ಕಾಂಗ್ರೆಸ್ಗೆ ಆಪರೇಷನ್ ಕಮಲ ಭೀತಿ;ಎಚ್ಚೆತ್ತುಕೊಂಡ ಹೈಕಮಾಂಡ್
Team Udayavani, Dec 4, 2018, 3:24 PM IST
ಬೆಂಗಳೂರು: ಆಪರೇಷನ್ ಕಮಲ ನಡೆಸುವ ಕುರಿತಾಗಿ ಆಡಿಯೋವೊಂದು ಬಹಿರಂಗವಾದ ಬೆನ್ನಲ್ಲೇ ಕಾಂಗ್ರೆಸ್ ಹೈಕಮಾಂಡ್ ಎಚ್ಚೆತ್ತುಕೊಂಡಿದ್ದು,ರಾಜ್ಯ ಕಾಂಗ್ರೆಸ್ ನಾಯಕರಿಗೆ ಶಾಸಕರ ಬಗ್ಗೆ ಎಚ್ಚರಿಕೆಯಿಂದಿರಲು ಸೂಚನೆ ನೀಡಿರುವುದಾಗಿ ವರದಿಯಾಗಿದೆ.
ಯಾವುದೇ ಕಾರಣಕ್ಕೂ ಮೈತ್ರಿ ಸರ್ಕಾರಕ್ಕೆ ಧಕ್ಕೆಯಾಗದಂತೆ ಪರಿಸ್ಥಿತಿಯನ್ನು ನಿಭಾಯಿಸಬೇಕು ಎಂದು ಹೈಕಮಾಂಡ್ ಸೂಚನೆ ನೀಡಿದೆ ಎಂದು ತಿಳಿದು ಬಂದಿದೆ.
ನಾಳೆ ಬುಧವಾರ ರಾಜ್ಯ ಕಾಂಗ್ರೆಸ್ ಉಸ್ತುವಾರಿ ಕೆ.ಸಿ.ವೇಣುಗೋಪಾಲ್ ನೇತೃತ್ವದಲ್ಲಿ ಹಿರಿಯ ಕಾಂಗ್ರೆಸ್ ನಾಯಕರ ಸಭೆ ನಡೆಸಲಾಗುತ್ತಿದೆ ಎಂದು ಮಾಹಿತಿ ಲಭ್ಯವಾಗಿದೆ. ಸಂಪುಟ ವಿಸ್ತರಣೆ ಕುರಿತಾಗಿಯೂ ಮಹತ್ವದ ನಿರ್ಣಯ ಸಭೆಯಲ್ಲಿ ಕೈಗೊಳ್ಳುವ ಸಾಧ್ಯತೆಗಳಿವೆ.
ದೂರಿಗೆ ಚಿಂತನೆ
ಶಾಸಕ ಶ್ರೀರಾಮುಲು ಆಪ್ತ ಸಹಾಯಕ ದುಬೈ ಮೂಲದ ಉದ್ಯಮಿ ಜತೆ ನ.27 ರಂದು ಮೊಬೈಲ್ ಮೂಲಕ ಮಾತುಕತೆ ನಡೆಸಿದ್ದಾರೆ ಎನ್ನಲಾದ ಆಡಿಯೋ ವಿರುದ್ದ ದೂರು ನೀಡಲು ಕೆಪಿಸಿಸಿ ನಿರ್ಧರಿಸಿದ್ದು, ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡೂರಾವ್ ಅವರು ಇಂದೇ ದೂರು ದಾಖಲಿಸುವುದಾಗಿ ದಿನೇಶ್ ಗುಂಡು ರಾವ್ ಹೇಳಿದ್ದಾರೆ.
ವಿಧಾನಪರಿಷತ್ ಸದಸ್ಯ ರಿಜ್ವಾನ್ ಅರ್ಷದ್ ಅವರಿಗೆ ದಾಖಲೆಗಳನ್ನು ಸಂಗ್ರಹಿಸಲು ಸೂಚನೆ ನೀಡಿದ್ದಾರೆ ಎಂದು ವರದಿಯಾಗಿದೆ.
ಆಡಿಯೋದ ಸಿಡಿ ಸಮೇತ ಸೈಬರ್ ಕ್ರೈಂಗೆ ದೂರು ನೀಡಲು ಸಿದ್ದತೆ ನಡೆಸಲಾಗಿದೆ ಎಂದು ವರದಿಯಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Criminal case; ಏಕಕಾಲಕ್ಕೆ ಪಾಲಿಕೆ, ಮುಡಾದಲ್ಲಿ ಕೆಲಸ: ನೌಕರ ವಜಾ
CID ನೂತನ ಡಿಐಜಿಪಿ ಆಗಿ ಶಾಂತನು ಸಿನ್ಹಾ
Guarantee schemes; ಸಿದ್ದರಾಮಯ್ಯ ವಿರುದ್ಧದ ಅರ್ಜಿ: ವಿಚಾರಣೆ ಡಿ. 6ಕ್ಕೆ ಮುಂದೂಡಿಕೆ
Congress: ಸರ್ಕಾರದಲ್ಲಿ ಒಬ್ಬರು ಏತಿ ಅಂದರೆ ಮತ್ತೊಬ್ಬರು ಪ್ರೇತಿ ಅಂತಾರೆ: ಆರ್.ಅಶೋಕ್
50 cr for 50 Cong MLAs ; ಎಸ್ ಐಟಿ ತನಿಖೆಗೆ ಎಚ್.ಡಿ.ಕುಮಾರಸ್ವಾಮಿ ಒತ್ತಾಯ
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.