ದಕ್ಷಿಣ ಕನ್ನಡದಲ್ಲಿ ಇನ್ನೂ 2 ದಿನ ನಿರ್ಬಂಧ ವಿಸ್ತರಣೆ: ಜಿಲ್ಲಾಧಿಕಾರಿ
Team Udayavani, Aug 2, 2022, 6:49 PM IST
ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ 10 ದಿನಗಳ ಅವಧಿಯಲ್ಲಿ 3 ಕೊಲೆಯಾಗಿದ್ದು, ಬಿಗುವಿನ ವಾತಾವರಣ ನಿರ್ಮಾಣವಾಗಿದೆ. ಇಂತಹ ಸನ್ನಿವೇಶದಲ್ಲಿ ಕಾನೂನು ಸುವ್ಯವಸ್ಥೆ ಕಾಪಾಡುವ ನಿಟ್ಟಿನಲ್ಲಿ ಜಿಲ್ಲೆಯಲ್ಲಿ ನೈಟ್ ಕರ್ಫ್ಯೂ ಜಾರಿಗೊಳಿಸಿದ್ದು, ಪ್ರಸ್ತುತ ಜಾರಿಯಲ್ಲಿರುವ ನಿರ್ಬಂಧಗಳನ್ನು ಮತ್ತೆ ಎರಡು ದಿನಗಳ ಕಾಲ ವಿಸ್ತರಿಸಲಾಗುವುದು ಎಂದು ಜಿಲ್ಲಾಧಿಕಾರಿ ಡಾ. ಕೆ.ವಿ.ರಾಜೇಂದ್ರ ಮಂಗಳವಾರ ಆದೇಶ ಹೊರಡಿಸಿದ್ದಾರೆ.
ಪ್ರವೀಣ್ ನೆಟ್ಟಾರು ಹತ್ಯೆಯ ಬಳಿಕ ಜುಲೈ 29 ರಂದು ಫಾಝಿಲ್ ಹತ್ಯೆಯ ಹಿನ್ನೆಲೆಯಲ್ಲಿ, ಜಿಲ್ಲೆಯಲ್ಲಿ ಯಾವುದೇ ಅಹಿತಕರ ಘಟನೆ ನಡೆಯದಂತೆ ಕ್ರಮವಹಿಸಲು ಪೊಲೀಸ್ ಇಲಾಖೆ ಮುಂದಾಗಿದೆ. ಈ ಹಿನ್ನೆಲೆಯಲ್ಲಿ ಜಿಲ್ಲೆಯಾದ್ಯಂತ ನಗರ ಪೊಲೀಸ್ ಅಧಿಕಾರಿಗಳ ಮನವಿಗೆ ಮೇರೆಗೆ ಆಗಸ್ಟ್ 4 ರವರೆಗೆ ಸಂಜೆ 6 ರಿಂದ ಬೆಳಿಗ್ಗೆ 6 ರವರೆಗೆ ಅಂಗಡಿ ಮುಂಗಟ್ಟುಗಳನ್ನು ಮುಚ್ಚುವಂತೆ ಜಿಲ್ಲಾಡಳಿತ ಆದೇಶಿಸಿದೆ.
ಇದನ್ನೂ ಓದಿ: ರಾಜ್ಯಸಭಾದ ನನ್ನ ಮತಕ್ಕಾಗಿ 25 ಕೋಟಿ ರೂಪಾಯಿ ಆಫರ್ ಬಂದಿತ್ತು: ರಾಜಸ್ಥಾನ್ ಸಚಿವ
ಆಸ್ಪತ್ರೆಗಳು ಮತ್ತು ಔಷಧಿ ಅಂಗಡಿಗಳು ಸೇರಿದಂತೆ ತುರ್ತು ಮತ್ತು ಅಗತ್ಯ ಸೇವೆಗಳು ಲಭ್ಯವಿರುತ್ತವೆ. ಪೊಲೀಸರು ಜಿಲ್ಲಾ ಗಡಿಗಳಲ್ಲಿ ಮತ್ತು ಜಿಲ್ಲೆಯ ಸೂಕ್ಷ್ಮ ಸ್ಥಳಗಳಲ್ಲಿ, ಸಾಮಾಜಿಕ ತಾಣಗಳ ಮೇಲೆ ವ್ಯಾಪಕ ಕಟ್ಟೆಚ್ಚರ ವಹಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Lok Adalat: 39 ಲಕ್ಷ ಕೇಸ್ ಇತ್ಯರ್ಥ; ಪುನಃ ಒಂದಾದ 307 ದಂಪತಿ
ಮೂಲಗೇಣಿದಾರರ ಅರ್ಜಿ ತತ್‌ಕ್ಷಣ ಇತ್ಯರ್ಥಗೊಳಿಸಲು ಐವನ್ ಮನವಿ
Karnataka Govt.,: ಮಂಗಳೂರಲ್ಲಿ ಹೈಕೋರ್ಟ್ ಪೀಠ ಸ್ಥಾಪನೆಗೆ ಮನವಿ
Belagavi: ಎಐಸಿಸಿ ಅಧಿವೇಶನದ ಶತಮಾನೋತ್ಸವಕ್ಕೆ ಅಡ್ಡಿಪಡಿಸಿದರೆ ಕ್ರಮ: ಸಿದ್ದರಾಮಯ್ಯ
Vijayapura: ಜನವರಿ 1, 2 ರಂದು ಸಿದ್ದೇಶ್ವರ ಶ್ರೀಗಳಿಗೆ ಗುರುನಮನ ಕಾರ್ಯಕ್ರಮ
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.