ಸುಳ್ಳು, ದ್ವೇಷದ ಬೋಧನೆ
Team Udayavani, Apr 4, 2018, 6:00 AM IST
ಶಿವಮೊಗ್ಗ: “”ಪ್ರಧಾನಿ ನರೇಂದ್ರ ಮೋದಿ ಯವರಿಗೆ ಆರ್‌ಎಸ್‌ಎಸ್ ಸುಳ್ಳು ಹೇಳುವುದು ಮತ್ತು ದ್ವೇಷಿಸುವುದನ್ನು ಮಾತ್ರ ಹೇಳಿಕೊಟ್ಟಿದೆ” ಎಂದು ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ ತುಸು ಖಾರವಾಗಿ ಹೇಳಿದ್ದಾರೆ.
ನಗರದಲ್ಲಿ ಮಂಗಳವಾರ ಜನಾಶೀರ್ವಾದ ಯಾತ್ರೆ ಅಂಗವಾಗಿ ನಡೆದ ರೋಡ್ ಶೋ ಬಳಿಕ ಬಹಿರಂಗ ಸಭೆಯಲ್ಲಿ ಮಾತನಾಡಿದರು. “”ಇತಿಹಾಸವನ್ನು ಗಮನಿಸಿದಾಗ ದೇಶದಲ್ಲಿ ದ್ವೇಷ ಬಿತ್ತುವವರನ್ನು ಜನರು ನಾಶ ಮಾಡಿದ್ದಾರೆ. ದೇಶದ ಏಕತೆ ಕಾಪಾಡಿಕೊಂಡು ಹೋದಾಗ ಮಾತ್ರ ಸದೃಢ ಭಾರತ ಕಟ್ಟಲು ಸಾಧ್ಯ. ಇಂದಿರಾ ಗಾಂಧಿ, ರಾಜೀವ್ ಗಾಂಧಿ, ನರಸಿಂಹ ರಾವ್, ವಾಜಪೇಯಿ ಪ್ರಧಾನಿಯಾಗಿದ್ದಾಗಲೂ ಈ ದೇಶವನ್ನು ನೋಡಿ ದ್ದೇವೆ. ಪ್ರೀತಿ, ಕರುಣೆ, ವಿಶ್ವಾಸದಿಂದ ಅಧಿಕಾರ ನಡೆಸಬೇಕು. ದ್ವೇಷ, ಸೇಡಿನ ರಾಜಕಾರಣ ಮಾಡ ಬಾರದು” ಎಂದು ಪರೋಕ್ಷವಾಗಿ ಮೋದಿ ಯವರನ್ನು ಟೀಕಿಸಿದರು.
“”ಅಧಿಕಾರಕ್ಕೆ ಬಂದ ಅನಂತರ ಮೋದಿ ಸುಳ್ಳು ಹೇಳಿದ್ದೇ ಹೆಚ್ಚು. ಕಳೆದ 4 ವರ್ಷಗಳಲ್ಲಿ ಅವರು ನೀಡಿದ ಭರವಸೆಗಳಲ್ಲಿ ಯಾವುದನ್ನೂ ಈಡೇರಿಸಿಲ್ಲ. ಭ್ರಷ್ಟಾಚಾರ ಸಂಪೂರ್ಣ ನಿರ್ಮೂಲನೆ ಮಾಡುವು ದಾಗಿ ವಾಗ್ಧಾನ ಮಾಡಿದ್ದರು. ಕೋಟ್ಯಂತರ ಉದ್ಯೋಗ ಸೃಷ್ಟಿ ಮಾಡುತ್ತೇವೆ ಎಂದಿದ್ದರು. ಅಲ್ಲದೇ ಬೆಳೆಗಳಿಗೆ ಯೋಗ್ಯ ಧಾರಣೆ ನೀಡುವುದಾಗಿ, ಪ್ರತಿಯೊಬ್ಬರ ಬ್ಯಾಂಕ್ ಖಾತೆಗೆ ತಲಾ 15 ಲಕ್ಷ ರೂ. ಜಮಾ ಮಾಡುತ್ತೇವೆ ಎಂದಿದ್ದರು. ಆದರೆ ಕೊಟ್ಟ ಮಾತನ್ನು ಈ ತನಕ ಈಡೇರಿಸಿಲ್ಲ” ಎಂದರು.
“”ಮೋದಿ ಅವರು ತಮ್ಮ ಸರಕಾರದ ಭ್ರಷ್ಟಾಚಾರದ ಬಗ್ಗೆ ಮಾತನಾಡುವುದೇ ಇಲ್ಲ. ರಾಜ್ಯದಲ್ಲಿರುವ ಕಾಂಗ್ರೆಸ್ ಸರಕಾರ ಭ್ರಷ್ಟ ಎಂದು ಟೀಕಿಸುತ್ತಾರೆ. ಈ ಆರೋಪ ಹೊರಿಸುವ ಮೊದಲು ತಮ್ಮ ಅಕ್ಕಪಕ್ಕದಲ್ಲಿ ಯಾರಿದ್ದಾರೆ ಎಂಬುದನ್ನು ಅವರು ಗಮನಿಸಲಿ. ಬಿಜೆಪಿ ರಾಜ್ಯಾಧ್ಯಕ್ಷ ಯಡಿಯೂರಪ್ಪ ಹಾಗೂ ಇನ್ನಿತರ ಬಿಜೆಪಿ ಮುಖಂಡರನ್ನು ಕಣ್ಣೆತ್ತಿ ನೋಡಲಿ” ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
New Delhi; ಸಹಪಾಠಿಗಳೊಂದಿಗೆ ವಾಗ್ವಾದ; 7ನೇ ತರಗತಿ ವಿದ್ಯಾರ್ಥಿಯನ್ನು ಇರಿದು ಹತ್ಯೆ
Thane; ಕ್ರಿಮಿನಲ್ ಕೇಸ್ ನ ಮುಖ್ಯ ಸಾಕ್ಷಿ, ಉದ್ಯಮಿಯನ್ನು ಗುಂಡಿಕ್ಕಿ ಹತ್ಯೆ
Road Mishap: ಎಚ್ಚರ! ಬೆಂಗ್ಳೂರಲ್ಲಿದೆ 64 ಆಕ್ಸಿಡೆಂಟ್ ಡೇಂಜರ್ ಸ್ಪಾಟ್
Brijesh Chowta: ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರನ್ನು ಭೇಟಿಯಾದ ಕ್ಯಾ. ಬ್ರಿಜೇಶ್ ಚೌಟ
Royal Movie; ಜ.24ರಿಂದ ʼರಾಯಲ್ʼ; ಟ್ರೇಲರ್ ರಿಲೀಸ್‌ಗೆ ತಂಡ ರೆಡಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.