ಫೇಸ್‌ಬುಕ್, ಟ್ವೀಟರ್ ಮೂಲಕ ಎನ್ನಾರೈಗಳಿಗೆ ನೆರವು
Team Udayavani, Jan 10, 2017, 3:45 AM IST
– ಸಂಕಷ್ಟದಲ್ಲಿದ್ದ ಸಹಸ್ರಾರು ಮಂದಿಗೆ ಸಹಾಯ ಹಸ್ತ
– ವಿದೇಶ ಸಚಿವಾಲಯದಿಂದ ಸಾಮಾಜಿಕ ತಾಣ ಸಮರ್ಪಕ ಬಳಕೆ
– ಸೋಷಿಯಲ್ ಮೀಡಿಯಾ ನಿರ್ವಹಣೆಗೆ 14 ತಜ್ಞರು: ವಿಕಾಸ್
ಬೆಂಗಳೂರು: ಅನಿವಾಸಿ ಭಾರತೀಯರನ್ನು ತಲುಪಲು ವಿದೇಶಾಂಗ ಸಚಿವಾಲಯ ಸಾಮಾಜಿಕ ಜಾಲತಾಣಗಳನ್ನು ಸಮರ್ಪಕವಾಗಿ ಬಳಕೆ ಮಾಡಿಕೊಳ್ಳುತ್ತಿದೆ ಎಂದು ವಿದೇಶಾಂಗ ಸಚಿವಾಲಯದ ವಕ್ತಾರ ವಿಕಾಸ್ ಸ್ವರೂಪ್ ಹೇಳಿದ್ದಾರೆ.
ಪ್ರವಾಸಿ ಭಾರತ್ ದಿವಸ್ ಸಮಾವೇಶದಲ್ಲಿ ಸೋಮವಾರ ನಡೆದ ಅನಿವಾಸಿ ಭಾರತೀಯರ ಸಂಪರ್ಕದಲ್ಲಿ ಸಾಮಾಜಿಕ ಜಾಲ ತಾಣಗಳ ಬಳಕೆ ಕುರಿತ ಸಂವಾದದಲ್ಲಿ ಅವರು ಮಾತನಾಡಿದರು.
ಸಂಕಷ್ಟದಲ್ಲಿ ಸಿಲುಕಿದ ಅನಿವಾಸಿ ಭಾರತೀಯರನ್ನು ಸಂಪರ್ಕಿಸುವಲ್ಲಿ ಸಾಮಾಜಿಕ ಜಾಲತಾಣಗಳು ಮಹತ್ವದ ಪಾತ್ರ ವಹಿಸುತ್ತಿವೆ. ಈ ಮಾಧ್ಯಮ ಬಳಸಿಕೊಂಡು ಕೇಂದ್ರ ಸರ್ಕಾರ ಸಹಸ್ರಾರು ಅನಿವಾಸಿಗಳಿಗೆ ಸಹಾಯ ಹಸ್ತ ಚಾಚಿದೆ ಎಂದರು.
ಫೇಸ್‌ಬುಕ್, ಟ್ವೀಟರ್, ವ್ಯಾಟ್ಸ್‌ಆ್ಯಪ್ ಬಳಸಿಕೊಳ್ಳುವಲ್ಲಿ ವಿದೇಶಾಂಗ ಸಚಿವಾಲಯ ಇತರೆ ಇಲಾಖೆಗಿಂತ ಮುಂಚೂಣಿಯಲ್ಲಿದೆ. ಅಮೆರಿಕ, ಫ್ರಾನ್ಸ್, ಇಂಗ್ಲೆಂಡ್ ಮತ್ತಿತರ ರಾಷ್ಟ್ರಗಳ ಸರ್ಕಾರಿ ಇಲಾಖೆಗಳಿಗೆ ಹೋಲಿಸಿದಲ್ಲಿ ಸಾಮಾಜಿಕ ಜಾಲ ತಾಣ ಬಳಕೆಯಲ್ಲಿ ಭಾರತ 7ನೇ ಸ್ಥಾನದಲ್ಲಿದೆ ಎಂದು ತಿಳಿಸಿದರು.
ಸಾಮಾಜಿಕ ಜಾಲತಾಣಗಳು ಭಾರತ ಬಿಟ್ಟುಹೋದವರನ್ನು ಅತ್ಯಂತ ವೇಗವಾಗಿ ತಲುಪಲು ಪ್ರಮುಖ ಸಾಧನವಾಗಿ ಬಳಕೆಯಾಗುತ್ತಿವೆ. ವಿದೇಶಾಂಗ ಸಚಿವಾಲಯ ಸಾಮಾಜಿಕ ಜಾಲತಾಣ ನಿರ್ವಹಣೆಗೆ 14 ಜನ ತಜ್ಞರನ್ನು ನೇಮಕ ಮಾಡಿಕೊಂಡಿದೆ ಎಂದು ಹೇಳಿದರು.
ಫೇಸ್‌ಬುಕ್, ಟ್ವೀಟರ್ ಮತ್ತಿತರ ಸಾಮಾಜಿಕ ಜಾಲ ತಾಣಗಳ ಪೈಕಿ ವ್ಯಾಟ್ಸ್‌ಆ್ಯಪ್ ಹೆಚ್ಚು ಬಳಕೆಯಾಗುತ್ತದೆ. ಆ ಮಾಧ್ಯಮದ ಮೂಲಕವೇ ಅನಿವಾಸಿಗಳು ಹೆಚ್ಚು ವ್ಯವಹರಿಸುತ್ತಾರೆ ಎಂದು ತಿಳಿಸಿದರು.
ಕೊಲ್ಲಿ ರಾಷ್ಟ್ರಗಳು, ಇಸ್ರೇಲ್ ಮತ್ತಿತರ ಭಾಗಗಳಲ್ಲಿನ ಅನಿವಾಸಿ ಭಾರತೀಯರನ್ನು ನಾವು ಸಾಮಾಜಿಕ ಜಾಲತಾಣಗಳ ಮೂಲಕವೇ ಸಂಪರ್ಕಿಸಿದ್ದೇವೆ ಎಂದರು.
ದುರ್ಬಳಕೆ ಬೇಡ:
ವಿದೇಶಾಂಗ ಸಚಿವಾಲಯದ ರಾಜ್ಯ ಸಚಿವ ಎಂ.ಜೆ. ಅಕºರ್ ಮಾತನಾಡಿ, ನಿತ್ಯ ಜೀವನದ ಅಗುಹೋಗುಗಳಲ್ಲಿ ಸಾಮಾಜಿಕ ಜಾಲತಾಣಗಳು ಮಹತ್ವದ ಪಾತ್ರ ವಹಿಸುತ್ತಿವೆ. ಇವುಗಳನ್ನು ಸದ್ಬಳಕೆ ಮಾಡಿಕೊಳ್ಳುವತ್ತ ಪ್ರತಿಯೊಬ್ಬರೂ ಯೋಚಿಸಬೇಕು. ದುರ್ಬಳಕೆ ಮಾಡಿಕೊಳ್ಳಬಾರದು ಎಂದು ಸಲಹೆ ಮಾಡಿದರು.
ಮೋದಿ ಪ್ರಧಾನಿ ಆದ ಮೇಲೆ ತಂತ್ರಜಾnನವನ್ನು ಚೆನ್ನಾಗಿ ಬಳಕೆ ಮಾಡಿಕೊಳ್ಳುತ್ತಿದ್ದಾರೆ. ನೋಟು ರದ್ದತಿ ತರುವಾಯ ಸಾಮಾಜಿಕ ಜಾಲತಾಣಗಳಲ್ಲಿ ಕೆಲವರು ಇನ್ನು ಭಾರತದಲ್ಲಿ ಹೂಡಿಕೆ ಮಾಡುವುದು ಕಷ್ಟ ಎಂಬ ಸುದ್ದಿಯನ್ನು ಬಿತ್ತರಿಸಿದ್ದರು. ಸರ್ಕಾರ ಇದೇ ತಾಣಗಳನ್ನು ಬಳಸಿಕೊಂಡು ಅದಕ್ಕೆ ಉತ್ತರ ನೀಡುವಲ್ಲಿ ಯಶಸ್ವಿಯಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bagalakote: ಪ್ರೇಯಸಿ ಗೆಳತಿ ಹತ್ಯೆಗೆ ಸಂಚು; ಕೊನೆಗೆ ಕೈ ಕಳೆದುಕೊಂಡಿದ್ದು ಪ್ರೇಮಿಯೇ!
Karnataka HC; ನಾಲ್ಕನೇ ಪ್ರಕರಣದಲ್ಲೂ ಪ್ರಜ್ವಲ್ ರೇವಣ್ಣ ನಿರೀಕ್ಷಣಾ ಜಾಮೀನು ಅರ್ಜಿ ವಜಾ
Madhu Bangarappa ; ಟ್ರೋಲ್ ಗಳಿಗೆ ಬಗ್ಗಲ್ಲ.. ಕಿಡಿ ಕಿಡಿಯಾದ ಶಿಕ್ಷಣ ಸಚಿವ!
Bidar; ಲಂಚ ಸ್ವೀಕರಿಸುತ್ತಿದ್ದ ಬುಡಾ ಆಯುಕ್ತ ಸೇರಿ ಮೂವರು ಲೋಕಾಯುಕ್ತ ಬಲೆಗೆ
Caste ನೋಡಿ ಮತ ಹಾಕಿದರೆ ಸಮಾಜದಲ್ಲಿ ಬದಲಾವಣೆ ಅಸಾಧ್ಯ : ಸಿಎಂ ಸಿದ್ದರಾಮಯ್ಯ
MUST WATCH
ಹೊಸ ಸೇರ್ಪಡೆ
Bagalakote: ಪ್ರೇಯಸಿ ಗೆಳತಿ ಹತ್ಯೆಗೆ ಸಂಚು; ಕೊನೆಗೆ ಕೈ ಕಳೆದುಕೊಂಡಿದ್ದು ಪ್ರೇಮಿಯೇ!
Udupi: ಕೋಟಿ ಗೀತಾ ಲೇಖನ ಯಜ್ಞ: 500ಕ್ಕೂ ಹೆಚ್ಚು ವಿದ್ಯಾರ್ಥಿಗಳು, ಸಿಬ್ಬಂದಿಯಿಂದ ದೀಕ್ಷೆ
Karnataka HC; ನಾಲ್ಕನೇ ಪ್ರಕರಣದಲ್ಲೂ ಪ್ರಜ್ವಲ್ ರೇವಣ್ಣ ನಿರೀಕ್ಷಣಾ ಜಾಮೀನು ಅರ್ಜಿ ವಜಾ
Sagara: ಟ್ರಾಫಿಕ್ ಜಾಮ್‌ಗೆ ಕಾರಣವಾದ ವಾಹನ ವಶ; ಚಾಲಕನ ವಿರುದ್ಧ ಎಫ್ಐಆರ್ ದಾಖಲು
Siruguppa: ತೆಕ್ಕಲಕೋಟೆಯಲ್ಲಿ ಅಕ್ರಮ ಪಡಿತರ ಅಕ್ಕಿ ವಶ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.