![BR-Hills](https://www.udayavani.com/wp-content/uploads/2025/02/BR-Hills-415x249.jpg)
![BR-Hills](https://www.udayavani.com/wp-content/uploads/2025/02/BR-Hills-415x249.jpg)
Team Udayavani, Sep 25, 2020, 6:32 AM IST
ಸಾಂದರ್ಭಿಕ ಚಿತ್ರವನ್ನು ಬಳಸಲಾಗಿದೆ – Representative Image Used
ಬೆಂಗಳೂರು: ರಾಜ್ಯ ಸರಕಾರದ ಭೂ ಸುಧಾರಣೆ ತಿದ್ದುಪಡಿ ಮಸೂದೆ ಹಾಗೂ ಕೇಂದ್ರ ಸರಕಾರದ ಕೃಷಿ ಮತ್ತು ಕಾರ್ಮಿಕ ಸಂಬಂಧಿತ ಕಾಯ್ದೆ ವಿರೋಧಿಸಿ ಶುಕ್ರವಾರ ರೈತ ಸಂಘಟನೆಗಳು ರಾಜ್ಯಾ ದ್ಯಂತ ಹೆದ್ದಾರಿ ತಡೆ, ಪ್ರತಿಭಟನೆ ನಡೆಸಲಿವೆ.
ಈಗಾಗಲೇ ಸೋಮವಾರ ಬಂದ್ ಆಚರಣೆಗೆ ಅಖಿಲ ಭಾರತ ಕಿಸಾನ್ ಸಂಘರ್ಷ ಸಮಿತಿ ಕರೆ ನೀಡಿದೆ. ಆದ್ದರಿಂದ ಶುಕ್ರವಾರ ಹೆದ್ದಾರಿ ಬಂದ್ ಆಚರಿಸುವುದಿಲ್ಲ ಎಂದು ರಾಜ್ಯ ರೈತ ಸಂಘ ಮತ್ತು ಹಸುರು ಸೇನೆ ಮುಖಂಡರು ಹೇಳಿದ್ದಾರೆ.
ಹೆದ್ದಾರಿ ತಡೆ ಮಾಡಿಯೇ ಸಿದ್ಧ
ಶುಕ್ರವಾರ ರಾಷ್ಟ್ರಮಟ್ಟದಲ್ಲಿ ಭಾರತ್ ಬಂದ್ ನಡೆಯುವುದರಿಂದ ರಾಜ್ಯದಲ್ಲಿ ಹೆದ್ದಾರಿ ಬಂದ್ ಮಾಡುತ್ತೇವೆ. ಈ ಬಂದ್‌ಗೆ ಮಹಾದಾಯಿ ನೀರು ಹೋರಾಟ ಸಮಿತಿ ಸೇರಿ ಕೆಲವು ರೈತ ಸಂಘಟನೆಗಳು ಬೆಂಬಲ ನೀಡಿವೆ. ರಾಜ್ಯದ 25 ಜಿಲ್ಲೆಗಳಲ್ಲಿ ಈ ಬಂದ್ ನಡೆಯಲಿದೆ. ಬೆಂಗಳೂರಿನ ಮೈಸೂರು ಬ್ಯಾಂಕ್ ಸೇರಿದಂತೆ ವಿವಿಧೆಡೆ ಪ್ರತಿಭಟನೆ ನಡೆಯಲಿದೆ.
– ಕುರುಬೂರು ಶಾಂತಕುಮಾರ್, ಕಬ್ಬು ಬೆಳೆಗಾರರ ಸಂಘದ ರಾಜ್ಯಾಧ್ಯಕ್ಷ
ಹೆದ್ದಾರಿ ಬಂದ್ ಇಲ್ಲ
ಸೋಮವಾರ ಕರ್ನಾಟಕ ಬಂದ್‌ಗೆ ಕರೆ ನೀಡಲಾಗಿದೆ. ಹೀಗಾಗಿ ಹೆದ್ದಾರಿ ಬಂದ್ ಮಾಡುವ ನಿರ್ಧಾರದಿಂದ ಹಿಂದೆ ಸರಿದಿದ್ದೇವೆ. ಎರಡು ದಿನ ಬಂದ್ ಮಾಡುವುದರಿಂದ ಜನರಿಗೆ ಸಮಸ್ಯೆ ಆಗಲಿದೆ. ಆದರೆ ರೈತ ಸಂಘಟನೆಗಳು ಮೈಸೂರು ಬ್ಯಾಂಕ್ ವೃತ್ತದಲ್ಲಿ ಹಮ್ಮಿಕೊಂಡಿರುವ ಪ್ರತಿಭಟನೆಯಲ್ಲಿ ಭಾಗವಹಿಸುತ್ತೇವೆ. ಪ್ರಧಾನಿ ನರೇಂದ್ರ ಮೋದಿ ಅವರು ಕಾರ್ಪೊರೆಟ್ ಗಳಿಗೆ ಅನುಕೂಲ ಮಾಡಿಕೊಡಲು ಮುಂದಾಗಿದ್ದಾರೆ.
– ಕೋಡಿಹಳ್ಳಿ ಚಂದ್ರಶೇಖರ, ರೈತ ಮುಖಂಡ
Restriction: ನಿಷೇಧವಿದ್ದರೂ ಗೂಡ್ಸ್ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!
Jagadish Shettar: ಯಾವಾಗ ಬೇಕಾದರೂ ಸರ್ಕಾರ ಪತನ: ಶೆಟ್ಟರ್
Politics: ಸಿದ್ದರಾಮಯ್ಯ 5 ವರ್ಷವೂ ಸಿಎಂ: ಕೊತ್ತೂರು ಮಂಜುನಾಥ್
Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್
Mahakumbh; ಸಿದ್ದರಾಮಯ್ಯನವರೇ 5 ವರ್ಷ ಸಿಎಂ ಆಗಿರಲಿ: ಅಭಿಮಾನಿಯ ಪ್ರಾರ್ಥನೆ
You seem to have an Ad Blocker on.
To continue reading, please turn it off or whitelist Udayavani.