ರೈತರ ಆದಾಯ ಹೆಚ್ಚಳ ರಾಜ್ಯವೇ ನಂಬರ್‌ ಒನ್‌

Team Udayavani, Jun 3, 2022, 7:40 AM IST

ರೈತರ ಆದಾಯ ಹೆಚ್ಚಳ ರಾಜ್ಯವೇ ನಂಬರ್‌ ಒನ್‌

ಬೆಂಗಳೂರು: ಕೇಂದ್ರ ಸರ್ಕಾರದ ಮಹತ್ವಾಕಾಂಕ್ಷಿ  ರೈತರ ಆದಾಯ ದ್ವಿಗುಣಗೊಳಿಸುವ ಯೋಜನೆ ಅಡಿಯಲ್ಲಿ ರಾಜ್ಯದ ರೈತರ ಆದಾಯದಲ್ಲಿ ಶೇ 50 ರಷ್ಟು  ಹೆಚ್ಚಳವಾಗಿದೆ. ದೇಶದಲ್ಲಿಯೇ ಕರ್ನಾಟಕ ನಂಬರ ಒನ್‌ ಸ್ಥಾನದಲ್ಲಿದೆ.

ಕೇಂದ್ರ ಸರ್ಕಾರದ ಯೋಜನೆ ಮತ್ತು ಸಾಂಖೀಕ ಇಲಾಖೆಯ ಮಾಹಿತಿ ಪ್ರಕಾರ 2015-16 ರಿಂದ 2021-22 ರ ವರೆಗೆ ದೇಶದ ವಿವಿಧ ರಾಜ್ಯಗಳಲ್ಲಿ ಕೃಷಿ ಕ್ಷೇತ್ರದಲ್ಲಿ ಆಗಿರುವ ಬೆಳವಣಿಗೆಯ ಆಧಾರದಲ್ಲಿ  ರಾಜ್ಯಗಳ ಪ್ರಗತಿ ಪಟ್ಟಿ ಸಿದ್ದಪಡಿಸಲಾಗಿದ್ದು, ಕರ್ನಾಟಕ ಶೇ 50 ರಷ್ಟು ಪ್ರಗತಿ ಸಾಧಿಸಿ ನಂಬರ್‌ ಒನ್‌ ಸ್ಥಾನದಲ್ಲಿದೆ. ನಂತರದ ಸ್ಥಾನದಲ್ಲಿ ಶೇ 48 ರಷ್ಟು ಪ್ರಗತಿ ಸಾಧಿಸಿರುವ ಆಂಧ್ರಪ್ರದೇಶ ಎರಡನೇ ಸ್ಥಾನದಲ್ಲಿದೆ. ಶೇ 47 ಸಾಧನೆ ಮಾಡಿರುವ ಓಡಿಸ್ಸಾ ಮತ್ತು ತೆಲಂಗಾಣ ಮೂರನೇ ಸ್ಥಾನದಲ್ಲಿವೆ. ಕೊನೆಯ ಸ್ಥಾನದಲ್ಲಿ ಮಹಾರಾಷ್ಟ್ರ, ಛತ್ತೀಸ್‌ಗಢ್‌ ಮತ್ತು ಪಶ್ಚಿಮ ಬಂಗಾಲ ರಾಜ್ಯಗಳಿವೆ.

ಪ್ರಧಾನಿ ಕನಸು:

ಪ್ರಧಾನ ಮಂತ್ರಿ ನರೇಂದ್ರ ಮೋದಿಯವರು ಅಧಿಕಾರಕ್ಕೆ ಬಂದ ಮೇಲೆ ದೇಶದ ರೈತರ ಆದಾಯವನ್ನು ದ್ವಿಗುಣಗೊಳಿಸಬೇಕು ಎಂದು ರೈತರಿಗೆ ಅನೇಕ ಯೋಜನೆಗಳನ್ನು ಘೋಷಣೆ ಮಾಡಿದ್ದರು. ಅದರ ಆಧಾರದ ಎಲ್ಲ ರಾಜ್ಯಗಳಲ್ಲಿಯೂ ಕೇಂದ್ರ ಸರ್ಕಾರದ ಯೋಜನೆಗಳ ಜೊತೆಗೆ ರಾಜ್ಯ ಸರ್ಕಾರಗಳೂ ರೈತರ ಆದಾಯ ಹೆಚ್ಚಳಕ್ಕೆ ಯೋಜನೆಗಳನ್ನು ರೂಪಿಸಿ ಕಾರ್ಯಗತಗೊಳಿಸುವ ಪ್ರಯತ್ನ ಮಾಡುತ್ತಿವೆ.

ರೈತರ ಆದಾಯ ಕಡಿಮೆಯಾಗಲು ಪ್ರಮುಖ ಕಾರಣಗಳು:

ರೈತರಿಗೆ ಪ್ರಮುಖವಾಗಿ ಆದಾಯ ಹೆಚ್ಚಳವಾಗ‌ದಿರಲು ಹಲವಾರು ಕಾರಣಗಳಿವೆ. ರಾಜ್ಯದಲ್ಲಿ ಶೇ 70 ರಷ್ಟು ಸಣ್ಣ ಮತ್ತು ಅತಿ ಸಣ್ಣ ರೈತರಿದ್ದು, ಅವರಲ್ಲಿ ಹೆಚ್ಚಿನ ರೈತರು ಒಣ ಬೇಸಾಯವನ್ನು ಅವಲಂಬಿಸಿದ್ದಾರೆ. ರೈತರಿಗೆ ಸಕಾಲಕ್ಕೆ ಬಿತ್ತನೆ ಬೀಜ, ರಸಗೊಬ್ಬರ ಸಿಗದಿರುವುದು, ಸಕಾಲಕ್ಕೆ ಮಳೆಯಾಗದೇ ನೀರಿನ ಕೊರತೆಯಿಂದ ಬೆಳೆ ಕುಂಟಿತಗೊಳ್ಳುವುದು.  ಕೃಷಿ ಉತ್ಪನ್ನಗಳಿಗೆ ಸರಿಯಾದ ಸಮಯದಲ್ಲಿ ಮಾರಾಟ ಮಾಡಲು ಉತ್ತಮ ಮಾರುಕಟ್ಟೆ ವ್ಯವಸ್ಥೆ ಇಲ್ಲದಿರುವುದು, ಸಾಂಪ್ರದಾಯಿಕ ಬೇಸಾಯ ಪದ್ಧತಿ ಅಳವಡಿಸಿಕೊಂಡಿರುವುದು, ಏಕ ಬೆಳೆ ಪದ್ಧತಿ ಅಳವಡಿಸಿಕೊಂಡಿರುವುದರಿಂದ ರೈತರು ಆದಾಯ ಹೆಚ್ಚಿಸಿಕೊಳ್ಳಲು ಸಾಧ್ಯವಾಗಿರಲಿಲ್ಲ.

ಕೃಷಿ ಆದಾಯ ಹೆಚ್ಚಳಕ್ಕೆ ಕಾರಣ: 

ಶ್ರಮ ವಹಿಸಿ ದುಡಿದರೂ ರೈತರ ಆದಾಯ ಹೆಚ್ಚಳವಾಗದಿರುವುದನ್ನು ಮನಗಂಡ ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು ರೈತರ ಆದಾಯ ಹೆಚ್ಚಳಕ್ಕೆ ಬೇಕಾದ ವ್ಯವಸ್ಥೆ ಕಲ್ಪಿಸುತ್ತಿವೆ. ಪ್ರಮುಖವಾಗಿ ರೈತರಿಗೆ ಅಗತ್ಯವಿದ್ದಾಗ ಬಿತ್ತನೇ  ಬೀಜ ಖರೀದಿಸಲು ಹಾಗೂ ರಸಗೊಬ್ಬರ ಖರೀದಿಸಲು ಅನುಕೂಲವಾಗುವಂತೆ ಪ್ರಧಾನ ಮಂತ್ರಿ ಕೃಷಿ ಸಮ್ಮಾನ್‌ ಯೋಜನೆ ಅಡಿ ಮೂರು ಕಂತುಗಳಲ್ಲಿ ಆರು ಸಾವಿರ ರೂ.ಗಳು, ಜೊತೆಗೆ ರಾಜ್ಯ ಸರ್ಕಾರದಿಂದಲೂ ನಾಲ್ಕು ಸಾವಿರ ರೂಪಾಯಿಗಳನ್ನು ನೀಡಲಾಗುತ್ತಿದೆ.

ಮಿತವ್ಯಯದಲ್ಲಿ ನೀರಿನ ಬಳಕೆ ಮಾಡಿಕೊಳ್ಳಲು ಹನಿ ನೀರಾವರಿ ಮತ್ತು ತುಂತುರು ನೀರಾವರಿಗೆ ಹೆಚ್ಚಿನ ಪ್ರೋತ್ಸಾಹ ನೀಡುವುದು, ರೈತರು ವರ್ಷದಲ್ಲಿ ಒಂದೇ ಬೆಳೆ ಬೆಳೆಯುವ ಬದಲು ಎರಡು ಬೆಳೆ ಬೆಳೆಯಲು ಪ್ರೋತ್ಸಾಹ ನೀಡಿರುವುದು, ಕೃಷಿ ಜೊತೆಗೆ ತೋಟಗಾರಿಕೆ ಬೆಳೆಗಳನ್ನು ಬೆಳೆಯಲು ರೈತರಿಗೆ ಪ್ರೇರೇಪಣೆ ನೀಡುವುದು, ರೈತರು ಕೃಷಿಯಲ್ಲಿ  ಯಂತ್ರೋಪಕರಣ ಮತ್ತು ತಂತ್ರಜ್ಞಾನವನ್ನು ಹೆಚ್ಚಾಗಿ ಬಳಕೆ ಮಾಡಲು ಅಗತ್ಯ ಸೌಲಭ್ಯಗಳನ್ನು ಒದಗಿಸಲಾಗುತ್ತಿದೆ. ಸಣ್ಣ ಮತ್ತು ಅತಿ ಸಣ್ಣ ರೈತರೂ ತಮ್ಮ ಹೊಲಗಳಲ್ಲಿ ಬಾಡಿಗೆ ರೂಪದಲ್ಲಿ ಯಂತ್ರೋಪಕರಣ ಪಡೆದು ಕೃಷಿ ಮಾಡಲು ಅವಕಾಶ ಕಲ್ಪಿಸಲಾಗಿದೆ.

ಎಫ್ಪಿಒ ಮೂಲಕ ಮಾರುಕಟ್ಟೆ:

ರೈತರ ಅತ್ಯಂತ ದೊಡ್ಡ ಸಮಸ್ಯೆಯೆಂದರೆ ಮಾರುಕಟ್ಟೆ ರೈತರು ತಾವು ಬೆಳೆದ ಬೆಳೆಗೆ ಸೂಕ್ತ ಮಾರುಕಟ್ಟೆ ದೊರೆಯದೇ ನಿರಂತರ ನಷ್ಟ ಅನುಭವಿಸುತ್ತಿದ್ದು, ತಮ್ಮ ಅಗತ್ಯಕ್ಕೆ ತಕ್ಕಂತೆ ತಾವು ಬೆಳೆದ ಉತ್ತನ್ನಗಳನ್ನು ಕಡಿಮೆ ಬೆಲೆಗೆ ದಲ್ಲಾಳಿಗಳಿಗೆ ಮಾರಾಟ ಮಾಡುವುದರಿಂದ ನಷ್ಟ ಅನುಭವಿಸುತ್ತಿರುವುದು ನಿರಂತರವಾಗಿದೆ. ಇದು ರೈತರ ಆದಾಯ ಕಡಿಮೆಯಾಗಲು ಪ್ರಮುಖ ಕಾರಣವಾಗಿದ್ದು, ಅದನ್ನು ತಪ್ಪಿಸಲು ಕೇಂದ್ರ ಸರ್ಕಾರದ ರೈತರದ್ದೇ ಎಫ್ಪಿಒ (ಫಾರ್ಮರ್ಸ್‌ ಪೊಡ್ನೂಸರ್  ಸಂಸ್ಥೆ) ತೆರೆಯುವ ಮೂಲಕ ತಮ್ಮ ಉತ್ಪನ್ನಗಳನ್ನು ಸಂಸ್ಕೃರಿಸಿ ಉತ್ತಮ ಬೆಲೆ ಬಂದಾಗ ಮಾರಾಟ ಮಾಡಲು ಅವಕಾಶ ಕಲ್ಪಿಸಲಾಗುತ್ತಿದೆ.

ಸೆಕೆಂಡರಿ ಅಗ್ರಿಕಲ್ಚರ್‌ ನಿರ್ದೇಶನಾಲಯ ಕಮಿಷನರೇಟ್‌:

ರೈತರು ಕೃಷಿಯೊಂದಿಗೆ ಉಪ ಕಸುಬುಗಳಾದ ಹೈನುಗಾರಿಕೆ, ಕುರಿ ಸಾಕಾಣಿಕೆ, ಕೋಳಿ ಸಾಕಾಣಿಕೆ, ಮೀನುಗಾರಿಕೆಯನ್ನು ಕೈಗೊಳ್ಳಲರು ರಾಜ್ಯ ಸರ್ಕಾರ ಸೆಕೆಂಡರಿ ಅಗ್ರಿಕಲ್ಚರ್‌ ನಿರ್ದೇಶನಾಲಯ ಸ್ಥಾಪನೆ ಮಾಡಿದ್ದು, ಆ ಮೂಲಕ ರೈತರು ಉಪ ಕಸುಬು ಮಾಡಲು ವಿವಿಧ ಮೂಲಗಳಿಂದ ಸಾಲ ಹಾಗೂ ಪ್ರೋತ್ಸಾಹ ಧನ ನೀಡುವ ಮೂಲಕ ರೈತರು ತಮ್ಮ ಆದಾಯ ಹೆಚ್ಚಿಸಿಕೊಳ್ಳಲು ಪ್ರೋತ್ಸಾಹಿಸುತ್ತಿದೆ.

ಆದಾಯ ಹೆಚ್ಚಳಕ್ಕೆ ಕಾರಣವಾದ ಪ್ರಮುಖ ಅಂಶಗಳು :

  • ಪ್ರಧಾನಮಂತ್ರಿ ಕೃಷಿ ಸಮ್ಮಾನ್‌ ಯೋಜನೆ
  • ಪರ್ಯಾಯ ಹಾಗೂ ಮಿಶ್ರ ಬೆಳೆಗೆ ಪ್ರೋತ್ಸಾಹ
  • ಹನಿ ಹಾಗೂ ತುಂತುರು ನೀರಾವರಿಗೆ ಆದ್ಯತೆ
  • ಎಫ್ಪಿಒ (ಫಾರ್ಮರ್ಸ್‌ ಪ್ರೊಡ್ನೂಸರ್ಸ್‌ ಸಂಸ್ಥೆ ) ಸ್ಥಾಪನೆ
  • ಉಪ ಕಸುಬು ಕೈಗೊಳ್ಳಲು ಸೆಕೆಂಡರಿ ಅಗ್ರಿಕಲ್ಚರ್‌ ನಿರ್ದೇಶನಾಲಯ ಸ್ಥಾಪನೆ

ನಮ್ಮ ಸರ್ಕಾರ ರೈತರ ಆದಾಯ ಹೆಚ್ಚಳಕ್ಕೆ ಕೃಷಿ ಸಮ್ಮಾನ್‌ ಯೋಜನೆ, ತಂತ್ರಜ್ಞಾನ, ಯಂತ್ರೋಪಕರಣ ಬಳಕೆ, ರೈತರ ಬೆಳೆಗೆ ಬೆಲೆ ಸಿಗಲು ಎಫ್ಪಿಒ ಸ್ಥಾಪನೆ ಮಾಡಿದ್ದೇವೆ. ಜೊತೆಗೆ ಉಪ ಕಸುಬು ಕೈಗೊಳ್ಳಲು ಪ್ರೋತ್ಸಾಹ ನೀಡುತ್ತಿರುವುದರಿಂದ ರಾಜ್ಯದ ರೈತರ ಆದಾಯದಲ್ಲಿ ಹೆಚ್ಚಳವಾಗುತ್ತಿದೆ.-ಬಿ.ಸಿ. ಪಾಟೀಲ್‌, ಕೃಷಿ ಸಚಿವ.

ಟಾಪ್ ನ್ಯೂಸ್

Aaram Aravinda Swamy: ಸ್ವಾಮಿ ನಂಬಿ ಬಂದ ಅನೀಶ್‌; ಪ್ರೇಕ್ಷಕ ಕೈ ಹಿಡಿಯೋ ನಿರೀಕ್ಷೆ

Aaram Aravinda Swamy: ಸ್ವಾಮಿ ನಂಬಿ ಬಂದ ಅನೀಶ್‌; ಪ್ರೇಕ್ಷಕ ಕೈ ಹಿಡಿಯೋ ನಿರೀಕ್ಷೆ

Waqf Protest: 1974ರಿಂದ ಇದುವರೆಗೆ ಬಿಜೆಪಿ ಯಾಕೆ ಹೋರಾಟ ಮಾಡಿಲ್ಲ: ಎಂ.ಬಿ.ಪಾಟೀಲ್

Waqf Protest: 1974ರಿಂದ ಇದುವರೆಗೆ ಬಿಜೆಪಿ ಯಾಕೆ ಹೋರಾಟ ಮಾಡಿಲ್ಲ: ಎಂ.ಬಿ.ಪಾಟೀಲ್

Sandalwood: ಮಾಸ್‌ ಸಿನಿಮಾಗಳಿಗ ಜೈ ಎಂದ ಪ್ರೇಕ್ಷಕ

Sandalwood: ಮಾಸ್‌ ಸಿನಿಮಾಗಳಿಗೆ ಜೈ ಎಂದ ಪ್ರೇಕ್ಷಕ

Canada-India Row: ಕೆನಡಾದ ಆಂತರಿಕ ವಿಚಾರದಲ್ಲಿ ಭಾರತದ ಪಾತ್ರವಿಲ್ಲ… :ಟ್ರುಡೋ ಸರ್ಕಾರ

Canada-India Row: ನಿಜ್ಜರ್ ಹತ್ಯೆ ಹಿಂದೆ ಭಾರತದ ಪಾತ್ರವಿಲ್ಲ… :ಟ್ರುಡೋ ಸರ್ಕಾರ

IPL 2025-27: BCCI announces dates for next three IPL seasons

IPL 2025-27: ಮುಂದಿನ ಮೂರು ಐಪಿಎಲ್ ಸೀಸನ್‌ ನ ದಿನಾಂಕ ಪ್ರಕಟಿಸಿದ ಬಿಸಿಸಿಐ

AI world: ಕ್ರಿಮಿನಲ್‌ಗ‌ಳ ಜಾತಕವನ್ನೇ ಬಿಚ್ಚಿಡುವ ಎಐ ಆ್ಯಪ್‌!

AI world: ಕ್ರಿಮಿನಲ್‌ಗ‌ಳ ಜಾತಕವನ್ನೇ ಬಿಚ್ಚಿಡುವ ಎಐ ಆ್ಯಪ್‌!

5-video

ಹೊಸ ಟ್ರೆಂಡ್ ನ ಪ್ಯಾಂಟ್ ಧರಿಸಿದ ಯುವಕ;ಸ್ನೇಹಿತರಿಂದ ಅವಮಾನ, ನೊಂದ ಯುವಕ ಆತ್ಮಹತ್ಯೆಗೆ ಯತ್ನ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Crocodile: ನಿಟ್ಟೂರಲ್ಲಿ ಕಾಣಿಸಿಕೊಂಡ ಮೊಸಳೆ ಸೆರೆ… ನಿಟ್ಟುಸಿರು ಬಿಟ್ಟ ಗ್ರಾಮಸ್ಥರು

Crocodile: ನಿಟ್ಟೂರಲ್ಲಿ ಕಾಣಿಸಿಕೊಂಡ ಮೊಸಳೆ ಸೆರೆ… ನಿಟ್ಟುಸಿರು ಬಿಟ್ಟ ಗ್ರಾಮಸ್ಥರು

Mudigere: ಕಾಫಿ ಬೆಳೆಗಾರರ ಸಂಘಟನೆಗಳ ಪದಾಧಿಕಾರಿಗಳ ಜೊತೆ ಪೊಲೀಸ್ ಅಧಿಕಾರಿಗಳ ಸಭೆ

Mudigere: ಕಾಫಿ ಬೆಳೆಗಾರರ ಸಂಘಟನೆಗಳ ಪದಾಧಿಕಾರಿಗಳ ಜೊತೆ ಪೊಲೀಸ್ ಅಧಿಕಾರಿಗಳ ಸಭೆ

Waqf Protest: 1974ರಿಂದ ಇದುವರೆಗೆ ಬಿಜೆಪಿ ಯಾಕೆ ಹೋರಾಟ ಮಾಡಿಲ್ಲ: ಎಂ.ಬಿ.ಪಾಟೀಲ್

Waqf Protest: 1974ರಿಂದ ಇದುವರೆಗೆ ಬಿಜೆಪಿ ಯಾಕೆ ಹೋರಾಟ ಮಾಡಿಲ್ಲ: ಎಂ.ಬಿ.ಪಾಟೀಲ್

AI world: ಕ್ರಿಮಿನಲ್‌ಗ‌ಳ ಜಾತಕವನ್ನೇ ಬಿಚ್ಚಿಡುವ ಎಐ ಆ್ಯಪ್‌!

AI world: ಕ್ರಿಮಿನಲ್‌ಗ‌ಳ ಜಾತಕವನ್ನೇ ಬಿಚ್ಚಿಡುವ ಎಐ ಆ್ಯಪ್‌!

venkatesh-gowda

Ramanagara: ಹೃದಯಾಘಾತದಿಂದ ಕಾವೇರಿ ನೀರಾವರಿ ನಿಗಮದ ಮಾಜಿ ಎಂಜಿನಿಯರ್ ನಿಧನ

MUST WATCH

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

udayavani youtube

ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|

udayavani youtube

ಲಾಭದಾಯಕ ಗುಲಾಬಿ ಕೃಷಿ ಮಾಡುವ ವಿಧಾನ

udayavani youtube

ಗೀತೋತ್ಸವ ತ್ರಿಪಕ್ಷ ಶತವೈಭವ ಕಾರ್ಯಕ್ರಮಕ್ಕೆ ಆಮಂತ್ರಿಸಿದ ಪರ್ಯಾಯ ಪುತ್ತಿಗೆ ಶ್ರೀಗಳು

ಹೊಸ ಸೇರ್ಪಡೆ

Maryade Prashne: ಮಧ್ಯಮ ವರ್ಗದ ಸುತ್ತ ಹೀಗೊಂದು ಚಿತ್ರ

Maryade Prashne: ಮಧ್ಯಮ ವರ್ಗದ ಸುತ್ತ ಹೀಗೊಂದು ಚಿತ್ರ

Crocodile: ನಿಟ್ಟೂರಲ್ಲಿ ಕಾಣಿಸಿಕೊಂಡ ಮೊಸಳೆ ಸೆರೆ… ನಿಟ್ಟುಸಿರು ಬಿಟ್ಟ ಗ್ರಾಮಸ್ಥರು

Crocodile: ನಿಟ್ಟೂರಲ್ಲಿ ಕಾಣಿಸಿಕೊಂಡ ಮೊಸಳೆ ಸೆರೆ… ನಿಟ್ಟುಸಿರು ಬಿಟ್ಟ ಗ್ರಾಮಸ್ಥರು

Mudigere: ಕಾಫಿ ಬೆಳೆಗಾರರ ಸಂಘಟನೆಗಳ ಪದಾಧಿಕಾರಿಗಳ ಜೊತೆ ಪೊಲೀಸ್ ಅಧಿಕಾರಿಗಳ ಸಭೆ

Mudigere: ಕಾಫಿ ಬೆಳೆಗಾರರ ಸಂಘಟನೆಗಳ ಪದಾಧಿಕಾರಿಗಳ ಜೊತೆ ಪೊಲೀಸ್ ಅಧಿಕಾರಿಗಳ ಸಭೆ

Aaram Aravinda Swamy: ಸ್ವಾಮಿ ನಂಬಿ ಬಂದ ಅನೀಶ್‌; ಪ್ರೇಕ್ಷಕ ಕೈ ಹಿಡಿಯೋ ನಿರೀಕ್ಷೆ

Aaram Aravinda Swamy: ಸ್ವಾಮಿ ನಂಬಿ ಬಂದ ಅನೀಶ್‌; ಪ್ರೇಕ್ಷಕ ಕೈ ಹಿಡಿಯೋ ನಿರೀಕ್ಷೆ

8-udupi

Udupi: ಸಹಕಾರ ಕ್ಷೇತ್ರ ಪಠ್ಯವಾಗಲಿ: ಡಾ| ಎಂ.ಎನ್‌.ಆರ್‌.

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.