ಮೌಲ್ಯಮಾಪನ ಬಹಿಷ್ಕಾರ:ಪದವಿ ಪೂರ್ವ ಉಪನ್ಯಾಸಕರ ಸಂಘದ ಎಚ್ಚರಿಕೆ
Team Udayavani, Mar 13, 2019, 12:30 AM IST
ಬೆಂಗಳೂರು: ಸರ್ಕಾರಿ ಪದವಿಪೂರ್ವ ಕಾಲೇಜಿನಲ್ಲಿ ಸೇವೆ ಸಲ್ಲಿಸುತ್ತಿರುವ ಉಪನ್ಯಾಸಕರ ವಿವಿಧ ಬೇಡಿಕೆ ಈಡೇರಿಸದೆ ಇದ್ದರೆ, ಮಾ.21ರಿಂದ ನಡೆಯಲಿರುವ ದ್ವಿತೀಯ ಪಿಯುಸಿ ವಿದ್ಯಾರ್ಥಿಗಳ ಮೌಲ್ಯಮಾಪನ ಬಹಿಷ್ಕರಿಸಲು ಉಪನ್ಯಾಸಕರ ಸಂಘ ನಿರ್ಧರಿಸಿದೆ.
ದ್ವಿತೀಯ ಪಿಯುಸಿ ಪರೀಕ್ಷೆ ಮಾ.18ಕ್ಕೆ ಮುಗಿಯಲಿದೆ. 6.73 ಲಕ್ಷ ವಿದ್ಯಾರ್ಥಿಗಳು ಪರೀಕ್ಷೆ ಎದುರಿಸುತ್ತಿದ್ದಾರೆ. ಮಾ.21ರಿಂದ ಮೌಲ್ಯಮಾಪನ ಪ್ರಕ್ರಿಯೆ ಆರಂಭವಾಗಲಿದ್ದು, ಸರ್ಕಾರ ಸೂಕ್ತ ಸ್ಪಂದನೆ ನೀಡದೇ ಇದ್ದರೆ ಉಪನ್ಯಾಸಕರ ಈ ನಿರ್ಧಾರದಿಂದ ವಿದ್ಯಾರ್ಥಿಗಳ ಭವಿಷ್ಯದ ಮೇಲೂ ಪರಿಣಾಮ ಬೀರುವ ಸಾಧ್ಯತೆ ಇದೆ. ಮಂಗಳವಾರ ನಡೆದ ರಾಜ್ಯದ ಸರ್ಕಾರಿ ಪದವಿಪೂರ್ವ ಕಾಲೇಜಿನ ಉಪನ್ಯಾಸಕರ ಸಂಘದ ಪದಾಧಿಕಾರಿಗಳ ಸಭೆಯಲ್ಲಿ ಈ ತೀರ್ಮಾನ ತೆಗೆದುಕೊಳ್ಳಲಾಗಿದೆ ಎಂದು ಸಂಘದ ಅಧ್ಯಕ್ಷ ತಿಮ್ಮಯ್ಯ ಪುರ್ಲೆ ತಿಳಿಸಿದ್ದಾರೆ.
ಪಿಯು ಇಲಾಖೆಯ ರಜೆ ಕಡಿತ ಮಾಡಿ ದ್ವಿತೀಯ ಪಿಯುಸಿ ತರಗತಿಗಳನ್ನು ಮೇ 1ರಿಂದ ಆರಂಭಿಸುವುದು ಸರಿಯಲ್ಲ. ಹಾಗೆಯೇ ವೇತನ ತಾರತಮ್ಯ ಇನ್ನೂ ನಿವಾರಿಸಿಲ್ಲ. 18 ಪ್ರಮುಖ ಬೇಡಿಕೆಗಳನ್ನು ಲಿಖೀತ ರೂಪದಲ್ಲಿ ಸರ್ಕಾರಕ್ಕೆ ನೀಡಿದ್ದರೂ, ಸ್ಪಂದನೆ ದೊರೆತಿಲ್ಲ. 20ರವರೆಗೂ ಕಾಯುತ್ತೇವೆ. ಅಲ್ಲಿಯವರೆಗೂ ಯಾವುದೇ ಸಂದನೆ ಸಿಗದೇ ಇದ್ದರೆ ಮಾ.21ರಿಂದ ಬೆಂಗಳೂರಿನಲ್ಲಿ ಅಹೋರಾತ್ರಿ ಪ್ರತಿಭಟನೆ ನಡೆಸಲಿದ್ದೇವೆ. ನಮ್ಮ ನಿರ್ಧಾರಕ್ಕೆ ವಿಧಾನ ಪರಿಷತ್ ಸದಸ್ಯರು ಬೆಂಬಲ ವ್ಯಕ್ತಪಡಿಸಿದ್ದಾರೆ ಎಂದು ಅವರು ಮಾಹಿತಿ ನೀಡಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Leopard: ಮನೆಯ ಮಹಡಿ ಮೇಲೆ ಚಿರತೆ ಓಡಾಟ, CCTVಯಲ್ಲಿ ದೃಶ್ಯ ಸೆರೆ, ಆತಂಕದಲ್ಲಿ ಗ್ರಾಮಸ್ಥರು
B. S. Yediyurappa ವಿರುದ್ಧ ಎಫ್ಐಆರ್‌ಗೆ ಸಚಿವರ ಒತ್ತಡ
BJP ಸರಕಾರ ಕಾಲದ ಕೋವಿಡ್, ಗಣಿ ತನಿಖೆಗೆ ಎಸ್‌ಐಟಿ: ಸಚಿವ ಸಂಪುಟ ನಿರ್ಧಾರ
Karnataka; 7 ವೈದ್ಯಕೀಯ ಕಾಲೇಜುಗಳಲ್ಲಿ ಕ್ರಿಟಿಕಲ್ ಕೇರ್ ವಿಭಾಗ ಆರಂಭ
Bandh; ನ. 20ರಂದು ರಾಜ್ಯವ್ಯಾಪಿ ಮದ್ಯ ಮಾರಾಟ ಬಂದ್
MUST WATCH
ಹೊಸ ಸೇರ್ಪಡೆ
Video: ಕಾರಿನ ಟಯರ್ ಒಳಗಿತ್ತು ಒಂದಲ್ಲ, ಎರಡಲ್ಲ ಬರೋಬ್ಬರಿ 50 ಲಕ್ಷ… ದಂಗಾದ ಅಧಿಕಾರಿಗಳು
Bhairathi Ranagal: ಭೈರತಿ ಪಾತ್ರಕ್ಕೊಂದು ಸದುದ್ದೇಶವಿದೆ..: ಶಿವರಾಜ್ ಕುಮಾರ್
Hunsur: ಅಪ್ರಾಪ್ತ ಬಾಲಕಿ ಗರ್ಭಿಣಿ ಪ್ರಕರಣ; ಯುವಕನ ಬಂಧನ
Notice: ಸಂಗೀತ ಕಾರ್ಯಕ್ರಮಕ್ಕೂ ಮುನ್ನ ಪಂಜಾಬಿ ಗಾಯಕ ದಿಲ್ಜಿತ್ ದೋಸಾಂಜ್ ಗೆ ನೋಟಿಸ್
Leopard: ಮನೆಯ ಮಹಡಿ ಮೇಲೆ ಚಿರತೆ ಓಡಾಟ, CCTVಯಲ್ಲಿ ದೃಶ್ಯ ಸೆರೆ, ಆತಂಕದಲ್ಲಿ ಗ್ರಾಮಸ್ಥರು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.