ಹೊಡೆದಾಟ,ಸರಕಾರದಿಂದಲೇ ತನಿಖೆಯಾಗಲಿ’: ಕೆ.ಎಸ್. ಈಶ್ವರಪ್ಪ
Team Udayavani, Jan 24, 2019, 1:33 AM IST
ಶಿವಮೊಗ್ಗ: ರೆಸಾರ್ಟ್‌ನಲ್ಲಿ ಶಾಸಕರ ಹೊಡೆದಾಟ, ರಾಜ್ಯದಲ್ಲಿ ಶೋಕಾಚರಣೆ ವೇಳೆ ಸಚಿವ ಪ್ರಿಯಾಂಕ್ ಖರ್ಗೆಯವರು ಕಾರ್ಯಕ್ರಮ ವೊಂದರಲ್ಲಿ ಪಾಲ್ಗೊಂಡಿದ್ದು, ಇವೆಲ್ಲ ಕಾಂಗ್ರೆಸ್ ಸಂಸ್ಕೃತಿಗೆ ಸಾಕ್ಷಿ ಎಂದು ಬಿಜೆಪಿ ಹಿರಿಯ ನಾಯಕ ಕೆ.ಎಸ್. ಈಶ್ವರಪ್ಪ ಟೀಕಿಸಿದರು.
ಬುಧವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಈಗಲ್ಟನ್ ರೆಸಾರ್ಟ್‌ನಲ್ಲಿ ನಡೆದ ಶಾಸಕರ ಗಲಾಟೆ ಪ್ರಕರಣದ ತನಿಖೆಯನ್ನು ಸರ್ಕಾರವೇ ಮಾಡಬೇಕು. ಈ ಬಗ್ಗೆ ಕಾಂಗ್ರೆಸ್ ಪಕ್ಷದವರೇ ತನಿಖೆ ಮಾಡಿದ್ರೆ ಏನಾಗು ತ್ತದೆ? ಬರೀ ಎಫ್‌ಐಆರ್ ಹಾಕಿದ್ರೆ ಏನೂ ಪ್ರಯೋಜನವಿಲ್ಲ. ಕೊಲೆ ಮಾಡೋಕೆ ಏನೇನು ಮಾಡಬಹುದೋ ಅಷ್ಟನ್ನೂ ಮಾಡಿದ್ದಾರೆ. ಆದರೆ ಕೊಲೆ ಮಾಡಿಲ್ಲ ಅಷ್ಟೆ. ಶಾಸಕ ಆನಂದ್ ಸಿಂಗ್ ಇನ್ನೂ ಆಸ್ಪತ್ರೆಯಲ್ಲಿ ಚೇತರಿಸಿಕೊಳ್ಳುತ್ತಿದ್ದಾರೆ. ಅಲ್ಲದೆ ಆಸ್ಪತ್ರೆ ಯಿಂದ ಹೊರ ಬರೋಕೆ ಹೆದರುತ್ತಿದ್ದಾರೆ. ಕಾಂಗ್ರೆಸ್‌ನವರಿಗೆ ನಾಚಿಕೆಯಾಗಬೇಕು. ಸಾಧ್ಯವಾದರೆ ಸಿದ್ದರಾಮಯ್ಯ ಸಮನ್ವಯ ಸಮಿತಿ ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನೀಡಬೇಕು. ಪ್ರಕರಣದ ತನಿಖೆ ಮಾತ್ರ ಸರಕಾರದಿಂದಲೇ ನಡೆಸಬೇಕು ಎಂದು ಈಶ್ವರಪ್ಪ ಆಗ್ರಹಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Karnataka Govt.: ಅನರ್ಹ “ಬಿಪಿಎಲ್’ ಕತ್ತರಿಗೆ ಸಿಎಂ ಸಿದ್ದರಾಮಯ್ಯ ಸೂಚನೆ
ಗುತ್ತಿಗೆಯಡಿ ತುರ್ತು ಚಿಕಿತ್ಸಾ ವೈದ್ಯರ ನೇಮಕಕ್ಕೆ ಆರೋಗ್ಯ ಇಲಾಖೆ ಸೂಚನೆ
“ಕಾಂಗ್ರೆಸ್‌ನಲ್ಲಿ ದಲಿತ ಸಚಿವರಿಗೆ ಊಟದ ಸ್ವಾತಂತ್ರ್ಯವೂ ಇಲ್ಲ’
BJP: ಭಿನ್ನರನ್ನು ನಿಯಂತ್ರಿಸದಿದ್ದರೆ ಕಷ್ಟ: ಎಸ್.ಟಿ. ಸೋಮಶೇಖರ್
Karnataka: ಸರಕಾರ ಉತ್ತರಿಸಬೇಕಾದ ಪ್ರಶ್ನೆಗಳಿವೆ: ಬಿ.ಎಲ್. ಸಂತೋಷ್
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.