R Ashok: ರೈತ, ಕನ್ನಡಪರ ಹೋರಾಟಕ್ಕೆ ಹುಬ್ಬಳ್ಳಿ ಗಲಭೆಯ ಹೋಲಿಕೆ ಸಲ್ಲ
Team Udayavani, Oct 14, 2024, 11:48 PM IST
ಬೆಂಗಳೂರು: ಮತಬ್ಯಾಂಕ್ ರಾಜಕಾರಣ ಹಾಗೂ ಹಗರಣಗಳನ್ನು ಮರೆಮಾಚುವುದಕ್ಕಾಗಿ ಕುರ್ಚಿ ಅಲುಗಾಡುತ್ತಿರುವ ಸಮಯದಲ್ಲಿ ಮುಸ್ಲಿಮರು ನನ್ನ ಪರವಾಗಿದ್ದಾರೆ ಎಂದು ತೋರಿಸಲು ಮುಖ್ಯಮಂತ್ರಿ ಸಿದ್ದರಾಮಯ್ಯ ಹುಬ್ಬಳ್ಳಿ ಗಲಭೆ ಪ್ರಕರಣದ ಆರೋಪಿಗಳ ವಿರುದ್ಧದ ಅಭಿಯೋಜನೆ ರದ್ದುಪಡಿಸಲು ಹೊರಟಿದ್ದಾರೆ ಎಂದು ವಿಧಾನಸಭೆ ವಿಪಕ್ಷ ನಾಯಕ ಆರ್. ಅಶೋಕ್ ಆರೋಪಿಸಿದ್ದಾರೆ.
ಬಿಜೆಪಿ ಶಾಸಕರು, ಮುಖಂಡರೊಂದಿಗೆ ರಾಜಭವನಕ್ಕೆ ತೆರಳಿ, ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರನ್ನು ಭೇಟಿ ಮಾಡಿ ದೂರು ಪತ್ರ ಸಲ್ಲಿಸಿದ ಬಳಿಕ ಸುದ್ದಿಗಾರರ ಜತೆಗೆ ಮಾತನಾಡಿದ ಅವರು, ದೇಶದ್ರೋಹಿ ಚಟುವಟಿಕೆ, ಪೊಲೀಸರ ಮೇಲೆ ಹಲ್ಲೆ ಮಾಡಿದ ಪ್ರಕರಣಗಳನ್ನು ಕಾಂಗ್ರೆಸ್ ಸರಕಾರ ಮುಚ್ಚಿಹಾಕಿದೆ. ರೈತ ಹೋರಾಟ, ಕನ್ನಡ ಹೋರಾಟಗಳಿಗೆ ಇದನ್ನು ಹೋಲಿಸಬಾರದು. ರೈತರ ವಿರುದ್ಧದ ಪ್ರಕರಣ ವಾಪಸ್ ಪಡೆಯಲು ಸಿ.ಟಿ. ರವಿ ಮನವಿ ಮಾಡಿದ್ದರೂ ಅದಕ್ಕೆ ಸರಕಾರ ಸ್ಪಂದಿಸಿಲ್ಲ ಎಂದು ದೂರಿದರು.
ಮುಡಾ, ವಾಲ್ಮೀಕಿ ನಿಗಮದ ಹಗರಣದಿಂದ ತಪ್ಪಿಸಿಕೊಳ್ಳಲು ಈ ತಂತ್ರ ಮಾಡಿರಬಹುದು. ಆದರೆ ಬಿಜೆಪಿಯಿಂದ ಈ ಎರಡೂ ಹಗರಣಗಳ ವಿರುದ್ಧ ಹೋರಾಟ ಮುಂದುವರಿಯಲಿದೆ ಎಂದರು.
ಈ ಸರಕಾರವನ್ನು ವಜಾಗೊಳಿಸುವಂತೆ ರಾಜ್ಯಪಾಲರಿಗೆ ಮನವಿ ಮಾಡಿದ್ದೇವೆ. ಅಲ್ಪಸಂಖ್ಯಾಕರನ್ನು ಓಲೈಸುವುದಕ್ಕಾಗಿ ಪ್ರಕರಣ ವಾಪಸ್ ಪಡೆದಿದ್ದಾರೆ. ಎನ್‌ಐಎ ತನಿಖೆ ನಡೆಯುತ್ತಿರುವಾಗ ಹೇಗೆ ವಾಪಸ್ ಪಡೆಯಲು ಸಾಧ್ಯ ?
– ಛಲವಾದಿ ನಾರಾಯಣಸ್ವಾಮಿ, ವಿಧಾನ ಪರಿಷತ್ ವಿಪಕ್ಷ ನಾಯಕ
ಹುಬ್ಬಳ್ಳಿ ಗಲಭೆ, ಕಾನೂನು ಕೈಗೆ ತೆಗೆದುಕೊಂಡ ಘಟನೆ ಹಿನ್ನೆಲೆಯಲ್ಲಿ ದಾಖಲಾಗಿದ್ದ ಕೇಸನ್ನು ಹಿಂಪಡೆದುದು ಖಂಡನಾರ್ಹ. ಕಾನೂನನ್ನು ಗೌರವಿಸದ ಕಾಂಗ್ರೆಸ್ ಸರಕಾರ, ಎಡವಟ್ಟಿನ ಸರಕಾರ.
– ಡಾ| ಸಿ.ಎನ್. ಅಶ್ವತ್ಥನಾರಾಯಣ, ಮಾಜಿ ಉಪಮುಖ್ಯಮಂತ್ರಿ
ಹುಬ್ಬಳ್ಳಿ ಪ್ರಕರಣ ವಾಪಸ್ ಪಡೆದ ಸಿದ್ದರಾಮಯ್ಯನವರು ದೇಶದ್ರೋಹಿಗಳನ್ನು ಪ್ರೋತ್ಸಾಹಿಸುವ ಕೆಲಸ ಮಾಡಿದ್ದಾರೆ. ಸಚಿವ ಸಂಪುಟದ ಎಲ್ಲ ಸಹೋದ್ಯೋಗಿಗಳು ಇದಕ್ಕೆ ಬೆಂಬಲವಾಗಿರುವುದು ಖಂಡನೀಯ.
– ಗೋವಿಂದ ಕಾರಜೋಳ, ಸಂಸದ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Karnataka Govt.,: ಹೊಸ ಗೋಶಾಲೆ ಇಲ್ಲ, ಇರುವುದಕ್ಕೆ ಬಲ
ರಾಜ್ಯದಲ್ಲಿ ಶೇ. 27 ಪ್ರೌಢಶಾಲಾ ಶಿಕ್ಷಕ ಹುದ್ದೆ ಖಾಲಿ! ಕಲ್ಯಾಣ ಕರ್ನಾಟಕದಲ್ಲಿಯೇ ಹೆಚ್ಚು
Waqf ಬಗ್ಗೆ ಬಿವೈವಿ ಜತೆ ಮಾತಾಡುವ ಅವಶ್ಯಕತೆ ನನಗಿಲ್ಲ: ಯತ್ನಾಳ್
ರಾಜ್ಯದ ಅರಣ್ಯ ನಿಧಿಗಾಗಿ ಕೇಂದ್ರ ಸರಕಾರಕ್ಕೆ ನಿಯೋಗ: ಅರಣ್ಯ ಸಚಿವ ಖಂಡ್ರೆ
Bus Fare Hike: ಸರಕಾರದ ಹೊಟ್ಟೆಗೆ ಇನ್ನೆಷ್ಟು ತೆರಿಗೆ, ಶುಲ್ಕ ತೆರಬೇಕು?
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Horoscope: ಉದ್ಯೋಗ,ವ್ಯವಹಾರ ಎರಡರಲ್ಲೂ ಯಶಸ್ಸು,ಅನಾದರದ ಮಾತುಗಳಿಗೆ ಪ್ರತಿಕ್ರಿಯೆ ತೋರದಿರಿ
Kasaragod: ಯೂತ್ ಕಾಂಗ್ರೆಸ್ ಕಾರ್ಯಕರ್ತರಿಬ್ಬರ ಕೊಲೆ; ಇಂದು ಶಿಕ್ಷೆ ಪ್ರಮಾಣ ಘೋಷಣೆ
Karnataka Govt.,: ಹೊಸ ಗೋಶಾಲೆ ಇಲ್ಲ, ಇರುವುದಕ್ಕೆ ಬಲ
Kerala: ಅಂಗಿ ತೆಗೆದು ದೇಗುಲ ಪ್ರವೇಶ ಪದ್ಧತಿಗೆ ಕೊಕ್?
ರಾಜ್ಯದಲ್ಲಿ ಶೇ. 27 ಪ್ರೌಢಶಾಲಾ ಶಿಕ್ಷಕ ಹುದ್ದೆ ಖಾಲಿ! ಕಲ್ಯಾಣ ಕರ್ನಾಟಕದಲ್ಲಿಯೇ ಹೆಚ್ಚು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.