ಸಮಾಜಮುಖಿ ಕಾರ್ಯ ದೇಶಕ್ಕೆ ವಿಸ್ತರಣೆ: ಡಾ| ವೀರೇಂದ್ರ ಹೆಗ್ಗಡೆ

Team Udayavani, Jul 8, 2022, 6:11 AM IST

ಸಮಾಜಮುಖಿ ಕಾರ್ಯ ದೇಶಕ್ಕೆ ವಿಸ್ತರಣೆ: ಡಾ| ವೀರೇಂದ್ರ ಹೆಗ್ಗಡೆ

ಕನಕಪುರ: ಈ ದೇಶದ ಪ್ರಧಾನಿಗಳು ನಮ್ಮ ಸೇವಾ ಕ್ಷೇತ್ರವನ್ನು ಗುರುತಿಸಿ ಮೆಚ್ಚಿಕೊಂಡಿದ್ದಾರೆ. ಇನ್ನು ಮುಂದೆ ನಮ್ಮ ಸಮಾಜಮುಖಿ ಕಾರ್ಯಕ್ರಮಗಳನ್ನು ದೇಶವ್ಯಾಪಿ ವಿಸ್ತರಿಸುತ್ತೇವೆ ಎಂದು ಧರ್ಮಸ್ಥಳದ ಧರ್ಮಾಧಿಕಾರಿ ಡಾ| ವೀರೇಂದ್ರ ಹೆಗ್ಗಡೆ ಅವರು ತಿಳಿಸಿದರು.

ಬೆಂಗಳೂರು ಹಾಲು ಒಕ್ಕೂಟದ ವತಿಯಿಂದ ತಾಲೂಕಿನ ಶಿವನಹಳ್ಳಿ ಬಳಿ ನಂದಿನಿ ಹಾಲು ಉತ್ಪನ್ನ ಸಂಕೀರ್ಣದ ಆವರಣದಲ್ಲಿ  ತಮಗೆ ಹಮ್ಮಿಕೊಂಡಿದ್ದ  ಗುರುವಂದನೆ  ಕಾರ್ಯಕ್ರಮಕ್ಕೆ ಆಗಮಿಸಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ರಾಜ್ಯಸಭೆಗೆ ನಾಮನಿರ್ದೇಶಿತನಾಗುತ್ತೇನೆ ಎಂಬ ಕಲ್ಪನೆಯೂ ನನಗಿರಲಿಲ್ಲ. ನಾನು ಅದರ ಹಿಂದೆ ಹೋಗುವವನೂ ಅಲ್ಲ.  ಇದು ತಾನಾಗಿಯೇ ಒಲಿದು ಬಂದಿದೆ ಎಂದರು.

ರಾಜ್ಯ ಸಭೆಗೆ ನಾಮನಿರ್ದೇಶಿ ತನಾದ ಬಗ್ಗೆ ಬುಧವಾರ  ರಾತ್ರಿವರೆಗೂ ನನಗೆ ಮಾಹಿತಿ ಇರಲಿಲ್ಲ. ಸ್ವತಃ ಪ್ರಧಾನಿಯೇ ಟ್ವೀಟ್‌ ಮಾಡುವ ಮೂಲಕ ನಮಗೆ ತಿಳಿಸಿದ್ದಾರೆ. ಆ ಬಳಿಕ  ಅಭಿನಂದನೆಯ ಮಹಾಪೂರ ಹರಿದು ಬಂದಿದೆ ಹಾಗೂ ನಮ್ಮ ಜನತೆ ಬಹಳ ಸಂತೋಷಪಟ್ಟಿದ್ದಾರೆ. ನನಗೆ ಯಾವುದೇ ರಾಜಕೀಯ ಆಸಕ್ತಿ ಇಲ್ಲ. ಮಂಜುನಾಥ ಸ್ವಾಮಿಯ ಹೆಗ್ಗಡೆಯ ಪೀಠಕ್ಕಿಂತ ದೊಡ್ಡದು ಯಾವುದೂ ಇಲ್ಲ ಎಂದರು.

ಈ ದೇಶದ ಪ್ರಧಾನಿಗಳಿಗೆ ಸೂಕ್ಷ್ಮವಾಗಿ ಗಮನಿಸುವ ಶಕ್ತಿ ಇರುವುದರ ಬಗ್ಗೆ ಯೋಚಿಸುತ್ತಿದ್ದೇನೆ. ಮೋದಿಯವರು ಬಹಳ ಸೂಕ್ಷ್ಮತೆ ಮತ್ತು ನೆನಪು ಉಳ್ಳವರು. ಹಾಗಾಗಿ ನಮ್ಮ ಕಾರ್ಯಕ್ಷೇತ್ರ ಪ್ರಧಾನಿಯವರ ಗಮನ ಸೆಳೆದಿದೆ. ನಾವು  ಒತ್ತಡದಿಂದಿದ್ದಾಗ ಹೆಚ್ಚಿನ ಕಾರ್ಯ ಮಾಡಬಹುದು. ನಾನು ರಾಜಕೀಯರಹಿತವಾಗಿ ಹಿರಿಯ ಸದಸ್ಯರ ಕೂಟ ಎಂದು ಸೇರಿಕೊಂಡಿದ್ದೇನೆ ಎಂದರು.

ಹೈನುಗಾರಿಕೆಯಲ್ಲಿ ದೇಶದ ಸಾಧನೆ ಅದ್ಬುತ :

6 ದಶಕಗಳ ಹಿಂದೆ  ಹಾವಾಡಿಗರ ದೇಶ ಎಂದು ಕರೆಯಲ್ಪಡುತ್ತಿದ್ದ ಭಾತರ  ಇಂದು ಹೈನುಗಾರಿಕೆಯಲ್ಲಿ ಅದ್ಬುತ ಸಾಧನೆ ಮಾಡಿದೆ ಎಂದು ಧರ್ಮಸ್ಥಳದ ಧರ್ಮಾಧಿಕಾರಿ ಡಾ| ವೀರೇಂದ್ರ ಹೆಗ್ಗಡೆ ತಿಳಿಸಿದರು.

ನಮ್ಮ ದೇಶದಲ್ಲಿ ಗೋವುಗಳನ್ನು ದೇವರು ಎಂದೇ ಪೂಜಿಸುತ್ತೇವೆ. ರೈತರು ಯಾವುದೇ ಕೃಷಿ ಬೆಳೆಗಳಿಂದ ಆದಾಯ ಕಾಣಬೇಕಾದರೆ, ಕನಿಷ್ಠ 6 ತಿಂಗಳಿಂದ 1 ವರ್ಷ ಕಾಯಬೇಕು. ಆದರೆ, ಹೈನುಗಾರಿಕೆ ಆಗಲ್ಲ. ಹೈನುಗಾರಿಕೆಯಿಂದ ರೈತರಿಗೆ ಬಹಳ ಅನುಕೂಲವಾಗಿದ್ದು, ಲಾಭದಾಯಕವಾಗಿದೆ ಎಂದರು.

ಕಸಾಯಿ ಖಾನೆಗೆ ಬಿಡಬೇಡಿ :

ದೈವ ಸ್ವರೂಪಿಯಾದ ಗೋವುಗಳನ್ನು ವಯಸ್ಸಾದಾಗ ಕಸಾಯಿ ಖಾನೆಗೆ ನೀಡುವ ಬದಲು ಗೋ ಶಾಲೆಗಳಿಗೆ ಕೊಡಬೇಕು. ದೇಸಿ ತಳಿಯ ಗೋವುಗಳನ್ನು ಸಂರಕ್ಷಣೆ ಮಾಡಲೇಬೇಕಾಗಿದೆ. ರೈತರು ಹೆಚ್ಚು ದೇಸಿ ತಳಿಯ ಹಸುಗಳನ್ನು ಸಾಕಾಣಿಕೆ ಮಾಡುವುದನ್ನು ಅಭ್ಯಾಸ ಮಾಡಿಕೊಳ್ಳಬೇಕು ಎಂದು ಹೇಳಿದರು.

ಧರ್ಮಸ್ಥಳದ ದರ್ಮಾಧಿಕಾರಿ ವೀರೇಂದ್ರ ಹೆಗ್ಗಡೆ ಅವರು ರಾಜ್ಯಸಭೆಗೆ ಆಯ್ಕೆಯಾಗಿರುವುದು ಕರ್ನಾಟಕ ಹಾಗೂ ಕನ್ನಡಿಗರಿಗೆ ಹೆಮ್ಮೆ ತಂದಿದೆ.ಹೆಗ್ಗಡೆಯವರು ಮೊದಲಿನಿಂದಲೂ ಗ್ರಾಮೀಣ ಬದುಕಿನಲ್ಲಿ ಬೆಳೆದವರು. ಅವರು ಗ್ರಾಮೀಣ ಭಾಗದ ಮಹಿಳೆಯರ ಮನದಲ್ಲಿದ್ದಾರೆ. ಅವರನ್ನು ಆಯ್ಕೆ ಮಾಡಿದುದಕ್ಕಾಗಿ ರಾಷ್ಟ್ರಪತಿಗಳಿಗೆ ಅಭಿನಂದನೆ ಸಲ್ಲಿಸುತ್ತೇನೆ .ಡಿ.ಕೆ.ಸುರೇಶ್‌, ಸಂಸದ  

ಟಾಪ್ ನ್ಯೂಸ್

Actress Ramya: ಕೋರ್ಟ್‌ಗೆ ಹಾಜರಾದ ಮೋಹಕ ತಾರೆ ರಮ್ಯಾ; ಕಾರಣವೇನು?

Actress Ramya: ಕೋರ್ಟ್‌ಗೆ ಹಾಜರಾದ ಮೋಹಕ ತಾರೆ ರಮ್ಯಾ; ಕಾರಣವೇನು?

‘ರಾಜಕೀಯ ನಿವೃತ್ತಿ’ ಸುದ್ದಿಗೆ ದ.ಕ ಜಿಲ್ಲಾ ಕಾಂಗ್ರೆಸ್‌ ಅಧ್ಯಕ್ಷ ಹರೀಶ್‌ ಕುಮಾರ್ ಸ್ಪಷ್ಟನೆ

‘ರಾಜಕೀಯ ನಿವೃತ್ತಿ’ ಸುದ್ದಿಗೆ ದ.ಕ ಜಿಲ್ಲಾ ಕಾಂಗ್ರೆಸ್‌ ಅಧ್ಯಕ್ಷ ಹರೀಶ್‌ ಕುಮಾರ್ ಸ್ಪಷ್ಟನೆ

BBK11: ಸತ್ಯಕ್ಕೆ ಸೋಲಿಲ್ಲ.. ರಜತ್‌ ನಿರ್ಧಾರಕ್ಕೆ ರೊಚ್ಚಿಗೆದ್ದ ಮಂಜು

BBK11: ಸತ್ಯಕ್ಕೆ ಸೋಲಿಲ್ಲ.. ರಜತ್‌ ನಿರ್ಧಾರಕ್ಕೆ ರೊಚ್ಚಿಗೆದ್ದ ಮಂಜು

Delhi Election 2025:  ದೆಹಲಿ ವಿಧಾನಸಭಾ ಚುನಾವಣೆ ದಿನಾಂಕ ಘೋಷಣೆ; ಬಿಜೆಪಿ V/s AAP

Delhi Election 2025: ದೆಹಲಿ ವಿಧಾನಸಭಾ ಚುನಾವಣೆ ದಿನಾಂಕ ಘೋಷಣೆ; ಬಿಜೆಪಿ V/s AAP

Asaram Bapu: ಜೀವಾವಧಿ ಶಿಕ್ಷೆ ಅನುಭವಿಸುತ್ತಿರುವ ಅಸಾರಾಂ ಬಾಪುಗೆ ಮಧ್ಯಂತರ ಜಾಮೀನು

Asaram Bapu: ಜೀವಾವಧಿ ಶಿಕ್ಷೆ ಅನುಭವಿಸುತ್ತಿರುವ ಅಸಾರಾಂ ಬಾಪುಗೆ ಮಧ್ಯಂತರ ಜಾಮೀನು

‌ಕೌಟುಂಬಿಕ ದೌರ್ಜನ್ಯ ಆರೋಪ: ʼಬಿಂದಾಸ್‌ʼ ನಟಿ ಹನ್ಸಿಕಾ, ಸಹೋದರ, ತಾಯಿ ವಿರುದ್ಧ FIR ದಾಖಲು

‌ಕೌಟುಂಬಿಕ ದೌರ್ಜನ್ಯ ಆರೋಪ: ʼಬಿಂದಾಸ್‌ʼ ನಟಿ ಹನ್ಸಿಕಾ, ಸಹೋದರ, ತಾಯಿ ವಿರುದ್ಧ FIR ದಾಖಲು

Saudi Arabia: ಮೆಕ್ಕಾ-ಮದೀನಾ ಸೇರಿ ಹಲವೆಡೆ ದಾಖಲೆಯ ಧಾರಾಕಾರ ಮಳೆ; ಜನಜೀವನ ಅಸ್ತವ್ಯಸ್ತ

Saudi Arabia: ಮೆಕ್ಕಾ-ಮದೀನಾ ಸೇರಿ ಹಲವೆಡೆ ದಾಖಲೆಯ ಧಾರಾಕಾರ ಮಳೆ; ಜನಜೀವನ ಅಸ್ತವ್ಯಸ್ತ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

‘ರಾಜಕೀಯ ನಿವೃತ್ತಿ’ ಸುದ್ದಿಗೆ ದ.ಕ ಜಿಲ್ಲಾ ಕಾಂಗ್ರೆಸ್‌ ಅಧ್ಯಕ್ಷ ಹರೀಶ್‌ ಕುಮಾರ್ ಸ್ಪಷ್ಟನೆ

‘ರಾಜಕೀಯ ನಿವೃತ್ತಿ’ ಸುದ್ದಿಗೆ ದ.ಕ ಜಿಲ್ಲಾ ಕಾಂಗ್ರೆಸ್‌ ಅಧ್ಯಕ್ಷ ಹರೀಶ್‌ ಕುಮಾರ್ ಸ್ಪಷ್ಟನೆ

Sangeetha Mobiles: ಜಯನಗರದಲ್ಲಿ ಸಂಗೀತಾ ಗ್ಯಾಜೆಟ್ಸ್ ನೂತನ ಮಳಿಗೆ ಲೋಕಾರ್ಪಣೆ

Sangeetha Mobiles: ಜಯನಗರದಲ್ಲಿ ಸಂಗೀತಾ ಗ್ಯಾಜೆಟ್ಸ್ ನೂತನ ಮಳಿಗೆ ಲೋಕಾರ್ಪಣೆ

Gadag: 12 ತಿಂಗಳಾದರೂ ಪಾವತಿಯಾಗದ ಬಾಕಿ ಹಣ… ಕಡಲೆ ಬೆಳೆಗಾರರಿಂದ ಪ್ರತಿಭಟನೆ

Gadag: 12 ತಿಂಗಳಾದರೂ ಪಾವತಿಯಾಗದ ಬಾಕಿ ಹಣ… ಕಡಲೆ ಬೆಳೆಗಾರರಿಂದ ಪ್ರತಿಭಟನೆ

Gadag: ಲಕ್ಷ್ಮೇಶ್ವರ ತಾಲೂಕಿನ ಸೂರಣಗಿ ಗ್ರಾಮದಲ್ಲಿ ನಡೆದ ದುರ್ಘಟನೆಗೆ ಒಂದು ವರ್ಷ…

Gadag: ಲಕ್ಷ್ಮೇಶ್ವರ ತಾಲೂಕಿನ ಸೂರಣಗಿ ಗ್ರಾಮದಲ್ಲಿ ನಡೆದ ದುರ್ಘಟನೆಗೆ ಒಂದು ವರ್ಷ…

ಬೆಳ್ಳಂಬೆಳಗ್ಗೆ ತುಮಕೂರಿನಲ್ಲಿ ಭೀಕರ ಅಪಘಾತ… ಬೈಕ್ ನಲ್ಲಿದ್ದ ಮೂವರು ಸ್ಥಳದಲ್ಲೇ ಮೃತ್ಯು

ಬೆಳ್ಳಂಬೆಳಗ್ಗೆ ತುಮಕೂರಿನಲ್ಲಿ ಭೀಕರ ಅಪಘಾತ… ಬೈಕ್ ನಲ್ಲಿದ್ದ ಮೂವರು ಸ್ಥಳದಲ್ಲೇ ಮೃತ್ಯು

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

Actress Ramya: ಕೋರ್ಟ್‌ಗೆ ಹಾಜರಾದ ಮೋಹಕ ತಾರೆ ರಮ್ಯಾ; ಕಾರಣವೇನು?

Actress Ramya: ಕೋರ್ಟ್‌ಗೆ ಹಾಜರಾದ ಮೋಹಕ ತಾರೆ ರಮ್ಯಾ; ಕಾರಣವೇನು?

‌Bidar: ಗುತ್ತಿಗೆದಾರ ಸಚಿನ್‌ ಕೇಸ್; ಮಾಹಿತಿ ಪಡೆದ ಡಿಐಜಿಪಿ ಶಾಂತನು ಸಿನ್ಹಾ

‌Bidar: ಗುತ್ತಿಗೆದಾರ ಸಚಿನ್‌ ಕೇಸ್; ಮಾಹಿತಿ ಪಡೆದ ಡಿಐಜಿಪಿ ಶಾಂತನು ಸಿನ್ಹಾ

8(1

Mangaluru: ಪಾಲಿಕೆ ಚುನಾವಣೆ ಅನುಮಾನ?

‘ರಾಜಕೀಯ ನಿವೃತ್ತಿ’ ಸುದ್ದಿಗೆ ದ.ಕ ಜಿಲ್ಲಾ ಕಾಂಗ್ರೆಸ್‌ ಅಧ್ಯಕ್ಷ ಹರೀಶ್‌ ಕುಮಾರ್ ಸ್ಪಷ್ಟನೆ

‘ರಾಜಕೀಯ ನಿವೃತ್ತಿ’ ಸುದ್ದಿಗೆ ದ.ಕ ಜಿಲ್ಲಾ ಕಾಂಗ್ರೆಸ್‌ ಅಧ್ಯಕ್ಷ ಹರೀಶ್‌ ಕುಮಾರ್ ಸ್ಪಷ್ಟನೆ

6

Karkala: ಇಳಿಜಾರಿನಲ್ಲಿ ಯು-ಟರ್ನ್; ಅತ್ತೂರು ರಸ್ತೆಯಲ್ಲಿ ಅಪಾಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.