SLBC; ಬರ ಪೀಡಿತ ಪ್ರದೇಶದಲ್ಲಿ ಸಾಲ ಪಾವತಿ ಅವಧಿ ವಿಸ್ತರಣೆ
Team Udayavani, Oct 12, 2023, 11:25 AM IST
ಬೆಂಗಳೂರು: ಬರ ಘೋಷಿತ ತಾಲೂಕುಗಳಲ್ಲಿ ನಷ್ಟವಾಗಿರುವ ಬೆಳೆ ಪ್ರಮಾಣ ಆಧರಿಸಿ ಸಾಲ ಮರುಪಾವತಿಯ ಅವಧಿಯನ್ನು ವಿಸ್ತರಿಸುವಂತೆ ಎಲ್ಲ ಬ್ಯಾಂಕು ಗಳಿಗೆ ರಾಜ್ಯ ಮಟ್ಟದ ಬ್ಯಾಂಕರುಗಳ ಸಮಿತಿ (ಎಸ್‌ಎಲ್‌ಬಿಸಿ) ಸಲಹೆ ನೀಡಿದೆ.
ಶೇ.33ರಿಂದ 49ರ ವರೆಗೆ ಬೆಳೆ ನಷ್ಟವಾಗಿ ರುವ ರೈತರು ಹಾಗೂ ಶೇ.50ಕ್ಕಿಂತ ಹೆಚ್ಚಿನ ಪ್ರಮಾಣದಲ್ಲಿ ಬೆಳೆ ನಷ್ಟವಾಗಿರುವ ರೈತರಿಗೂ ಪರಿಹಾರ ವಿಸ್ತರಣೆಯನ್ನು ಮಾಡಬೇಕಿದೆ. ಪ್ರಕೃತಿ ವಿಕೋಪದಂತಹ ಸಂದರ್ಭಗಳಲ್ಲಿ ಆರ್‌ಬಿಐ ನೀಡಿರುವ ಪ್ರಮುಖ ನಿರ್ದೇಶನ ಗಳನ್ನು ಅನುಸರಿಸಿ ಪರಿಹಾರ ಕ್ರಮಗಳನ್ನು ಪುನರ್ ರಚಿಸುವಂತೆಯೂ ಎಸ್‌ಎಲ್‌ಬಿಸಿ ಸಲಹೆ ನೀಡಿದೆ.
ಆರ್‌ಬಿಐ ನಿರ್ದೇಶನದ ಪ್ರಕಾರ ಸಾಲ ಮರುಪಾವತಿಯ ಅವಧಿಯನ್ನು ತಾತ್ಕಾಲಿಕವಾಗಿ ಮುಂದೂಡುವ ಸಾಧ್ಯತೆಗಳ ಕುರಿತು ಚರ್ಚೆ ನಡೆದಿದೆ. ಶೇ.33ರಿಂದ 50ರಷ್ಟು ಪ್ರಮಾಣದಲ್ಲಿ ಬೆಳೆ ನಷ್ಟವಾಗಿರುವ ರೈತರಿಗೆ ಗರಿಷ್ಠ 2 ವರ್ಷಗಳವರೆಗೆ ಮರುಪಾವತಿ ಅವಧಿ ವಿಸ್ತರಿಸಲು ಅವಕಾಶವಿದೆ. ಅದೇ ರೀತಿ ಶೇ.50ಕ್ಕಿಂತ ಹೆಚ್ಚು ಪ್ರಮಾಣದಲ್ಲಿ ಬೆಳೆ ನಷ್ಟವಾಗಿದ್ದರೆ, ಅಂತಹ ರೈತರಿಗೆ ಗರಿಷ್ಠ 5 ವರ್ಷಗಳವರೆಗೆ ಸಾಲದ ಮರುಪಾವತಿಗೆ ಅವಕಾಶ ನೀಡಬಹುದು. ಈ ಬಗ್ಗೆ ಎಲ್ಲ ಬ್ಯಾಂಕುಗಳು ಸೂಕ್ತ ನಿರ್ಣಯಗಳನ್ನು ತೆಗೆದು ಕೊಳ್ಳಬೇಕು ಎಂದು ಅಭಿವೃದ್ಧಿ ಆಯುಕ್ತೆ ಡಾ| ಶಾಲಿನಿ ರಜನೀಶ್ ಸೂಚಿಸಿದರು.
ರಾಜ್ಯದಲ್ಲಿ ಸದ್ಯ 195 ತಾಲೂಕುಗಳನ್ನು ಬರಪೀಡಿತ ಎಂದು ಘೋಷಿಸಲಾಗಿದೆ. ಅಲ್ಲಿ ಬರ ಪರಿಹಾರ ಕ್ರಮವನ್ನು ವಿಸ್ತರಿಸಲು ಅನುಕೂಲವಾಗುವಂತೆ ಬ್ಯಾಂಕುಗಳು ಪರಿಹಾರ ಕ್ರಮಗಳನ್ನು ವಿಸ್ತರಿಸಬೇಕು ಎಂಬ ಚರ್ಚೆ ನಡೆದಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Belagavi: ಬಿಮ್ಸ್ ಆಸ್ಪತ್ರೆಯಲ್ಲಿ ಮತ್ತೊರ್ವ ಬಾಣಂತಿ ಮೃತ್ಯು; ಕುಟುಂಬಸ್ಥರ ಆಕ್ರಂದನ
Controversy: ಕಾಂಗ್ರೆಸ್ ಪೋಸ್ಟರ್‌ನಲ್ಲಿ ಪಿಒಕೆ ತಪ್ಪಾಗಿ ಚಿತ್ರಣ; ಬಿಜೆಪಿ ತೀವ್ರ ಆಕ್ರೋಶ
Bidar; ಖರ್ಗೆ ಆಪ್ತನಿಂದ ವಂಚನೆ, ಕೊಲೆ ಬೆದರಿಕೆ; ಪತ್ರ ಬರೆದಿಟ್ಟು ಗುತ್ತಿಗೆದಾರ ಆತ್ಮಹತ್ಯೆ
Belagavi: ಪಿಒಕೆ ಬಗ್ಗೆ ಕಾಂಗ್ರೆಸ್ ನಿಲುವಿನ ಬಗ್ಗೆ ಮತ್ತೆ ಹೇಳಬೇಕಿಲ್ಲ: ಡಿಕೆ ಶಿವಕುಮಾರ್
Belagavi;ಕಾಂಗ್ರೆಸ್ ಕಾರ್ಯಕಾರಿಸಭೆಯಲ್ಲಿ ಖರ್ಗೆ,ರಾಹುಲ್ ಭಾಗಿ; ಸೋನಿಯಾ,ಪ್ರಿಯಾಂಕಾ ಗೈರು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.