“ಮಹಾ ರಾಜಕೀಯ” ಜಾರಕಿಹೊಳಿ ಸುಳಿ!
ಕರ್ನಾಟಕ ಮಾದರಿಯಲ್ಲಿ ಮಹಾ ಅಘಾಡಿ ಪತನ?
Team Udayavani, Nov 9, 2020, 6:21 AM IST
ಬೆಂಗಳೂರು: ಮಹಾರಾಷ್ಟ್ರದ ಶಿವಸೇನೆ ನೇತೃತ್ವದ ಮಹಾ ವಿಕಾಸ್ ಅಘಾಡಿ ಸರಕಾರದಲ್ಲಿ “ಕರ್ನಾಟಕ ಮಾದರಿ ಭೂಕಂಪ’ ಸಂಭವಿಸುವ ದಿನಗಳು ಸಮೀಪಿಸುತ್ತಿವೆಯೇ? ಆಪರೇಷನ್ ಕಮಲದ ಬಿರುಗಾಳಿಗೆ ಸಿಲುಕಿ ಉದ್ಧವ್ ಸರಕಾರವೂ ಪತನಗೊಳ್ಳಲಿದೆಯೇ? ಪ್ರಸ್ತುತ ವಿದ್ಯಮಾನಗಳನ್ನು ಗಮನಿಸಿದರೆ, ಇಂಥ ಬೆಳವಣಿಗೆ ಹೆಚ್ಚು ದೂರವಿಲ್ಲ ಎಂಬ ಸುಳಿವು ಸಿಗುತ್ತಿದೆ. ವಿಶೇಷವೆಂದರೆ ಮಹಾರಾಷ್ಟ್ರದಲ್ಲಿ ಆಪರೇಷನ್ ಕಮಲ ಕಾರ್ಯತಂತ್ರದ ಹಿಂದಿರುವುದು ಬೇರ್ಯಾರೂ ಅಲ್ಲ, ರಮೇಶ್ ಜಾರಕಿಹೊಳಿ!
ರಾಜ್ಯ ರಾಜಕಾರಣದಲ್ಲಿ ಕಾಂಗ್ರೆಸ್ – ಜೆಡಿಎಸ್ ಮೈತ್ರಿ ಸರಕಾರದ ವಿರುದ್ಧ ಬಂಡೆದ್ದು,ರಾಜೀನಾಮೆ ನೀಡಿ, ಬಿಜೆಪಿ ಸರಕಾರ ಅಸ್ತಿತ್ವಕ್ಕೆ ಬರಲು ಕಾರಣರಾಗಿರುವ ಜಲ ಸಂಪನ್ಮೂಲ ಸಚಿವ ರಮೇಶ್ ಜಾರಕಿಹೊಳಿ ಅವರೇ ಮಹಾರಾಷ್ಟ್ರ ರಾಜಕಾರಣದಲ್ಲಿಯೂ ಮಹತ್ವದ ಪಾತ್ರ ವಹಿಸುತ್ತಿದ್ದಾರೆ.
ಮಹಾರಾಷ್ಟ್ರದಲ್ಲಿ ಶಿವಸೇನೆ ನೇತೃತ್ವದಲ್ಲಿ ಎನ್‌ಸಿಪಿ, ಕಾಂಗ್ರೆಸ್ ಜಂಟಿಯಾಗಿ ರಚಿಸಿರುವ ಅಘಾಡಿ ಸರಕಾರದ ಕಾರ್ಯವೈಖರಿ ಬಗ್ಗೆ ಅಸಮಾಧಾನಗೊಂಡಿರುವ ಕಾಂಗ್ರೆಸ್ ಮತ್ತು ಎನ್‌ಸಿಪಿ ಶಾಸಕರನ್ನು ಬಿಜೆಪಿಯತ್ತ ಸೆಳೆಯುವ ಕಾರ್ಯತಂತ್ರ ರೂಪಿಸಲಾಗುತ್ತಿದೆ ಎಂದು ತಿಳಿದು ಬಂದಿದೆ.
ಕೊಲ್ಹಾಪುರ, ಸೊಲ್ಲಾಪುರ, ರತ್ನಗಿರಿ, ಸತಾರಾ, ಸಾಂಗ್ಲಿ, ಮೀರಜ್, ಲಾಥೂರ್, ಬೀಡ್ ಸಹಿತ ಕರ್ನಾಟಕದ ಗಡಿಗೆ ಹೊಂದಿ ಕೊಂಡಿರುವ ಅನೇಕ ವಿಧಾನಸಭಾ ಕ್ಷೇತ್ರಗಳ ಕಾಂಗ್ರೆಸ್ ಮತ್ತು ಎನ್‌ಸಿಪಿ ಶಾಸಕರು ರಮೇಶ್ ಜಾರಕಿಹೊಳಿಯವರೊಂದಿಗೆ ಉತ್ತಮ ಸ್ನೇಹ ಸಂಬಂಧ ಹೊಂದಿದ್ದಾರೆ ಎನ್ನ ಲಾಗಿದ್ದು, ಮಹಾರಾಷ್ಟ್ರದಲ್ಲಿನ ರಾಜಕೀಯ ಬೆಳವಣಿಗೆಯ ಬಗ್ಗೆ ನಿರಂತರ ಸಂಪರ್ಕ ಇರಿಸಿಕೊಂಡಿದ್ದಾರೆ ಎಂದು ಹೇಳಲಾಗುತ್ತಿದೆ.
ಆಪ್ತರ ಮೂಲಕ ಕಾರ್ಯತಂತ್ರ
ಮಹಾರಾಷ್ಟ್ರದಲ್ಲೂ ಬಿಜೆಪಿಯನ್ನು ಮರಳಿ ಅಧಿಕಾರಕ್ಕೆ ತರುವುದಕ್ಕಾಗಿ ಜಾರಕಿ ಹೊಳಿ ಯವರನ್ನು ಬಳಸಿಕೊಳ್ಳಲು ರಾಷ್ಟ್ರೀಯ ನಾಯಕರು ಮುಂದಾಗಿದ್ದು, ಅವರ ಸಹಕಾರ ಪಡೆಯುತ್ತಿದ್ದಾರೆ ಎಂದು ತಿಳಿದು ಬಂದಿದೆ.
ಜಾರಕಿಹೊಳಿ ತಮ್ಮ ಅಳಿಯ ಅಂಬಿ ರಾವ್
ಅವರ ಸಹೋದರ ಅಪ್ಪಿ ರಾವ್ ಮತ್ತು ನಿಪ್ಪಾಣಿಯ ಪ್ರಭಾವಿ ರಾಜಕಾರಣಿಯೊಬ್ಬರ ಮೂಲಕ ಎನ್‌ಸಿಪಿ, ಕಾಂಗ್ರೆಸ್‌ನ ಅತೃಪ್ತ ಶಾಸಕರ ಸಂಪರ್ಕದಲ್ಲಿದ್ದಾರೆ. ಮೂಲಗಳ ಪ್ರಕಾರ 26ಕ್ಕೂ ಹೆಚ್ಚು ಅತೃಪ್ತ ಶಾಸಕರು ಸಂಪರ್ಕದಲ್ಲಿದ್ದಾರೆ.
6 ತಿಂಗಳಲ್ಲಿ 6 ಬಾರಿ ಭೇಟಿ
ಮಹಾರಾಷ್ಟ್ರದಲ್ಲಿ ಬಿಜೆಪಿಯ ಸ್ನೇಹ ಕಳಚಿಕೊಂಡು ಶಿವಸೇನೆಯು ಎನ್‌ಸಿಪಿ ಮತ್ತು ಕಾಂಗ್ರೆಸ್ ಜತೆ ಸೇರಿ ಸರಕಾರ ರಚಿಸಿದ್ದು, ಮುಖ್ಯಮಂತ್ರಿ ಉದ್ಧವ್ ಠಾಕ್ರೆ ಕಾರ್ಯವೈಖರಿಯ ಬಗ್ಗೆ ಕಾಂಗ್ರೆಸ್ ಮತ್ತು ಎನ್‌ಸಿಪಿ ಶಾಸಕರು ಅಸಮಾಧಾನ ಹೊಂದಿದ್ದಾರೆ ಎನ್ನಲಾಗುತ್ತಿದೆ.
ಅತೃಪ್ತ ಶಾಸಕರು ರಾಜೀನಾಮೆ ನೀಡಿ ಮೈತ್ರಿ ಸರಕಾರ ಉರುಳಿಸಲು ತೆರೆಮರೆಯ ಕಸರತ್ತು ನಡೆಸುತ್ತಿದ್ದಾರೆ. ಇದರ ಭಾಗವಾಗಿ ಜಾರಕಿಹೊಳಿ ಅವರು ಮಹಾರಾಷ್ಟ್ರದ ವಿಪಕ್ಷ ನಾಯಕ ದೇವೇಂದ್ರ ಫಡ್ನವೀಸ್ ಅವರನ್ನು ಆರು ಬಾರಿ ಭೇಟಿ ಮಾಡಿ ಚರ್ಚಿಸಿದ್ದಾರೆ ಎಂದು ತಿಳಿದು ಬಂದಿದೆ. ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ. ನಡ್ಡಾ ಅವರೊಂದಿಗೂ ನೇರ ಸಂಪರ್ಕ ಇರಿಸಿಕೊಂಡಿದ್ದು, ದಿಲ್ಲಿಯಲ್ಲಿ ಅವರನ್ನೂ ಭೇಟಿಯಾಗಿದ್ದಾರೆ ಎಂದು ತಿಳಿದು ಬಂದಿದೆ. ಜಾರಕಿಹೊಳಿ ಆಪ್ತ ಮೂಲಗಳ ಪ್ರಕಾರ ಮಹಾರಾಷ್ಟ್ರ ಡಿಸಿಎಂ, ಎನ್‌ಸಿಪಿ ನಾಯಕ ಅಜಿತ್ ಪವಾರ್ ಅವರನ್ನು ಜಾರಕಿಹೊಳಿ ದಿಲ್ಲಿಯಲ್ಲಿ ಎರಡು ಬಾರಿ ಭೇಟಿ ಮಾಡಿದ್ದಾರೆ.
ಸಂಕ್ರಾಂತಿ ಲೆಕ್ಕಾಚಾರ
ಮಹಾರಾಷ್ಟ್ರ ಸರಕಾರ ಸಂಕ್ರಾಂತಿ ಹೊತ್ತಿಗೆ ಪತನ ಗೊಳ್ಳುತ್ತದೆ ಎನ್ನುವ ಲೆಕ್ಕಾಚಾರ ಬಿಜೆಪಿ ರಾಷ್ಟ್ರೀಯ ನಾಯಕರಲ್ಲಿದ್ದು, ಅದಕ್ಕೆ ಪೂರಕವಾಗಿ ಕಾರ್ಯತಂತ್ರ ರೂಪಿಸಲಾಗುತ್ತಿದೆ ಎಂದು ತಿಳಿದು ಬಂದಿದೆ.
ಶಾ ಟೀಂಗೆ ಜಾರಕಿಹೊಳಿ
ಸಚಿವ ರಮೇಶ್ ಜಾರಕಿಹೊಳಿ ರಾಜ್ಯ ಬಿಜೆಪಿಯಲ್ಲಿ ಪ್ರಭಾವಿ ನಾಯಕ ರಾಗಿ ಹೊರಹೊಮ್ಮುತ್ತಿದ್ದು, ವಲಸಿಗ ರಾದರೂ ಕೇಂದ್ರ ಗೃಹ ಸಚಿವ, ಬಿಜೆಪಿ ಯಲ್ಲಿ ಚುನಾವಣ ಚಾಣಕ್ಯ ಎಂದೇ ಖ್ಯಾತರಾಗಿರುವ ಅಮಿತ್ ಶಾ ಅವರ ಆಪ್ತರ ಬಳಗ ಸೇರಿಕೊಂಡಿದ್ದಾರೆ. ಶಾ ಜತೆ ನೇರ ಸಂಪರ್ಕ ಹೊಂದಿರುವ ರಾಜ್ಯದ ಕೆಲವೇ ಬಿಜೆಪಿ ನಾಯಕರಲ್ಲಿ ರಮೇಶ್ ಜಾರಕಿಹೊಳಿಯವರೂ ಒಬ್ಬರಾಗಿದ್ದಾರೆ.
ಶಂಕರ ಪಾಗೋಜಿ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Lok Adalat: 39 ಲಕ್ಷ ಕೇಸ್ ಇತ್ಯರ್ಥ; ಪುನಃ ಒಂದಾದ 307 ದಂಪತಿ
ಮೂಲಗೇಣಿದಾರರ ಅರ್ಜಿ ತತ್‌ಕ್ಷಣ ಇತ್ಯರ್ಥಗೊಳಿಸಲು ಐವನ್ ಮನವಿ
Karnataka Govt.,: ಮಂಗಳೂರಲ್ಲಿ ಹೈಕೋರ್ಟ್ ಪೀಠ ಸ್ಥಾಪನೆಗೆ ಮನವಿ
Belagavi: ಎಐಸಿಸಿ ಅಧಿವೇಶನದ ಶತಮಾನೋತ್ಸವಕ್ಕೆ ಅಡ್ಡಿಪಡಿಸಿದರೆ ಕ್ರಮ: ಸಿದ್ದರಾಮಯ್ಯ
Vijayapura: ಜನವರಿ 1, 2 ರಂದು ಸಿದ್ದೇಶ್ವರ ಶ್ರೀಗಳಿಗೆ ಗುರುನಮನ ಕಾರ್ಯಕ್ರಮ
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.