ಕೊನೆಗೂ ವಿಜಯೇಂದ್ರಗೆ ಚುನಾವಣಾ ಉಸ್ತುವಾರಿ ನೀಡಿದ ಬಿಜೆಪಿ
Team Udayavani, Oct 4, 2021, 5:14 PM IST
ಬೆಂಗಳೂರು: ರಾಜ್ಯದ ಹಾನಗಲ್ ಮತ್ತು ಸಿಂದಗಿ ವಿಧಾನಸಭಾ ಕ್ಷೇತ್ರಗಳ ಉಪ ಚುನಾವಣಾ ಕಣ ರಂಗೇರುತ್ತಿದೆ. ಬಿಜೆಪಿ ಚುನಾಚಣಾ ಉಸ್ತುವಾರಿಗಳ ಪಟ್ಟಿಯೇ ಭಾರೀ ಚರ್ಚೆಗೆ ಕಾರಣವಾಗಿತ್ತು. ಅದಕ್ಕೆ ಕಾರಣ ಬಿಜೆಪಿ ರಾಜ್ಯ ಉಪಾಧ್ಯಕ್ಷ ಬಿ.ವೈ.ವಿಜಯೇಂದ್ರರನ್ನು ಪಟ್ಟಿಯಿಂದ ಕೈಬಿಟ್ಟಿದ್ದು.
ರವಿವಾರ ಕೋರ್ ಕಮಿಟಿ ಸಭೆಯ ಬಳಿಕ ಪ್ರಕಟಿಸಲಾದ ಪಟ್ಟಿಯಲ್ಲಿ ವಿಜಯೇಂದ್ರ ಹೆಸರು ಇರಲಿಲ್ಲ. ಇದರಿಂದ ಕೋಪಗೊಂಡಿದ್ದ ವಿಜಯೇಂದ್ರ ಅಭಿಮಾನಿಗಳು, ಸಾಮಾಜಿಕ ಜಾಲತಾಣದಲ್ಲಿ ತಮ್ಮ ಆಕ್ರೋಶ ಹೊರಹಾಕಿದ್ದರು. ಬಿ.ಎಲ್.ಸಂತೋಷ್ ಸೇರಿ ಬಿಜೆಪಿ ನಾಯಕರ ವಿರುದ್ಧ ವಿಜಯೇಂದ್ರ ಬೆಂಬಲಿಗರು ತಮ್ಮ ಅಸಮಾಧಾನ ಹೊರಹಾಕಿದ್ದರು. ಬಳಿಕ ಪಕ್ಷದ ವಿರುದ್ದ ಮಾತನಾಡದಂತೆ ವಿಜಯೇಂದ್ರ ಅಭಿಮಾನಿಗಳ ಬಳಿ ಮನವಿಯನ್ನೂ ಮಾಡಿದ್ದರು.
ಇದನ್ನೂ ಓದಿ:ಪಕ್ಷಕ್ಕೆ ಮುಜುಗರ ತರುವ ವಿಷಯಕ್ಕೆ ನನ್ನ ಸಮ್ಮತಿಯಿಲ್ಲ: ಅಭಿಮಾನಿಗಳಿಗೆ ವಿಜಯೇಂದ್ರ ಮನವಿ
ಈ ಎಲ್ಲಾ ಬೆಳವಣಿಗೆಗಳ ಹಿನ್ನೆಲೆಯಲ್ಲಿ ಹಾವೇರಿ ಉಸ್ತುವಾರಿಗಳ ಜೊತೆ ವಿಜಯೇಂದ್ರ ಹೆಸರು ಸೇರಿಸಿರುವ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಹೊಸ ಆದೇಶ ಹೊರಡಿಸಿದ್ದಾರೆ.
ಬಿಜೆಪಿ ಉಸ್ತುವಾರಿಗಳ ಪಟ್ಟಿ: ಎರಡು ಕ್ಷೇತ್ರಗಳ ಉಪ ಚುನಾವಣೆಗೆ ಉಸ್ತುವಾರಿಗಳನ್ನು ನೇಮಕ ಮಾಡಿ ರಾಜ್ಯ ಬಿಜೆಪಿ ಅಧ್ಯಕ್ಷ ನಳಿನ್‌ಕುಮಾರ್ ಕಟೀಲ್ ಆದೇಶ ಹೊರಡಿಸಿದ್ದು, ಸಿಂದಗಿ ಕ್ಷೇತ್ರಕ್ಕೆ ಜಲ ಸಂಪನ್ಮೂಲ ಸಚಿವ ಗೋವಿಂದ ಕಾರಜೋಳ, ಹಾನಗಲ್ ಕ್ಷೇತ್ರಕ್ಕೆ ಕೈಗಾರಿಕಾ ಸಚಿವ ಮುರುಗೇಶ ನಿರಾಣಿ ನೇತೃತ್ವದಲ್ಲಿ ಸಮಿತಿ ರಚಿಸಲಾಗಿದೆ.
ಸಿಂದಗಿ ಕ್ಷೇತ್ರಕ್ಕೆ ಗೊವಿಂದ ಕಾರಜೋಳ, ವಿ. ಸೋಮಣ್ಣ, ಸಿ.ಸಿ. ಪಾಟೀಲ್, ಶಶಿಕಲಾ ಜೊಲ್ಲೆ, ರಮೇಶ್ ಜಿಗಜಿಣಗಿ, ಬಸನಗೌಡ ಪಾಟೀಲ್ ಯತ್ನಾಳ, ಲಕ್ಷ್ಮಣ ಸವದಿ, ಸೋಮನಗೌಡ ಪಾಟೀಲ್, ಎ.ಎಸ್. ಪಾಟೀಲ್ ನಡಹಳ್ಳಿ, ಪಿ. ರಾಜೀವ, ಶ್ರೀಕಾಂತ ಕುಲಕರ್ಣಿ, ಬಾಬುರಾವ್ ಚಿಂಚನಸೂರ್ ಅವರನ್ನು ನೇಮಿಸಲಾಗಿದೆ. ಈ ಹಿಂದೆ ಯಡಿಯೂರಪ್ಪ ಅವರ ಸಂಪುಟದಲ್ಲಿ ಉಪ ಮುಖ್ಯಮಂತ್ರಿಯಾಗಿದ್ದ ಲಕ್ಷ್ಮಣ ಸವದಿ ಅವರಿಗೆ ಸಿಂದಗಿ ಉಪ ಚುನಾವಣೆಯ ಉಸ್ತುವಾರಿಯನ್ನಾಗಿ ನೇಮಿಸಲಾಗಿತ್ತು. ಈಗ ಅವರು ಸಚಿವ ಸ್ಥಾನ ಕಳೆದುಕೊಂಡಿದ್ದರಿಂದ ಅವರ ಬದಲು ಗೋವಿಂದ ಕಾರಜೋಳ ಅವರಿಗೆ ಉಸ್ತುವಾರಿ ಜವಾಬ್ದಾರಿ ನೀಡಲಾಗಿದೆ.
ಹಾನಗಲ್ ಕ್ಷೇತ್ರದಲ್ಲಿ ಕೈಗಾರಿಕಾ ಸಚಿವ ಮುರುಗೇಶ ನಿರಾಣಿ ಅವರ ನೇತೃತ್ವದಲ್ಲಿ ತಂಡ ರಚನೆ ಮಾಡಲಾಗಿದ್ದು, ಜೆ.ಸಿ. ಮಾಧುಸ್ವಾಮಿ, ಬಿ.ಸಿ. ಪಾಟೀಲ್, ಶಿವರಾಮ್ ಹೆಬ್ಟಾರ, ಶಿವಕುಮಾರ ಉದಾಸಿ, ಎನ್. ರವಿಕುಮಾರ, ಮಹೇಶ ಟೆಂಗಿನಕಾಯಿ, ರಾಜುಗೌಡ, ನೆಹರೂ ಓಲೇಕಾರ, ಎಂ. ಚಂದ್ರಪ್ಪ, ವಿರೂಪಾಕ್ಷಪ್ಪ ಬಳ್ಳಾರಿ, ಅರುಣ್ ಕುಮಾರ್ ಗುತ್ತೂರು, ಬಿ.ವೈ.ವಿಜಯೇಂದ್ರ ಅವರನ್ನು ನೇಮಕ ಮಾಡಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
By Poll: ಕ್ಷೇತ್ರದಲ್ಲಿ 5ಲಕ್ಷಕ್ಕೂ ಹೆಚ್ಚು ಮನೆಗಳ ಕಟ್ಟಿಸಿರುವೆ, ದಾಖಲೆ ನೋಡಲಿ: ಬೊಮ್ಮಾಯಿ
By Election: ಬೊಮ್ಮಾಯಿ 4 ಬಾರಿ ಗೆದ್ರೂ ಕ್ಷೇತ್ರದ ಬಡವರಿಗೆ ಒಂದೂ ಮನೆ ಕಟ್ಟಿಸಿಲ್ಲ: ಸಿಎಂ
Hassan: ಹಾಸನಾಂಬೆ ದೇವಿಗೆ ಈ ಬಾರಿ ದಾಖಲೆ ಪ್ರಮಾಣದಲ್ಲಿ ಹರಿದು ಬಂದ ಆದಾಯ!
MUDA case; ಸಿಎಂ ಸಿದ್ದರಾಮಯ್ಯ ವಿಚಾರಣೆಗೆ ಕರೆದ ಲೋಕಾಯುಕ್ತ ಪೊಲೀಸರು
Waqf Notice: ʼವಕ್ಫ್ ಬೋರ್ಡ್‌ಗೆ ಆಸ್ತಿ ನೋಂದಣಿ ತಕ್ಷಣ ಸ್ಥಗಿತಗೊಳಿಸಲು ಸಿಎಸ್‌ಗೆ ಸೂಚಿಸಿʼ
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.