Ex-Minister ಬಿ.ಸಿ.ಪಾಟೀಲ್ ಅಳಿಯ ವಿಷ ಸೇವಿಸಿ ಆತ್ಮಹತ್ಯೆ
ಮೊದಲ ಪುತ್ರಿ ಸೌಮ್ಯ ಅವರನ್ನು ಪ್ರತಾಪ್ ಕುಮಾರ್ ವಿವಾಹವಾಗಿದ್ದರು..
Team Udayavani, Jul 8, 2024, 5:31 PM IST
ದಾವಣಗೆರೆ: ಮಾಜಿ ಸಚಿವ ಬಿ.ಸಿ. ಪಾಟೀಲ್ ಅವರ ಅಳಿಯ ಸೋಮವಾರ ದಾವಣಗೆರೆ ಜಿಲ್ಲೆಯ ಹೊನ್ನಾಳಿ ತಾಲೂಕಿನ ಅರಕೆರೆ ಗ್ರಾಮದ ಬಳಿ ಅರಣ್ಯ ಪ್ರದೇಶದಲ್ಲಿ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ಕೆ.ಜಿ. ಪ್ರತಾಪ್ ಕುಮಾರ್ (42) ಆತ್ಮಹತ್ಯೆ ಮಾಡಿಕೊಂಡವರು. ಬಿ.ಸಿ. ಪಾಟೀಲ್ ಅವರ ಮೊದಲ ಪುತ್ರಿ ಸೌಮ್ಯ ಅವರನ್ನು ಪ್ರತಾಪ್ ಕುಮಾರ್ ವಿವಾಹವಾಗಿದ್ದರು.
ಹಿರೇಕೆರೂರ್ ನಿಂದ ಶಿವಮೊಗ್ಗಕ್ಕೆ ತೆರಳುತ್ತಿ ದ್ದ ಅವರು ಹೊನ್ನಾಳಿ ಸಮೀಪದ ಅರಕೆರೆ ಗ್ರಾಮದ ಬಳಿ ರಸ್ತೆ ಬದಿ ಕಾರು ನಿಲ್ಲಿಸಿ ವಿಷ ಸೇವಿಸಿದ್ದಾರೆ. ವಿಷ ಸೇವಿಸಿದ ಅಸ್ವಸ್ಥರಾಗಿದ್ದ ಅವರನ್ನು ಕಂಡಂತಹವರು ಹೊನ್ನಾಳಿ ತಾಲೂಕು ಆಸ್ಪತ್ರೆಗೆ ದಾಖಲಿಸಿದ್ದಾರೆ. ಹೆಚ್ಚಿನ ಚಿಕಿತ್ಸೆಗೆ ಶಿವಮೊಗ್ಗದ ಮೆಗ್ಗಾನ್ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಚಿಕಿತ್ಸೆಗೆ ಸ್ಪಂದಿಸದೆ ಮೃತಪಟ್ಟಿದ್ದಾರೆ.
ಪ್ರತಾಪ್ ಕುಮಾರ್ ಆತ್ಮಹತ್ಯೆ ಗೆ ನಿಖರ ಕಾರಣ ತಿಳಿದು ಬಂದಿಲ್ಲ. ತನಿಖೆ ನಂತರವೇ ಗೊತ್ತಾಗಲಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಹೊನ್ನಾಳಿ ಪೊಲೀಸರು ಅರಕೆರೆಗೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.
ವಿಜಯೇಂದ್ರ ಸಾಂತ್ವನ
ಶಿವಮೊಗ್ಗ ಮೆಗ್ಗಾನ್ ಶವಗಾರಕ್ಕೆ ಬಿ.ಸಿ.ಪಾಟೀಲ್ ಅವರು ಆಗಮಿಸಿ ಪೊಲೀಸರ ಬಳಿ ಮಾಹಿತಿ ಪಡೆದುಕೊಂಡರು. ಸಂಬಂಧಿಕರು ಪ್ರತಾಪ್ ಕುಮಾರ್ ಮೃತದೇಹ ಕಂಡು ಕಣ್ಣೀರು ಹಾಕುತ್ತಿದ್ದಾರೆ. ಬಿ.ಸಿ.ಪಾಟೀಲ್ ಅವರಿಗೆ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ, ಸಂಸದ ರಾಘವೇಂದ್ರ, ಮಾಜಿ ಸಚಿವ ರೇಣುಕಾಚಾರ್ಯ ಅವರು ಸಾಂತ್ವನ ಹೇಳಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Waqf issue: ಬಿಜೆಪಿ ಅಧಿಕಾರದಲ್ಲಿದ್ದಾಗ ಕತ್ತೆ ಕಾಯಿತಿದ್ದರಾ?: ಪ್ರಿಯಾಂಕ್ ಖರ್ಗೆ
Bellary; ಲೂಟಿ ಮಾಡಿದ ರೆಡ್ಡಿಯನ್ನು ಯಾಕೆ ಪಕ್ಷಕ್ಕೆ ಸೇರಿಸಿದಿರಿ: ಮೋದಿಗೆ ಸಿಎಂ ಪ್ರಶ್ನೆ
Renukaswamy Case: ಪವಿತ್ರಾ ಗೌಡ ಸೇರಿ ನಾಲ್ವರ ಜಾಮೀನು ಅರ್ಜಿ ವಿಚಾರಣೆ ಮುಂದೂಡಿಕೆ
Waqf Land Issue: ಯಾವುದೇ ರೈತರನ್ನು ಒಕ್ಕಲೆಬ್ಬಿಸುವುದಿಲ್ಲ: ಡಿಕೆ ಶಿವಕುಮಾರ್
Sugarcane: ನ.8ರಿಂದ ಕಬ್ಬು ಕಟಾವು ಆರಂಭಿಸಿ: ರೈತರಿಗೆ ಸಚಿವ ಶಿವಾನಂದ ಪಾಟೀಲ ಮನವಿ
MUST WATCH
ಹೊಸ ಸೇರ್ಪಡೆ
Kota: ಪಾದಚಾರಿ ಮಾರ್ಗದಲ್ಲೂ ಹೊಂಡ!
Muddebihal: ಅತ್ಯಾಚಾರ ಆರೋಪಿಗಳಿಗೆ ಗಲ್ಲು ಶಿಕ್ಷೆ ವಿಧಿಸಲು ಆಗ್ರಹಿಸಿ ಪ್ರತಿಭಟನೆ
Hagaribommanahalli: ಹಳಿ ದಾಟುತ್ತಿರುವಾಗ ರೈಲು ಡಿಕ್ಕಿ ಹೊಡೆದು ವ್ಯಕ್ತಿ ಸಾವು
Mangalore: ಲೋವರ್ ಬೆಂದೂರ್‌ವೆಲ್-ಕರಾವಳಿ ವೃತ್ತ ರಸ್ತೆ ಅವ್ಯವಸ್ಥೆ
Waqf issue: ಬಿಜೆಪಿ ಅಧಿಕಾರದಲ್ಲಿದ್ದಾಗ ಕತ್ತೆ ಕಾಯಿತಿದ್ದರಾ?: ಪ್ರಿಯಾಂಕ್ ಖರ್ಗೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.