Misuse; ಐಶ್ವರ್ಯ ಗೌಡ ವಿರುದ್ಧ ಪೊಲೀಸ್ ದೂರು ದಾಖಲಿಸಿದ ಡಿ.ಕೆ.ಸುರೇಶ್
ಕಠಿನ ಕ್ರಮ ಕೈಗೊಂಡು ಭವಿಷ್ಯದಲ್ಲಿ ದುರುಪಯೋಗ ಮತ್ತು ವಂಚನೆಯನ್ನು ತಡೆಯಬೇಕು
Team Udayavani, Dec 30, 2024, 9:11 PM IST
ಬೆಂಗಳೂರು: ತನ್ನ ಹೆಸರನ್ನು ದುರ್ಬಳಕೆ ಮಾಡಿಕೊಂಡು ಹಲವರಿಗೆ ವಂಚಿಸಿದ ಐಶ್ವರ್ಯ ಗೌಡ ವಿರುದ್ಧ ಕ್ರಮ ಕೈಗೊಳ್ಳುವಂತೆ ಕಾಂಗ್ರೆಸ್ ನಾಯಕ, ಮಾಜಿ ಸಂಸದ ಡಿ.ಕೆ.ಸುರೇಶ್ ಸೋಮವಾರ(ಡಿ30) ಪೊಲೀಸರಿಗೆ ದೂರು ನೀಡಿದ್ದಾರೆ.
“ಐಶ್ವರ್ಯ ಗೌಡ ಅಲಿಯಾಸ್ ನವ್ಯಶ್ರೀ ನನ್ನ ಹೆಸರನ್ನು ದುರುಪಯೋಗಪಡಿಸಿಕೊಂಡು ಹಲವಾರು ಜನರಿಗೆ ಚಿನ್ನ ಮತ್ತು ನಗದು ವಂಚಿಸಿದ್ದಾರೆ ಎಂದು ಮಾಧ್ಯಮಗಳಲ್ಲಿ ವರದಿಯಾಗಿದೆ. ಆಕೆಯ ವಿರುದ್ಧ ಅಧಿಕಾರಿಗಳು ಕಠಿನ ಕ್ರಮ ಕೈಗೊಂಡು ಭವಿಷ್ಯದಲ್ಲಿ ದುರುಪಯೋಗ ಮತ್ತು ವಂಚನೆಯನ್ನು ತಡೆಯಬೇಕು” ಎಂದು ಡಿ.ಕೆ.ಸುರೇಶ್ ಒತ್ತಾಯಿಸಿದರು.
ನಗರದ ಚಂದ್ರಾ ಲೇಔಟ್‌ನಲ್ಲಿರುವ ವಾರಾಹಿ ವರ್ಲ್ಡ್ ಆಫ್ ಗೋಲ್ಡ್ ಮಾಲಕಿ ವನಿತಾ ಐತಾಳ್ ನೀಡಿದ ದೂರಿನ ಮೇರೆಗೆ ಮಹಿಳೆ ಐಶ್ವರ್ಯ ಗೌಡ ಮತ್ತು ಆಕೆಯ ಪತಿ ಹರೀಶ್ ಕೆ. ಎನ್ ಎಂಬುವರನ್ನು ಬಂಧಿಸಲಾಗಿದೆ.
ಏನಿದು ಪ್ರಕರಣ?: ವಾರಾಹಿ ವರ್ಲ್ಡ್ ಆಫ್ ಗೋಲ್ಡ್ ಜ್ಯುವೆಲ್ಲರಿ ಮಾಲಿಕರಿಗೆ 14 ಕೆಜಿ ಚಿನ್ನ ವಂಚಿಸಿದ ಪ್ರಕರಣದಲ್ಲಿ ಎ1 ಐಶ್ವರ್ಯ ಗೌಡ, ಎ2 ಹರೀಶ್ ಗೌಡರನ್ನು ಚಂದ್ರ ಲೇಔಟ್ ಪೊಲೀಸರು ಬಂಧಿಸಿದ್ದರು. ಡಿ.ಕೆ.ಸುರೇಶ್ ತಂಗಿ ಅಂತ ಹೇಳಿಕೊಂಡು ಬಣ್ಣ ಬಣ್ಣದ ಮಾತನಾಡಿ, ನಾಮ ಹಾಕಿದ್ದ ಐಶ್ವರ್ಯ ಮತ್ತು ಆಕೆಯ ಪತಿ ವಿಚಾರಣೆಗಾಗಿ ಚಂದ್ರಲೇಔಟ್ ಠಾಣೆಗೆ ಹಾಜರಾಗಿದ್ದರು. ಸುಮಾರು 3 ಗಂಟೆಗಳ ಪೊಲೀಸರ ವಿಚಾರಣೆ ಬಳಿಕ ಪೊಲೀಸರು ದಂಪತಿಯನ್ನು ಬಂಧಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ನೇತ್ರಾವತಿ ನದಿಯಲ್ಲಿ ಗೋಮಾಂಸ ಪತ್ತೆ ಮತಾಂಧತೆ ತೋರಿಸುತ್ತದೆ: ಸಿ.ಟಿ. ರವಿ ಕಿಡಿ
Bidar: ಗುತ್ತಿಗೆದಾರ ಸಚಿನ್ ಆತ್ಮಹತ್ಯೆಗೂ ಮೊದಲು ಹೊಟೇಲ್ ನಲ್ಲಿ ಓಡಾಡಿದ ದೃಶ್ಯ ಸೆರೆ
Raichur: ಅಯ್ಯಪ್ಪ ಸ್ವಾಮಿ ಮಾಲೆ ಧರಿಸಿ ಶಬರಿಮಲೆಗೆ ಹೊರಟ ಮುಸ್ಲಿಂ ವ್ಯಕ್ತಿ
ಮಗಳ ಮೇಲೆ ಎರಗಲು ಹೋದ ಪತಿಯನ್ನೇ ಹತ್ಯೆಗೈದು ದೇಹವನ್ನು ತುಂಡರಿಸಿ ವಿಲೇವಾರಿ ಮಾಡಿದ ಪತ್ನಿ
ಗುತ್ತಿಗೆದಾರ ಸಚಿನ್ ಕೇಸ್: ಪ್ರಕರಣ ಮುಚ್ಚಿಹಾಕಲು ಸರ್ಕಾರದ ಯತ್ನ: ಸಹೋದರಿ ಆರೋಪ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
ನನ್ನ ನಾಯಿಗಳಿಗೆ ಕ್ರಾಸಿಂಗ್ ಮಾಡಿಸಬೇಕು.. ಸೋನು ನ್ಯೂ ಇಯರ್ ರೆಸಲ್ಯೂಷನ್ ಏನೇನು ಗೊತ್ತಾ?
450 ಕೋಟಿ ಚಿಟ್ ಫಂಡ್ ಹಗರಣ: ಶುಭಮನ್ ಗಿಲ್ ಸೇರಿ ನಾಲ್ವರಿಗೆ ಸಿಐಡಿ ಸಮನ್ಸ್ ಸಾಧ್ಯತೆ
ಗದಗ: ನೀರು ಸೋರಿಕೆ- ನದಿಯಲ್ಲಿ ನೀರಿದ್ದರೂ ತಪ್ಪದ ಹಾಹಾಕಾರ!
ನೇತ್ರಾವತಿ ನದಿಯಲ್ಲಿ ಗೋಮಾಂಸ ಪತ್ತೆ ಮತಾಂಧತೆ ತೋರಿಸುತ್ತದೆ: ಸಿ.ಟಿ. ರವಿ ಕಿಡಿ
Healthy Recipe: ಹಳೇ ಕಾಲದ ರುಚಿ; ಈ ರೆಸಿಪಿ ಮಾಡದಿದ್ದರೆ ಒಮ್ಮೆಯಾದ್ರು ಮಾಡಿ ನೋಡಿ…
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.