RSS ವಿರುದ್ದ ಮಾಜಿ ಸಚಿವ ಗೂಳಿಹಟ್ಟಿ ಶೇಖರ್ ಆರೋಪ: ಸ್ಪಷ್ಟನೆ ನೀಡಿದ ಸಂಘ
ಜಾತಿಯ ಕಾರಣ... ತೀವ್ರ ಟೀಕೆಗೆ ಕಾರಣವಾಗಿದ್ದ ಗಂಭೀರ ಆರೋಪ
Team Udayavani, Dec 6, 2023, 4:58 PM IST
ಬೆಂಗಳೂರು: ಮಾಜಿ ಸಚಿವ ಹೊಸದುರ್ಗ ಮಾಜಿ ಶಾಸಕ ಗೂಳಿ ಹಟ್ಟಿ ಶೇಖರ್ ಅವರು ”ತನಗೆ ಜಾತಿಯ ಕಾರಣಕ್ಕಾಗಿ ನಾಗಪುರದ ಡಾ.ಹೆಗಡೇವಾರ್ ಸ್ಮಾರಕ ಕಟ್ಟಡಕ್ಕೆ ಪ್ರವೇಶ ನಿರಾಕರಿಸಲಾಯಿತು” ಎಂದು ಮಾಡಿರುವ ಆರೋಪ ಭಾರೀ ಸುದ್ದಿಯಾಗುತ್ತಿದ್ದಂತೆ ಕರ್ನಾಟಕದ ರಾಷ್ಟ್ರೀಯ ಸ್ವಯಂ ಸೇವಕ ಸಂಘ ಬುಧವಾರ ಸ್ಪಷ್ಟನೆ ನೀಡಿ ಆರೋಪವನ್ನು ತಳ್ಳಿ ಹಾಕಿದೆ.
ಸಂಘ ಪ್ರಕಟಣೆ ಹೊರಡಿಸಿದ್ದು, ”ನಾಗಪುರದಲ್ಲಿ ಸಂಘದ ಕಾರ್ಯಾಲಯವನ್ನು ಸಂದರ್ಶಿಸಲು ಬಂದವರ ಹೆಸರನ್ನು ನೋಂದಾಯಿಸಿ ಪ್ರವೇಶ ನೀಡುವ ವ್ಯವಸ್ಥೆಯೇ ಇಲ್ಲ. ಇದೊಂದು ನಿರಾಧಾರ ಮತ್ತು ಹುರುಳಿಲ್ಲದ ಆರೋಪ” ಎಂದು ಹೇಳಿದೆ.
”ಆರ್ ಎಸ್ ಎಸ್ ನ ಯಾವುದೇ ಕಚೇರಿಯಲ್ಲಾಗಲಿ, ಅಥವಾ ಈ ರೀತಿಯ ಸ್ಮಾರಕ ಕಟ್ಟಡಗಳಲ್ಲಾಗಲಿ ಎಲ್ಲರಿಗೂ ಮುಕ್ತ ಪ್ರವೇಶವಿದೆ. ಎಲ್ಲಾ ಜಾತಿ ವರ್ಗದ ಸಾವಿರಾರು ಜನರು ನಿತ್ಯ ಬಂದು ಹೋಗುತ್ತಲೇ ಇದ್ದಾರೆ. ಯಾರಿಗೂ ಪ್ರವೇಶ ನಿರಾಕರಣೆಯ ಪ್ರಶ್ನೆಯೇ ಇಲ್ಲ. ಇಷ್ಟಾಗಿ ರಾಜ್ಯ ವಿಧಾನಸಭಾ ಚುನಾವಣೆಯ ನಾಲ್ಕು ತಿಂಗಳು ಮೊದಲೇ ಈ ಘಟನೆ ನಡೆದಿತ್ತು ಎನ್ನುವ ಗೂಳಿಹಟ್ಟಿ ಶೇಖರ್ ಅವರು ಆ ನಂತರ ಅನೇಕ ಸಂಘದ ಪ್ರಮುಖರನ್ನು ಭೇಟಿಯಾದರೂ ಎಲ್ಲಿಯೂ ತಮಗಾದ ಅವಮಾನದ ಬಗ್ಗೆ ಹೇಳಿರಲಿಲ್ಲ. ಈಗ ಹತ್ತು ತಿಂಗಳ ನಂತರ ಈ ರೀತಿ ಹೇಳಿಕೆ ನೀಡಿರುವುದು ಆಶ್ಚರ್ಯ ಕರವಾಗಿದೆ. ರಾಷ್ಟ್ರೀಯ ಸ್ವಯಂ ಸೇವಕ ಸಂಘವು ಎಲ್ಲರನ್ನು ಸದಾ ತೆರೆದ ಮನಸ್ಸಿನಿಂದ ಸ್ವಾಗತಿಸುತ್ತದೆ” ಎಂದು ಸಂಘದ ದಕ್ಷಿಣ ಮಧ್ಯ ಕ್ಷೇತ್ರೀಯ ಕಾರ್ಯವಾಹ ನಾ.ತಿಪ್ಪೇಸ್ವಾಮಿ ಅವರು ಪತ್ರಿಕಾ ಪ್ರಕಟಣೆ ಹೊರಡಿಸಿದ್ದಾರೆ.
ಸರ್ವರನ್ನು ಸಮಾನವಾಗಿ ನೋಡುವ, ಯಾವುದೇ ಭೇದಭಾವವಿಲ್ಲದೆ ಮುಕ್ತಪ್ರವೇಶ ಇರುವ ರಾಷ್ಟ್ರೀಯ ಸ್ವಯಂಸೇವಕ ಸಂಘದ ಮೇಲೆ ಕೆಸರು ಬಹಳ ಮಂದಿ ಎರಚುವ ಪ್ರಯತ್ನ ಮಾಡಿದ್ದಾರೆ. ಇಂಥಹ ಸುಳ್ಳು ಪ್ರಚಾರಗಳನ್ನು, ಒಳಸಂಚುಗಳನ್ನು ಮೀರಿ ಸಂಘ ಸರ್ವವ್ಯಾಪಿ, ಸರ್ವಸ್ಪರ್ಶಿಯಾಗಿದೆ.
ಇಂದು ಮಾಧ್ಯಮ ಮತ್ತು ಸಾಮಾಜಿಕ ಜಾಲತಾಣಗಳಲ್ಲಿ ಹರಡುತ್ತಿರುವ ಸುಳ್ಳು ಸುದ್ದಿಯ… pic.twitter.com/rnzvRWvPrE
— C T Ravi 🇮🇳 ಸಿ ಟಿ ರವಿ (@CTRavi_BJP) December 6, 2023
ಬಿಜೆಪಿ ನಾಯಕ ಸಿಟಿ ರವಿ ಸೇರಿ ಅನೇಕರು ಪೋಸ್ಟ್ ಹಂಚಿಕೊಂಡಿದ್ದಾರೆ. ಶೇಖರ್ ಅವರು ಆರೋಪ ಮಾಡಿದ ಬೆನ್ನಲ್ಲೇ ಹಲವು ಸಂಘಟನೆಗಳು ಆರ್ ಎಸ್ ಎಸ್ ಮತ್ತು ಬಿಜೆಪಿ ವಿರುದ್ಧ ತೀವ್ರ ಟೀಕೆ ಆರಂಭಿಸಿವೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Udupi: ಶ್ರೀಕೃಷ್ಣ ಮಠ: ಗೀತೋತ್ಸವಕ್ಕೆ ಪರ್ತಗಾಳಿ ಶ್ರೀಗಳಿಗೆ ಆಹ್ವಾನ
Udupi: ಸಮಾಜ ರೂಪಿಸುವಲ್ಲಿ ಯಕ್ಷಗಾನ ಪಾತ್ರ ಹಿರಿದು: ಪೇಜಾವರ ಶ್ರೀ
Kaup: ಹೊಸ ಮಾರಿಗುಡಿ ದೇವಸ್ಥಾನ: ಬೆಂಗಳೂರಿನಲ್ಲಿ ವಾಗೀಶ್ವರಿ ಪೂಜೆ, ಲೇಖನ ಸಂಕಲ್ಪ
Udupi: ಗೀತಾರ್ಥ ಚಿಂತನೆ-97: ಮೋಹದ ಸ್ಥಾನದಲ್ಲಿ ಕರ್ತವ್ಯಪ್ರಜ್ಞೆಯ ಸ್ಥಾಪನೆ
ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಚಿತ್ತೂರು ಪ್ರಭಾಕರ ಆಚಾರ್ಯರಿಗೆ ಗೌರವಾರ್ಪಣೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.