ಕೆಐಎಡಿಬಿ ಕಾಯ್ದೆಗೆ ತಿದ್ದುಪಡಿ ಮಾಡಿದ್ದರಿಂದ ರೈತರ ಭೂ ಪರಿಹಾರ ಸರಳೀಕರಣ: ಸಚಿವ ನಿರಾಣಿ


Team Udayavani, Mar 25, 2022, 3:47 PM IST

murugesh nirani

ಬೆಂಗಳೂರು: ಕರ್ನಾಟಕ ಪ್ರದೇಶ ಕೈಗಾರಿಕಾ ಅಭಿವೃದ್ಧಿ ಮಂಡಳಿ (ಕೆಐಎಡಿಬಿ) ಕಾಯ್ದೆಗೆ ತಿದ್ದುಪಡಿ ಮಾಡಿರುವುದರಿಂದ ಇನ್ನು ಮುಂದೆ ಕೈಗಾರಿಕಾ ಉದ್ದೇಶಕ್ಕಾಗಿ ಭೂಮಿ ನೀಡುವ ರೈತರಿಗೆ ಪರಿಹಾರ ನೀಡಲು ಯಾವುದೇ ಸಮಸ್ಯೆ ಎದುರಾಗುವುದಿಲ್ಲ ಎಂದು ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಸಚಿವ ಮುರುಗೇಶ್ ಆರ್. ನಿರಾಣಿ ತಿಳಿಸಿದ್ದಾರೆ.

ಶುಕ್ರವಾರ ವಿಧಾನಸಭೆಯಲ್ಲಿ ಶಾಸಕ ಎನ್.ಎ.ಹ್ಯಾರಿಸ್ ಅವರ ಪ್ರಶ್ನೆಗೆ ಉತ್ತರಿಸಿದ ಸಚಿವರು, ಈ ಮೊದಲು ಕೇಂದ್ರ ಮತ್ತು ರಾಜ್ಯ ಸರ್ಕಾರಗಳಿಗೆ ಕಾಯ್ದೆಗಳು ಪ್ರತ್ಯೇಕವಾಗಿದ್ದವು. ಇತ್ತೀಚೆಗೆ ಹಾಲಿ ಇದ್ದ ಕೆಐಎಡಿಬಿ ಕಾಯ್ದೆಗೆ ಉಭಯ ಸದನಗಳಲ್ಲಿ ತಿದ್ದುಪಡಿ ಮಾಡಿದ್ದರಿಂದ ರೈತರಿಗೆ ತೊಂದರೆಯಾಗದಂತೆ ಪರಿಹಾರ ನೀಡಲಾಗುತ್ತದೆ ಎಂದು ಹೇಳಿದರು.

ಹೊಸ ಭೂ ಸ್ವಾದೀನ ಕಾಯ್ದೆ 2013ರ ಅನ್ವಯ ಭೂ ಪರಿಹಾರ ಒದಗಿಸುವ ಸಂಬಂಧ ಕೆಐಎಡಿಬಿ ಕಾಯ್ದೆಗೆ ತಿದ್ದುಪಡಿ ತರಲಾಗಿದೆ. ಇನ್ನು ಮುಂದೆ ನಾವು ಯಾವುದೇ ವಿಳಂಬವಾಗದಂತೆ ಪರಿಹಾರವನ್ನು ವಿತರಣೆ ಮಾಡಲಿದ್ದೇವೆ ಎಂದರು.

ಕೆಐಎಡಿಬಿ ಕಾಯ್ದೆ ಕಾಲಂ 28/4 ಅಡಿ ಅಂತಿಮ ಅಸೂಚನೆ ಹೊರಡಿಸಿ ಸ್ವಾಧೀನ ಪಡಿಸಿಕೊಂಡ ಜಮೀನಿಗೆ ದರ ನಿಗದಿ ಪಡಿಸುವ ಸಲುವಾಗಿ ಸಂಬಂಧಪಟ್ಟ ಜಿಲ್ಲಾಧಿಕಾರಿ / ಕೆಐಎಡಿಬಿಯ ವಿಶೇಷ ಅಧಿಕಾರಿ, ಭೂ ದರ ನಿರ್ಧರಣಾ ಸಲಹಾ ಸಮಿತಿ ಸಭೆಯಲ್ಲಿ ಭೂ ಮಾಲೀಕರದೊಂದಿಗೆ ಸಮಾಲೋಚಿಸಿ ಮಾರ್ಗಸೂಚಿ ದರವನ್ನು ನಿಗದಪಡಿಸುತ್ತಾರೆ ಎಂದು ನಿರಾಣಿ ಮಾಹಿತಿ ನೀಡಿದರು.

ಕೆಐಎಡಿಬಿ ವತಿಯಿಂದ ಭೂ ಸ್ವಾಧೀನ ಪಡಿಸಿದ ಜಮೀನಿಗೆ ಪಡೆಯುವ ಪರಿಹಾರ ಮೊತ್ತಕ್ಕೆ ಮೀರದ ಮೊತ್ತದಲ್ಲಿ ರೈತರು ಕೃಷಿ ಜಮೀನನ್ನು ಖರೀದಿಸಿದ ಸಂದರ್ಭದಲ್ಲಿ ಮುದ್ರಾಂಕ ಶುಲ್ಕ ಶೇ.50ರಷ್ಟು ರಿಯಾಯತಿ ಮತ್ತು ನೋಂದಣಿ ಶುಲ್ಕದಲ್ಲಿ ಸಂಪೂರ್ಣ ವಿನಾಯತಿ ನೀಡಲು ಅವಕಾಶ ಕಲ್ಪಿಸಲಾಗಿದೆ ಎಂದು ವಿವರಿಸಿದರು.

ಇದನ್ನೂ ಓದಿ:ಸ್ಪೀಕರ್ ಕಾಗೇರಿ ಅವರ ಬಳಿ‌ ‘ಕರುಣೆ ತೋರಿ’ ಎಂದ ಡಿ.ಕೆ.ಶಿವಕುಮಾರ್!

ಕೆಐಎಡಿಬಿಯಿಂದ ಭೂ ಸ್ವಾಧೀನ ಪಡಿಸಿ ಕೊಳ್ಳುತ್ತಿರುವ ಕೈಗಾರಿಕಾ ಪ್ರದೇಶದ ಜಮೀನುಗಳಿಗೆ ಭೂ ಪರಿಹಾರದ ಬದಲಾಗಿ ಪ್ರತಿ ಎಕರೆ ಜಮೀನಿಗೆ ನೀಡುತ್ತಿರುವ ಅಭಿವೃದ್ಧಿಪಡಿಸಿದ 9,583 ಚದರಡಿ ವಿಸ್ತೀರ್ಣದಿಂದ 10,781 ಚದರಿ ವಿಸ್ರ್ತೀಣಕ್ಕೆ ಹೆಚ್ಚಿಸಿ ಆದೇಶ ಹೊರಡಿಸಲಾಗಿದೆ. ಈ ಅಭಿವೃದ್ಧಿಪಡಿಸಿದ ಜಮೀನನ್ನು ನೀಡುವ ಸಂದರ್ಭದಲ್ಲಿ ಮುದ್ರಾಂಕ ಶುಲ್ಕ ಶೇ.50ರಷ್ಟು ಮತ್ತು ನೋಂದಣಿ ಶುಲ್ಕದಲ್ಲಿ ಸಂಪೂರ್ಣ ವಿನಾಯತಿ ಇರುತ್ತದೆ ಎಂದರು.

ಜಮೀನುಗಳಿಗೆ ಪರಿಹಾರದ ಮೊತ್ತವನ್ನು ಸಂಬಂಧಪಟ್ಟ ಖಾತೆದಾರರು/ಹಿತಾಸಕ್ತದಾರರಿಗೆ ಆರ್ ಟಿಜಿಎಸ್ ಮುಖಾಂತರ ಭೂಮಾಲೀಕರ ಖಾತೆಗಳಿಗೆ ನೇರವಾಗಿ ಹಣವನ್ನು ಜಮಾ ಮಾಡಲಾಗುತ್ತದೆ. ಇದರಿಂದ ಯಾವುದೇ ರೀತಿಯ ಸಮಸ್ಯೆ ಎದುರಾಗುವುದಿಲ್ಲ ಎಂದು ಸಚಿವ ನಿರಾಣಿ ಸ್ಪಷ್ಟಪಡಿಸಿದರು.

ಟಾಪ್ ನ್ಯೂಸ್

Uttar Pradesh: ಆಸ್ಪತ್ರೆಯಲ್ಲಿ ಬೆಂಕಿ 10 ನವಜಾತ‌ ಶಿಶುಗಳ ಸಾವು; 40 ಮಕ್ಕಳ ರಕ್ಷಣೆ

Uttar Pradesh: ಆಸ್ಪತ್ರೆಯಲ್ಲಿ ಬೆಂಕಿ 10 ನವಜಾತ‌ ಶಿಶುಗಳ ಸಾವು; 40 ಮಕ್ಕಳ ರಕ್ಷಣೆ

Udupi: ಗೀತಾರ್ಥ ಚಿಂತನೆ 95: ಹೃಷೀಕೇಶನಲ್ಲಿ ಗುಡಾಕೇಶನ ಪ್ರಾರ್ಥನೆ

Udupi: ಗೀತಾರ್ಥ ಚಿಂತನೆ 95: ಹೃಷೀಕೇಶನಲ್ಲಿ ಗುಡಾಕೇಶನ ಪ್ರಾರ್ಥನೆ

Delhi: ಹೆಚ್ಚಿದ ಮಾಲಿನ್ಯ: ಮಾಸ್ಕ್ ಧರಿಸಿ ಬಂದ ವಿದ್ಯಾರ್ಥಿಗಳುDelhi: ಹೆಚ್ಚಿದ ಮಾಲಿನ್ಯ: ಮಾಸ್ಕ್ ಧರಿಸಿ ಬಂದ ವಿದ್ಯಾರ್ಥಿಗಳುDelhi: ಹೆಚ್ಚಿದ ಮಾಲಿನ್ಯ: ಮಾಸ್ಕ್ ಧರಿಸಿ ಬಂದ ವಿದ್ಯಾರ್ಥಿಗಳು

Delhi: ಹೆಚ್ಚಿದ ಮಾಲಿನ್ಯ: ಮಾಸ್ಕ್ ಧರಿಸಿ ಬಂದ ವಿದ್ಯಾರ್ಥಿಗಳು

Suspended

Criminal case; ಏಕಕಾಲಕ್ಕೆ ಪಾಲಿಕೆ, ಮುಡಾದಲ್ಲಿ ಕೆಲಸ: ನೌಕರ ವಜಾ

Gujarat: 700 ಕೆ.ಜಿ. ಡ್ರಗ್ಸ್‌ ವಶ: 8 ಮಂದಿ ಬಂಧನ; ಕಳೆದ 1 ತಿಂಗಳಲ್ಲಿ ಭರ್ಜರಿ 3ನೇ ಬೇಟೆ

Gujarat: 700 ಕೆ.ಜಿ. ಡ್ರಗ್ಸ್‌ ವಶ: 8 ಮಂದಿ ಬಂಧನ; ಕಳೆದ 1 ತಿಂಗಳಲ್ಲಿ ಭರ್ಜರಿ 3ನೇ ಬೇಟೆ

Bombay high court: ವಯಸ್ಕಳಲ್ಲದ ಪತ್ನಿ ಜತೆ ಒಪ್ಪಿತ ಲೈಂಗಿಕ ಸಂಬಂಧ ರೇ*ಪ್‌

Bombay high court: ವಯಸ್ಕಳಲ್ಲದ ಪತ್ನಿ ಜತೆ ಒಪ್ಪಿತ ಲೈಂಗಿಕ ಸಂಬಂಧ ರೇ*ಪ್‌

ವಿಮಾನದಲ್ಲಿ ತಾಂತ್ರಿಕ ದೋಷ: 2 ಗಂಟೆ ಕಾದ ಪ್ರಧಾನಿ ಮೋದಿ

Jharkhand; ವಿಮಾನದಲ್ಲಿ ತಾಂತ್ರಿಕ ದೋಷ: 2 ಗಂಟೆ ಕಾದ ಪ್ರಧಾನಿ ಮೋದಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Suspended

Criminal case; ಏಕಕಾಲಕ್ಕೆ ಪಾಲಿಕೆ, ಮುಡಾದಲ್ಲಿ ಕೆಲಸ: ನೌಕರ ವಜಾ

CID

CID ನೂತನ ಡಿಐಜಿಪಿ ಆಗಿ ಶಾಂತನು ಸಿನ್ಹಾ

siddanna-2

Guarantee schemes; ಸಿದ್ದರಾಮಯ್ಯ ವಿರುದ್ಧದ ಅರ್ಜಿ: ವಿಚಾರಣೆ ಡಿ. 6ಕ್ಕೆ ಮುಂದೂಡಿಕೆ

Ashok-1

Congress: ಸರ್ಕಾರದಲ್ಲಿ ಒಬ್ಬರು ಏತಿ ಅಂದರೆ ಮತ್ತೊಬ್ಬರು ಪ್ರೇತಿ ಅಂತಾರೆ: ಆರ್‌.ಅಶೋಕ್‌

HDK (4)

50 cr for 50 Cong MLAs ; ಎಸ್ ಐಟಿ ತನಿಖೆಗೆ ಎಚ್.ಡಿ.ಕುಮಾರಸ್ವಾಮಿ ಒತ್ತಾಯ

MUST WATCH

udayavani youtube

ಕಾರಿನ ಟಯರ್ ಒಳಗಿತ್ತು ಬರೋಬ್ಬರಿ 50 ಲಕ್ಷ

udayavani youtube

ಹೊಸ ತಂತ್ರಜ್ಞಾನಕ್ಕೆ ತೆರೆದುಕೊಂಡ ತುಳುನಾಡ ಕಂಬಳ

udayavani youtube

ಉಡುಪಿಯ ಶ್ರೀ ಕೃಷ್ಣ ಮಠದಲ್ಲಿ ಕಾರ್ತಿಕ ಲಕ್ಷದೀಪೋತ್ಸವ

udayavani youtube

ಪುಂಗನೂರು ತಳಿಯ ಹಾಲು ಯಾವೆಲ್ಲ ಕಾಯಿಲೆಗಳನ್ನು ಗುಣಪಡಿಸುತ್ತದೆ ?

udayavani youtube

ಪುಸ್ತಕ ನೋಡುವುದಿಲ್ಲ, ಗುರುವಿಲ್ಲ ಆದರೂ ಕಲೆ ತಾನಾಗಿಯೇ ಒಲಿದು ಬಂತು

ಹೊಸ ಸೇರ್ಪಡೆ

Suside-Boy

Putturu: ನೇಣು ಬಿಗಿದು ಆತ್ಮಹತ್ಯೆ

Suside-Boy

Brahamavara: ಹಾರಾಡಿ: ಬಾವಿಗೆ ಹಾರಿ ಆತ್ಮಹ*ತ್ಯೆ

Arrest

Madikeri: ಕುಶಾಲನಗರ ಕಳವು ಪ್ರಕರಣ: ಇಬ್ಬರ ಬಂಧನ

Accident-logo

Bantwala: ಶಾಲಾ ವಾಹನ ಢಿಕ್ಕಿ; ಸ್ಕೂಟರ್‌ ಸವಾರ ಸಾವು

Uttar Pradesh: ಆಸ್ಪತ್ರೆಯಲ್ಲಿ ಬೆಂಕಿ 10 ನವಜಾತ‌ ಶಿಶುಗಳ ಸಾವು; 40 ಮಕ್ಕಳ ರಕ್ಷಣೆ

Uttar Pradesh: ಆಸ್ಪತ್ರೆಯಲ್ಲಿ ಬೆಂಕಿ 10 ನವಜಾತ‌ ಶಿಶುಗಳ ಸಾವು; 40 ಮಕ್ಕಳ ರಕ್ಷಣೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.