ಬೆಳೆ ವಿಮೆ ಹೆಸರಿನಲ್ಲಿ ರೈತರ ಹಣ ಲೂಟಿ: ಆರೋಪ
Team Udayavani, Nov 28, 2018, 6:00 AM IST
ಬೆಂಗಳೂರು: ಬೆಳೆ ವಿಮೆ ಹೆಸರಿನಲ್ಲಿ ಕೇಂದ್ರ ಸರ್ಕಾರ ರೈತರ ಕೋಟ್ಯಂತರ ರೂ. ಹಣ ಲೂಟಿ ಮಾಡುತ್ತಿದೆ ಎಂದು ಕೆಪಿಸಿಸಿ ಕಿಸಾನ್ ಘಟಕದ ಅಧ್ಯಕ್ಷ ಸಚಿನ್ ಮೀಗಾ ಆರೋಪಿಸಿದರು. ನಗರದಲ್ಲಿ ಮಂಗಳವಾರ ಪತ್ರಿಕಾಗೋಷ್ಠಿಯಲ್ಲಿ ದಾಖಲೆ,
ಮಾಹಿತಿಯುಳ್ಳ ಸಿಡಿ ಬಿಡುಗಡೆಗೊಳಿಸಿ ಮಾತನಾಡಿದ ಅವರು, ದೇಶದೆಲ್ಲೆಡೆ ರೈತರ ಆತ್ಮಹತ್ಯೆ ನಡೆಯುತ್ತಿದೆ. ಈ ಮಧ್ಯೆ ರಾಜ್ಯದಲ್ಲಿ ಅತಿವೃಷ್ಟಿ, ಅನಾವೃಷ್ಟಿಯ ಸಂದರ್ಭದಲ್ಲಿ ರೈತರಿಗೆ ನೆರವಾಗಲು ಸರ್ಕಾರ ಹಲವು ಕಾರ್ಯಕ್ರಮ ಹಮ್ಮಿಕೊಂಡಿದೆ. ಆದರೆ, ಕೇಂದ್ರ ಸರ್ಕಾರ ಬೆಳೆ ವಿಮೆ ಹೆಸರಿನಲ್ಲಿ ರೈತರ ಹಣವನ್ನೇ ಲೂಟಿ ಮಾಡುತ್ತಿದೆ. ಇದಕ್ಕೆ ಸಂಬಂಧಿಸಿದ ದಾಖಲೆಗಳು ನಮ್ಮ ಬಳಿ ಇದೆ ಎಂದು ಹೇಳಿದರು.
ರಫೆಲ್ ಹಗರಣದಂತೆ ಬೆಳೆ ವಿಮೆ ಯೋಜನೆಯಲ್ಲೂ ಹಗರಣ ನಡೆದಿದೆ. 15 ಸಾವಿರ ಕೋಟಿ ರೂ. ಅಕ್ರಮ ನಡೆದಿರುವ ಶಂಕೆ ಇದೆ. ಅದಾನಿ ಮತ್ತು ಅಂಬಾನಿ ವಿಮೆ ಕಂಪನಿಗೆ ಲಾಭ ಮಾಡಿಕೊಡುವ ದೃಷ್ಟಿಯಿಂದ ಯೋಜನೆ ಜಾರಿಗೆ ತರಲಾಗಿದೆ. ರೈತರಿಂದ 2014-15ನೇ ಸಾಲಿನಲ್ಲಿ 20 ಸಾವಿರ ಕೋಟಿ ರೂ. ವಿಮೆ ಪ್ರೀಮಿಯಂ ಹಣ ಜಮಾ ಆಗಿತ್ತು. ಇದರಲ್ಲಿ ರೈತರಿಗೆ 5 ಸಾವಿರ ಕೋಟಿ ರೂ. ಮಾತ್ರ ಪರಿಹಾರ ಸಿಕ್ಕಿದೆ. ಉಳಿದ 15 ಸಾವಿರ ಕೋಟಿ ರೂ.ಹಣ ಎಲ್ಲಿಗೆ ಹೋಯಿತು ಎಂದು ಪ್ರಶ್ನಿಸಿದರು.
ಬೀದರ್ ಜಿಲ್ಲೆಯಲ್ಲಿ 3.25 ಲಕ್ಷ ರೈತರು ಬೆಳೆ ವಿಮೆಗೆ ನೋಂದಾಯಿಸಿದ್ದು, ಪರಿಹಾರ ಬಿಡುಗಡೆಯಾಗಿರುವುದು 1670 ರೈತರಿಗೆ ಮಾತ್ರ. 198 ಕೋಟಿ ರೂ. ಬೆಳೆ ವಿಮೆಯಲ್ಲಿ ರೈತರಿಗೆ ಸಿಕ್ಕಿದ್ದು 48.80 ಲಕ್ಷ ರೂ. ಮಾತ್ರ. ಉಳಿದ ಹಣ ಉದ್ಯಮಿಗಳಾದ ಅದಾನಿ, ಅಂಬಾನಿ ಪಾಲಾಗಿದೆ. ಒಟ್ಟಾರೆಯಾಗಿ ವಿಮಾ ಸಂಸ್ಥೆಗಳು 1300 ಕೋಟಿ ರೂ.ಗಿಂತ ಹೆಚ್ಚು ಹಣ ಲಾಭ ಪಡೆದಿವೆ. ಮೂರೂವರೆ ವರ್ಷದಲ್ಲಿ ಕರ್ನಾಟಕದಲ್ಲಿ ಒಂದು ಲಕ್ಷ ಕೋಟಿ ರೂ.ಗಿಂತ ಹೆಚ್ಚು ಹಣ ಲೂಟಿ ಮಾಡಲಾಗಿದೆ ಎಂದು ದೂರಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Haveri: ಮುಖ್ಯಮಂತ್ರಿಯಾಗುವ ಆಸೆಯಿದೆ, ಆದರೆ…: ಸತೀಶ್ ಜಾರಕಿಹೊಳಿ
Vijayapura: ಸಿದ್ದರಾಮಯ್ಯ ಈಗ ದ್ವೇಷ ರಾಜಕಾರಣ ಮಾಡುತ್ತಿದ್ದಾರೆ: ಯತ್ನಾಳ್ ಟೀಕೆ
ದಕ್ಷಿಣ ಭಾರತದ ವಿವಿಧೆಡೆ ವಿಧ್ವಂಸಕ ಕೃತ್ಯಕ್ಕೆ ಪರಪ್ಪನ ಅಗ್ರಹಾರದಿಂದಲೇ ಸಂಚು?
B.S.Yediyurappa ಮೇಲೆ ಅಭಿಯೋಜನೆ ಅಸ್ತ್ರ!: ಏನಿದು 12 ಕೋಟಿ ರೂ. ಲಂಚ ಪ್ರಕರಣ?
Panchayat Raj University; ಇನ್ನು ಸಿಎಂ ಕುಲಾಧಿಪತಿ!: ರಾಜ್ಯಪಾಲರ ಅಧಿಕಾರಕ್ಕೆ ಕೊಕ್
MUST WATCH
ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.