CM, DCM ಸಲಹೆಗಾರರು ಸೇರಿ ಮತ್ತಷ್ಟು ಹುದ್ದೆಗಳಿಗೆ ಲಾಭದಿಂದ ವಿನಾಯಿತಿ
Team Udayavani, Feb 24, 2024, 6:10 AM IST
ಬೆಂಗಳೂರು: ಇತ್ತೀಚೆಗಷ್ಟೇ ಮುಖ್ಯ ಮಂತ್ರಿಗಳ ರಾಜಕೀಯ ಕಾರ್ಯದರ್ಶಿ, ಕಾನೂನು ಸಲಹೆಗಾರ ಹಾಗೂ ದಿಲ್ಲಿ ವಿಶೇಷ ಪ್ರತಿನಿಧಿಗಳನ್ನು ಲಾಭದಾಯಕ ಹುದ್ದೆಯಿಂದ ಹೊರಗಿಟ್ಟಿದ್ದ ಸರಕಾರವು ಈಗ ಆಯೋಗಗಳ ಅಧ್ಯಕ್ಷ, ಉಪಾಧ್ಯಕ್ಷ, ನಿರ್ದೇಶಕ, ಸಿಎಂ ಮತ್ತು ಡಿಸಿಎಂ ಅವರ ಸಲಹೆಗಾರರು, ಕರ್ನಾಟಕ ರಾಜ್ಯ ಪರಿವರ್ತನ ಸಂಸ್ಥೆಯ ಉಪಾಧ್ಯಕ್ಷರನ್ನೂ ಲಾಭ ದಾಯಕ ಹುದ್ದೆಯಿಂದ ಹೊರಗಿಡಲು ಸಿದ್ಧವಾಗಿದೆ. ಈ ಕುರಿತ ಮಸೂದೆಗೆ ವಿಧಾನಸಭೆ ಅಸ್ತು ಎಂದಿದೆ.
ಕೇಂದ್ರ ಸರಕಾರದ ವಿರುದ್ಧ ರಾಜ್ಯ ಸರಕಾರ ಕೈಗೊಂಡ ನಿರ್ಣಯದ ವಿರುದ್ಧ ವಿಪಕ್ಷ ಬಿಜೆಪಿ ಹಾಗೂ ಜೆಡಿಎಸ್ ಸದಸ್ಯರು ಧರಣಿ ನಡೆಸುತ್ತಿರು ವಾಗಲೇ ಕರ್ನಾಟಕ ವಿಧಾನಮಂಡಲ (ಅನರ್ಹತೆ ನಿವಾರಣ) (ತಿದ್ದುಪಡಿ) ಮಸೂದೆ-2024ನ್ನು ಶುಕ್ರವಾರ ವಿಧಾನಸಭೆಯಲ್ಲಿ ಮಂಡಿಸಿದ ಕಾನೂನು ಸಚಿವ ಎಚ್.ಕೆ.ಪಾಟೀಲ್ ಅನು ಮೋದನೆ ಪಡೆದುಕೊಂಡರು.
ಹಿಂದೆಯೂ ತಿದ್ದುಪಡಿ
ಈ ಹಿಂದೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಕಾನೂನು ಸಲಹೆಗಾರರೂ ಆದ ವಿರಾಜಪೇಟೆ ಶಾಸಕ ಎ.ಎಸ್. ಪೊನ್ನಣ್ಣ, ದಿಲ್ಲಿ ವಿಶೇಷ ಪ್ರತಿನಿಧಿ ಶಿರಾ ಶಾಸಕ ಟಿ.ಬಿ. ಜಯಚಂದ್ರ ಅವರಿಗಾಗಿ ಕಾಯ್ದೆಗೆ ತಿದ್ದುಪಡಿ ತರಲಾಗಿತ್ತು. ಈಗ ಸೊಸೈಟಿಗಳ ನೋಂದಣಿಗೆ ಸಂಬಂಧಿಸಿದ ಯಾವುದೇ ಇತರ ಕಾನೂನಿನಡಿ ನೋಂದಾಯಿಸಿದ ಸೊಸೈಟಿ, ಸಮಿತಿ, ಆಯೋಗಗಳ ಅಧ್ಯಕ್ಷ, ಉಪಾಧ್ಯಕ್ಷ, ಆಡಳಿತ ಮಂಡಳಿ ನಿರ್ದೇಶಕರಿಗೂ ವಿನಾಯಿತಿ ನೀಡಲಾಗಿದೆ.
ಜತೆಗೆ ಮುಖ್ಯಮಂತ್ರಿಗಳ ಸಲಹೆಗಾರರು ಹಾಗೂ ಉಪಮುಖ್ಯಮಂತ್ರಿಗಳ ಸಲಹೆಗಾರರಿಗೂ ಈ ವಿನಾಯಿತಿ ಅನ್ವಯ ಆಗಲಿದ್ದು, ಕರ್ನಾಟಕ ರಾಜ್ಯ ಪರಿವರ್ತನ ಸಂಸ್ಥೆಯ ಉಪಾಧ್ಯಕ್ಷ ಪ್ರೊ| ರಾಜೀವಗೌಡ ಅವರನ್ನೂ ಇದರಡಿ ತರಲಾಗಿದೆ. ಲಾಭದಾಯಕ ಹುದ್ದೆ ಹೊಂದಿರುವ ಆರೋಪ ದಡಿ ಅನರ್ಹತೆಯ ಸಂಕಷ್ಟ ಎದುರಾಗದಂತೆ ರಕ್ಷಣೆ ನೀಡಲು ಈ ತಿದ್ದುಪಡಿ ನೆರವಾಗಲಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಸಿ.ಟಿ.ರವಿ ನಕಲಿ ಎನ್‌ಕೌಂಟರ್‌ಗೆ ಸರಕಾರದ ಹುನ್ನಾರ: ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ
Ambedkar Row: ಕಾಂಗ್ರೆಸ್ ಎಂದರೆ ಫೇಕ್ ಗಾಂಧಿಗಳ ಪಕ್ಷ: ಛಲವಾದಿ ನಾರಾಯಣಸ್ವಾಮಿ
Amit Shah ಹೇಳಿಕೆ ಖಂಡಿಸಿ ರಾಜ್ಯಾದ್ಯಂತ ಪ್ರತಿಭಟನೆ: ಬಿ.ಕೆ. ಹರಿಪ್ರಸಾದ್
Mandya: ಕನ್ನಡ ಸಾಹಿತ್ಯ ಸಮ್ಮೇಳನದಲ್ಲಿ 46 ಮಂದಿ ಸಾಧಕರಿಗೆ ಸಮ್ಮಾನ
Winter Session: ಪಂಚಮಸಾಲಿಗಳ ಮೇಲೆ ಲಾಠಿ ಬೀಸಿದವರಿಗೆ ಬಹುಮಾನ; ಶಾಸಕ ಯತ್ನಾಳ್ ಆಕ್ರೋಶ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Kasaragodu: ಸ್ಲೀಪರ್ ಸೆಲ್ ರಚನೆಗಾಗಿ ಭಾರತಕ್ಕೆ ಬಂದಿದ್ದ ಭಯೋತ್ಪಾದಕ ಶಾಬ್‌ಶೇಖ್
Ayodhya: ರಾಮಮಂದಿರಕ್ಕೆ 1 ವರ್ಷ: ಜ.11ರಿಂದ 3 ದಿನ ಪೂಜೆ
ಸಿ.ಟಿ.ರವಿ ನಕಲಿ ಎನ್‌ಕೌಂಟರ್‌ಗೆ ಸರಕಾರದ ಹುನ್ನಾರ: ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ
Pope Francis; ಗಾಜಾಪಟ್ಟಿ ಮೇಲೆ ನಡೆದದ್ದು ಯುದ್ಧವಲ್ಲ, ಕ್ರೌರ್ಯ
Horoscope: ಈ ರಾಶಿಯವರಿಗೆ ಧೈರ್ಯ ಮತ್ತು ಸಾಹಸ ಪ್ರವೃತ್ತಿಯಿಂದ ಕಾರ್ಯಸಿದ್ಧಿ ಆಗಲಿದೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.