಲಿ ಸುದ್ದಿಗಾರರು ಬಿಜೆಪಿ ಬಿಕ್ಕಟ್ಟಿನ ಬಗ್ಗೆ ಪ್ರಶ್ನಿಸಿದಾಗ ಸಿಡಿಮಿಡಿಗೊಂಡ ಅವರು ನೀವು ಕೇಳಿದ್ದಕ್ಕೆಲ್ಲಾ ಉತ್ತರ ನೀಡಬೇಕಿಲ್ಲ ಎಂದರು.
ರಾಜ್ಯ ಉಸ್ತುವಾರಿ ಮುರಳೀಧರ ರಾವ್ ಅವರು ಪಕ್ಷದ ಚಟುವಟಿಕೆ ಹೊರತುಪಟಿಸಿ ಬೇರೆ ಯಾವುದೇ ಚಟುವಟಿಕೆ ನಡೆಸಬಾರದು ಎಂದು ಎಚ್ಚರಿಕೆ ನೀಡಿದ್ದರು.
ಇದೀಗ ಪಕ್ಷದ ಬಿಕ್ಕಟ್ಟಿಗೆ ಅಂತ್ಯಹಾಡಲು ರಾಷ್ಟ್ರಾಧ್ಯಕ್ಷ ಅಮಿತ್ ಶಾ ಅವರು ಪ್ರವೇಶಿಸುವ ಸಾಧ್ಯತೆಗಳು ದಟ್ಟವಾಗಿದ್ದು, ಅವರು ಯಾವ ನಿರ್ಧಾರ ಕೈಗೊಳ್ಳುತ್ತಾರೆ ಎಂದು ಕಾದುನೋಡಬೇಕಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
BSY: ಬಿಎಸ್ವೈ ತಪ್ಪೊಪ್ಪಿಕೊಂಡಿರುವುದಾಗಿ ಸಂತ್ರಸ್ತೆ ಹೇಳಿಕೆ ದಾಖಲು: ಎಸ್ಪಿಪಿ
Belagavi Session: ವಕ್ಫ್ ಅಧಿಸೂಚನೆ ಹಿಂಪಡೆಯಲ್ಲ, ಪರಿಹಾರಕ್ಕೆ ಸಮಿತಿ: ಸಿಎಂ ಭರವಸೆ
Over Remarks: ʼಸಿದ್ದರಾಮೋತ್ಸವʼ ಮಾಡಿಸುವ ನೀವು ‘ಅಂಬೇಡ್ಕರ್ ಉತ್ಸವ’ ಮಾಡಲ್ಲ: ಬಿಜೆಪಿ
Internal Dissent: ಪ್ರಧಾನಿ ಮೋದಿ ಭೇಟಿಯಾದ ವಿಜಯೇಂದ್ರ ದೂರದಿದ್ದರೂ ‘ಸಂದೇಶ’ ರವಾನೆ
Bill Amendment: ರಾಜ್ಯಪಾಲರ ಕುಲಾಧಿಪತಿ ಅಧಿಕಾರಕ್ಕೆ ಕತ್ತರಿ: ಮೇಲ್ಮನೆಯಲ್ಲೂ ಅಂಗೀಕಾರ
MUST WATCH
ಹೊಸ ಸೇರ್ಪಡೆ
Telugu actor: ಸಹ ನಟಿಗೆ ಲೈಂಗಿಕ ಕಿರುಕುಳ; ಖ್ಯಾತ ನಟನ ಬಂಧನ
Ambedkar row: ಅಮಿತ್ ಶಾಗೆ ಹುಚ್ಚು ಹಿಡಿದಿದೆ, ರಾಜಕೀಯ ಬಿಟ್ಟು ಹೋಗಲಿ ಎಂದ ಲಾಲು ಪ್ರಸಾದ್
ಹೊಸ ವರ್ಷಕ್ಕೆ ಮಾರ್ಗಸೂಚಿ ಬಿಡುಗಡೆ ಮಾಡಿದ ಪೊಲೀಸರು, ಎಲ್ಲಿ…? ಇಲ್ಲಿದೆ ನೋಡಿ ಮಾಹಿತಿ
Lok Adalat: ಲೋಕ್ ಅದಾಲತ್ನಲ್ಲಿ 38.8 ಲಕ್ಷ ವ್ಯಾಜ್ಯ ಇತ್ಯರ್ಥ
Bengaluru: ಒಬಾಮಾ ಭೇಟಿ ವೇಳೆ ಸ್ಫೋಟ ಸಂಚು: ಡಿ.23ಕ್ಕೆ ಶಿಕ್ಷೆ ಪ್ರಕಟ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.