ಮಾನನಷ್ಟ ಕೇಸ್ ಹಾಕಲಿ, ನೋಡ್ಕೊಳ್ತೇನೆ; ಬಿಎಸ್‌ವೈಗೆ ಸಿಎಂ ಸವಾಲು
Team Udayavani, Sep 6, 2018, 3:48 PM IST
ರಾಮನಗರ : ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿ ಯೂರಪ್ಪ ಪುತ್ರ ವಿಜಯೇಂದ್ರ ಆದಾಯ ತೆರಿಗೆ ಇಲಾಖೆಯ ಮುಖ್ಯ ಆಯುಕ್ತರನ್ನು ಭೇಟಿ ಮಾಡಿದ್ದಾರೆ ಎಂಬ ವಿಚಾರದಲ್ಲಿ ಆರೋಪ- ಪ್ರತ್ಯಾರೋಪಗಳು ಮುಂದುವರಿದ್ದಿದ್ದು , ಮಾನನಷ್ಟ ಮೊಕದ್ದಮೆ ಹಾಕಿದರೆ ನೋಡಿಕೊಳ್ಳುತ್ತೇನೆ ಎಂದು ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಬುಧವಾರ ಸವಾಲು ಹಾಕಿದ್ದಾರೆ.
ಕುಮಾರಸ್ವಾಮಿ ಅವರ ಆರೋಪದ ವಿರುದ್ದ ಕಿಡಿ ಕಾರಿರುವ ಯಡಿಯೂರಪ್ಪ ಅವರು ಹೇಳಿಕೆಯ ಕುರಿತು ಸಿಎಂ ಕ್ಷಮೆ ಕೇಳಬೇಕು. ಇಲ್ಲವಾದಲ್ಲಿ ಮಾನನಷ್ಟ ಮೊಕದ್ದಮೆ ದಾಖಲಿಸಲು ಚಿಂತನೆ ನಡೆಸಿರುವುದಾಗಿ ಎಚ್ಚರಿಕೆ ನೀಡಿದ್ದರು.ಮಾತ್ರವಲ್ಲದೆ ಅಧಿಕಾರಿಯನ್ನು ಭೇಟಿಯಾಗಿರುವುದನ್ನು ಸಾಬೀತು ಪಡಿಸಿದರೆ ರಾಜಕೀಯ ನಿವೃತ್ತಿ ಪಡೆಯುವುದಾಗಿ ಹೇಳಿದ್ದರು.
ರಾಮನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಸಿಎಂ ಏನು ನಷ್ಟವಾಗಿದೆ ? ಅದನ್ನು ಹಾಕಿಕೊಳ್ಳಲಿ.ಯಾವ ನಷ್ಟ ಬೇಕಾದರೂ ಹಾಕಿಕೊಳ್ಳಲಿ. ನಾನು ಆ ಬಳಿಕ ಮಾತನಾಡುತ್ತೇನೆ ಎಂದಿದ್ದಾರೆ.
ಅವರು ಐಟಿ ಅಧಿಕಾರಿಗಳನ್ನು ಬಳಸಿಕೊಂಡಿರುವುದಲ್ಲಿ ಸಂಶಯ ಇದೆಯಾ? ನಾನು ಕದ್ದು ಹೋಗುವುದಿಲ್ಲ, ಪಲಾಯನ ಮಾಡುವುದಿಲ್ಲ ಎಂದು ತಿರುಗೇಟು ನೀಡಿದ್ದಾರೆ.
ಈಗಾಗಲೇ ಯಾವುದೇ ರಾಜಕೀಯ ನಾಯಕರ ಕುಟುಂಬ ಸದಸ್ಯರು ನಮ್ಮ ಇಲಾಖೆಯ ಮುಖ್ಯ ಆಯುಕ್ತರನ್ನು ಭೇಟಿಯಾಗಿಲ್ಲ ಎಂದು ಆದಾಯ ತೆರಿಗೆ ಇಲಾಖೆ ತಿಳಿಸಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bidar: ಭಾರತದಿಂದಲೇ ವಕ್ಫ್ ತೊಲಗಿಸಬೇಕು: ಯತ್ನಾಳ್
ಮಕ್ಕಳನ್ನು ಶಾಲೆಗೆ ಸೇರಿಸೋದು ಮುಖ್ಯವಲ್ಲ, ನಿತ್ಯವೂ ಕಳುಹಿಸಿ… :ಸಚಿವ ಮಧು ಬಂಗಾರಪ್ಪ
Protest: ಡಿ.10 ರಂದು ಸುವರ್ಣಸೌಧಕ್ಕೆ 5 ಸಾವಿರ ಟ್ರ್ಯಾಕ್ಟರ್ ಮುತ್ತಿಗೆ; ಕೂಡಲಸಂಗಮ ಶ್ರೀ
Dandeli: ಬೇಡರ ಶಿರಗೂರಿನ ರೈತರ ಗದ್ದೆಗಳಲ್ಲಿ ಮತ್ತೆ ಕಾಣಿಕೊಂಡ ಕಾಡಾನೆಗಳು
Nalatawad: ವಿದ್ಯುತ್ ಶಾಕ್‌ನಿಂದ ಮೃತಪಟ್ಟ ಕೋತಿಗೆ ಸ್ಥಳೀಯ ನಿವಾಸಿಗಳಿಂದ ಅಂತ್ಯಸಂಸ್ಕಾರ
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
Maharashtra: ಕಾಂಗ್ರೆಸ್ ಗೆ ಕೇವಲ 16 ಸ್ಥಾನ; ಕೈ ಅಧ್ಯಕ್ಷ ಸ್ಥಾನಕ್ಕೆ ಪಟೋಲೆ ರಾಜೀನಾಮೆ
Politics: ಫಡ್ನವೀಸ್ ಗೆ ಬೆಂಬಲ ನೀಡಿದ ಅಜಿತ್; ಮಹಾರಾಷ್ಟ್ರದಲ್ಲಿ ಮುಗಿಯದ ಸಿಎಂ ತಿಕ್ಕಾಟ
Video: ನೋಟಿನ ಮಾಲೆಯ ನೋಟು ಎಗರಿಸಿದ ಕಳ್ಳ… ಮದುವೆ ಬಿಟ್ಟು ಕಳ್ಳನ ಹಿಂದೆ ಓಡಿದ ವರ
Sudeep: ʼಮ್ಯಾಕ್ಸ್ʼ ರಿಲೀಸ್ ದಿನ ಫಿಕ್ಸ್: ಕಿಚ್ಚನ ಸಿಟ್ಟಿಗೆ ಎಚ್ಚೆತ್ತ ನಿರ್ಮಾಣ ಸಂಸ್ಥೆ
Bidar: ಭಾರತದಿಂದಲೇ ವಕ್ಫ್ ತೊಲಗಿಸಬೇಕು: ಯತ್ನಾಳ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.