Karnataka ನಿಗಮ, ಮಂಡಳಿ ನೇಮಕಕ್ಕೆ ಫೈನಲ್‌ ಟಚ್‌; ಸಿಎಂ, ಡಿಸಿಎಂ ಜತೆ ಇಂದು ಸುರ್ಜೇವಾಲ ಸಭೆ

ಅಂದಾಜು ಐವತ್ತು ಮಂದಿಗೆ ಅಧಿಕಾರ ಭಾಗ್ಯ?

Team Udayavani, Nov 28, 2023, 6:45 AM IST

ನಿಗಮ, ಮಂಡಳಿ ನೇಮಕಕ್ಕೆ ಫೈನಲ್‌ ಟಚ್‌; ಸಿಎಂ, ಡಿಸಿಎಂ ಜತೆ ಇಂದು ಸುರ್ಜೇವಾಲ ಸಭೆ

ಬೆಂಗಳೂರು: ನಿಗಮ, ಮಂಡಳಿಗಳಿಗೆ ಅಧ್ಯಕ್ಷ, ಉಪಾಧ್ಯಕ್ಷ ಹಾಗೂ ಸದಸ್ಯರನ್ನು ನೇಮಿಸುವ ಸಂಬಂಧ ಆರಂಭಿಸಿರುವ ಪ್ರಕ್ರಿಯೆಗಳಿಗೆ ಬಹುತೇಕ ಮಂಗಳವಾರ ಅಂತಿಮ ಸ್ಪರ್ಶ ಸಿಗುವ ಸಾಧ್ಯತೆಗಳಿವೆ.

ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್‌ ಹಾಗೂ ರಾಜ್ಯದಲ್ಲಿ ಪಕ್ಷದ ಉಸ್ತುವಾರಿ ನೋಡಿಕೊಳ್ಳುತ್ತಿರುವ ಎಐಸಿಸಿ ಪ್ರಧಾನ ಕಾರ್ಯದರ್ಶಿ ರಣದೀಪ್‌ ಸಿಂಗ್‌ ಸುರ್ಜೇವಾಲ ನಡುವೆ ಮಂಗಳವಾರ ಅಪರಾಹ್ನ 2 ಗಂಟೆಗೆ ನಿಗದಿಯಾಗಿರುವ ಸಭೆಯಲ್ಲಿ ನಿಗಮ, ಮಂಡಳಿಗಳ ನೇಮಕದ ಪಟ್ಟಿಗೆ ಒಮ್ಮತ ಮೂಡಿದರೆ ಸರಿಸುಮಾರು ಐವತ್ತು ಮಂದಿಗೆ ಅಧಿಕಾರದ ಭಾಗ್ಯ ಸಿಗುವುದು ಖಚಿತವಾಗಲಿದೆ.

ಇತ್ತೀಚೆಗಷ್ಟೇ ಬೆಂಗಳೂರಿಗೆ ಆಗಮಿಸಿದ್ದ ಸುರ್ಜೇವಾಲ ಅವರು ಮುಖ್ಯಮಂತ್ರಿ, ಉಪಮುಖ್ಯಮಂತ್ರಿ, ಗೃಹ ಸಚಿವ ಕೆ.ಜೆ. ಜಾರ್ಜ್‌ ಅವರೊಂದಿಗೆ ಸಭೆ ನಡೆಸಿ ನ. 28ರಂದು ಮತ್ತೆ ಬರುವುದಾಗಿ ಹೇಳಿದ್ದರು. ಅದರಂತೆ ಮಂಗಳವಾರ ಬೆಳಗ್ಗೆ ಹೊಸದಿಲ್ಲಿಯಿಂದ ಹೊರಟು ಮಧ್ಯಾಹ್ನ 12.30ಕ್ಕೆ ಬೆಂಗಳೂರಿಗೆ ಆಗಮಿಸಲಿದ್ದಾರೆ. 2 ಗಂಟೆಗೆ ಸಭೆ ನಿಗದಿಯಾಗಿದೆ. ಈ ಸಭೆಯ ಮೊದಲ ಅಜೆಂಡಾವೇ ನಿಗಮ, ಮಂಡಳಿಗಳ ನೇಮಕ ಆಗಿದೆ.

ನ. 18ರಂದು ಮತ್ತೆ ಸಭೆ ನಡೆಯಲಿದೆ ಎಂದು ಕಳೆದ ಸಭೆಯ ಬಳಿಕ ಸ್ವತಃ ಸುರ್ಜೇವಾಲ ಹಾಗೂ ಡಿಸಿಎಂ ಡಿ.ಕೆ. ಶಿವಕುಮಾರ್‌ ಹೇಳಿದ್ದರು. ಈ ಸಭೆಯ ಮಾತುಕತೆ ಯಶಸ್ವಿಯಾದರೆ ಅಂದಾಜು 25 ಮಂದಿ ಶಾಸಕರು, ಐವರು ವಿಧಾನ ಪರಿಷತ್‌ ಸದಸ್ಯರು ಹಾಗೂ ಅಂದಾಜು 20 ಮಂದಿ ಕಾಂಗ್ರೆಸ್‌ ಕಾರ್ಯಕರ್ತರಿಗೆ ಅಧಿಕಾರ ಸಿಗುವ ಸಾಧ್ಯತೆಗಳಿವೆ ಎಂದು ಉನ್ನತ ಮೂಲಗಳು ತಿಳಿಸಿವೆ.

ಈ ಮಧ್ಯೆ ಜಿಲ್ಲಾ ಉಸ್ತುವಾರಿ ಸಚಿವರು ತಮಗೆ ನಿಗದಿಪಡಿಸಿದ ಜಿಲ್ಲೆಗಳಲ್ಲಿ ಪ್ರವಾಸ ಮಾಡಿ ಲೋಕಸಭೆಗೆ ಸ್ಪರ್ಧಿಸಬಹುದಾದ ಸಂಭವನೀಯ ಅಭ್ಯರ್ಥಿಗಳ ಪಟ್ಟಿಯನ್ನು ಸಲ್ಲಿಸಲು ನ. 15ರ ಗಡುವು ನೀಡಲಾಗಿತ್ತು. ಇದುವರೆಗೆ ಕೆಪಿಸಿಸಿ ಸ್ವೀಕರಿಸಿರುವ ಜಿಲ್ಲಾ ಉಸ್ತುವಾರಿ ಸಚಿವರ ವರದಿ ಬಗ್ಗೆಯೂ ಮಂಗಳವಾರ ಸಭೆಯಲ್ಲಿ ಚರ್ಚೆಯಾಗಲಿದೆ.

ಅಧಿವೇಶನಕ್ಕೆ ಕಾರ್ಯತಂತ್ರ
ಮುಂದಿನ ತಿಂಗಳು ಬೆಳಗಾವಿಯಲ್ಲಿ ಅಧಿವೇಶನ ನಡೆಯಲಿರುವ ಹಿನ್ನೆಲೆಯಲ್ಲಿ ವಿಪಕ್ಷಗಳನ್ನು ಹೇಗೆ ಎದುರಿಸಬೇಕು, ವಿಪಕ್ಷಗಳು ಸರಕಾರದ ವಿರುದ್ಧ ಯಾವ ರೀತಿ ಹೋರಾಟ ಮಾಡಲಿವೆ, ವಿಶೇಷವಾಗಿ ಡಿಸಿಎಂ ಡಿ.ಕೆ. ಶಿವಕುಮಾರ್‌ ವಿರುದ್ಧದ ಅಕ್ರಮ ಆಸ್ತಿ ಪ್ರಕರಣದ ತನಿಖೆಯನ್ನು ರದ್ದುಗೊಳಿಸುವ ಸಂಬಂಧ ಸಚಿವ ಸಂಪುಟ ಸಭೆಯಲ್ಲಿ ಕೈಗೊಂಡಿರುವ ನಿರ್ಣಯವನ್ನೇ ಬೆಳಗಾವಿ ಅಧಿವೇಶನದಲ್ಲಿ ವಿಪಕ್ಷಗಳು ಪ್ರಮುಖ ಅಸ್ತ್ರವಾಗಿ ಬಳಸಿಕೊಳ್ಳಲಿರುವುದರಿಂದ ಆಗ ಆಡಳಿತ ಪಕ್ಷದ ಕಡೆಯಿಂದ ಯಾವ ರೀತಿ ಒಗ್ಗಟ್ಟು ಪ್ರದರ್ಶನ ಮಾಡಬೇಕೆಂಬುದರ ಬಗ್ಗೆಯೂ ಸಭೆಯಲ್ಲಿ ನಿರ್ಧಾರವಾಗಲಿದೆ ಎನ್ನಲಾಗುತ್ತಿದೆ.

ಟಾಪ್ ನ್ಯೂಸ್

Manipal: ಹಿರಿಯ ವೈದ್ಯೆ ಡಾ. ಆಶಾ ಭಟ್ ನಿಧನ

Manipal: ಹಿರಿಯ ವೈದ್ಯೆ ಡಾ. ಆಶಾ ಭಟ್ ನಿಧನ

ಕಾಲ್ತುಳಿತ ಪ್ರಕರಣ: ಅಲ್ಲು, ʼಪುಷ್ಪ-2ʼ ತಂಡದಿಂದ ರೇವತಿ ಕುಟುಂಬಕ್ಕೆ 2 ಕೋಟಿ ರೂ. ಪರಿಹಾರ

ಕಾಲ್ತುಳಿತ ಪ್ರಕರಣ: ಅಲ್ಲು, ʼಪುಷ್ಪ-2ʼ ತಂಡದಿಂದ ರೇವತಿ ಕುಟುಂಬಕ್ಕೆ 2 ಕೋಟಿ ರೂ. ಪರಿಹಾರ

Munirtahana–Egg

Egg Thrown: ಬಿಜೆಪಿ ಶಾಸಕ ಮುನಿರತ್ನ ಮೇಲೆ ಮೊಟ್ಟೆ ಎಸೆತ; ಮೂವರ ಬಂಧನ

2

Living together; ವಿಚ್ಛೇದನ ತಡೆಯಲು ಲಿವಿಂಗ್‌ ಟುಗೆದರ್‌ ಸಹಕಾರಿಯೇ?

Uttarakhand: ಕಂದಕಕ್ಕೆ ಬಿದ್ದ ಬಸ್‌ ನಾಲ್ವರು ಮೃ*ತ್ಯು; 20ಕ್ಕೂ ಅಧಿಕ ಮಂದಿಗೆ ಗಾಯ

Uttarakhand: ಕಂದಕಕ್ಕೆ ಬಿದ್ದ ಬಸ್‌ ನಾಲ್ವರು ಮೃ*ತ್ಯು; 20ಕ್ಕೂ ಅಧಿಕ ಮಂದಿಗೆ ಗಾಯ

ಗಾಂಧಿ ಭಾರತ್‌ ಕಾರ್ಯಕ್ರಮದ ಬಗ್ಗೆ ಶೆಟ್ಟರ್‌ ಅಪಸ್ವರ ತೆಗೆದಿದ್ದು ದುರ್ದೈವ – ಎಚ್ ಕೆ ಪಾಟೀಲ

ಗಾಂಧಿ ಭಾರತ್‌ ಕಾರ್ಯಕ್ರಮದ ಬಗ್ಗೆ ಶೆಟ್ಟರ್‌ ಅಪಸ್ವರ ತೆಗೆದಿದ್ದು ದುರ್ದೈವ – ಎಚ್ ಕೆ ಪಾಟೀಲ

YearEnder 2024: ಪ್ರಧಾನಿ ಮೋದಿ ಅವರ ರಾಜಕೀಯ ಜೀವನದಲ್ಲಿ 2024 ಯಾಕೆ ಮಹತ್ವದ ವರ್ಷವಾಗಿದೆ?

YearEnder 2024: ಪ್ರಧಾನಿ ಮೋದಿ ಅವರ ರಾಜಕೀಯ ಜೀವನದಲ್ಲಿ 2024 ಯಾಕೆ ಮಹತ್ವದ ವರ್ಷವಾಗಿದೆ?

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Munirtahana–Egg

Egg Thrown: ಬಿಜೆಪಿ ಶಾಸಕ ಮುನಿರತ್ನ ಮೇಲೆ ಮೊಟ್ಟೆ ಎಸೆತ; ಮೂವರ ಬಂಧನ

ಗಾಂಧಿ ಭಾರತ್‌ ಕಾರ್ಯಕ್ರಮದ ಬಗ್ಗೆ ಶೆಟ್ಟರ್‌ ಅಪಸ್ವರ ತೆಗೆದಿದ್ದು ದುರ್ದೈವ – ಎಚ್ ಕೆ ಪಾಟೀಲ

ಗಾಂಧಿ ಭಾರತ್‌ ಕಾರ್ಯಕ್ರಮದ ಬಗ್ಗೆ ಶೆಟ್ಟರ್‌ ಅಪಸ್ವರ ತೆಗೆದಿದ್ದು ದುರ್ದೈವ – ಎಚ್ ಕೆ ಪಾಟೀಲ

15-dk

Congress ಅಧಿವೇಶನದ ಶತಮಾನೋತ್ಸವ ಕಾರ್ಯಕ್ರಮ ದೇಶದ ಇತಿಹಾಸದ ಒಂದು ಐತಿಹಾಸಿಕ ಕಾರ್ಯಕ್ರಮ

14-

Vijayapura: ಬಿಜೆಪಿಯಲ್ಲಿ ನಾಯಕತ್ವದ ಕೊರತೆಯಿಲ್ಲ; ಮೋದಿ ನಂತರ ಯೋಗಿ ಎಂದ ಯತ್ನಾಳ್

Haveri: ಕಾರುಗಳ ನಡುವೆ ಭೀಕರ ಅಪಘಾತ; ನಾಲ್ವರ ದುರ್ಮರಣ

Haveri: ಕಾರುಗಳ ನಡುವೆ ಭೀಕರ ಅಪಘಾತ; ನಾಲ್ವರ ದುರ್ಮರಣ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

Manipal: ಹಿರಿಯ ವೈದ್ಯೆ ಡಾ. ಆಶಾ ಭಟ್ ನಿಧನ

Manipal: ಹಿರಿಯ ವೈದ್ಯೆ ಡಾ. ಆಶಾ ಭಟ್ ನಿಧನ

Banahatti: ತಾಂತ್ರಿಕ ಸೌಲಭ್ಯಗಳನ್ನು ನೀಡುವ ನಿಟ್ಟಿನಲ್ಲಿ ಬದ್ಧಳಾಗಿದ್ದೇನೆ: ಉಮಾಶ್ರೀ

Banahatti: ತಾಂತ್ರಿಕ ಸೌಲಭ್ಯಗಳನ್ನು ನೀಡುವ ನಿಟ್ಟಿನಲ್ಲಿ ಬದ್ಧಳಾಗಿದ್ದೇನೆ: ಉಮಾಶ್ರೀ

lorry-bike

Road Mishap; ದ್ವಿಚಕ್ರ ವಾಹನ-ಲಾರಿ ನಡುವೆ ಅಪಘಾತ: ದಂಪತಿ ಸಾವು

ಕಾಲ್ತುಳಿತ ಪ್ರಕರಣ: ಅಲ್ಲು, ʼಪುಷ್ಪ-2ʼ ತಂಡದಿಂದ ರೇವತಿ ಕುಟುಂಬಕ್ಕೆ 2 ಕೋಟಿ ರೂ. ಪರಿಹಾರ

ಕಾಲ್ತುಳಿತ ಪ್ರಕರಣ: ಅಲ್ಲು, ʼಪುಷ್ಪ-2ʼ ತಂಡದಿಂದ ರೇವತಿ ಕುಟುಂಬಕ್ಕೆ 2 ಕೋಟಿ ರೂ. ಪರಿಹಾರ

Madikeri: ಹುಲಿ ದಾಳಿ; ವ್ಯಕ್ತಿಗೆ ಗಂಭೀರ ಗಾಯ

Madikeri: ಹುಲಿ ದಾಳಿ; ವ್ಯಕ್ತಿಗೆ ಗಂಭೀರ ಗಾಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.