ನಕಲಿ ಕಾರ್ಡ್‌ ರದ್ದು? ಅರ್ಹ ಬಿಪಿಎಲ್‌ ಅರ್ಜಿದಾರರಿಗೆ ಅವಕಾಶ


Team Udayavani, Jun 13, 2024, 7:00 AM IST

ನಕಲಿ ಕಾರ್ಡ್‌ ರದ್ದು? ಅರ್ಹ ಬಿಪಿಎಲ್‌ ಅರ್ಜಿದಾರರಿಗೆ ಅವಕಾಶ

ಬೆಂಗಳೂರು: ಲೋಕಸಭಾ ಚುನಾವಣೆ ಫ‌ಲಿತಾಂಶದ ಬೆನ್ನಲ್ಲೇ, ಅನರ್ಹ ಬಿಪಿಎಲ್‌ ರೇಶನ್‌ ಕಾರ್ಡ್‌ಗಳ ರದ್ದತಿ ಪ್ರಕ್ರಿಯೆಗೆ ಸರಕಾರ ಕೈಹಾಕಿದೆ. ಹೀಗೆ ರದ್ದು ಗೊಳ್ಳುವ ಕಾರ್ಡ್‌ಗಳ ಬದಲಿಗೆ ಬಿಪಿಎಲ್‌ಗಾಗಿ ವರ್ಷದಿಂದ ಕಾಯುತ್ತಿರುವ ಅರ್ಜಿದಾರರಿಗೆ ಅವಕಾಶ ಕಲ್ಪಿಸಲು ಮುಂದಾಗಿದೆ.

ರಾಷ್ಟ್ರೀಯ ಆಹಾರ ಭದ್ರತಾ ಕಾಯ್ದೆ ಅಡಿ ಈಗಾಗಲೇ ಕೇಂದ್ರ ಸರಕಾರ ನಿಗದಿಪಡಿಸಿರುವ ಆದ್ಯತಾ ಪಡಿತರ ಕುಟುಂಬ (ಬಿಪಿಎಲ್‌)ಗಳು 1.03 ಕೋಟಿ ಹಾಗೂ ಅಂತ್ಯೋದಯ ಕುಟುಂಬಗಳು 10.83 ಲಕ್ಷ ಸೇರಿ 1.14 ಕೋಟಿ ಇರಬೇಕು. ಆದರೆ ರಾಜ್ಯದಲ್ಲಿ ಈಗಾಗಲೇ ಕೇಂದ್ರದ ಮಿತಿ ಮೀರಿ 10.33 ಲಕ್ಷ ಹೆಚ್ಚುವರಿ ಬಿಪಿಎಲ್‌ ಕುಟುಂಬಗಳಿದ್ದು, ಅವುಗಳಿಗೆ ರಾಜ್ಯ ಸರಕಾರವೇ ಪ್ರತಿ ತಿಂಗಳು ಸ್ವಂತ ಖರ್ಚಿನಿಂದ ಪಡಿತರ ಪೂರೈಸುತ್ತಿದೆ. ಈ ಮಧ್ಯೆ ಹೊಸದಾಗಿ ಲಕ್ಷಾಂತರ ಅರ್ಜಿಗಳು ಬಾಕಿ ಇವೆ. ಆದ್ದರಿಂದ ಅನರ್ಹರನ್ನು ಪತ್ತೆಹಚ್ಚುವ ಕಾರ್ಯಕ್ಕೆ ಸಿದ್ಧತೆ ಮಾಡಿಕೊಳ್ಳುತ್ತಿದೆ.

ಆರ್ಥಿಕವಾಗಿ ಸಬಲರಾಗಿದ್ದೂ ಬಿಪಿಎಲ್‌ ಕಾರ್ಡ್‌ಗಳನ್ನು ಹೊಂದಿದ್ದರೆ ಅಥವಾ ಈ ಹಿಂದೆ ಬಿಪಿಎಲ್‌ನಲ್ಲಿದ್ದು, ಈಗ ಬಡತನ ರೇಖೆಯಿಂದ ಮೇಲೆ ಬಂದಿರುವವರನ್ನು ಪತ್ತೆ ಮಾಡಲು ಮುಂದಾಗಿದೆ. ಅಲ್ಲದೆ, ಬಿಪಿಎಲ್‌ ಕುಟುಂಬಗಳಲ್ಲಿ ಮೃತಪಟ್ಟವರ ಹೆಸರುಗಳನ್ನೂ ಅಳಿಸಲಾಗಿಲ್ಲ.

ಮೃತಪಟ್ಟವರ ಹೆಸರುಗಳನ್ನು ತೆಗೆದುಹಾಕಿದರೆ ಆಗ ಯೂನಿಟ್‌ಗಳು ಕಡಿಮೆಯಾಗಿ ಹೊರೆ ತಗ್ಗಲಿದೆ ಎಂದು ಹೆಸರು ಹೇಳಲಿಚ್ಛಿಸದ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಮಾಸಿಕ 60 ಕೋಟಿ ರೂ. ಹೆಚ್ಚುವರಿ ವೆಚ್ಚ
ಇಲಾಖೆಯೇ ನೀಡಿದ ಅಂಕಿ-ಅಂಶಗಳ ಪ್ರಕಾರ ಕೇಂದ್ರ ನಿಗದಿಪಡಿಸಿದ ಮಿತಿಗಿಂತ 10.33 ಲಕ್ಷ ಹೆಚ್ಚುವರಿ ಬಿಪಿಎಲ್‌ ಕುಟುಂಬಗಳಿದ್ದು, ಇದರ ಫ‌ಲಾನುಭವಿಗಳ ಸಂಖ್ಯೆ 34.68 ಲಕ್ಷ. ಪ್ರತಿಯೊಬ್ಬರಿಗೂ ತಲಾ 5 ಕೆಜಿ ಅಕ್ಕಿ ವಿತರಿಸಲಾಗುತ್ತದೆ. ಕೆಜಿಗೆ ಖರೀದಿ ವೆಚ್ಚ 34 ರೂ. ಇದ್ದು, ಸರಕಾರ ಇವರಿಗಾಗಿ ಪ್ರತಿ ತಿಂಗಳು ಅಂದಾಜು 60 ಕೋಟಿ ರೂ. ಭರಿಸುತ್ತಿದೆ. ಈಗ ಮತ್ತೆ ವರ್ಷದಿಂದ ಅರ್ಜಿ ಹಾಕಿ 3.05 ಲಕ್ಷ ಕುಟುಂಬ ಬಿಪಿಎಲ್‌ ಕಾರ್ಡ್‌ಗಳಿಗಾಗಿ ಎದುರು ನೋಡುತ್ತಿವೆ. ಅಂದರೆ ಇನ್ನೂ 12ರಿಂದ 13 ಲಕ್ಷ ಜನರ ಹೆಚ್ಚುವರಿ ವೆಚ್ಚ ಭರಿಸಬೇಕಾಗುತ್ತದೆ ಎಂದು ಅಧಿಕಾರಿಗಳು ಲೆಕ್ಕಹಾಕಿದ್ದಾರೆ.

ಪ್ರತಿ ತಿಂಗಳು ಒಟ್ಟಾರೆ ಬಿಪಿಎಲ್‌ ಕಾರ್ಡ್‌ದಾರರ ಪೈಕಿ ಶೇ. 80-83ರಷ್ಟು ಕುಟುಂಬಗಳು ಮಾತ್ರ ಪಡಿತರ ಪಡೆಯುತ್ತಿವೆ. ಉಳಿದವು ಹಲವಾರು ತಿಂಗಳುಗಳಿಂದ ಅತ್ತ ತಿರುಗಿಯೂ ನೋಡಿಲ್ಲ. ಈ ಹಿನ್ನೆಲೆಯಲ್ಲಿ ಸತತ ಮೂರು ತಿಂಗಳಿಂದ ಪಡಿತರ ತೆಗೆದುಕೊಳ್ಳಲು ಬಾರದ ಕಾರ್ಡ್‌ಗಳನ್ನು ಅಮಾನತುಗೊಳಿಸುವುದು, ಸತತ 6 ತಿಂಗಳು ಬಾರದಿದ್ದರೆ ಸಂಪೂರ್ಣ ರದ್ದುಗೊಳಿಸುವ ಆಯ್ಕೆಯೂ ಇಲಾಖೆ ಮುಂದಿದೆ.

ಈ ಮಧ್ಯೆ ಚುನಾವಣೆ ಪ್ರಕ್ರಿಯೆ ಮುಗಿಯುತ್ತಿದ್ದಂತೆ ಹಲವೆಡೆ ಸ್ಥಳೀಯ ಮಟ್ಟದಲ್ಲಿ ಏಜೆಂಟರ ಹಾವಳಿ ಹೆಚ್ಚಾಗಿದೆ. ಕಾರ್ಡ್‌ಗಳನ್ನು ಮಾಡಿಸಿಕೊಡುವುದಾಗಿ ಹೇಳಿಕೊಂಡು ಕಮಿಷನ್‌ ಪಡೆಯಲಾಗುತ್ತಿದೆ. ಒಂದೊಂದು ಕಾರ್ಡ್‌ಗೆ ಸಾವಿರಾರು ರೂಪಾಯಿ ಕಮಿಷನ್‌ ಪಡೆಯಲಾಗುತ್ತಿದೆ ಎನ್ನಲಾಗಿದೆ.

ಕತ್ತರಿ ಹಾಕಲು ಚುನಾವಣೆ ಅಡ್ಡಿ?
ಈಗಾಗಲೇ ಕಾರ್ಡ್‌ ಹೊಂದಿರುವವರನ್ನು ವಿವಿಧ ಮಾನದಂಡಗಳಡಿ ಅನರ್ಹರ ಪಟ್ಟಿಗೆ ಸೇರಿಸುವುದು ಅಥವಾ ರದ್ದುಗೊಳಿಸುವುದು ಸುಲಭದ ಕೆಲಸವೂ ಅಲ್ಲ. ಯಾಕೆಂದರೆ ಮುಂದೆ ಸ್ಥಳೀಯ ಸಂಸ್ಥೆಗಳ ಚುನಾವಣೆ ಇದೆ. ಈಗ ಕತ್ತರಿ ಹಾಕಿದರೆ, ಅದು ಚುನಾವಣೆಯಲ್ಲಿ ಪರಿಣಾಮ ಬೀರಬಹುದು ಎಂಬ ಲೆಕ್ಕಾಚಾರವೂ ಇದೆ ಎಂದು ಮೂಲಗಳು ತಿಳಿಸಿವೆ.

ಏನಿದು ಬಿಪಿಎಲ್‌ ಗೊಂದಲ?
-ರಾಜ್ಯದಲ್ಲಿ ಕೇಂದ್ರ ನಿಗದಿಪಡಿಸಿರುವ ಬಿಪಿಎಲ್‌ ಕಾರ್ಡ್‌ದಾರರ ಸಂಖ್ಯೆ
1.14 ಕೋಟಿ.
-ಈ ಮಿತಿಮೀರಿ 10.33 ಲಕ್ಷ ಹೆಚ್ಚುವರಿ ಬಿಪಿಎಲ್‌ ಕುಟುಂಬಗಳು.
-ಬಿಪಿಎಲ್‌ ಕಾರ್ಡ್‌ಗೆ 3.05 ಲಕ್ಷ ಅರ್ಜಿ.

ಹೊಸ ಬಿಪಿಎಲ್‌ ಕಾರ್ಡ್‌ಗಳಿಗಾಗಿ ಸಾಕಷ್ಟು ಅರ್ಜಿಗಳಿವೆ. ಆದರೆ ಇನ್ನೂ ಯಾರಿಗೂ ವಿತರಿಸಿಲ್ಲ. ಹೊಸದಾಗಿ ಕಾರ್ಡ್‌ ವಿತರಿಸುವ ಯಾವುದೇ ಚಿಂತನೆಯೂ ಸದ್ಯ ಇಲಾಖೆ ಮುಂದಿಲ್ಲ.
– ಚಂದ್ರಕಾಂತ್‌, ಹೆಚ್ಚುವರಿ ನಿರ್ದೇಶಕರು (ಐಟಿ), ಆಹಾರ, ನಾಗರಿಕ ಮತ್ತು ಗ್ರಾಹಕರ ವ್ಯವಹಾರಗಳ ಇಲಾಖೆ

-ವಿಜಯ ಕುಮಾರ ಚಂದರಗಿ

ಟಾಪ್ ನ್ಯೂಸ್

ISREL

Warning; ಶಿಲಾಯುಗಕ್ಕೆ ಮರಳಿಸುತ್ತೇವೆ ! : ಲೆಬನಾನ್ ಗೆ ಇಸ್ರೇಲ್ ಎಚ್ಚರಿಕೆ

ಜಿಯೋ ಆಯ್ತು ಈಗ ಏರ್ಟೆಲ್ ನಿಂದಲೂ ದರ ಏರಿಕೆ!

Mobile Recharge Plans; ಜಿಯೋ ಆಯ್ತು ಈಗ ಏರ್ಟೆಲ್ ನಿಂದಲೂ ದರ ಏರಿಕೆ!

Bidar; I was defeated for our selfishness says Bhagwanth Khuba

Bidar; ನಮ್ಮವರ ಸ್ವಾರ್ಥಕ್ಕಾಗಿ ನನಗೆ ಸೋಲಾಯಿತು…: ಭಗವಂತ ಖೂಬಾ ಬೇಸರ

Randheer-Jaiswal

Biased; ಧಾರ್ಮಿಕ ಸ್ವಾತಂತ್ರ್ಯ ಕುರಿತು ವರದಿ: ಅಮೆರಿಕಕ್ಕೆ ಭಾರತ ತಿರುಗೇಟು

Mudhol ರನ್ನ ಸಹಕಾರಿ ಸಕ್ಕರೆ ಕಾರ್ಖಾನೆ ಆರಂಭಕ್ಕೆ ಒತ್ತಾಯಿಸಿ ಪ್ರತಿಭಟನೆ

Mudhol ರನ್ನ ಸಹಕಾರಿ ಸಕ್ಕರೆ ಕಾರ್ಖಾನೆ ಆರಂಭಕ್ಕೆ ಒತ್ತಾಯಿಸಿ ಪ್ರತಿಭಟನೆ

Rajya sabha ಕಲಾಪದಲ್ಲಿ ಪ್ರತಿಭಟನೆ ವೇಳೆ ಕುಸಿದು ಬಿದ್ದ ಕಾಂಗ್ರೆಸ್‌ ಸಂಸದೆ…

Rajya sabha ಕಲಾಪದಲ್ಲಿ ಪ್ರತಿಭಟನೆ ವೇಳೆ ಕುಸಿದು ಬಿದ್ದ ಕಾಂಗ್ರೆಸ್‌ ಸಂಸದೆ…

Minister RB Timmapur ರಾಜ್ಯ ಸರ್ಕಾರ ರೈತರ ಪರವಾಗಿ ಕಾರ್ಯ ಮಾಡುತ್ತಿದೆ

Minister RB Timmapur ರಾಜ್ಯ ಸರ್ಕಾರ ರೈತರ ಪರವಾಗಿ ಕಾರ್ಯ ಮಾಡುತ್ತಿದೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-sdsads

Ramanagara; ಡಿಸಿ ಕಚೇರಿಯಲ್ಲೇ ಹೃದಯಾಘಾತದಿಂದ ನೌಕರ ಸಾವು

dinesh-gu

GST ವಿಚಾರದಲ್ಲಿ ಟೀಕೆ: ನಿರ್ಮಲಾ ಸೀತಾರಾಮನ್ ವಿರುದ್ಧ ದಿನೇಶ್ ಗುಂಡೂರಾವ್ ಕಿಡಿ

Bidar; I was defeated for our selfishness says Bhagwanth Khuba

Bidar; ನಮ್ಮವರ ಸ್ವಾರ್ಥಕ್ಕಾಗಿ ನನಗೆ ಸೋಲಾಯಿತು…: ಭಗವಂತ ಖೂಬಾ ಬೇಸರ

Malur ಆಸ್ಪತ್ರೆಗೆ ಶಾಸಕ ಆರಗ ಜ್ಞಾನೇಂದ್ರ ದಿಡೀರ್ ಭೇಟಿ… ವ್ಯವಸ್ಥೆಗಳ ಬಗ್ಗೆ ಪರಿಶೀಲನೆ

Malur ಆಸ್ಪತ್ರೆಗೆ ಶಾಸಕ ಆರಗ ಜ್ಞಾನೇಂದ್ರ ದಿಡೀರ್ ಭೇಟಿ… ವ್ಯವಸ್ಥೆಗಳ ಬಗ್ಗೆ ಪರಿಶೀಲನೆ

Heavy Rain: ಆರಿದ್ರಾ ಮಳೆ ಅವಾಂತರ: ಗುಡ್ಡೆಕೊಪ್ಪದಲ್ಲಿ ಕುಸಿದು ಬಿದ್ದ ಮನೆ

Heavy Rain: ಆರಿದ್ರಾ ಮಳೆ ಅವಾಂತರ: ಗುಡ್ಡೆಕೊಪ್ಪದಲ್ಲಿ ಕುಸಿದು ಬಿದ್ದ ಮನೆ

MUST WATCH

udayavani youtube

ವಿಧಿಯಾಟಕ್ಕೆ ಬಲಿಯಾದ ಅಂಧರ ಪುಟ್ ಬಾಲ್ ತಂಡದ ಕ್ಯಾಪ್ಟನ್

udayavani youtube

ಮಾತು ಬರದ ಮಗುವಿಗೆ ಮಾತು ಬರಿಸಿದ ಕಾಪು ಮಾರಿಯಮ್ಮ | ಕಾಪುವಿನ ಅಮ್ಮನ ಪವಾಡ

udayavani youtube

ಡಿಸಿಎಂ ವಿಚಾರ ಇನ್ನೊಮ್ಮೆ ಮಾತನಾಡೋಣ; ಕುಕ್ಕೆಯಲ್ಲಿ ಡಿ.ಕೆ.ಶಿವಕುಮಾರ್

udayavani youtube

ಆನೆಗುಡ್ಡೆ ಶ್ರೀ ವಿನಾಯಕ ದೇಗುಲದಲ್ಲಿ ಅಂಗಾರ ಸಂಕಷ್ಟಹರ ಚತುರ್ಥಿ|

udayavani youtube

ಬಸ್ಸೇರಿ ಸಮಸ್ಯೆ ಆಲಿಸಿದ ಶಾಸಕ ರೈ

ಹೊಸ ಸೇರ್ಪಡೆ

1-wew-e-weewqewq

Muddebihal; 2 ಮರಿಗಳ ಸಮೇತ ಬೃಹತ್ ಹೆಣ್ಣು ಮೊಸಳೆ ಸೆರೆ

1-wqeqwe

Gundlupete: ಜನಸ್ಪಂದನಾ ಕಾರ್ಯಕ್ರಮ ಮುಗಿಸಿ ಬರುವಾಗ ಅಪಘಾತ: ಆಹಾರ ನಿರೀಕ್ಷಕ ಸಾವು

1-sdsads

Ramanagara; ಡಿಸಿ ಕಚೇರಿಯಲ್ಲೇ ಹೃದಯಾಘಾತದಿಂದ ನೌಕರ ಸಾವು

dinesh-gu

GST ವಿಚಾರದಲ್ಲಿ ಟೀಕೆ: ನಿರ್ಮಲಾ ಸೀತಾರಾಮನ್ ವಿರುದ್ಧ ದಿನೇಶ್ ಗುಂಡೂರಾವ್ ಕಿಡಿ

1-aaa

Kottigehara; ನದಿಯ ಕಿರು ಕಾಲುವೆಗೆ ಬಿದ್ದ ಕಾರು: ಇಬ್ಬರು ಪಾರು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.