ಉಪ ಮುಖ್ಯಮಂತ್ರಿಯನ್ನಾದರೂ ಮಾಡಲಿ : ಮಾಜಿ ಸಚಿವ ಈಶ್ವರಪ್ಪ
Team Udayavani, Jul 30, 2021, 11:54 AM IST
ಮೈಸೂರು : ಮುಖ್ಯಮಂತ್ರಿ ಅಂತು ಮಾಡಲಿಲ್ಲ. ಉಪ ಮುಖ್ಯಮಂತ್ರಿಯನ್ನಾದರೂ ಮಾಡಲಿ ಎಂದು ಮಾಜಿ ಸಚಿವ ಕೆ.ಎಸ್. ಈಶ್ವರಪ್ಪ ಹೇಳಿದ್ದಾರೆ.
ಮೈಸೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಪಕ್ಷಕ್ಕಾಗಿ ಹಲವು ವರ್ಷಗಳಿಂದ ದುಡಿಯುತ್ತಿದ್ದೇನೆ. ಹೀಗಾಗಿ ನನ್ನನ್ನು ಮುಖ್ಯಮಂತ್ರಿ ಮಾಡಬಹುದು ಅಂತ ಬೆಂಬಲಿಗರು ನಿರೀಕ್ಷೆ ಮಾಡಿದ್ದರು. ಪಕ್ಷದ ಹೈಕಮಾಂಡ್ ಬಸವರಾಜ ಬೊಮ್ಮಾಯಿ ಅವರನ್ನು ರಾಜ್ಯದ ಮುಖ್ಯಮಂತ್ರಿ ಸ್ಥಾನದಲ್ಲಿ ಕೂರಿಸಿದೆ. ಈಗ ಈಶ್ವರಪ್ಪ ಉಪಮುಖ್ಯಮಂತ್ರಿ ಆಗಲಿ ಅಂತ ಸ್ವಾಮಿಜಿಗಳು, ಬೆಂಬಲಿಗರು ಜನ ಅಭಿಪ್ರಾಯ ವ್ಯಕ್ತಪಡಿಸುತ್ತಿದ್ದಾರೆ ಎಂದಿದ್ದಾರೆ.
ಇದನ್ನೂ ಓದಿ : ಸಚಿವ ಸ್ಥಾನದ ಸರ್ಕಸ್: ಶಾಸಕಿ ಪೂರ್ಣಿಮಾ ಶ್ರೀನಿವಾಸ್ ಪರ ಯಾದವಶ್ರೀ ಬ್ಯಾಟಿಂಗ್
ಹಿರಿತನ ಪರಿಗಣಿಸಿ ಉಪಮುಖ್ಯಮಂತ್ರಿ ಹುದ್ದೆ ನೀಡುವ ನಿರೀಕ್ಷೆ ಇದೆ. ಯಡಿಯೂರಪ್ಪ ನವರು ನಾಲ್ಕು ಬಾರಿ ಮುಖ್ಯಮಂತ್ರಿ ಆದರೂ, ಜನ ನಮಗೆ ಸ್ಪಷ್ಟ ಬಹುಮತ ಕೊಟ್ಟಿಲ್ಲ. ಆದರೇ, ಅಧಿಕಾರ ನಡೆಸಲು ಅವಕಾಶ ಕೊಟ್ಟಿದ್ದಾರೆ. ಹೀಗಾಗಿ ಕೆಲವು ಗೊಂದಲಗಳು ಇದ್ದದ್ದು ನಿಜ. ಆದರೇ ಬಿಜೆಪಿಯ ಎಲ್ಲಾ ಗೊಂದಲಗಳನ್ನು ಹೈಕಮಾಂಡ್ ಬಗೆಹರಿಸಿದೆ ಎಂದು ಅವರು ಅಭಿಪ್ರಾಯ ಪಟ್ಟಿದ್ದಾರೆ.
ಸಚಿವ ಸಂಪುಟದಲ್ಲಿ ಯಾರಿಗೆಲ್ಲಾ ಅವಕಾಶ ಸಿಗಬಹುದು ಎಂಬ ಸುದ್ದಿಗಾರರ ಪ್ರಶ್ನೆಗೆ ಉತ್ತರಿಸಿದ ಅವರು, ಯಾರನ್ನು ಸಚಿವ ಸಂಪುಟಕ್ಕೆ ಸೇರಿಸಿಕೊಳ್ಳಬೇಕು, ಬಿಡಬೇಕು ಎಂಬುವುದು ಹೈಕಮಾಂಡ್ ಗೆ ಗೊತ್ತಿದೆ. ನಮಲ್ಲಿ ಗೊಂದಲು ಬಗೆಹರಿದಿದೆ, ಈಗ ಕಾಂಗ್ರೆಸ್ ನಲ್ಲಿ ಶುರು ಹಾಗಿದೆ ಎಂದರು.
ಸಿದ್ದರಾಮಯ್ಯ ಡಿ.ಕೆ.ಶಿವಕುಮಾರ್, ತನ್ವೀರ್ ಸೇಠ್, ಎಂ.ಬಿ ಪಾಟೀಲ್ ನಾನೇ ಮುಖ್ಯಮಂತ್ರಿ ಎಂದು ಹೇಳಿಕೊಂಡಿದ್ದಾರೆ. ಅವರಿಗೆ ಹೇಳುವವರು, ಕೇಳುವವರು ಯಾರೂ ಇಲ್ಲ ಎಂದು ಲೇವಡಿ ಮಾಡಿ, ಇವರಲ್ಲಿ ಮುಂದಿನ ಮುಖ್ಯಮಂತ್ರಿ ಯಾರು ಅಂತ ಅವರ ಹೈಕಮಾಂಡ್ ಘೋಷಿಸಲಿ ಎಂದು ಸವಾಲು ಹಾಕಿದ್ದಾರೆ.
ಇದನ್ನೂ ಓದಿ : ದಾವಣಗೆರೆ: ಸಹೋದರಿಯರ ಜೋಡಿ ಕೊಲೆ, ಕೆಟ್ಟ ವಾಸನೆ ಬಂದಾಗಲೇ ತಿಳಿಯಿತು ವಿಚಾರ!
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Aadhar Card: ಆಧಾರ್ ನವೀಕರಣ ಮಾಡಿಕೊಂಡಿದ್ದೀರಾ?: ಹಾಗಾದರೆ ಈ ಸುದ್ದಿ ಓದಲೇಬೇಕು!
ಬೈಕನ್ನೇ ಬೆನ್ನಟ್ಟಿ ದಾಳಿ ಮಾಡಿದ ಕರಡಿಗಳು… ಗ್ರಾಮ ಪಂಚಾಯತ್ ಸದಸ್ಯನಿಗೆ ಗಂಭೀರ ಗಾಯ
ರಬಕವಿ-ಬನಹಟ್ಟಿ: ಸಚಿವರಿಂದ ಬೇಡಿಕೆ ಈಡೇರಿಸುವ ಭರವಸೆ… ತಿಂಗಳ ಬಳಿಕ ನೇಕಾರರ ಹೋರಾಟ ಅಂತ್ಯ
AICC ಅಧಿವೇಶನ: ಮುಖ್ಯಮಂತ್ರಿ ಅಧ್ಯಕ್ಷತೆಯಲ್ಲಿಂದು ಮಹತ್ವದ ಸಭೆ
CT Ravi ಜಾಮೀನು ಅರ್ಜಿ ವಿಚಾರಣೆ ಇಂದು ಬೆಳಗಾವಿ ಕೋರ್ಟ್ನಿಂದ ಬೆಂಗಳೂರಿಗೆ ವರ್ಗ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Arrest Warrant: ರಾಬಿನ್ ಉತ್ತಪ್ಪ ವಿರುದ್ದ ಬಂಧನ ವಾರೆಂಟ್; ಜೈಲು ಪಾಲಾಗ್ತಾರಾ ಕ್ರಿಕೆಟಿಗ
Mangaluru: ಕರಾವಳಿ ಉತ್ಸವದಲ್ಲಿ ಹೆಲಿಕಾಪ್ಟರ್ ಮೂಲಕ ನಗರದ ದರ್ಶನಕ್ಕೆ ಅವಕಾಶ
M. Chinnaswamy ಸ್ಟಾಂಡ್ಗೆ ಶಾಂತಾ ರಂಗಸ್ವಾಮಿ ಹೆಸರಿಡಲು ಯಾಕೆ ಹಿಂದೇಟು? ಏನಿದು ವಿವಾದ?
Mandya :ಗಂಡ ಗದ್ಯ, ಹೆಂಡತಿ ಪದ್ಯ, ಮಕ್ಕಳು ರಗಳೆ!: ಹಾಸ್ಯ ಸಾಹಿತಿ ವೈ.ವಿ.ಗುಂಡೂರಾವ್
Mangaluru: ಸಹಬಾಳ್ವೆ ಬೆಸೆಯುತ್ತಿದೆ ‘ಕುಸ್ವಾರ್’
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.