ಮಂಡ್ಯದಲ್ಲಿ ಮುಂದುವರಿದ ರೈತಾಹುತಿ : ಸಿಎಂ ಸನ್ನಿಧಾನಕ್ಕೆ ರೈತನ ಪತ್ರ
Team Udayavani, Nov 23, 2018, 1:49 PM IST
ಮಂಡ್ಯ: ಜಿಲ್ಲೆಯಲ್ಲಿ ರೈತರ ಆತ್ಮಹತ್ಯೆಗಳು ಮುಂದುವರಿದಿದ್ದು,ದುದ್ದ ಬಳಿಯ ಕನ್ನಹಟ್ಟಿಯಲ್ಲಿ ಶುಕ್ರವಾರ 43 ವರ್ಷ ಪ್ರಾಯದ ಜಯಕುಮಾರ್ ಎನ್ನುವ ರೈತ ಸಾಲಬಾಧೆ ಮತ್ತು ಅನಾರೋಗ್ಯದಿಂದ ಬೇಸತ್ತು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ಖಾಸಗಿ ಮತ್ತು ಬ್ಯಾಂಕ್‌ಗಳಲ್ಲಿ ಸುಮಾರು 5 ಲಕ್ಷಕ್ಕೂ ಹೆಚ್ಚು ಸಾಲ ಮಾಡಿಕೊಂಡಿದ್ದು , ಗಂಟಲು ಕ್ಯಾನ್ಸರ್ ಇರುವುದು ಗೊತ್ತಾಗಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ಆತ್ಮಹತ್ಯೆ ಮಾಡಿಕೊಳ್ಳುವ ಮುನ್ನ ಮುಖ್ಯಮಂತ್ರಿಗಳ ಸನ್ನಿಧಾನಕ್ಕೆ ಎಂದು ಪತ್ರವನ್ನು ಬರೆದಿಡಲಾಗಿದೆ. 4 ವರ್ಷದಿಂದ ಬರಗಾಲ ಇದ್ದ ಕಾರಣ ಕೃಷಿಯಲ್ಲಿ ಲಾಭ ಬಂದಿಲ್ಲ. ಕೃಷಿಗಾಗಿ ವಿನಿಯೋಗ ಮಾಡಿದ 80 ಸಾವಿರ ರೂಪಾಯಿಯೂ ನಷ್ಟವಾಗಿದೆ. ನನಗೀಗ ಗಂಟಲು ಕ್ಯಾನ್ಸರ್ ಇದೆ. ವೈದ್ಯರು ಚಿಕಿತ್ಸೆಗೆ 3 ಲಕ್ಷ ರೂಪಾಯಿ ಬೇಕಾಗುತ್ತದೆ ಎಂದಿದ್ದಾರೆ ಎಂದು ಬರೆಯಲಾಗಿದೆ.
ಶಿವಳ್ಳಿ ಪೊಲೀಸರು ಸ್ಥಳಕ್ಕಾಗಮಿಸಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.
5 ಲಕ್ಷ ರೂಪಾಯಿ ಪರಿಹಾರ
ಆತ್ಮಹತ್ಯೆಯ ಕುರಿತು ಪ್ರತಿಕ್ರಿಯೆ ನೀಡಿರುವ ಜಿಲ್ಲಾ ಉಸ್ತುವಾರಿ ಸಚಿವ ಸಿ.ಎಸ್.ಪುಟ್ಟರಾಜು ಅವರು ಮೃತನ ಕುಟುಂಬಕ್ಕೆ 5 ಲಕ್ಷ ರೂಪಾಯಿ ಪರಿಹಾರ ನೀಡುವುದಾಗಿ ಘೋಷಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಆನಂದಪುರ: ಬೆಳ್ಳಂಬೆಳಗ್ಗೆ ತೋಟಕ್ಕೆ ಕಾಡಾನೆಗಳ ಲಗ್ಗೆ… ಗ್ರಾಮಸ್ಥರಲ್ಲಿ ಆತಂಕ
ಹುಬ್ಬಳ್ಳಿ ಸಿಲಿಂಡರ್ ಸ್ಫೋಟ ಪ್ರಕರಣ: 16 ವರ್ಷದ ಬಾಲಕ ಮೃತ್ಯು, ಮೃತರ ಸಂಖ್ಯೆ 3ಕ್ಕೆ ಏರಿಕೆ
KMF: ಸಂಕ್ರಾಂತಿ ಬಳಿಕ ಹಾಲಿನ ದರ ಪರಿಷ್ಕರಣೆ ಸರಕಾರದಿಂದ ನಿರ್ಧಾರ: ಭೀಮಾ ನಾಯ್ಕ
Rebels Team: ಜನವರಿಯಲ್ಲಿ ಮತ್ತೆ ರೆಬಲ್ಸ್ ಬಿಜೆಪಿ ವಕ್ಫ್ ಪ್ರವಾಸ
Belagavi Congress Session: ಮಹಾ ಜನಾಂದೋಲನ: ಕಾಂಗ್ರೆಸ್ ಪಣ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Video: ತನ್ನ ಮನೆಯ ಮುಂದೆಯೇ ಚಾಟಿಯಿಂದ ಹೊಡೆದುಕೊಂಡ ಅಣ್ಣಾಮಲೈ…
Substitutes: ರಾಜಕೀಯ ಬಿರುಗಾಳಿ ಎಬ್ಬಿಸಿದ ಮಧ್ಯಪ್ರದೇಶ ಶಿಕ್ಷಣ ಸಚಿವರ ಬದಲಿ ಹೇಳಿಕೆ
Ex PM:ಪ್ರಚಾರದಿಂದ ದೂರ- ದೇಶ ಕಂಡ ಸರಳ, ಸಜ್ಜನಿಕೆಯ ಮೊದಲ ಆರ್ಥಿಕ ತಜ್ಞ ಪ್ರಧಾನಿ
ಆನಂದಪುರ: ಬೆಳ್ಳಂಬೆಳಗ್ಗೆ ತೋಟಕ್ಕೆ ಕಾಡಾನೆಗಳ ಲಗ್ಗೆ… ಗ್ರಾಮಸ್ಥರಲ್ಲಿ ಆತಂಕ
ಕೋಳಿ ಅಂಕಕ್ಕೆ ಪೊಲೀಸ್ ದಾಳಿ: ಗುರಿಕಾರರಿಂದ ವ್ಯಾಘ್ರ ಚಾಮುಂಡಿ ದೈವಕ್ಕೆ ಮೊರೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.