ಮಹದಾಯಿ ಹೋರಾಟಗಾರರ ಅರೆಬೆತ್ತಲೆ ಮೆರವಣಿಗೆ
Team Udayavani, Mar 7, 2017, 3:45 AM IST
ನರಗುಂದ:ಜೀವ ಜಲಕ್ಕಾಗಿ ಸುದೀರ್ಘ ಹೋರಾಟ ನಡೆಸಿರುವ ರೈತರು ಹಾಗೂ ಮಹದಾಯಿ ಹೋರಾಟಗಾರರು 600ನೇ ದಿನ ರಾಜ್ಯ, ಕೇಂದ್ರ ಸರ್ಕಾರಗಳ ವಿರುದ್ಧ ಸಿಡಿದೆದ್ದು, ಅರೆಬೆತ್ತಲೆ ಮೆರವಣಿಗೆ ನಡೆಸಿ ಗಂಭೀರ ಎಚ್ಚರಿಕೆ ನೀಡಿದರು.
ಸೋಮವಾರ 600ನೇ ದಿನದ ಹೋರಾಟ ಅಂಗವಾಗಿ ಕರೆ ನೀಡಿದ್ದ ನರಗುಂದ ಬಂದ್ ಪ್ರಯುಕ್ತ ಪಟ್ಟಣ ದಂಡಾಪುರ
ಬಡಾವಣೆ ಉಡಚಾ ಪರಮೇಶ್ವರಿ ದೇವಸ್ಥಾನ ಆವರಣದಿಂದ ಬೃಹತ್ ಪ್ರತಿಭಟನಾ ಮೆರವಣಿಗೆ ನಡೆಯಿತು.
ಪ್ರತಿಭಟನಾಕಾರರು ಅರೆಬೆತ್ತಲೆಯಾಗಿ ಸಾಗಿ, ರೈತನ ಸ್ಥಿತಿಗತಿಯನ್ನು ಬಿಚ್ಚಿಟ್ಟರು. ಸಾರ್ವಜನಿಕರೂ ಹೋರಾಟಕ್ಕೆ
ಕೈಜೋಡಿಸಿದ್ದರು. ಕರಡಿ ಮಜಲು ವಾದ್ಯ ಮೇಳದೊಂದಿಗೆ ಹೊರಟ ಮೆರವಣಿಗೆ ಪಟ್ಟಣದ ಪ್ರಮುಖ ಬೀದಿಯಲ್ಲಿ ಸಂಚರಿಸಿತು. ಹೆದ್ದಾರಿಯ ಶಿವಾಜಿ ವೃತ್ತದಲ್ಲಿ ಧರಣಿ ನಡೆಸಿದ ರೈತರು, ಸರ್ಕಾರದ ವಿರುದ್ಧ ಘೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸಿದರು.
2016 ಅ. 17ರಂದು ಹೋರಾಟಕ್ಕೆ ಜೀವನ ಮೀಸಲಿಟ್ಟು ಸನ್ಯಾಸ ದೀಕ್ಷೆ ಸ್ವೀಕರಿಸಿರುವ ರೈತ ಸೇನಾ ಕರ್ನಾಟಕ
ರಾಜ್ಯಾಧ್ಯಕ್ಷ ವೀರೇಶ ಸೊಬರದಮಠ ಸ್ವಾಮೀಜಿ, ಉಪಾಧ್ಯಕ್ಷ ಶಂಕರಪ್ಪ ಅಂಬಲಿ, ರೈತ ಸಂಘ ತಾಲೂಕು ಅಧ್ಯಕ್ಷ ಬಸವರಾಜ ಸಾಬಳೆ ಮತ್ತಿತರರು ಪಾಲ್ಗೊಂಡಿದ್ದರು.
ರಂಗಭೂಮಿ ಕಲಾವಿದೆ ಸುಮತಿ ಶ್ರೀ ನವಲಿ ಹಿರೇಮಠ ನೇತೃತ್ವದಲ್ಲಿ ಮಹಿಳೆಯರೂ ಮೆರವಣಿಗೆಯಲ್ಲಿ ಪಾಲ್ಗೊಂಡಿದ್ದರು. ರೈತರು ಹೆಗಲ ಮೇಲಿದ್ದ ಟವೆಲ್ ಬೀಸಿ, ರೈತರ ಶಕ್ತಿ ಪ್ರದರ್ಶಿಸಿದರು.
ನರಗುಂದ ಬಂದ್: ನರಗುಂದ ಪಟ್ಟಣದ ಬಹುತೇಕ ವ್ಯಾಪಾರಸ್ಥರು ಅಂಗಡಿ ಮುಂಗಟ್ಟು ಬಂದ್ ಮಾಡಿ ಹೋರಾಟಕ್ಕೆ
ಕೈಜೋಡಿಸಿದರು. ಕೆಲವು ಶಾಲೆಗಳಿಗೆ ರಜೆ ಘೋಷಿಸಲಾಗಿತ್ತು. ಮಧ್ಯಾಹ್ನದ ವೇಳೆಗೆ ಸಾರಿಗೆ ಬಸ್ ಸಂಚಾರ ಸ್ಥಗಿತ
ಮಾಡಲಾಗಿತ್ತು. ಒಟ್ಟಾರೆ ನರಗುಂದ ಬಂದ್ ಶಾಂತಿಯುತವಾಗಿ ನಡೆಯಿತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bidar; ಖರ್ಗೆ ಆಪ್ತನಿಂದ ವಂಚನೆ, ಕೊಲೆ ಬೆದರಿಕೆ; ಪತ್ರ ಬರೆದಿಟ್ಟು ಗುತ್ತಿಗೆದಾರ ಆತ್ಮಹತ್ಯೆ
Belagavi: ಪಿಒಕೆ ಬಗ್ಗೆ ಕಾಂಗ್ರೆಸ್ ನಿಲುವಿನ ಬಗ್ಗೆ ಮತ್ತೆ ಹೇಳಬೇಕಿಲ್ಲ: ಡಿಕೆ ಶಿವಕುಮಾರ್
Belagavi;ಕಾಂಗ್ರೆಸ್ ಕಾರ್ಯಕಾರಿಸಭೆಯಲ್ಲಿ ಖರ್ಗೆ,ರಾಹುಲ್ ಭಾಗಿ; ಸೋನಿಯಾ,ಪ್ರಿಯಾಂಕಾ ಗೈರು
Belagavi: ನಕಲಿ ಗಾಂಧಿಗಳನ್ನು ಮೆಚ್ಚಿಸಲು ಕನ್ನಡಿಗರ ತೆರಿಗೆ ಹಣ ಪೋಲು: ಜಗದೀಶ್ ಶೆಟ್ಟರ್
Shimoga: ಕೊಡಚಾದ್ರಿ ಸಮೀಪ ಟಿಟಿ- ಜೀಪ್ ಮುಖಾಮುಖಿ ಡಿಕ್ಕಿ: ಎಂಟು ಜನರಿಗೆ ಗಾಯ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Bidar; ಖರ್ಗೆ ಆಪ್ತನಿಂದ ವಂಚನೆ, ಕೊಲೆ ಬೆದರಿಕೆ; ಪತ್ರ ಬರೆದಿಟ್ಟು ಗುತ್ತಿಗೆದಾರ ಆತ್ಮಹತ್ಯೆ
Ullala: ಗ್ಯಾಸ್ ಸಿಲಿಂಡರ್ ಸ್ಫೋ*ಟ ಪ್ರಕರಣ: ಸಾವಿನ ಸಂಖ್ಯೆ 2ಕ್ಕೆ ಏರಿಕೆ
Actress: ರೊಮ್ಯಾನ್ಸ್ ಮಾಡಿಕೊಂಡು ಇರುತ್ತೇನೆ ಮದುವೆ ಆಗೋದೆ ಇಲ್ಲ ಎಂದ ನಟಿ ಶ್ರುತಿ ಹಾಸನ್
Nyamathi: ಕಾಡುಪ್ರಾಣಿಗಳಿಗೆ ಇರಿಸಿದ್ದ 32 ನಾಡ ಬಾಂಬ್ ಗಳು ಪತ್ತೆ
INDvAUS: ಬ್ಯಾನ್ ತಪ್ಪಿಸಿಕೊಂಡ ವಿರಾಟ್ ಕೊಹ್ಲಿ; ಆದರೂ ಶಿಕ್ಷೆ ತಪ್ಪಲಿಲ್ಲ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.