ಕನಿಷ್ಠ ಕಾಲಮಿತಿಯಲ್ಲಿ ಪೊಲೀಸ್ ಹುದ್ದೆಗಳ ಭರ್ತಿ: ಹೈಕೋರ್ಟ್ ತಾಕೀತು
Team Udayavani, Nov 18, 2021, 11:00 PM IST
ಬೆಂಗಳೂರು: ರಾಜ್ಯದಲ್ಲಿ ಖಾಲಿ ಇರುವ ಪೊಲೀಸ್ ಹುದ್ದೆಗಳನ್ನು ಯಾವ ಕನಿಷ್ಠ ಕಾಲಮಿತಿಯೊಳಗೆ ಭರ್ತಿ ಮಾಡಲಾಗುವುದು ಎಂಬ ಬಗ್ಗೆ ಸ್ಪಷ್ಟವಾದ ಪ್ರಮಾಣಪತ್ರ ಸಲ್ಲಿಸುವಂತೆ ರಾಜ್ಯ ಸರ್ಕಾರಕ್ಕೆ ಹೈಕೋರ್ಟ್ ತಾಕೀತು ಮಾಡಿದೆ.
ಪೊಲೀಸ್ ಇಲಾಖೆಯಲ್ಲಿ ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡುವ ಸಂಬಂಧ ಸರ್ಕಾರಕ್ಕೆ ಅಗತ್ಯ ನಿರ್ದೇಶನಗಳನ್ನು ನೀಡಲು ಹೈಕೋರ್ಟ್ ಸ್ವಯಂಪ್ರೇರಿತವಾಗಿ ದಾಖಲಿಸಿಕೊಂಡಿರುವ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ಮುಖ್ಯ ನ್ಯಾಯಮೂರ್ತಿ ರಿತುರಾಜ್ ಅವಸ್ಥಿ ಅವರ ನೇತೃತ್ವದ ವಿಭಾಗೀಯ ನ್ಯಾಯಪೀಠ ಗುರುವಾರ ವಿಚಾರಣೆ ನಡೆಸಿತು.
ವಿಚಾರಣೆ ವೇಳೆ ಸರ್ಕಾರದ ಪರ ವಕೀಲರು ವಾದ ಮಂಡಿಸಿ, ಒಟ್ಟು 16 ಸಾವಿರ ಖಾಲಿ ಹುದ್ದೆಗಳ ಪೈಕಿ ಶೇ.80ರಷ್ಟು ಹುದ್ದೆಗಳ ಭರ್ತಿಗೆ ಕ್ರಮ ಕೈಗೊಳ್ಳಲಾಗಿದೆ. ಪ್ರಸ್ತುತ 1,142 ಪೊಲೀಸ್ ಇನ್ಸ್‌ಪೆಕ್ಟರ್ ಹಾಗೂ 4,460 ಪೊಲೀಸ್ ಕಾನ್ಸ್‌ಟೇಬಲ್ ಹುದ್ದೆಗಳು ಭರ್ತಿ ಮಾಡಬೇಕಿದ್ದು, 2022ರ ಜುಲೈ ವೇಳೆಗೆ ನೇಮಕಾತಿ ಪ್ರಕ್ರಿಯೆ ಪೂರ್ಣಗೊಳಿಸಲಾಗುವುದು. ಇದಕ್ಕಾಗಿ ಕಾಲಾವಕಾಶ ನೀಡಬೇಕು ಎಂದು ಕೋರಿದರು.
ಇದಕ್ಕೆ ಆಕ್ಷೇಪ ವ್ಯಕ್ತಪಡಿಸಿದ ನ್ಯಾಯಪೀಠ, ಖಾಲಿ ಪೊಲೀಸ್ ಹುದ್ದೆಗಳ ಭರ್ತಿಗೆ 2019ರಲ್ಲಿ ಸರ್ಕಾರ ಮೂರು ತಿಂಗಳು ಕಾಲಾವಕಾಶ ಪಡೆದುಕೊಂಡಿತ್ತು. ಎರಡು ವರ್ಷ ಕಳೆದಿದೆ. ನೇಮಕಾತಿ ಪೂರ್ಣಗೊಂಡಿಲ್ಲ. ಈಗ ಮತ್ತೇ 8ತಿಂಗಳು ಕಾಲಾವಕಾಶ ಕೇಳುತ್ತಿದೆ. ಇದು ಸರ್ಕಾರ ಕಾರ್ಯವೈಖರಿ ತೋರಿಸುತ್ತದೆ. ಇಷ್ಟೊಂದು ಕಾಲಾವಕಾಶ ನೀಡಲು ಸಾಧ್ಯವಿಲ್ಲ. ಎಷ್ಟು ಕನಿಷ್ಟ ಕಾಲಮಿತಿಯೊಳಗೆ ಖಾಲಿ ಹುದ್ದೆಗಳನ್ನು ಭರ್ತಿ ಮಾಡಲಾಗುವುದು ಎಂದು ಸ್ಪಷ್ಟವಾದ ಪ್ರಮಾಣಪತ್ರ ಸಲ್ಲಿಸುವಂತೆ ನಿರ್ದೇಶಿಸಿ ವಿಚಾರಣೆ ಮುಂದೂಡಿತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಸುಮ್ನೆ ಬ್ಯಾಂಡೇಜ್ ಹಾಕಿಕೊಳ್ಳಲು ಯಾರಿಗೂ ತಲೆ ಕೆಟ್ಟಿಲ್ಲ: ಸಿ.ಟಿ.ರವಿ ಪತ್ನಿ ಪಲ್ಲವಿ
ಬಿಜೆಪಿ, ಕಾಂಗ್ರೆಸ್‌ಗೆ ಪ್ರತ್ಯೇಕ ಕಾನೂನಿಲ್ಲ, ನನ್ನ ದೂರಿಗೆ ಕ್ರಮವಿಲ್ಲವೇಕೆ?: ಸಿ.ಟಿ.ರವಿ
Shimoga; ನಿತ್ಯ ಸುದ್ದಿಯಲ್ಲಿರಬೇಕೆಂದು ಸಿ.ಟಿ ರವಿ ʼಆʼ ಹೇಳಿಕೆ ನೀಡಿದ್ದಾರೆ: ಆಯನೂರು
Tragedy: ಆನೆ ತುಳಿದು ಮಾವುತನ ಸಹಾಯಕ ಮೃತ್ಯು… ಮುಗಿಲು ಮುಟ್ಟಿದ ಕುಟುಂಬಸ್ಥರ ಆಕ್ರಂದನ
Sirsi: ಅರಣ್ಯವಾಸಿಗಳ 50,000 ಕ್ಕೂ ಮಿಕ್ಕಿ ಜಿ.ಪಿ.ಎಸ್ ನಕಾಶೆ ಅತಂತ್ರ: ರವಿಂದ್ರ ನಾಯ್ಕ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
ಸುಮ್ನೆ ಬ್ಯಾಂಡೇಜ್ ಹಾಕಿಕೊಳ್ಳಲು ಯಾರಿಗೂ ತಲೆ ಕೆಟ್ಟಿಲ್ಲ: ಸಿ.ಟಿ.ರವಿ ಪತ್ನಿ ಪಲ್ಲವಿ
ಬಿಜೆಪಿ, ಕಾಂಗ್ರೆಸ್‌ಗೆ ಪ್ರತ್ಯೇಕ ಕಾನೂನಿಲ್ಲ, ನನ್ನ ದೂರಿಗೆ ಕ್ರಮವಿಲ್ಲವೇಕೆ?: ಸಿ.ಟಿ.ರವಿ
Ankola; ಕಾರು ಢಿಕ್ಕಿ: ಪಾದಚಾರಿ ಮೃತ್ಯು; ಮೂವರಿಗೆ ಗಾಯ
Road Mishap: ಬೈಕ್- ಬಸ್ ಡಿಕ್ಕಿ; 8 ವರ್ಷದ ವಿದ್ಯಾರ್ಥಿನಿ ಸಾವು
Missing Case ಶಿರ್ವ: ವ್ಯಕ್ತಿ ನಾಪತ್ತೆ; ಪ್ರಕರಣ ದಾಖಲು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.