ವಿಚ್ಛಿದ್ರಕಾರಿ ಶಕ್ತಿಗಳ ವಿರುದ್ಧ ಹೋರಾಡಿ


Team Udayavani, Nov 20, 2017, 10:30 AM IST

20-7.jpg

ಬೆಂಗಳೂರು: “ಸಮಾಜದ ವಿಚ್ಛಿದ್ರಕಾರಿ ಶಕ್ತಿಗಳ ವಿರುದ್ಧ ಹೋರಾಡುವುದೇ ದೇಶದ ಏಕತೆ, ಸಮಗ್ರತೆ, ಭಾವೈಕ್ಯತೆಗಾಗಿ ಪ್ರಾಣತೆತ್ತ ಮಾಜಿ ಪ್ರಧಾನಿ ಇಂದಿರಾ ಗಾಂಧಿಯವರಿಗೆ ನೀಡುವ ಗೌರವ’ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು.

ಭಾನುವಾರ ಪ್ರದೇಶ ಕಾಂಗ್ರೆಸ್‌ ಕಚೇರಿಯಲ್ಲಿ ಆಯೋ ಜಿಸಿದ್ದ ಇಂದಿರಾಗಾಂಧಿ ಯವರ ಜನ್ಮ ಶತಮಾನೋತ್ಸವದಲ್ಲಿ ಪಾಲ್ಗೊಂಡು ಮಾತನಾಡಿದ ಅವರು, “ಇಂದಿರಾ ಗಾಂಧಿಯವರು ದೇಶದಲ್ಲಿ ಬ್ಯಾಂಕ್‌ಗಳ ರಾಷ್ಟ್ರೀ ಕರಣ ಮಾಡಿ ಬಡವರಿಗೆ ಬ್ಯಾಂಕ್‌ ಬಾಗಿಲು ತೆರೆದರೆ ಪ್ರಧಾನಿ ಮೋದಿಯವರು ನೋಟ್‌ಬ್ಯಾನ್‌ ಮಾಡಿ ಬಡವರಿಗೆ ಬ್ಯಾಂಕ್‌ ಬಾಗಿಲು ಮುಚ್ಚಿದರು’ ಎಂದು ಹೇಳಿದರು.

ಜ.1ಕ್ಕೆ 500 ಇಂದಿರಾ ಕ್ಯಾಂಟೀನ್‌: ಹಸಿವು ಮುಕ್ತ ಕಾರ್ಯಕ್ರಮದಡಿ ಜನವರಿ 1ರಿಂದ ರಾಜ್ಯಾದ್ಯಂತ 500 ಇಂದಿರಾ ಕ್ಯಾಂಟೀನ್‌ ಆರಂಭಿಸಲಿದ್ದೇವೆ. ಮೊದಲ ಹಂತದಲ್ಲಿ 200, ಬಳಿಕ 300 ಕ್ಯಾಂಟೀನ್‌ ತೆರೆಯಲಿದ್ದೇವೆ ಎಂದು ಹೇಳಿದರು. ಬಿಜೆಪಿಯ ವಿಚಾರ ಕಾಂಗ್ರೆಸ್‌ ಮುಕ್ತ ಕರ್ನಾಟಕ. ಕಾಂಗ್ರೆಸ್‌ ಪಕ್ಷದ ಬದ್ಧತೆ ಹಸಿವು ಮುಕ್ತ ಕರ್ನಾಟಕ. ಬಿಜೆಪಿ ಅಧಿಕಾರಕ್ಕೆ ಬರಲು ಹವಣಿಸುತ್ತಿದ್ದು,
ಕೋಮುಗಲಭೆ ಸೃಷ್ಟಿಸಲು ಇನ್ನಿಲ್ಲದ ಪ್ರಯತ್ನ ಮಾಡುತ್ತಿ¨ªಾರೆ. ಕಾಂಗ್ರೆಸ್‌ ಕಾರ್ಯಕರ್ತರು ಎಚ್ಚರಿಕೆಯಿಂದ ಇರಬೇಕು. ಮಾಜಿ ಪ್ರಧಾನಿಗಳಾದ ನೆಹರೂ, ಇಂದಿರಾ ಗಾಂಧಿ, ರಾಜೀವ್‌ಗಾಂಧಿ ದೇಶಕ್ಕಾಗಿ ತ್ಯಾಗ ಮಾಡಿ¨ªಾರೆ. ತ್ಯಾಗ, ಬಲಿದಾನದ ಶ್ರೇಷ್ಠತೆ ಕಾಂಗ್ರೆಸ್‌ ಪಕ್ಷಕ್ಕಿದೆ ಎಂದು ವಿವರಿಸಿದರು. ಸಂಸದ ಡಾ.ಎಂ.ವೀರಪ್ಪ ಮೊಯ್ಲಿ, ಕೆಪಿಸಿಸಿ ಕಾರ್ಯಾಧ್ಯಕ್ಷ ಎಸ್‌.ಆರ್‌.ಪಾಟೀಲ್‌ ಮೊದ ಲಾ ದವರು ಉಪಸ್ಥಿತರಿದ್ದರು.

ಸಿಎಂ ಗುಣಗಾನ ಮಾಡಿದ ಪರಂ, ಜಾಫ‌ರ್‌ ಶರೀಫ್
ಕೆಪಿಸಿಸಿ ಕಚೇರಿಯಲ್ಲಿ ಆಯೋಜಿಸಲಾಗಿದ್ದ ಸಮಾರಂಭದಲ್ಲಿ ಡಾ.ಜಿ.ಪರಮೇಶ್ವರ್‌ ಹಾಗೂ ಮಾಜಿ ಕೇಂದ್ರ ಸಚಿವ ಸಿ.ಕೆ. ಜಾಪರ್‌ ಶರೀಫ್ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಗುಣಗಾನ ಮಾಡಿದರು. “ಇಂದಿರಾ ಗಾಂಧಿಯವರ ರೋಟಿ, ಕಪಡಾ ಔರ್‌ ಮಕಾನ್‌ ಆಲೋಚನೆಯಡಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಸರ್ಕಾರ ನಡೆಯುತ್ತಿದೆ. ಇಂದಿರಾ ಗಾಂಧಿಯವರ ಹಸಿವು ಮುಕ್ತ ಭಾರತದ ಕನಸನ್ನು ಮುಖ್ಯಮಂತ್ರಿ ನನಸು ಮಾಡುತ್ತಿದ್ದಾರೆ. ಸದನದಲ್ಲಿ ವಿಪಕ್ಷಗಳಿಗೆ ಉತ್ತರಸುತ್ತಾ, ಸದನ ಹೊರಗೆ ಪಕ್ಷದ ಕಾರ್ಯಗಳನ್ನು ನಡೆಸುವಲ್ಲಿ ಸಿಎಂ ಬಿಜಿಯಾಗಿದ್ದಾರೆ. ಚುನಾವಣೆ ಹತ್ತಿರ ಬಂದಂತೆ ಇನ್ನಷ್ಟು ಚುರುಕಾಗಿ¨ªಾರೆ’ ಎಂದು ಸಿದ್ದರಾಮಯ್ಯ ಅವರನ್ನು ಪರಮೇಶ್ವರ್‌  ಬಣ್ಣಿಸಿದರು.ಮಾಜಿ ಕೇಂದ್ರ ಸಚಿವ ಸಿ.ಕೆ.ಜಾಫ‌ರ್‌ ಶರೀಫ್ ಮಾತನಾಡಿ, ಸೇಡಿನ ರಾಜಕಾರಣ ಮಾಡುವುದನ್ನು  ಬಿಡಬೇಕು.ಅನಗತ್ಯವಾಗಿ ಬಿಜೆಪಿಯವರು ಕಾಂಗ್ರೆಸ್‌ ವಿರುದ್ಧ ಆರೋಪ ಮಾಡುವುದನ್ನು ನಿಲ್ಲಿಸಬೇಕು ಎಂದು ತಿಳಿಸಿ ಪ್ರಧಾನಿ ಮೋದಿ ವಿರುದ್ಧ ವಾಗ್ಧಾಳಿ ನಡೆಸಿದರು. ತಮ್ಮ ಭಾಷಣದಲ್ಲಿ ಸಿಎಂ ಸಿದ್ಧರಾಮಯ್ಯ ಅವರನ್ನು ಹಾಡಿ ಹೊಗಳಿದ ಜಾಫ‌ರ್‌, ಸಿದ್ದರಾಮಯ್ಯ ಅವರು ರಾಜ್ಯದಲ್ಲಿ ಉತ್ತಮ ಕೆಲಸಗಳನ್ನು ಮಾಡುತ್ತಿದ್ದಾರೆ. ಇದರ ಪರಿಣಾಮ ಕಾಂಗ್ರೆಸ್‌ ಕರ್ನಾಟಕದಲ್ಲಿ ಮತ್ತೆ ಅಧಿಕಾರಕ್ಕೆ ಬರುವುದು ಖಚಿತ. ಎಲ್ಲರೂ ಒಟ್ಟಿಗೆ ಕೆಲಸ ಮಾಡಿದರೆ ಯಾವುದೂ ಕಷ್ಟವಲ್ಲವೆಂದು ತಿಳಿಸಿದರು. 

ಟಾಪ್ ನ್ಯೂಸ್

Anmol Buffalo: The price of this Buffalo weighing 1500 kg is Rs 23 crore!

Anmol Buffalo:1500 ಕೆಜಿ ತೂಗುವ ಈ ಕೋಣದ ಬೆಲೆ ಬರೋಬ್ಬರಿ 23 ಕೋಟಿ ರೂ!

13-BBK-11

BBK11: ಅಸಲಿ ಆಟ ಶುರು ಮಾಡಿದ ಧನರಾಜ್: ಮೋಕ್ಷಿತಾಳಿಗೆ ಅಹಂಕಾರ ಇದೆ ಎಂದ ಸೈಲೆಂಟ್ ಕಿಲಾಡಿ

Digital Arrest ಹೆಸರಿನಲ್ಲಿ ನಿವೃತ್ತ ಇಂಜಿನಿಯರ್‌ ಗೆ 10 ಕೋಟಿ ರೂಪಾಯಿ ಪಂಗನಾಮ!

Digital Arrest ಹೆಸರಿನಲ್ಲಿ ನಿವೃತ್ತ ಇಂಜಿನಿಯರ್‌ ಗೆ 10 ಕೋಟಿ ರೂಪಾಯಿ ಪಂಗನಾಮ!

12-gundya

Subramanya: ಗುಂಡ್ಯದಲ್ಲಿ ಮಂಗಳೂರು- ಬೆಂಗಳೂರು ಹೆದ್ದಾರಿ ತಡೆ ನಡೆಸಿದ ಪ್ರತಿಭಟನಾಕಾರರು

ಲಾರೆನ್ಸ್ ಬಿಷ್ಣೋಯ್ ಹಿಟ್ ಲಿಸ್ಟ್‌ನಲ್ಲಿ ಶ್ರದ್ಧಾ ವಾಲ್ಕರ್ ಹತ್ಯೆ ಆರೋಪಿ: ಮೂಲಗಳು

Mumbai: ಲಾರೆನ್ಸ್ ಬಿಷ್ಣೋಯ್ ಹಿಟ್ ಲಿಸ್ಟ್‌ನಲ್ಲಿ ಶ್ರದ್ಧಾ ವಾಕರ್ ಹತ್ಯೆ ಆರೋಪಿ: ವರದಿ

Kiwi player will be away from Test cricket after the England series

Test: ಇಂಗ್ಲೆಂಡ್‌ ಸರಣಿಯ ಬಳಿಕ ಟೆಸ್ಟ್‌ ಕ್ರಿಕೆಟ್‌ ನಿಂದ ದೂರವಾಗಲಿದ್ದಾರೆ ಕಿವೀಸ್‌ ಆಟಗಾರ

Shimoga; Congress – Statement against Muslims: Sumoto case against KS Eshwarappa

Shimoga; ಕಾಂಗ್ರೆಸ್-ಮುಸ್ಲಿಮರ ವಿರುದ್ದ ಹೇಳಿಕೆ: ಈಶ್ವರಪ್ಪ ವಿರುದ್ದ ಸುಮೋಟೋ ಪ್ರಕರಣ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Shimoga; Congress – Statement against Muslims: Sumoto case against KS Eshwarappa

Shimoga; ಕಾಂಗ್ರೆಸ್-ಮುಸ್ಲಿಮರ ವಿರುದ್ದ ಹೇಳಿಕೆ: ಈಶ್ವರಪ್ಪ ವಿರುದ್ದ ಸುಮೋಟೋ ಪ್ರಕರಣ

10-thirthahalli

Thirthahalli: ಶಾಸಕ ಸ್ಥಾನವನ್ನು ಗಿರವಿ ಇಟ್ಟರಾ ಆರಗ ಜ್ಞಾನೇಂದ್ರ ?

9-munirathna

Bengaluru: ಮುನಿರತ್ನ ವಿರುದ್ಧ ಹನಿಟ್ರ್ಯಾಪ್‌ ಕೇಸ್‌: ಪಿಐ ಸೆರೆ

7-r-ashok

Bengaluru: ಇ-ಖಾತಾ ಗೊಂದಲದಿಂದ ಲಂಚಕ್ಕೆ ದಾರಿ: ಆರ್‌. ಅಶೋಕ್‌

Shimoga; Deport Zameer Ahmed: ​​MLA Channabasappa

Shimoga; ಜಮೀರ್‌ ಅವರನ್ನು ಗಡಿಪಾರು ಮಾಡಿ: ಶಾಸಕ ಚನ್ನಬಸಪ್ಪ

MUST WATCH

udayavani youtube

ಕಾರಿನ ಟಯರ್ ಒಳಗಿತ್ತು ಬರೋಬ್ಬರಿ 50 ಲಕ್ಷ

udayavani youtube

ಹೊಸ ತಂತ್ರಜ್ಞಾನಕ್ಕೆ ತೆರೆದುಕೊಂಡ ತುಳುನಾಡ ಕಂಬಳ

udayavani youtube

ಉಡುಪಿಯ ಶ್ರೀ ಕೃಷ್ಣ ಮಠದಲ್ಲಿ ಕಾರ್ತಿಕ ಲಕ್ಷದೀಪೋತ್ಸವ

udayavani youtube

ಪುಂಗನೂರು ತಳಿಯ ಹಾಲು ಯಾವೆಲ್ಲ ಕಾಯಿಲೆಗಳನ್ನು ಗುಣಪಡಿಸುತ್ತದೆ ?

udayavani youtube

ಪುಸ್ತಕ ನೋಡುವುದಿಲ್ಲ, ಗುರುವಿಲ್ಲ ಆದರೂ ಕಲೆ ತಾನಾಗಿಯೇ ಒಲಿದು ಬಂತು

ಹೊಸ ಸೇರ್ಪಡೆ

15-bng

Bengaluru: ವೈದ್ಯೆಗೆ ಲೈಂಗಿಕ ಕಿರುಕುಳ: ಪಿಎಸ್‌ಐ ವಿರುದ್ದ ಪೊಲೀಸ್‌ ಆಯುಕ್ತರಿಗೆ ದೂರು

14-bng

Bengaluru: ಆತ್ಮಹತ್ಯೆಗೆ ಯತ್ನಿಸಿದ ವ್ಯಕ್ತಿಯ ಜೀವ ಉಳಿಸಿದ ಸಂಚಾರ ಪೊಲೀಸರು

Anmol Buffalo: The price of this Buffalo weighing 1500 kg is Rs 23 crore!

Anmol Buffalo:1500 ಕೆಜಿ ತೂಗುವ ಈ ಕೋಣದ ಬೆಲೆ ಬರೋಬ್ಬರಿ 23 ಕೋಟಿ ರೂ!

13-BBK-11

BBK11: ಅಸಲಿ ಆಟ ಶುರು ಮಾಡಿದ ಧನರಾಜ್: ಮೋಕ್ಷಿತಾಳಿಗೆ ಅಹಂಕಾರ ಇದೆ ಎಂದ ಸೈಲೆಂಟ್ ಕಿಲಾಡಿ

Digital Arrest ಹೆಸರಿನಲ್ಲಿ ನಿವೃತ್ತ ಇಂಜಿನಿಯರ್‌ ಗೆ 10 ಕೋಟಿ ರೂಪಾಯಿ ಪಂಗನಾಮ!

Digital Arrest ಹೆಸರಿನಲ್ಲಿ ನಿವೃತ್ತ ಇಂಜಿನಿಯರ್‌ ಗೆ 10 ಕೋಟಿ ರೂಪಾಯಿ ಪಂಗನಾಮ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.