ರಾಜ್ಯದ 348 ಗ್ರಾಪಂಗಳಲ್ಲಿ ಬಾಪೂಜಿ ಸೇವಾ ಕೇಂದ್ರ ಸ್ಥಾಪನೆ
Team Udayavani, Jun 3, 2019, 3:00 AM IST
ಬೆಂಗಳೂರು: ರಾಜ್ಯದ 348 ಗ್ರಾಮ ಪಂಚಾಯಿತಿಗಳಲ್ಲಿ ಬಾಪೂಜಿ ಸೇವಾ ಕೇಂದ್ರಗಳನ್ನು ಸ್ಥಾಪಿಸಲು ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ಗ್ರಾಮ ಪಂಚಾಯಿತಿಗಳು ಪಂಚತಂತ್ರ ತಂತ್ರಾಂಶದ ಮೂಲಕ ಈಗಾಗಲೇ ಸಾರ್ವಜನಿಕರಿಗೆ ಒದಗಿಸಲಾಗುತ್ತಿರುವ ಸೇವೆಗಳ ಜತೆಗೆ ಅಟಲ್‌ಜಿ ಜನಸ್ನೇಹಿ ಕೇಂದ್ರ,
ನಾಡ ಕಚೇರಿಗಳಲ್ಲಿ ವಿತರಿಸುತ್ತಿರುವ ಸೇವೆಗಳನ್ನು ಗ್ರಾಮ ಪಂಚಾಯತ್‌ಗಳ ಪಂಚತಂತ್ರ ತಂತ್ರಾಂಶದ ಮೂಲಕ ವಿತರಿಸುವ ವ್ಯವಸ್ಥೆಯನ್ನು ಸ್ಥಾಪಿಸುವ ಉದ್ದೇಶದಿಂದ ರಾಜ್ಯದಲ್ಲಿ ಈವರೆಗೆ ಒಟ್ಟು 5,676 ಗ್ರಾಪಂಗಳಲ್ಲಿ ಈಗಾಗಲೇ ಬಾಪೂಜಿ ಸೇವಾ ಕೇಂದ್ರಗಳನ್ನು ಸ್ಥಾಪಿಸಿ ಅನುಷ್ಠಾನಗೊಳಿಸಲಾಗುತ್ತಿದ್ದು, ಉಳಿದ 348 ಗ್ರಾಪಂಗಳಲ್ಲಿ ಬಾಪೂಜಿ ಸೇವಾ ಕೇಂದ್ರಗಳನ್ನು ಸ್ಥಾಪಿಸಲು ಸರ್ಕಾರ ಆದೇಶಿಸಿದೆ.
ಅದರಂತೆ, ಗ್ರಾಮೀಣ ಜನತೆಯ ಸಾಮಾಜಿಕ, ಶೈಕ್ಷಣಿಕ, ವಾಣಿಜ್ಯ ಮತ್ತು ಕೃಷಿ ಚಟುವಟಿಕೆಗಳಿಗೆ ವಿವಿಧ ಇಲಾಖೆಗಳಿಂದ ಹಲವಾರು ದಾಖಲೆಗಳನ್ನು ತ್ವರಿತವಾಗಿ ಮತ್ತು ಸಮೀಪದಲ್ಲಿ ಪಡೆದುಕೊಳ್ಳಲು ಗ್ರಾಮೀಣಾಭಿವೃದ್ಧಿ ಇಲಾಖೆಯ 25 ಹಾಗೂ ಕಂದಾಯ ಇಲಾಖೆಯ 40 ಸೇವೆಗಳನ್ನು ರಾಜ್ಯದ ಎಲ್ಲ ಗ್ರಾಮ ಪಂಚಾಯಿತಿಗಳ ಬಾಪೂಜಿ ಸೇವಾ ಕೇಂದ್ರಗಳ ಮೂಲಕ ನೀಡುವಂತೆ ಸರ್ಕಾರದ ಆದೇಶದಲ್ಲಿ ತಿಳಿಸಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Waqf Protest: 1974ರಿಂದ ಇದುವರೆಗೆ ಬಿಜೆಪಿ ಯಾಕೆ ಹೋರಾಟ ಮಾಡಿಲ್ಲ: ಎಂ.ಬಿ.ಪಾಟೀಲ್
AI world: ಕ್ರಿಮಿನಲ್‌ಗಳ ಜಾತಕವನ್ನೇ ಬಿಚ್ಚಿಡುವ ಎಐ ಆ್ಯಪ್!
Ramanagara: ಹೃದಯಾಘಾತದಿಂದ ಕಾವೇರಿ ನೀರಾವರಿ ನಿಗಮದ ಮಾಜಿ ಎಂಜಿನಿಯರ್ ನಿಧನ
CM ಸಿದ್ದರಾಮಯ್ಯ ಭ್ರಷ್ಟ ಎಂದು ನಿರೂಪಿಸಲು ಯಶಸ್ವಿ: ಆರ್.ಅಶೋಕ್
BJP: ವಿಜಯೇಂದ್ರ ದಿಲ್ಲಿಗೆ: ವರಿಷ್ಠರ ಜತೆ “ಬಣ’ ರಾಜಕೀಯ ಚರ್ಚೆ?
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.