ಈ ವರ್ಷ ಪರೀಕ್ಷೆ ಇದೆ
Team Udayavani, Jan 25, 2021, 6:50 AM IST
ಸಾಂದರ್ಭಿಕ ಚಿತ್ರ
ಬೆಂಗಳೂರು: ಕೋವಿಡ್ದಿಂದಾಗಿ ತರಗತಿ ಆರಂಭವಾಗಿಲ್ಲವಾದರೂ ಈ ವರ್ಷ 1ರಿಂದ 9ನೇ ತರಗತಿಯ ವಿದ್ಯಾರ್ಥಿಗಳಿಗೆ ಪರೀಕ್ಷೆ ನಡೆಸಲು ಶಿಕ್ಷಣ ಇಲಾಖೆ ನಿರ್ಧರಿಸಿದೆ.
ಕಳೆದ ಶೈಕ್ಷಣಿಕ ವರ್ಷದ ಅಂತ್ಯದ ವೇಳೆ ಕೋವಿಡ್ ಕಾಣಿಸಿ ಕೊಂಡು, ಬಳಿಕ ಲಾಕ್‌ಡೌನ್ ಘೋಷಣೆಯಾಗಿತ್ತು. 1ರಿಂದ 9ನೇ ತರಗತಿ ವಿದ್ಯಾರ್ಥಿಗಳಿಗೆ ಅಂತಿಮ ಪರೀಕ್ಷೆ ನಡೆದಿರಲಿಲ್ಲ.
ಈ ವರ್ಷ 1ರಿಂದ 9ನೇ ತರಗತಿ ವಿದ್ಯಾರ್ಥಿ ಗಳಿಗೆ ತರಗತಿ ಬೋಧನೆ ಆರಂಭವಾಗಿಲ್ಲ. 6ರಿಂದ 9ನೇ ತರಗತಿ ವಿದ್ಯಾರ್ಥಿಗಳಿಗೆ ವಾರಕ್ಕೆ 3 ದಿನ ವಿದ್ಯಾಗಮ ತರಗತಿ ನಡೆಯುತ್ತಿದೆ. ಯಾವುದೇ ತರಗತಿ ಪಠ್ಯದ ಕಡಿತವೂ ಆಗಿಲ್ಲ.
ಈ ಬಾರಿ ಎಲ್ಲ ಶೈಕ್ಷಣಿಕ ಪ್ರಕ್ರಿಯೆಗಳ ಜತೆಗೆ ಪರೀಕ್ಷೆ ನಡೆಸಬೇಕು ಎಂದು ಈಗಾಗಲೇ ಶಾಲೆಗಳಿಗೆ ಸೂಚನೆ ನೀಡಲಾಗಿದೆ ಎಂದು ಶಿಕ್ಷಣ ಇಲಾಖೆಯ ಮೂಲಗಳು ತಿಳಿಸಿವೆ.
ಪರೀಕ್ಷೆ ನಡೆಸಿ ತೇರ್ಗಡೆ :
ಶಿಕ್ಷಣ ಹಕ್ಕು ಕಾಯ್ದೆಯನ್ವಯ 1-9ರ ಯಾವುದೇ ವಿದ್ಯಾರ್ಥಿಯನ್ನು ಅನುತ್ತೀರ್ಣ ಗೊಳಿಸುವಂತಿಲ್ಲ. ಹೀಗಾಗಿ ಪರೀಕ್ಷೆ ನಡೆಸಿ, ಎಲ್ಲರನ್ನೂ ತೇರ್ಗಡೆ ಮಾಡಿ, ಕಲಿಕಾ ನ್ಯೂನತೆ ಆಧಾರದಲ್ಲಿ ಮುಂದೆ ವಿಶೇಷ ಆದ್ಯತೆ ನೀಡಲಾಗುತ್ತದೆ ಎಂದು ಮುಖ್ಯ ಶಿಕ್ಷಕರೊಬ್ಬರು ಮಾಹಿತಿ ನೀಡಿದ್ದಾರೆ.
ಖಾಸಗಿ ಶುಲ್ಕ ವಿನಾಯಿತಿ? :
ಕೋವಿಡ್ ಹಿನ್ನೆಲೆಯಲ್ಲಿ ರಾಜ್ಯದ ಖಾಸಗಿ ಶಾಲಾ ಮಕ್ಕಳ ಶುಲ್ಕದಲ್ಲಿ ಶೇ. 30ರಿಂದ ಶೇ. 35ರಷ್ಟು ವಿನಾಯಿತಿ ನೀಡಲು ಖಾಸಗಿ ಶಿಕ್ಷಣ ಸಂಸ್ಥೆಗಳಿಗೆ ಸರಕಾರ ಸೂಚನೆ ನೀಡುವ ಸಾಧ್ಯತೆಯಿದೆ. ಸೋಮವಾರ ಅಥವಾ ಮಂಗಳವಾರ ಸರಕಾರ ಈ ಬಗ್ಗೆ ನಿರ್ಧಾರ ಪ್ರಕಟಿಸುವ ಸಾಧ್ಯತೆಯಿದೆ ಎಂದು ಶಿಕ್ಷಣ ಇಲಾಖೆಯ ಮೂಲಗಳು ತಿಳಿಸಿವೆ.
1ರಿಂದ 9ನೇ ತರಗತಿ ಮಕ್ಕಳಿಗೆ ಈ ಬಾರಿ ಕಲಿಕಾ ಮೌಲ್ಯ ಮಾಪನ ಇರಲಿದೆ. ದ.ಕ. ಜಿಲ್ಲೆಯಲ್ಲಿ ಸಿದ್ಧತೆ ನಡೆಯುತ್ತಿದೆ. ವಿದ್ಯಾಗಮ ಮೂಲಕ ಮಕ್ಕಳಿಗೆ ಅಭ್ಯಾಸ ಮಾಡಿಸಲಾಗುತ್ತಿದೆ. -ಮಲ್ಲೇಸ್ವಾಮಿ, ವಿದ್ಯಾಂಗ ಉಪನಿರ್ದೇಶಕರು, ದ.ಕ.
ಉಡುಪಿ ಜಿಲ್ಲೆಯಲ್ಲಿ ವಿದ್ಯಾಗಮಕ್ಕೆ ಶೇ.75ರಷ್ಟು ಮಂದಿ ಮಕ್ಕಳು ಹಾಜರಾಗುತ್ತಿದ್ದಾರೆ. 1ರಿಂದ 9ನೇ ತರಗತಿಯ ಮಕ್ಕಳಿಗೆ ಈ ಬಾರಿ ಕಲಿಕಾ ಮೌಲ್ಯಮಾಪನ ಇರಲಿದೆ. -ಎನ್.ಎಚ್. ನಾಗೂರ, ಕ್ಷೇತ್ರ ಶಿಕ್ಷಣಾಧಿಕಾರಿಗಳು, ಉಡುಪಿ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Surat; ವಂಚಿಸಿ ಸಂಗ್ರಹಿಸಿಟ್ಟಿದ್ದ 6 ಲಕ್ಷ ಮೌಲ್ಯದ ಒಣಮೆಣಸಿನಕಾಯಿ ಪತ್ತೆ
Waqf: ರೈತರಿಗೆ ನೀಡಿರುವ ನೋಟಿಸ್ ತಕ್ಷಣ ವಾಪಸ್: ಅಧಿಕಾರಿಗಳಿಗೆ ಸಿಎಂ ಖಡಕ್ ಸೂಚನೆ
Waqf Issue: ನ.4ರಂದು ರಾಜ್ಯಾದ್ಯಂತ ಕಾಂಗ್ರೆಸ್ ಸರ್ಕಾರದ ವಿರುದ್ದ ಬಿಜೆಪಿ ಪ್ರತಿಭಟನೆ
High Court: ಕ್ರಿಮಿನಲ್ ಕೇಸ್ ಡೈರಿ ಪ್ರತೀ ಪುಟಕ್ಕೆ ಸಹಿ:ಅರ್ಜಿ ವಜಾಗೊಳಿಸಿದ ಹೈಕೋರ್ಟ್
Bengaluru: ಸುವರ್ಣ ಸಂಭ್ರಮದಲ್ಲಿ ರಾಜ್ಯೋತ್ಸವ ವೈಭವ
MUST WATCH
ಹೊಸ ಸೇರ್ಪಡೆ
Surat; ವಂಚಿಸಿ ಸಂಗ್ರಹಿಸಿಟ್ಟಿದ್ದ 6 ಲಕ್ಷ ಮೌಲ್ಯದ ಒಣಮೆಣಸಿನಕಾಯಿ ಪತ್ತೆ
Subrahmanya; ಅನ್ಯಕೋಮಿನ ವಿದ್ಯಾರ್ಥಿನಿಗೆ ಮೆಸೇಜ್: ಗುಂಪಿನಿಂದ ಯುವಕನಿಗೆ ಥಳಿತ
Kundapura; ನಿಯಂತ್ರಣ ತಪ್ಪಿ ಗದ್ದೆಗೆ ಉರುಳಿದ ಬೈಕ್: ಸವಾರ ದುರ್ಮರ*ಣ
J&K:ಪಾಕ್ ಮೂಲದ ಎಲ್‌ಇಟಿ ಉನ್ನತ ಕಮಾಂಡರ್ ನನ್ನ ಹೊಡೆದುರುಳಿಸಿದ ಸೇನೆ
Pushpa2: ಅಲ್ಲು ಅರ್ಜುನ್ ‘ಪುಷ್ಪ-2’ ಐಟಂ ಹಾಡಿಗೆ ಹಜ್ಜೆ ಹಾಕಲಿದ್ದಾರೆ ಈ ಇಬ್ಬರು ನಟಿಯರು?
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.