ನಾಜಿ ಹುಟ್ಟಿದ ಕಾಲದಲ್ಲೇ RSS ಹುಟ್ಟಿದೆ…ರಾಮ ಮಂದಿರ ದೇಣಿಗೆ ಸಂಗ್ರಹ ಕುರಿತು HDK ಆತಂಕ
Team Udayavani, Feb 15, 2021, 6:18 PM IST
ಬೆಂಗಳೂರು : ಅಯೋಧ್ಯೆಯಲ್ಲಿ ನಿರ್ಮಾಣವಾಗುತ್ತಿರುವ ರಾಮ ಮಂದಿರಕ್ಕೆ ದೇಣಿಗೆ ಸಂಗ್ರಹ ಅಭಿಯಾನದ ಕುರಿತು ಮಾಜಿ ಸಿಎಂ ಕುಮಾರ ಸ್ವಾಮಿ ಆತಂಕ ವ್ಯಕ್ತಪಡಿಸಿದ್ದಾರೆ.
ಇಂದು ( ಫೆ.15 ಸೋಮವಾರ) ತಮ್ಮ ಟ್ವಿಟರ್ ಖಾತೆಯಲ್ಲಿ ಆತಂಕ ಹೊರಹಾಕಿರುವ ಕುಮಾರ ಸ್ವಾಮಿ, ರಾಮಮಂದಿರಕ್ಕೆ ಹಣ ಸಂಗ್ರಹಿಸುತ್ತಿರುವವರು ಹಣ ಕೊಟ್ಟವರ, ಕೊಡದವರ ಮನೆ ಗುರುತು ಮಾಡುತ್ತಿರುವುದು ತಿಳಿಯಿತು. ಯಾತಕ್ಕೆ ಹೀಗೆ ಮಾಡುತ್ತಿದ್ದಾರೆಂಬುದು ಗೊತ್ತಿಲ್ಲ. ಹಿಟ್ಲರ್ ಕಾಲದಲ್ಲಿ ನಾಜಿ-ಯಹೂದಿಗಳಿಗೆ ಗಲಾಟೆ ನಡೆದು ಲಕ್ಷಾಂತರ ಜನರ ಮಾರಣ ಹೋಮ ನಡೆಯಿತು. ದೇಶದಲ್ಲಿ ನಡೆಯುತ್ತಿರುವ ಈ ಬೆಳವಣಿಗೆ ಎಲ್ಲಿ ತಲುಪುತ್ತದೆ ಗೊತ್ತಿಲ್ಲ ಎಂದಿದ್ದಾರೆ.
ರಾಮಮಂದಿರಕ್ಕೆ ಹಣ ಸಂಗ್ರಹಿಸುತ್ತಿರುವವರು ಹಣ ಕೊಟ್ಟವರ, ಕೊಡದವರ ಮನೆ ಗುರುತು ಮಾಡುತ್ತಿರುವುದು ತಿಳಿಯಿತು. ಯಾತಕ್ಕೆ ಹೀಗೆ ಮಾಡುತ್ತಿದ್ದಾರೆಂಬುದು ಗೊತ್ತಿಲ್ಲ. ಹಿಟ್ಲರ್ ಕಾಲದಲ್ಲಿ ನಾಜಿ-ಯಹೂದಿಗಳಿಗೆ ಗಲಾಟೆ ನಡೆದು ಲಕ್ಷಾಂತರ ಜನರ ಮಾರಣ ಹೋಮ ನಡೆಯಿತು. ದೇಶದಲ್ಲಿ ನಡೆಯುತ್ತಿರುವ ಈ ಬೆಳವಣಿಗೆ ಎಲ್ಲಿ ತಲುಪುತ್ತದೆ ಗೊತ್ತಿಲ್ಲ.
1/3— H D Kumaraswamy (@hd_kumaraswamy) February 15, 2021
ಜರ್ಮನಿಯಲ್ಲಿ ನಾಜಿ ಹುಟ್ಟಿದ ಕಾಲದಲ್ಲೇ ಆರೆಸ್ಸೆಸ್ ಹುಟ್ಟಿದೆ ಎಂದು ಇತಿಹಾಸಜ್ಞರು ಹೇಳುತ್ತಾರೆ. ಆರೆಸ್ಸೆಸ್ ಕೂಡ ಆ ನೀತಿಗಳನ್ನೇ ಜಾರಿ ಮಾಡಿದರೆ ಮುಂದೇನಾಗುತ್ತದೆಂಬ ಆತಂಕವಿದೆ. ದೇಶದಲ್ಲಿ ಮೂಲಭೂತ ಹಕ್ಕನ್ನೆ ಕಸಿಯಲಾಗುತ್ತಿದೆ. ಸ್ವತಂತ್ರವಾಗಿ ಭಾವನೆಗಳನ್ನು ಹಂಚಿಕೊಳ್ಳಲು ಸಾಧ್ಯವಿಲ್ಲದ ಸ್ಥಿತಿ ಇದೆ. ಇದು ಅಘೋಷಿತ ತುರ್ತು ಪರಿಸ್ಥಿತಿ ಎಂದು ನುಡಿದಿದ್ದಾರೆ.
ಇದನ್ನೂ ಓದಿ :ರೈತರ ಅಭಿವೃದ್ದಿಗೆ ಶ್ರಮಿಸಿ: ಕುಮಾರಸ್ವಾಮಿ
ಯಾರೊಬ್ಬರೂ ತಮ್ಮ ಭಾವನೆಗಳನ್ನು ಹೇಳಿಕೊಳ್ಳಲು ಸಾಧ್ಯವಿಲ್ಲದ ಪರಿಸ್ಥಿತಿ ನಿರ್ಮಾಣವಾಗಿದೆ. ಮುಂದಿನ ದಿನಗಳಲ್ಲಿ ಮಾಧ್ಯಮಗಳು ಸರ್ಕಾರದ ಭಾವನೆಗಳನ್ನು ಎತ್ತಿಹಿಡಿದರೆ ಯಾರಿಗೆ ಏನಾಗುತ್ತದೆಯೋ ಗೊತ್ತಿಲ್ಲ. ಇನ್ನೂ ಜನಸಾಮಾನ್ಯರ ಪರಿಸ್ಥಿತಿ ಏನಾಗಬಹುದು? ವಾತಾವರಣವನ್ನು ನೋಡಿದಾಗ ದೇಶದಲ್ಲಿ ಏನು ಬೇಕಾದರೂ ಆಗಬಹುದು ಎಂಬುದಂತೂ ನಿಚ್ಚಳವಾಗಿದೆ ಎಂದು ಆತಂಕದಿಂದ ಟ್ವೀಟ್ ಮಾಡಿದ್ದಾರೆ ಕುಮಾರಸ್ವಾಮಿ.
ಜರ್ಮನಿಯಲ್ಲಿ ನಾಜಿ ಹುಟ್ಟಿದ ಕಾಲದಲ್ಲೇ ಆರೆಸ್ಸೆಸ್ ಹುಟ್ಟಿದೆ ಎಂದು ಇತಿಹಾಸಜ್ಞರು ಹೇಳುತ್ತಾರೆ.ಆರೆಸ್ಸೆಸ್ ಕೂಡ ಆ ನೀತಿಗಳನ್ನೇ ಜಾರಿ ಮಾಡಿದರೆ ಮುಂದೇನಾಗುತ್ತದೆಂಬ ಆತಂಕವಿದೆ.ದೇಶದಲ್ಲಿ ಮೂಲಭೂತ ಹಕ್ಕನ್ನೆ ಕಸಿಯಲಾಗುತ್ತಿದೆ.ಸ್ವತಂತ್ರವಾಗಿ ಭಾವನೆಗಳನ್ನು ಹಂಚಿಕೊಳ್ಳಲು ಸಾಧ್ಯವಿಲ್ಲದ ಸ್ಥಿತಿ ಇದೆ.ಇದು ಅಘೋಷಿತ ತುರ್ತು ಪರಿಸ್ಥಿತಿ.
2/3— H D Kumaraswamy (@hd_kumaraswamy) February 15, 2021
ಯಾರೊಬ್ಬರೂ ತಮ್ಮ ಭಾವನೆಗಳನ್ನು ಹೇಳಿಕೊಳ್ಳಲು ಸಾಧ್ಯವಿಲ್ಲದ ಪರಿಸ್ಥಿತಿ ನಿರ್ಮಾಣವಾಗಿದೆ. ಮುಂದಿನ ದಿನಗಳಲ್ಲಿ ಮಾಧ್ಯಮಗಳು ಸರ್ಕಾರದ ಭಾವನೆಗಳನ್ನು ಎತ್ತಿಹಿಡಿದರೆ ಯಾರಿಗೆ ಏನಾಗುತ್ತದೆಯೋ ಗೊತ್ತಿಲ್ಲ.ಇನ್ನೂ ಜನಸಾಮಾನ್ಯರ ಪರಿಸ್ಥಿತಿ ಏನಾಗಬಹುದು? ವಾತಾವರಣವನ್ನು ನೋಡಿದಾಗ ದೇಶದಲ್ಲಿ ಏನು ಬೇಕಾದರೂ ಆಗಬಹುದು ಎಂಬುದಂತೂ ನಿಚ್ಚಳವಾಗಿದೆ.
3/3— H D Kumaraswamy (@hd_kumaraswamy) February 15, 2021
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Priyank Kharge: ಇ-ಸ್ವತ್ತು ಗೊಂದಲ ನಿವಾರಣೆಗೆ ಕಾರ್ಯಪಡೆ
Karnataka by-election: 3 ಕ್ಷೇತ್ರದಲ್ಲಿ 33.33 ಕೋ.ರೂ. ಮೌಲ್ಯದ ಅಕ್ರಮ ವಶ
JDS protest: ಎಚ್‌ಡಿಕೆ ಕರಿಯ: ಜಮೀರ್ ವಿರುದ್ಧ ಆಕ್ರೋಶ; ಸಂಪುಟದಿಂದ ಕೈಬಿಡಲು ಆಗ್ರಹ
Congress: “40 ಪರ್ಸೆಂಟ್ ಸಿಎಂ’ಗೆ ಸಾಕ್ಷಿ ಕೊಟ್ಟಿದ್ರ್ಯಾ?: ಸಿಎಂಗೆ ಸಿ.ಟಿ. ರವಿ
Congress Govt.,: ಅಬಕಾರಿ ಡೀಲರ್‌ಗಳಿಂದ ಸರ್ಕಾರಕ್ಕೆ 900 ಕೋಟಿ ರೂ. ಸಲ್ಲಿಕೆ: ಅಶೋಕ್
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.