ನಮ್ಮ ಕುಟುಂಬದ ಮೇಲೆ ಈಶ್ವರಪ್ಪ ಅನಗತ್ಯ ಆರೋಪ: ರಾಘವೇಂದ್ರ
Team Udayavani, Apr 14, 2024, 11:49 PM IST
ಬೆಂಗಳೂರು: ಲೋಕಸಭೆ ಚುನಾವಣೆಗೆ ಅಭ್ಯರ್ಥಿಗಳನ್ನು ಆಯ್ಕೆ ಮಾಡಿರುವುದು ಪಕ್ಷದ ವರಿಷ್ಠರು. ಈಶ್ವರಪ್ಪ ಅವರು ಸುಮ್ಮನೆ ನಮ್ಮ ಕುಟುಂಬದ ಮೇಲೆ ಆರೋಪಿಸುತ್ತಿದ್ದಾರೆ. ನಮ್ಮ ಕುಟುಂಬದ ಮೇಲೆ ಬಂದೂಕಿಟ್ಟು ಹೈಕಮಾಂಡ್ನತ್ತ ಗುಂಡು ಹೊಡೆಯುವ ಕೆಲಸ ಮಾಡುತ್ತಿದ್ದಾರೆ ಎಂದು ಶಿವಮೊಗ್ಗ ಬಿಜೆಪಿ ಅಭ್ಯರ್ಥಿ ಬಿ.ವೈ. ರಾಘವೇಂದ್ರ ಆರೋಪಿಸಿದರು.
ರವಿವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಈಶ್ವರಪ್ಪ ನಮ್ಮ ಪಕ್ಷದ ಹಿರಿಯ ಮುಖಂಡರು. ಅವರ ಬಗ್ಗೆ ಮಾಧ್ಯಮಗಳ ಮುಂದೆ ಮಾತನಾಡಬಾರದು ಎಂದುಕೊಂಡಿದ್ದೆ. ಆದರೆ ಈಗ ಮಾತನಾಡುವ ಅನಿವಾರ್ಯತೆ ಬಂದಿದೆ. ವಿಜಯೇಂದ್ರ ಬಿಜೆಪಿ ರಾಜ್ಯಾಧ್ಯಕ್ಷರಾಗಿರುವುದನ್ನು ಸಹಿಸಲು ಅವರಿಗೆ ಆಗುತ್ತಿಲ್ಲ. ಕಾಂತೇಶ್ಗೆ ಟಿಕೆಟ್ ಸಿಕ್ಕಿಲ್ಲವೆಂಬ ಹತಾಶೆಯಲ್ಲಿ ಮಾತನಾಡುತ್ತಿದ್ದಾರೆ.
ಯಡಿಯೂರಪ್ಪ ಸಾಕಷ್ಟು ಸವಾಲು ಎದುರುಸಿ ಹೋರಾಟ ಮಾಡಿದವರು. ಹಿಂದುತ್ವ ಮತ್ತು ಪಕ್ಷನಿಷ್ಠೆಯ ವಿಚಾರದಲ್ಲಿ ನಮ್ಮ ಕುಟುಂಬ ರಾಜಿಯಾದದ್ದಿಲ್ಲ ಎಂದು ಹೇಳಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Kanakapura: ಪ್ರವಾಸ ಸಂದರ್ಭ ವಿದ್ಯಾರ್ಥಿನಿಯರಿಗೆ ಉಪನ್ಯಾಸಕರಿಂದ ಮದ್ಯಪಾನ: ದೂರು
Koppal: ಚಿಕನ್, ಮಟನ್ ಸೆಂಟರ್ಗೆ ಸಚಿವೆ ಶೋಭಾ ಕರಂದ್ಲಾಜೆ ಹೆಸರಿಟ್ಟ ಅಭಿಮಾನಿ
Malleshwaram: ಪ್ರಕರಣದಲ್ಲಿ ಭಾಗಿಯಾಗಿದ್ದ ಕೈದಿಯಿಂದ ಹನಿಟ್ರ್ಯಾಪ್?
Caste census: ನಾಡಿದ್ದು ಸಿಎಂ ಸಿದ್ದರಾಮಯ್ಯ ಮಹತ್ವದ ಸಭೆ
Result: ಇಂದು ಯುಜಿನೀಟ್ ಪರಿಷ್ಕೃತ ತಾತ್ಕಾಲಿಕ ಫಲಿತಾಂಶ ಪ್ರಕಟ
MUST WATCH
ಹೊಸ ಸೇರ್ಪಡೆ
Salman Khan: 5 ಕೋಟಿ ನೀಡಿ, ಇಲ್ಲದಿದ್ದರೆ… ಸಲ್ಮಾನ್ ಖಾನ್ ಗೆ ಮತ್ತೆ ಜೀವ ಬೆದರಿಕೆ
Vijayapura: ಗ್ರಾಮಕ್ಕೆ ನುಗ್ಗಿದ ಮೊಸಳೆ ಸೆರೆ
Canada Vs India: ನಿಜ್ಜರ್ ಹತ್ಯೆ ಕೇಸಲ್ಲಿ ಸತ್ಯ ಒಪ್ಪಿದ ಕೆನಡಾ ಪ್ರಧಾನಿ: ಕೇಂದ್ರ ಸರಕಾರ
Helping Nature: ಭಾರತ ದಾಳಿ ಮಾಡಲ್ಲ, ತನ್ನ ಮೇಲಿನ ದಾಳಿಯನ್ನೂ ಸಹಿಸಲ್ಲ: ಭಾಗವತ್
Kanakapura: ಪ್ರವಾಸ ಸಂದರ್ಭ ವಿದ್ಯಾರ್ಥಿನಿಯರಿಗೆ ಉಪನ್ಯಾಸಕರಿಂದ ಮದ್ಯಪಾನ: ದೂರು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.