ರಾಯಣ್ಣ ಮೂರ್ತಿ ಸ್ಥಾಪನೆ; ಗೆಜೆಟ್ ನೋಟಿಫಿಕೇಶನ್ ಹೊರಡಿಸಲು ಕ್ರಮ: ಜಾರಕಿಹೊಳಿ
Team Udayavani, Aug 29, 2020, 12:50 PM IST
ಬೆಳಗಾವಿ: ಶಿವಾಜಿ ಮಹಾರಾಜರು ಹಾಗೂ ಸಂಗೊಳ್ಳಿ ರಾಯಣ್ಣ ಯಾವುದೇ ಜಾತಿಗೆ ಸೀಮಿತರಲ್ಲ. ಪೀರನವಾಡಿಯಲ್ಲಿ ಉಲ್ಭಣಿಸಿದ್ದ ರಾಯಣ್ಣ ಮೂರ್ತಿ ಪ್ರತಿಷ್ಠಾಪನೆ ವಿವಾದ ಸುಖಾಂತ್ಯ ಕಂಡಿದ್ದು, ರಾಯಣ್ಣ ಮೂರ್ತಿ ಪ್ರತಿಷ್ಠಾಪನೆ ಕುರಿತು ಗೆಜೆಟ್ ನೋಟಿಫಿಕೇಶನ್ ಹೊರಡಿಸಲು ಕಾನೂನು ಪ್ರಕಾರ ಕ್ರಮ ಕೈಗೊಳ್ಳಲಾಗುವುದು ಎಂದು ಜಲಸಂಪನ್ಮೂಲ ಸಚಿವ ರಮೇಶ ಜಾರಕಿಹೊಳಿ ಹೇಳಿದರು.
ನಗರದಲ್ಲಿ ಶನಿವಾರ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಪೀರನವಾಡಿಯಲ್ಲಿನ ಸಂಗೊಳ್ಳಿ ರಾಯಣ್ಣ ಪ್ರತಿಮೆ ವಿವಾದ ಸುಖಾಂತ್ಯಗೊಂಡಿದೆ. ರಾಯಣ್ಣ ಹಾಗೂ ಶಿವಾಜಿ ಯಾವುದೇ ಜಾತಿಗೆ ಸೀಮಿತರಲ್ಲ. ಜಾತಿಗೆ ಸೀಮಿತಗೊಳಿಸುವುದು ತಪ್ಪು. ಇವರಿಬ್ಬರೂ ನಮ್ಮ ಸಮಾಜದ ಆಸ್ತಿ. ಇಂಥ ವೀರ ಪುರುಷರಿಗೆ ಅವಮಾನ ಆಗದಂತೆ ಎಚ್ಚರಿಕೆ ವಹಿಸಲಾಗುವುದು ಎಂದರು.
ಕನ್ನಡ ಸಂಘಟನೆಯವರ ಮೇಲಿನ ಪ್ರಕರಣಗಳ ಕುರಿತು ಮುಖ್ಯಮಂತ್ರಿ ಯಡಿಯೂರಪ್ಪ ಅವರೊಂದಿಗೆ ಚರ್ಚಿಸಿ ಸೂಕ್ತ ತೀರ್ಮಾನ ಕೈಗೊಳ್ಳಲಾಗುವುದು. ಇಂಥ ವಿಷಯಗಳ ಬಗ್ಗೆ ನಾನೊಬ್ಬನೇ ನಿರ್ಧಾರ ತೆಗೆದುಕೊಳ್ಳಲು ಆಗುವುದಿಲ್ಲ. ಪ್ರಕರಣ ಹಿಂಪಡೆಯುವಂತೆ ಮುಖ್ಯಮಂತ್ರಿಗಳಿಗೆ ಮನವಿ ಮಾಡುವುದಾಗಿ ಹೇಳಿದರು.
ಶಿವಸೇನೆ ಉದ್ದೇಶವೇ ಪತ್ರ ಬರೆಯೋದು. ಪತ್ರ ಬರೆಯುವುದನ್ನು ಶಿವಸೇನೆ ಅಜೆಂಡಾ ಮಾಡಿಕೊಂಡಿದೆ. ಅಜೆಂಡಾ ಇಟ್ಟುಕೊಂಡೇ ಮಹಾರಾಷ್ಟ್ರದಲ್ಲಿ ಅಧಿಕಾರಕ್ಕೆ ಶಿವಸೇನೆ ಏರಿದೆ. ಇಂಥಹ ವಿಷಯಗಳಿಗೆ ಬಹಳ ಮಹತ್ವ ಕೊಡುವ ಅಗತ್ಯವಿಲ್ಲ ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಹುಬ್ಬಳ್ಳಿ ಸಿಲಿಂಡರ್ ಸ್ಫೋಟ ಪ್ರಕರಣ: ಚಿಕಿತ್ಸೆ ಫಲಿಸದೆ ಇಬ್ಬರು ಮಾಲಾಧಾರಿಗಳು ಮೃ*ತ್ಯು
Negotiation: ಸಿ.ಟಿ.ರವಿ – ಸಚಿವೆ ಹೆಬ್ಬಾಳ್ಕರ್ ಸಂಧಾನಕ್ಕೆ ಸಭಾಪತಿ ಹೊರಟ್ಟಿ ಪ್ರಯತ್ನ?
Congress Session: ಬೆಳಗಾವಿಯಲ್ಲಿಂದು, ನಾಳೆ ಗಾಂಧಿ ಮಹಾಧಿವೇಶನ
Politics: ಕುಸುಮಾರನ್ನು ಎಂಎಲ್ಎ ಮಾಡಲು ಇಷ್ಟೆಲ್ಲ ಪ್ರಯತ್ನ: ಶಾಸಕ ಮುನಿರತ್ನ ಆರೋಪ
FIR Register: ಜಡ್ಜ್ ಹೆಸರಲ್ಲಿ ಲಂಚಕ್ಕೆ ಬೇಡಿಕೆಯ ಆರೋಪ: ವಕೀಲೆ ವಿರುದ್ಧ ದೂರು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Mangaluru: ಹುಟ್ಟೂರಿನತ್ತ ಯೋಧ ಅನೂಪ್ ಪಾರ್ಥಿವ ಶರೀರ… ಸಂಸದರಿಂದ ಅಂತಿಮ ನಮನ
Shirva ಹಳೆವಿದ್ಯಾರ್ಥಿ ಸಂಘ; ಡಿ.29: ದಶಮಾನೋತ್ಸವ, ನೂತನ ಉಪಹಾರ ಗೃಹ ಸಮರ್ಪಣೆ
ಹುಬ್ಬಳ್ಳಿ ಸಿಲಿಂಡರ್ ಸ್ಫೋಟ ಪ್ರಕರಣ: ಚಿಕಿತ್ಸೆ ಫಲಿಸದೆ ಇಬ್ಬರು ಮಾಲಾಧಾರಿಗಳು ಮೃ*ತ್ಯು
MT Vasudevan Nair: ಮಲಯಾಳಂ ಸಾಹಿತಿ, ಜ್ಞಾನಪೀಠ ಪುರಸ್ಕೃತ ಎಂಟಿ ವಾಸುದೇವನ್ ನಾಯರ್ ನಿಧನ
Goa: ಕ್ಯಾಲಂಗುಟ್ ಬೀಚ್ನಲ್ಲಿ ಪ್ರವಾಸಿ ಬೋಟ್ ಮುಳುಗಿ ಓರ್ವ ಸಾ*ವು, 20 ಮಂದಿ ರಕ್ಷಣೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.