Karnataka Govt.,: ಅಬಕಾರಿ, ಸಾರಿಗೆ ಇಲಾಖೆ ಅವ್ಯವಹಾರ: ಕ್ರಮ
ಭರವಸೆಗಳ ಸಮಿತಿ ಸಭೆಯಲ್ಲಿ ಇಲಾಖೆ ಮುಖ್ಯಸ್ಥರಿಗೆ ಅಧ್ಯಕ್ಷ ಟಿ.ಎ. ಶರವಣ ತಾಕೀತು
Team Udayavani, Jan 3, 2025, 10:46 PM IST
ಬೆಂಗಳೂರು: ಅಬಕಾರಿ ಇಲಾಖೆ ಹಾಗೂ ಸಾರಿಗೆ ಇಲಾಖೆಯಲ್ಲಿನ ಆರ್ಥಿಕ ಅವ್ಯವಹಾರಗಳಿಗೆ ಸಂಬಂಧಿಸಿದಂತೆ ಸದನಕ್ಕೆ ನೀಡಿದ ಭರವಸೆಯಂತೆ ತಪ್ಪಿತಸ್ಥರ ವಿರುದ್ಧ ಒಂದು ತಿಂಗಳಲ್ಲಿ ಕಾನೂನು ಕ್ರಮ ಜರಗಿಸಲು ವಿಧಾನ ಪರಿಷತ್ತಿನ ಸರಕಾರಿ ಭರವಸೆಗಳ ಸಮಿತಿ ಸಂಬಂಧಪಟ್ಟ ಇಲಾಖೆಯ ಮುಖ್ಯಸ್ಥರಿಗೆ ತಾಕೀತು ಮಾಡಿದೆ.
ಶಾಸಕರ ಭವನದ ಸಮ್ಮೇಳನ ಸಭಾಂಗಣದಲ್ಲಿ ಶುಕ್ರವಾರ ನಡೆದ ಸಮಿತಿಯ ಸಭೆಯಲ್ಲಿ 2015ರಲ್ಲಿ ಸಾರಿಗೆ ಇಲಾಖೆಯಲ್ಲಿ ತೆರಿಗೆ ವಂಚಿಸಿ ಐಷಾರಾಮಿ ಕಾರುಗಳನ್ನು ಖರೀದಿಸಿದ ಹಾಗೂ 2017ರಲ್ಲಿ ಅಬಕಾರಿ ಇಲಾಖೆಯಲ್ಲಿನ ಹಣ ದುರುಪಯೋಗ ಪ್ರಕರಣಗಳಿಗೆ ಸಂಬಂಧಿಸಿದಂತೆ ಸರಕಾರ ಸದನದಲ್ಲಿ ನೀಡಿದ್ದ ಭರವಸೆ ಹಾಗೂ ಅದರ ಮೇಲೆ ಇಲ್ಲಿವರೆಗೆ ಆಗಿರುವ ಕ್ರಮಗಳ ಕುರಿತು ಚರ್ಚಿಸಲಾಯಿತು. ಸರಕಾರಿ ಭರವಸೆಗಳ ಸಮಿತಿ ಅಧ್ಯಕ್ಷ ಟಿ.ಎ. ಶರವಣ ಅಧ್ಯಕ್ಷತೆಯಲ್ಲಿ ಈ ಸಭೆ ನಡೆಯಿತು.
ಸಭೆಯಲ್ಲಿ ಚರ್ಚಿಸಲಾದ ವಿಷಯಗಳ ಕುರಿತು “ಉದಯವಾಣಿ’ಗೆ ಮಾಹಿತಿ ನೀಡಿದ ಟಿ.ಎ.ಶರವಣ, ತೆರಿಗೆ ವಂಚಿಸಿ ಐಷಾರಾಮಿ ಕಾರುಗಳನ್ನು ಖರೀದಿಸಿದ ಪ್ರಕರಣ ಬೆಂಗಳೂರಿನ ಎಚ್‌ಎಸ್‌ಆರ್ ಲೇಔಟ್ ಆರ್‌ಟಿಒ ಕಚೇರಿಯಲ್ಲಿ ನಡೆದಿತ್ತು. ಎಫ್ಐಆರ್ ದಾಖಲಾಗಿ ತನಿಖೆ ನಡೆದಿದೆ. ಇದಕ್ಕೆ ಸಂಬಂಧಿಸಿದಂತೆ 1,470 ಕಡತಗಳು ನಾಪತ್ತೆಯಾಗಿದ್ದವು. ಈ ಪೈಕಿ 550 ಕಡತಗಳನ್ನು ಪತ್ತೆ ಹಚ್ಚಲಾಗಿದೆ. 32 ಕೋಟಿ ರೂ. ಅಕ್ರಮ ನಡೆದಿದೆ ಎಂದು ಸಿಎಜಿ ವರದಿ ಹೇಳಿದೆ. 2 ಕೋಟಿ ರೂ. ರಿಕವರಿ ಮಾಡಲಾಗಿದೆ. ಈ ಬಗ್ಗೆ ಕ್ರಮ ಕೈಗೊಳ್ಳುವುದಾಗಿ 2021ರಲ್ಲಿ ಅಂದಿನ ಸಾರಿಗೆ ಸಚಿವರು ಭರವಸೆ ನೀಡಿದ್ದರು. ಪ್ರಕರಣವು ಸರಕಾರಿ ಭರವಸೆಗಳ ಸಮಿತಿಗೆ ವರ್ಗಾವಣೆಗೊಂಡಿತ್ತು. ಅದರಂತೆ, ಶುಕ್ರವಾರ ನಡೆದ ಸಭೆಯಲ್ಲಿ ಅಧಿಕಾರಿಗಳಿಂದ ಈವರೆಗಿನ ಮಾಹಿತಿ ಪಡೆದು, ತಪ್ಪಿತಸ್ಥರ ವಿರುದ್ಧ ಮುಲಾಜಿಲ್ಲದೆ 1 ತಿಂಗಳಲ್ಲಿ ಕ್ರಮ ಕೈಗೊಳ್ಳುವಂತೆ ಅಧಿಕಾರಿಗಳಿಗೆ ತಾಕೀತು ಮಾಡಲಾಗಿದೆ ಎಂದರು.
ಅದೇ ರೀತಿ ಅಬಕಾರಿ ಇಲಾಖೆಯಲ್ಲಿ 2017ರಲ್ಲಿ ನಡೆದಿದ್ದ ಅವ್ಯವಹಾರಕ್ಕೆ ಸಂಬಂಧಿಸಿದಂತೆ ಅಧಿಕಾರಿಗಳ ವಿರುದ್ಧ ಕ್ರಮಕೈಗೊಂಡ ಬಗ್ಗೆ ಚರ್ಚಿಸಲಾಯಿತು. ಈ ಪ್ರಕರಣದಲ್ಲಿ ಆರೋಪ ಎದುರಿಸುತ್ತಿರುವ ಅಧಿಕಾರಿಗಳ ವಿರುದ್ಧ ಕ್ರಮ ಕೈಗೊಳ್ಳುವುದಾಗಿ ಮುಖ್ಯಮಂತ್ರಿಯವರು ಸದನಕ್ಕೆ ಭರವಸೆ ನೀಡಿದ್ದರು. ಈ ಪ್ರಕರಣದಲ್ಲಿ ತಪ್ಪಿತಸ್ಥ ಅಧಿಕಾರಿಗಳ ವಿರುದ್ಧ ಕ್ರಮ ಕೈಗೊಳ್ಳುವಂತೆ ಇಲಾಖೆಯ ಮೇಲಧಿಕಾರಿಗಳಿಗೆ ತಾಕೀತು ಮಾಡಲಾಗಿದೆ ಎಂದು ಟಿ.ಎ. ಶರವಣ ಹೇಳಿದರು.
ಸೂಕ್ತ ಮಾಹಿತಿ ಜತೆ ಹಾಜರಾಗಿ: ಡಾ| ಶಾಲಿನಿ ರಜನೀಶ್
ವಿಧಾನಪರಿಷತ್ತಿನ ಸರಕಾರಿ ಭರವಸೆಗಳ ಸಮಿತಿಯ ಸಭೆಗಳನ್ನು ಇಲಾಖಾ ಮುಖ್ಯಸ್ಥರು ಕಡೆಗಣಿಸುತ್ತಿರುವುದನ್ನು ಗಂಭೀರವಾಗಿ ಪರಿಗಣಿಸಿರುವ ರಾಜ್ಯ ಸರಕಾರದ ಮುಖ್ಯ ಕಾರ್ಯದಶಿ ಡಾ| ಶಾಲಿನಿ ರಜನೀಶ್ ಸಂಬಂಧಪಟ್ಟ ಇಲಾಖೆಯ ಹಿರಿಯ ಅಧಿಕಾರಿಗಳಿಗೆ ಪತ್ರ ಬರೆದು ಖಡಕ್ ಎಚ್ಚರಿಕೆ ನೀಡಿದ್ದಾರೆ. ಸೂಕ್ತ ಮಾಹಿತಿಯೊಂದಿಗೆ ಕಡ್ಡಾಯ ಹಾಜರಾತಿಗೆ ಸೂಚಿಸಿದ್ದಾರೆ.
ಅಧಿಕಾರಿಗಳ ನಿರ್ಲಕ್ಷ್ಯದ ಬಗ್ಗೆ ವಿಧಾನಪರಿಷತ್ತಿನ ಸರ್ಕಾರಿ ಭರವಸೆಗಳ ಸಮಿತಿಯ ಅಧ್ಯಕ್ಷ ಟಿ.ಎ. ಶವರಣ ಕಳೆದ ನವೆಂಬರ್ ತಿಂಗಳಲ್ಲಿ ಮುಖ್ಯ ಕಾರ್ಯದರ್ಶಿಗೆ ಪತ್ರ ಬರೆದಿದ್ದರು. ಅದನ್ನು ಉಲ್ಲೇಖೀಸಿ ಎಲ್ಲ ಇಲಾಖೆಗಳ ಮುಖ್ಯಸ್ಥರಿಗೆ ಜ.3ರಂದು ಮುಖ್ಯ ಕಾರ್ಯದರ್ಶಿ ಪತ್ರ ಬರೆದಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Eshwara Khandre: ಉದ್ದಿಮೆಗಳಿಗೆ 30 ದಿನದಲ್ಲಿ ಮಾಲಿನ್ಯ ನಿಯಂತ್ರಣ ಮಂಡಳಿ ಕ್ಲಿಯರೆನ್ಸ್
Congress ಶಾಸಕ ನರೇಂದ್ರಸ್ವಾಮಿಗೆ ಕೆಎಸ್‌ಪಿಸಿಬಿ ಅಧ್ಯಕ್ಷ ಪಟ್ಟ?
ಎ.ಎಂ. ಪ್ರಸಾದ್ ಮುಂದಿನ ಮುಖ್ಯ ಮಾಹಿತಿ ಆಯುಕ್ತ? ಮಾಹಿತಿ ಆಯೋಗಕ್ಕೂ ಸದಸ್ಯರ ನೇಮಕ?
B. Y. Vijayendra: ನನ್ನನ್ನು ಟಾರ್ಗೆಟ್ ಮಾಡುವವರ ಬಗ್ಗೆ ತಲೆಕೆಡಿಸಿಕೊಳ್ಳಲ್ಲ
Congress: ಶಾಸಕರು, ಸದಸ್ಯರಿಗೆ ಸಿಎಂ ಸಿದ್ದರಾಮಯ್ಯ ಔತಣಕೂಟ
MUST WATCH
ಹೊಸ ಸೇರ್ಪಡೆ
Dharwad High Court: ಹಂಪಿ ನರಹರಿ ತೀರ್ಥರ ವೃಂದಾವನ ಪೂಜೆ ಯಥಾಸ್ಥಿತಿಗೆ
Eshwara Khandre: ಉದ್ದಿಮೆಗಳಿಗೆ 30 ದಿನದಲ್ಲಿ ಮಾಲಿನ್ಯ ನಿಯಂತ್ರಣ ಮಂಡಳಿ ಕ್ಲಿಯರೆನ್ಸ್
Congress ಶಾಸಕ ನರೇಂದ್ರಸ್ವಾಮಿಗೆ ಕೆಎಸ್‌ಪಿಸಿಬಿ ಅಧ್ಯಕ್ಷ ಪಟ್ಟ?
ಎ.ಎಂ. ಪ್ರಸಾದ್ ಮುಂದಿನ ಮುಖ್ಯ ಮಾಹಿತಿ ಆಯುಕ್ತ? ಮಾಹಿತಿ ಆಯೋಗಕ್ಕೂ ಸದಸ್ಯರ ನೇಮಕ?
Bidar Robbery Case: ಹೈದರಾಬಾದ್‌ನಲ್ಲಿ ಇನ್ನಿಬ್ಬರ ಸಾಥ್!
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.