KEA: 2ನೇ ಸುತ್ತಿನ ಅನಂತರವೂ 16 ಸಾವಿರ ಇಂಜಿನಿಯರಿಂಗ್ ಸೀಟು ಉಳಿಕೆ
ಬಾಕಿ ಉಳಿದ ಎಲ್ಲ ಸೀಟು ಕಾಲೇಜುಗಳಿಗೆ ಬಿಟ್ಟು ಕೊಟ್ಟ ಕೆಇಎ
Team Udayavani, Oct 22, 2024, 11:56 PM IST
ಬೆಂಗಳೂರು: ಯುಜಿಸಿಇಟಿ 2ನೇ ಮುಂದುವರಿದ ಸುತ್ತಿನ ಪ್ರವೇಶ ಪ್ರಕ್ರಿಯೆ ಅನಂತರ ಒಟ್ಟು 16,004 ಸೀಟುಗಳು ಭರ್ತಿಯಾಗದೆ ಉಳಿದಿದೆ ಎಂದು ಕರ್ನಾಟಕ ಪರೀಕ್ಷಾ ಪ್ರಾಧಿಕಾರ (ಕೆಇಎ) ಮಾಹಿತಿ ನೀಡಿದೆ.
ಈ ಬಗ್ಗೆ ಪತ್ರಿಕಾ ಪ್ರಕಟಣೆ ನೀಡಿರುವ ಕೆಇಎಯ ಕಾರ್ಯನಿರ್ವಾಹಕ ನಿರ್ದೇಶಕ ಎಚ್. ಪ್ರಸನ್ನ, ಸರಕಾರ ಮತ್ತು ಕರ್ನಾಟಕ ಅನುದಾನ ರಹಿತ ಎಂಜಿನಿಯರಿಂಗ್ ಕಾಲೇಜುಗಳ ಸಂಘದ ನಡುವಿನ ಒಪ್ಪಂದದ ಪ್ರಕಾರ ಪ್ರವೇಶ ಪ್ರಕ್ರಿಯೆ ಅನಂತರ ಬಾಕಿ ಉಳಿದ ಸೀಟುಗಳನ್ನು ಕಾಲೇಜುಗಳಿಗೆ ಬಿಟ್ಟು ಕೊಡಬೇಕು. ಆ ಪ್ರಕಾರ ವೆಬ್ ಸೈಟ್‌ನಲ್ಲಿ ಭರ್ತಿಯಾಗದೆ ಉಳಿದಿರುವ ಸೀಟುಗಳ ವಿವರ (ಕಾಲೇಜು ಮತ್ತು ಕೋರ್ಸ್‌ವಾರು)ಗಳನ್ನು ಕೆಇಎ ವೆಬ್‌ಸೈಟ್‌ನಲ್ಲಿ ಪ್ರಕಟಿಸಲಾಗಿದೆ.
ಸರ್ಕಾರಕ್ಕೂ ಈ ಬಗ್ಗೆ ಪತ್ರ ಬರೆದು ತಿಳಿಸಲಾಗಿದೆ ಎಂದು ಹೇಳಿದ್ದಾರೆ.
ಎಂಜಿನಿಯರಿಂಗ್‌ನ ವಿವಿಧ ವಿಭಾಗಗಳಲ್ಲಿ 13,089 ಸೀಟು ಭರ್ತಿಯಾಗದೆ ಬಾಕಿ ಉಳಿದಿವೆ. ಆರ್ಕಿಟೆಕ್ಚರ್ ಕೋರ್ಸ್‌ನಲ್ಲಿ 569 ಸೀಟು ಭರ್ತಿಯಾಗಿಲ್ಲ. ಒಟ್ಟು 2,208 ಮಂದಿಗೆ ವಿವಿಧ ಕಾಲೇಜುಗಳಲ್ಲಿ ಸೀಟು ಹಂಚಿಕೆಯಾಗಿದ್ದರೂ ಶುಲ್ಕ ಪಾವತಿಸಿಲ್ಲ. 95 ಮಂದಿ ಶುಲ್ಕ ಪಾವತಿಸಿದ್ದರೂ ಪ್ರವೇಶ ಪತ್ರ ಡೌನ್‌ಲೋಡ್ ಮಾಡಿಕೊಂಡು ಕಾಲೇಜುಗಳಿಗೆ ಹೋಗಿಲ್ಲ. 45 ಮಂದಿ ಅಲ್ಪಸ್ವಲ್ಪ ಶುಲ್ಕ ಪಾವತಿಸಿ¨ªಾರೆ ಎಂದು ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.