Caste Census ವಿಚಾರದಲ್ಲಿ ಕಾಂಗ್ರೆಸ್ ನಿರ್ಣಯ ಎಲ್ಲರೂ ಪಾಲಿಸಬೇಕು: ಮಲ್ಲಿಕಾರ್ಜುನ ಖರ್ಗೆ
Team Udayavani, Mar 16, 2024, 10:06 PM IST
ಬೆಂಗಳೂರು: ಜಾತಿ ಗಣತಿ ಪರವಾಗಿ ಕಾಂಗ್ರೆಸ್ ಪಕ್ಷವಿದ್ದು ಸಿದ್ದರಾಮಯ್ಯ ಇರಲಿ, ಡಿ.ಕೆ.ಶಿವಕುಮಾರ್ ಯಾರೇ ಇರಲಿ ಎಲ್ಲರೂ ಪಕ್ಷದ ನಿರ್ಣಯವನ್ನು ಪಾಲಿಸಬೇಕು ಎಂದು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಖಡಕ್ ಸೂಚನೆ ನೀಡಿದರು.
ಎಐಸಿಸಿ ಅಧ್ಯಕ್ಷನಾಗಿ ನಾನು ಈ ಮಾತನ್ನು ಹೇಳುತ್ತಿದ್ದೇನೆ. ಪಕ್ಷದ ಎಲ್ಲರೂ ಪಕ್ಷದ ತೀರ್ಮಾನವನ್ನು ಪಾಲಿಸಬೇಕು ಎಂದು ಖರ್ಗೆ ಸುದ್ದಿಗೋಷ್ಠಿಯಲ್ಲಿ ಹೇಳಿದರು.
ನೀವು ಕಲಬುರಗಿಯಿಂದ ಸ್ಪರ್ಧಿಸುತ್ತೀರಾ ಎಂಬ ಪ್ರಶ್ನೆಗೆ, ರಾಜ್ಯದ ನಾಯಕರು ಈ ಬಗ್ಗೆ ತೀರ್ಮಾನ ಕೈಗೊಳ್ಳಬೇಕು. ನನ್ನ ಸ್ಪರ್ಧೆ ಬಗ್ಗೆ ಇಲ್ಲೇ ಕೇಳಿ ಎಂದು ಮುಖ್ಯಮಂತ್ರಿ ಮತ್ತು ಉಪಮುಖ್ಯಮಂತ್ರಿ ಅವರನ್ನು ನೋಡಿದರು.
ಗ್ಯಾರಂಟಿ ಎಂಬ ಅಂಶವನ್ನು ಕರ್ನಾಟಕದಲ್ಲಿ ಕಾಂಗ್ರೆಸ್ ಜಾರಿ ಮಾಡಿದ ನಂತರ ಬಿಜೆಪಿಯವರು ಅದನ್ನು ಬಳಸುತ್ತಿದ್ದಾರೆ. ಬಿಜೆಪಿಯವರು ನಮ್ಮ ಕಾರ್ಯಕ್ರಮಗಳನ್ನೇ ಅವರದ್ದು ಎಂದು ಹೇಳಿಕೊಂಡು ಹೋಗುತ್ತಾರೆ. ನಮ್ಮ ಆಲೋಚನೆ ಯೋಜನೆಗಳನ್ನು ಅವರು ಮುಂದುವರಿಸುವುದಾದರೆ ಮುಂದುವರಿಸಲಿ ಎಂದು ಹೇಳಿದರು.
ಗ್ಯಾರಂಟಿ ಯೋಜನೆಗಳನ್ನು ನಿಗದಿತ ಕಾಲಮಿತಿಯೊಳಗೆ ನಮ್ಮ ಸರ್ಕಾರ ಜಾರಿಗೊಳಿಸಲಿದೆ. ನಾವು ಕೊಟ್ಟಿರುವ ಎಲ್ಲ ಭರವಸೆಗಳನ್ನು ಈಡೇರಿಸುತ್ತೇವೆ. ಅದಕ್ಕೆ ಕರ್ನಾಟಕ ಹಾಗೂ ತೆಲಂಗಾಣ ರಾಜ್ಯಗಳೇ ಸಾಕ್ಷಿ ಎಂದು ಖರ್ಗೆ ತಿಳಿಸಿದರು.
ಮೋದಿ ಅವರು ವರ್ಷಕ್ಕೆ 2 ಕೋಟಿ ಉದ್ಯೋಗ, ರೈತರ ಆದಾಯ ದುಪ್ಪಟ್ಟು, ಬುಲೆಟ್ ರೈಲು, ಖಾತೆಗೆ 15 ಲಕ್ಷ ಎಂದು ಸುಳ್ಳಿನ ಮೇಲೆ ಸುಳ್ಳನ್ನು ಹೇಳುತ್ತಲೇ ಬರುತ್ತಿದ್ದಾರೆ. ಮೋದಿ ಅವರು ಕೊಟ್ಟಿರುವ ಭರವಸೆಗಳಲ್ಲಿ ಶೇ.75 ಬರೀ ಸುಳ್ಳು. ಮೋದಿ ಅವರು ಯಾವುದೇ ಹಿಂಜರಿಕೆ ಇಲ್ಲದೇ ಸುಳ್ಳು ಹೇಳುತ್ತಾರೆ. ಆದರೆ ನಮ್ಮ ನಾಯಕರು ಯಾವುದೇ ಘೋಷಣೆ ಮಾಡುವ ಮುನ್ನ ನಾಲ್ಕು ಬಾರಿ ಆಲೋಚಿಸುತ್ತಾರೆ. ಇದಕ್ಕೆ ಹಣ ಎಲ್ಲಿಂದ ತರುವುದು ಎಂದು ಚಿಂತನೆ ನಡೆಸಿ ನಂತರ ಭರವಸೆಗಳನ್ನು ಘೋಷಿಸುತ್ತಾರೆ ಎಂದು ಹೇಳಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
By Poll: ಕ್ಷೇತ್ರದಲ್ಲಿ 5ಲಕ್ಷಕ್ಕೂ ಹೆಚ್ಚು ಮನೆಗಳ ಕಟ್ಟಿಸಿರುವೆ, ದಾಖಲೆ ನೋಡಲಿ: ಬೊಮ್ಮಾಯಿ
By Election: ಬೊಮ್ಮಾಯಿ 4 ಬಾರಿ ಗೆದ್ರೂ ಕ್ಷೇತ್ರದ ಬಡವರಿಗೆ ಒಂದೂ ಮನೆ ಕಟ್ಟಿಸಿಲ್ಲ: ಸಿಎಂ
Hassan: ಹಾಸನಾಂಬೆ ದೇವಿಗೆ ಈ ಬಾರಿ ದಾಖಲೆ ಪ್ರಮಾಣದಲ್ಲಿ ಹರಿದು ಬಂದ ಆದಾಯ!
MUDA case; ಸಿಎಂ ಸಿದ್ದರಾಮಯ್ಯ ವಿಚಾರಣೆಗೆ ಕರೆದ ಲೋಕಾಯುಕ್ತ ಪೊಲೀಸರು
Waqf Notice: ʼವಕ್ಫ್ ಬೋರ್ಡ್‌ಗೆ ಆಸ್ತಿ ನೋಂದಣಿ ತಕ್ಷಣ ಸ್ಥಗಿತಗೊಳಿಸಲು ಸಿಎಸ್‌ಗೆ ಸೂಚಿಸಿʼ
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.