ಸಾಹಿತ್ಯ ಸಮ್ಮೇಳನ ಅಧ್ಯಕ್ಷತೆಗೆ ಮಹಿಳಾ ಸಾಹಿತಿಗಳ ಕಹಳೆ
Team Udayavani, Sep 21, 2017, 7:40 AM IST
ಬೆಂಗಳೂರು: ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ನವೆಂಬರ್‌ನಲ್ಲಿ ನಡೆಯಲಿರುವ 83ನೇ ಅಖೀಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದ ಅಧ್ಯಕ್ಷರನ್ನಾಗಿ ಮಹಿಳಾ ಸಾಹಿತಿಯೊಬ್ಬರನ್ನು ಆಯ್ಕೆ ಮಾಡಬೇಕೆಂಬ ಕೂಗು ಮಹಿಳಾ ಸಾಹಿತ್ಯ ವಲಯದಲ್ಲಿ ಬಲವಾಗಿ ಕೇಳಿಬಂದಿದೆ.
ಇಲ್ಲಿಯವರೆಗೆ ನಡೆದ ಅಖೀಲ ಭಾರತ ಸಾಹಿತ್ಯ ಸಮ್ಮೇಳನದಲ್ಲಿ ಹೆಚ್ಚಾಗಿ ಪುರುಷ ಸಾಹಿತಿಗಳನ್ನೇ ಅಧ್ಯಕ್ಷರನ್ನಾಗಿ ಆಯ್ಕೆ ಮಾಡಲಾಗುತ್ತಿದೆ. ಸಾಕಷ್ಟು ಅರ್ಹ ಮಹಿಳಾ ಸಾಹಿತಿಗಳಿದ್ದರೂ ಸಮ್ಮೇಳನಾಧ್ಯಕ್ಷರನ್ನಾಗಿ ಆಯ್ಕೆ ಮಾಡುವಲ್ಲಿ ಮಹಿಳಾ ಸಾಹಿತಿಗಳನ್ನು ಕಡೆಗಣಿಸುತ್ತಿರುವುದರ ವಿರುದ್ಧ ಮಹಿಳಾ ಲೇಖಕಿ ಯರು ಮತ್ತು ಬರಹಗಾರರಲ್ಲಿ ಅಸಮಾಧಾನ ವ್ಯಕ್ತವಾಗುತ್ತಿದೆ. ಇಲ್ಲಿಯವರೆಗೆ ರಾಜ್ಯದಲ್ಲಿ ನಡೆದ 82 ಅಖೀಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದಲ್ಲಿ ಕೇವಲ 4 ಬಾರಿ ಮಹಿಳಾ ಸಾಹಿತಿಗಳನ್ನು ಸಮ್ಮೇಳನಾಧ್ಯಕ್ಷರಾಗಿ ಆಯ್ಕೆ ಮಾಡಲಾಗಿದೆ. ಮಂಡ್ಯದಲ್ಲಿ 1948ರಲ್ಲಿ ನಡೆದ 48ನೇ ಸಾಹಿತ್ಯ ಸಮ್ಮೇಳನಾಧ್ಯಕ್ಷರಾಗಿ ಜಯದೇವಿ ತಾಯಿ ಲಿಗಾಡೆ, 2000ರಲ್ಲಿ ಬಾಗಲಕೋಟೆಯಲ್ಲಿ ನಡೆದ 68ನೇ ಸಮ್ಮೇಳನಾಧ್ಯಕ್ಷರಾಗಿ ಶಾಂತಾದೇವಿ ಮಾಳವಾಡ, 2003ರಲ್ಲಿ ಮೂಡಬಿದಿರೆಯಲ್ಲಿ ನಡೆದ 70ನೇ ಸಾಹಿತ್ಯ ಸಮ್ಮೇಳನದಲ್ಲಿ ಕಮಲಾ ಹಂಪನಾ ಮತ್ತು 2010ರಲ್ಲಿ ಗದಗದಲ್ಲಿ ನಡೆದ 76ನೇ ಕನ್ನಡ ಸಾಹಿತ್ಯ ಸಮ್ಮೇಳನಾಧ್ಯಕ್ಷರಾಗಿ ಗೀತಾ ನಾಗಭೂಷಣ ಆಯ್ಕೆಯಾಗಿದ್ದರು.
ಮಹಿಳೆಯರ ನಿರ್ಲಕ್ಷ್ಯ: 78 ಸಾಹಿತ್ಯ ಸಮ್ಮೇಳನಗಳಲ್ಲಿ ಪುರುಷ ಸಾಹಿತಿಗಳನ್ನೇ ಆಯ್ಕೆ ಮಾಡಿರುವುದು ಮಹಿಳಾ ಬರಹಗಾರರನ್ನು ನಿರ್ಲಕ್ಷಿಸಿರುವುದಕ್ಕೆ ಸ್ಪಷ್ಟ ಉದಾಹರಣೆ. ಮಹಿಳಾ ಸಾಹಿತಿಗಳು ಪುರುಷರಿಗೆ ಸರಿಸಮಾನವಾಗಿ ಬರೆದಿಲ್ಲ ಎನ್ನುವುದನ್ನು ಒಪ್ಪಿಕೊಳ್ಳುತ್ತೇನೆ. ಅದಕ್ಕೆ ಕಾರಣವೂ ಇದೆ. ಆದರೆ, ಇತ್ತೀಚಿನ ದಶಕಗಳಲ್ಲಿ ವಿವಿಧ ಸಾಹಿತ್ಯ ಪ್ರಕಾರಗಳಲ್ಲಿ ಯಾರಿಗೂ ಕಡಿಮೆ ಇಲ್ಲದಂತೆ ಬರೆದ ಹಲವಾರು ಲೇಖಕಿಯರು ನಮ್ಮಲ್ಲಿದ್ದಾರೆ ಎನ್ನುತ್ತಾರೆ ಮಾಜಿ ಸಚಿವರೂ ಆಗಿರುವ ಸಾಹಿತಿ ಟಿ.ಲಲಿತಾನಾಯಕ್.
ರಿಯಾಯಿತಿ ನೀಡಿ ಸಮ್ಮೇಳನಾಧ್ಯಕ್ಷರಾಗುವ ಅರ್ಹತೆ ಇದ್ದರೂ ಕೂಡ ವಂಚಿತರಾಗಿ ಇಹಲೋಕ ತ್ಯಜಿಸಿದ ಅನೇಕ ಲೇಖಕಿಯರು ಇದ್ದಾರೆ. ಆದ್ದರಿಂದ ರಾಶಿಗಟ್ಟಲೆ ಕೃತಿಗಳನ್ನು ಬರೆಯಬೇಕು, ವಯಸ್ಸಾಗಿರಬೇಕು ಎಂಬಿತ್ಯಾದಿ ನಿಯಮಗಳನ್ನು ಬದಿಗೊತ್ತಿ ಅತ್ಯುತ್ತಮವಾದ ಸಮಾಜಮುಖೀ ಕೃತಿಗಳನ್ನು ಬರೆದು ಪ್ರಜ್ಞಾವಂತ ಸಮಾಜ ನಿರ್ಮಾಣಕ್ಕೆ ಸ್ಪಂದಿಸಿದ ಮಹಿಳಾ ಸಾಹಿತಿಗಳಿಗೆ ಅವಕಾಶ ನೀಡಬೇಕು ಎಂಬುದು ಅನೇಕ ಮಹಿಳಾ ಲೇಖಕಿಯರ ಒಕ್ಕೊರಲಿನ ಮನವಿಯಾಗಿದೆ.
ಕರ್ನಾಟಕ ಲೇಖಕಿಯರ ಸಂಘ ಈಗಾಗಲೇ ಕನ್ನಡ ಸಾಹಿತ್ಯ ಪರಿಷತ್ ರಾಜ್ಯಾಧ್ಯಕ್ಷರಿಗೆ ಈ ಕುರಿತು ಪತ್ರ ಬರೆದಿದ್ದು, 83ನೇ ಸಾಹಿತ್ಯ ಸಮ್ಮೇಳನಕ್ಕೆ ಅಧ್ಯಕ್ಷರನ್ನಾಗಿ ಮಹಿಳೆಯನ್ನೇ ಆಯ್ಕೆ ಮಾಡಬೇಕು. ಈ ಮೂಲಕ ಸಾಮಾಜಿಕ ನ್ಯಾಯಕ್ಕೆ ಆದ್ಯತೆ ನೀಡಬೇಕು ಎಂದು ಮನವಿ ಮಾಡಿದೆ. ಸಾ.ರಾ.ಅಬೂಬಕರ್, ವೈದೇಹಿ, ವೀಣಾ ಶಾಂತೇಶ್ವರ, ಬಿ.ಟಿ.ಲಲಿತನಾಯಕ್ ಅವರಲ್ಲಿ ಯಾರನ್ನಾದರೂ ಒಬ್ಬರನ್ನು 83ನೇ ಸಾಹಿತ್ಯ ಸಮ್ಮೇಳನದ ಅಧ್ಯಕ್ಷರನ್ನಾಗಿ ಮಾಡುವಂತೆ ಮನವಿ ಮಾಡಿದೆ. ಸಮ್ಮೇಳನಾಧ್ಯಕ್ಷರ ಆಯ್ಕೆ ಸಂಬಂಧ ಅಕ್ಟೋಬರ್‌ನಲ್ಲಿ ಕಸಾಪ ಅಧ್ಯಕ್ಷ ಡಾ.ಮನುಬಳಿಗಾರ್ ನೇತೃತ್ವದಲ್ಲಿ ಕಾರ್ಯಕಾರಿ ಸಮಿತಿ ಸಭೆ ನಡೆಯಲಿದೆ.
83ನೇ ಸಮ್ಮೇಳನಾಧ್ಯಕ್ಷರು ಯಾರು ಎಂಬುದು ಆ ನಂತರವೇ ಗೊತ್ತಾಗಲಿದೆ.
ಸೆ.25ರಂದು ಮಂಗಳೂರಿನಲ್ಲಿ ಕಾರ್ಯಕಾರಿ ಸಮಿತಿ ಆಂತರಿಕ ಸಭೆ ನಡೆಯಲಿದೆ. ಅಲ್ಲಿಯೂ ಕೂಡ 83ನೇ ಸಮ್ಮೇಳನಾ ಧ್ಯಕ್ಷರನ್ನಾಗಿ ಮಹಿಳಾ ಸಾಹಿತಿಯೊಬ್ಬರನ್ನು ಆಯ್ಕೆ ಮಾಡುವಂತೆ ಮನವಿ ಮಾಡುತ್ತೇವೆ.
ಡಾ.ವಸುಂಧರಾ ಭೂಪತಿ, ಪುಸ್ತಕ ಪ್ರಾಧಿಕಾರದ ಅಧ್ಯಕ್ಷೆ
ಸಂಪತ್ ತರೀಕೆರೆ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Vijayapura: ಜಿಲ್ಲಾಸ್ಪತ್ರೆಯಲ್ಲಿ ಒಂದು ವರ್ಷದ ಮಗು ಅಪಹರಣ: ಸಿಸಿಟಿವಿಯಲ್ಲಿ ದೃಶ್ಯ
Lakkundi: ಹೊಸದಾಗಿ 5 ಬಾವಿ, 5 ಶಾಸನಗಳು, ಸಾವಿರಕ್ಕೂ ಹೆಚ್ಚು ಶಿಲ್ಪಕಲೆಗಳ ಅನ್ವೇಷಣೆ
JDS ರಾಮನಗರದಿಂದಲೂ ಔಟ್: ‘ಮೈತ್ರಿ’ಗೂ ಲಾಭ ತಂದು ಕೊಡದ ದಳ
Vikram Gowda Case: ವಿಕ್ರಂ ಗೌಡ ಎನ್‌ಕೌಂಟರ್; ತನಿಖೆ ಚುರುಕು
Karnataka Congress; ‘ಭ್ರಷ್ಟ’ಆರೋಪ ಮಧ್ಯೆ ವಿಪಕ್ಷಗಳಿಗೆ ಮರ್ಮಾಘಾತ
MUST WATCH
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|
ಹೊಸ ಸೇರ್ಪಡೆ
Rishabh Pant: ಅಪಘಾತದ ವೇಳೆ ನೆರವಾದವರಿಗೆ ಗಿಫ್ಟ್ ನೀಡಿದ ರಿಷಭ್ ಪಂತ್
Prabhutva movie review: ಪ್ರಗತಿ ಪಥದಲ್ಲಿ ಕ್ರಾಂತಿಯ ಕಿಡಿ
BBK11: ಇವತ್ತು ಬಿಗ್‌ಬಾಸ್ ಮನೆಯಿಂದ ಆಚೆ ಬರುವುದು ಇವರೇ ನೋಡಿ
Vijayapura: ಜಿಲ್ಲಾಸ್ಪತ್ರೆಯಲ್ಲಿ ಒಂದು ವರ್ಷದ ಮಗು ಅಪಹರಣ: ಸಿಸಿಟಿವಿಯಲ್ಲಿ ದೃಶ್ಯ
Kundgol: ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದು ಬೈಕ್; ಸವಾರರು ಕಣ್ಮರೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.