ಹೋಟೆಲ್ಗಳಿಗೆ ಜಿಎಸ್ಟಿ ತೆರಿಗೆ ಇಳಿಕೆ ನಿರೀಕ್ಷೆ
Team Udayavani, Oct 31, 2017, 6:20 AM IST
ಬೆಂಗಳೂರು: ಹವಾನಿಯಂತ್ರಿತ ಹೋಟೆಲ್‌ಗಳಿಗೆ ಜಿಎಸ್‌ಟಿಯಡಿ ವಿಧಿಸಿರುವ ತೆರಿಗೆ ಶೇ.18ರಿಂದ ಶೇ.12ಕ್ಕೆ ಇಳಿಕೆಯಾಗುವ ಸಾಧ್ಯತೆ ಬಗ್ಗೆ ಜಿಎಸ್‌ಟಿ ನೆಟ್‌ವರ್ಕ್‌ನ ಸಚಿವರ ತಂಡದ ಮುಖ್ಯಸ್ಥ ಸುಶೀಲ್ ಕುಮಾರ್ ಮೋದಿ ವ್ಯಕ್ತಪಡಿಸಿರುವ ವಿಶ್ವಾಸ ನಮ್ಮಲ್ಲೂ ಆಶಾಭಾವನೆ ಮೂಡಿಸಿದೆ ಎಂದು ಬೃಹತ್ ಬೆಂಗಳೂರು ಹೋಟೆಲ್ ಸಂಘದ ಅಧ್ಯಕ್ಷ ಚಂದ್ರಶೇಖರ ಹೆಬ್ಟಾರ್ ತಿಳಿಸಿದರು.
ನಗರದಲ್ಲಿ ಇತ್ತೀಚೆಗೆ ಬಿಹಾರದ ಉಪಮುಖ್ಯಮಂತ್ರಿ ಸುಶೀಲ್ ಕುಮಾರ್ ಮೋದಿ ಅವರನ್ನು ನಿಯೋಗದಲ್ಲಿ ಭೇಟಿ ಮಾಡಿ ಮನವಿ ಸಲ್ಲಿಸಿದ್ದು, ಈ ಬಗ್ಗೆ ಪ್ರತಿಕ್ರಿಯಿಸಿರುವ ಅವರು, “ಹವಾನಿಯಂತ್ರಿತ ಹೋಟೆಲ್‌ಗಳಿಗೆ ಶೇ.18ರಿಂದ ಶೇ.12ರಷ್ಟು ತೆರಿಗೆ ಇಳಿಕೆ ಒತ್ತಾಯಕ್ಕೆ ಸ್ಪಂದನೆ ಸಿಗುವ ನಿರೀಕ್ಷೆ ಇದೆ ಎಂಬಂತೆ ಸಚಿವರು ತಿಳಿಸಿದ್ದಾರೆ. ತೆರಿಗೆ ಇಳಿಕೆಯಾದರೆ ಹವಾನಿಯಂತ್ರಿತ ಹಾಗೂ ಹವಾನಿಯಂತ್ರಿತವಲ್ಲದ ಹೋಟೆಲ್‌ಗಳಿಗೆ ಸಮಾನವಾಗಿ ಶೇ.12ರಷ್ಟು ತೆರಿಗೆ ಇರಲಿದೆ ಎಂದು ಹೇಳಿದರು. ವಾರ್ಷಿಕ ವಹಿವಾಟು 20 ಲಕ್ಷ ರೂ. ಮೀರಿದ ಎಲ್ಲ ಬಗೆಯ ಹೋಟೆಲ್, ರೆಸ್ಟೋರೆಂಟ್‌ಗಳಿಗೆ ಸಮಾನವಾಗಿ ಶೇ.5ರಷ್ಟು ತೆರಿಗೆ ವಿಧಿಸಬೇಕೆಂಬ ಮನವಿಯನ್ನು ಮತ್ತೆ ಸಲ್ಲಿಸಲಾಯಿತು. ಈ ವ್ಯವಸ್ಥೆ ಜಾರಿಗೊಳಿಸಿದರೆ ಪರಿಹಾರ ಸೌಲಭ್ಯ (ಕಾಂಪೋಸಿಷನ್) ರದ್ದುಪಡಿಸಬಹುದು. ಅಲ್ಲದೇ ಹೋಟೆಲ್ ಮಾಲೀಕರು ಸಹ ಗ್ರಾಹಕರಿಗೆ ತೆರಿಗೆ ಹೊರೆ ಹಸ್ತಾಂತರಿಸದೆ ಮಾಲೀಕರೇ ಭರಿಸಬಹುದಾಗಿದೆ. ತಾರಾ ಹೋಟೆಲ್‌ಗಳಿಗೆ ಗರಿಷ್ಠ ತೆರಿಗೆ ವಿಧಿಸಬಹುದು ಎಂಬ ಅಂಶವನ್ನೂ ಸಚಿವರ ಗಮನಕ್ಕೆ ತರಲಾಯಿತು. ಈ ವಿಚಾರ ಮನವರಿಕೆಯಾಗಿ ಸಚಿವರು ಸಹಮತ ವ್ಯಕ್ತಪಡಿಸಿದ್ದು, ಸಂಬಂಧಪಟ್ಟವರ ಗಮನಕ್ಕೆ ತರುವುದಾಗಿ ತಿಳಿಸಿದ್ದಾರೆ. ಒಟ್ಟಾರೆ ತೆರಿಗೆ ಪ್ರಮಾಣ ಇಳಿಕೆ ನಿರೀಕ್ಷೆಯಲ್ಲಿದ್ದೇವೆ ಎಂದು ತಿಳಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
JDS ರಾಮನಗರದಿಂದಲೂ ಔಟ್: ‘ಮೈತ್ರಿ’ಗೂ ಲಾಭ ತಂದು ಕೊಡದ ದಳ
Vikram Gowda Case: ವಿಕ್ರಂ ಗೌಡ ಎನ್‌ಕೌಂಟರ್; ತನಿಖೆ ಚುರುಕು
Karnataka Congress; ‘ಭ್ರಷ್ಟ’ಆರೋಪ ಮಧ್ಯೆ ವಿಪಕ್ಷಗಳಿಗೆ ಮರ್ಮಾಘಾತ
Mysuru: ಜೆಡಿಎಸ್ ವರಿಷ್ಠರಿಗೆ ನಾನು ಬೇಡ, ನನ್ನ ಮಗ ಬೇಕಾಗಿದ್ದಾನೆ: ಜಿ.ಟಿ.ದೇವೇಗೌಡ
BJP ಸಂಘಟನೆ, ತಂತ್ರಗಾರಿಕೆಯಲ್ಲಿ ವಿಫಲ: ವಿಜಯೇಂದ್ರ ಮೇಲೂ ಪರಿಣಾಮ?
MUST WATCH
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|
ಹೊಸ ಸೇರ್ಪಡೆ
Laparoscopic surgery: ಸಂತಾನೋತ್ಪತ್ತಿ ಹೆಚ್ಚಿಸುವ ಲ್ಯಾಪರೊಸ್ಕೋಪಿಕ್ ಶಸ್ತ್ರಚಿಕಿತ್ಸೆ
Renukaswamy Case: ಹತ್ಯೆ ಸ್ಥಳದಲ್ಲಿ ನಟ ದರ್ಶನ್: ಫೋಟೋ ಸಾಕ್ಷ್ಯ
Chennamman-Kittur: ಯೋಧ ನರೇಶ ಯಲ್ಲಪ್ಪ ಅಗಸರ ಕೆರೆಗೆ ಹಾರಿ ಆತ್ಮಹತ್ಯೆ
Subhramanya: ಕುಕ್ಕೆ ಶ್ರೀಸುಬ್ರಹ್ಮಣ್ಯ ದೇವಸ್ಥಾನದ ಸೇವೆಗಳಲ್ಲಿ ವ್ಯತ್ಯಯ
Health Issue: ಸರ್ಜರಿಗಾಗಿ ಮುಂದಿನ ತಿಂಗಳು ಅಮೆರಿಕಕ್ಕೆ ಹೋಗುವೆ: ನಟ ಶಿವರಾಜ್‌ಕುಮಾರ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.