ಮಹದಾಯಿಗಾಗಿ ಉಪವಾಸ ಸತ್ಯಾಗ್ರಹ ಶುರು
Team Udayavani, Jul 29, 2017, 8:40 AM IST
ನವಲಗುಂದ: ಪೊಲೀಸರಿಂದ ದೌರ್ಜನ್ಯಕ್ಕೊಳಗಾದ ರೈತರಿಗೆ ಪರಿಹಾರ, ಮಹದಾಯಿ ಯೋಜನೆ ಜಾರಿ, ವಿವಿಧ ಬೇಡಿಕೆ ಈಡೇರಿಕೆಗೆ ಆಗ್ರಹಿಸಿ ಪಕ್ಷಾತೀತ ಹೋರಾಟ ಸಮಿತಿ ಅಧ್ಯಕ್ಷ ಲೋಕನಾಥ ಹೆಬಸೂರು ಮತ್ತು ನಿವೃತ್ತ ಶಿಕ್ಷಕ ಡಿ.ವಿ.ಕುರಹಟ್ಟಿ ಅವರು ಪಟ್ಟಣದಲ್ಲಿ ಶುಕ್ರವಾರದಿಂದ ಆಮರಣ ಉಪವಾಸ ಸತ್ಯಾಗ್ರಹ ಆರಂಭಿಸಿದ್ದಾರೆ. ಈ ವೇಳೆ ಲೋಕನಾಥ ಹೆಬಸೂರ ಮಾತನಾಡಿ, ತಾಲೂಕನ್ನು ಬರಪೀಡಿತ ಪ್ರದೇಶವೆಂದು ಘೋಷಿಸಿ ರೈತರಿಗೆ ವಿಶೇಷ ಪ್ಯಾಕೇಜ್ ಘೋಷಣೆ ಮಾಡಬೇಕು ಹಾಗೂ ಮಹದಾಯಿ ಯೋಜನೆ ಜಾರಿ ಕುರಿತು ಸರ್ಕಾರಗಳು ಸ್ಪಷ್ಟ ನಿಲುವು ತಾಳುವವರೆಗೂ ಉಪವಾಸ ಸತ್ಯಾಗ್ರಹ ನಿಲ್ಲಿಸುವುದಿಲ್ಲ ಎಂದರು.
ಲೋಕನಾಥ ಹೆಬಸೂರ (55) ಹಾಗೂ ಡಿ.ಬಿ.ಕುರಹಟ್ಟಿ (77) ಮಧುಮೇಹ, ರಕ್ತದೊತ್ತಡದಿಂದ ಬಳಲುತ್ತಿದ್ದಾರೆ.
ಇವರ ಆರೋಗ್ಯದಲ್ಲಿ ಏರುಪೇರಾದರೆ ಸರ್ಕಾರವೇ ಹೊಣೆ ಎಂದು ರೈತ ಹೋರಾಟಗಾರರು ಎಚ್ಚರಿಸಿದ್ದಾರೆ.
ಬಿಂದಿಗೆ ಮೆರವಣಿಗೆ: ಇದೇ ವೇಳೆ, ಉಪವಾಸ ಸತ್ಯಾಗ್ರಹ ಬೆಂಬಲಿಸಿ ಪಟ್ಟಣದ ಮಂಜುನಾಥ ನಗರದ ನಿವಾಸಿ
ಮೈಲಾರಪ್ಪ ವೈದ್ಯ ಎಂಬುವರು ಸುಮಾರು 1 ಕಿ.ಮೀ. ವರೆಗೆ ಕಣ್ಣಿಗೆ ಬಟ್ಟೆ ಕಟ್ಟಿಕೊಂಡು ಎರಡು ಬಿಂದಿಗೆಯನ್ನು
ಹೊತ್ತು ಪಾದಯಾತ್ರೆ ನಡೆಸಿದರು. ನಂತರ ಬಿಂದಿಗೆ ನೀರನ್ನು ರೈತ ಹುತಾತ್ಮ ಬಸಪ್ಪ ಲಕ್ಕುಂಡಿ ವೀರಗಲ್ಲಿಗೆ ಅಭಿಷೇಕ ಮಾಡಿ ಉಪವಾಸ ಸತ್ಯಾಗ್ರಹಕ್ಕೆ ಬೆಂಬಲ ಸೂಚಿಸಿದರು. ಈ ಮಧ್ಯೆ, ಪûಾತೀತ ಹೋರಾಟ ಸಮಿತಿ ರೈತ ಹೋರಾಟಗಾರರು ಶನಿವಾರ ಅರೆಬೆತ್ತಲೆ ಪ್ರತಿಭಟನಾ ಮೆರವಣಿಗೆ ಹಮ್ಮಿಕೊಂಡಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
ರಾಜ್ಯ ಸರಕಾರಿ ನೌಕರರ ಸಂಘ ಅಧ್ಯಕ್ಷ ಷಡಾಕ್ಷರಿ ಮರು ಆಯ್ಕೆ
Belgavi; ಹೆರಿಗೆ ಬಳಿಕ ಮತ್ತೋರ್ವ ಬಾಣಂತಿ ಸಾವು
Havyaka Sammelana; ಅಡಿಕೆ ಬೆಳೆಗಾರರ ಹಿತ ರಕ್ಷಣೆಗೆ ಕೇಂದ್ರ ಬದ್ಧ: ಸಚಿವ ಜೋಶಿ
Udupi; ಗೀತಾರ್ಥ ಚಿಂತನೆ 138 : ಅಭಿಮಾನತ್ಯಾಗವೇ ಮೋಕ್ಷದ ಮೊದಲ ಮೆಟ್ಟಿಲು
Manmohan Singh ಅಂತ್ಯಕ್ರಿಯೆ ಸ್ಮಾರಕ ನಿರ್ಮಿಸಬಹುದಾದ ಸ್ಥಳದಲ್ಲಿ ನಡೆಸಲು ಖರ್ಗೆ ಮನವಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.