ಅಮಿತ್ ಶಾ ಚಾಟಿ; ಕೊನೆಗೂ ಧರಣಿ ನಿರತ ರೈತರನ್ನು ಭೇಟಿಯಾದ BSY
Team Udayavani, Dec 26, 2017, 4:56 PM IST
ಬೆಂಗಳೂರು: ಮಹದಾಯಿ, ಕಳಸಾ ಬಂಡೂರಿ ಯೋಜನೆ ವಿಚಾರ ಕಾಂಗ್ರೆಸ್, ಬಿಜೆಪಿ ನಡುವೆ ತೀವ್ರ ಸಮರವನ್ನೇ ಸೃಷ್ಟಿಸಿದೆ. ಕಳೆದ ನಾಲ್ಕು ದಿನಗಳಿಂದ ಮಹದಾಯಿ ಹೋರಾಟಗಾರರು ಬಿಜೆಪಿ ಕಚೇರಿ ಮುಂದೆ ಅಹೋರಾತ್ರಿ ಧರಣಿ ನಡೆಸುತ್ತಿದ್ದು, ಏತನ್ಮಧ್ಯೆ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಶಾ ಅವರ ಖಡಕ್ ಸೂಚನೆ ಬೆನ್ನಲ್ಲೇ ಮಂಗಳವಾರ ಸಂಜೆ ಬಿಎಸ್ ಯಡಿಯೂರಪ್ಪ ಕೊನೆಗೂ ಮಹದಾಯಿ ಹೋರಾಟಗಾರರನ್ನು ಭೇಟಿಯಾಗಿದ್ದಾರೆ.
ಮಹದಾಯಿ ವಿಚಾರದಲ್ಲಿ ಯಡಿಯೂರಪ್ಪನವರು ತಮ್ಮ ನಿಲುವನ್ನು ಸ್ಪಷ್ಟಪಡಿಸಬೇಕೆಂದು ಆಗ್ರಹಿಸಿ ರೈತರು ಬಿಜೆಪಿ ಕಚೇರಿ ಮುಂದೆ ಅಹೋರಾತ್ರಿ ಧರಣಿ ನಡೆಸುತ್ತಿದ್ದರು. ಅಲ್ಲದೇ ಮಂಗಳವಾರ ಬೆಳಗ್ಗೆ ಬಿಜೆಪಿ ಕೋರ್ ಕಮಿಟಿ ಸಭೆ ನಡೆಸಲು ನಿರ್ಧರಿಸಿದ್ದರು, ಬಳಿಕ ಮಹದಾಯಿ ಹೋರಾಟಗಾರರ ಪ್ರತಿಭಟನೆ ಬಿಸಿಯಿಂದ ತಪ್ಪಿಸಿಕೊಳ್ಳಲು ಬಿಎಸ್ ಯಡಿಯೂರಪ್ಪ ನಿವಾಸದಲ್ಲಿ ಕೋರ್ ಕಮಿಟಿ ಸಭೆ ನಡೆಸಿದರು.
ಇವೆಲ್ಲ ಜಟಾಪಟಿ ನಡುವೆ ಕೆಪಿಸಿಸಿ ಕಾರ್ಯಾಧ್ಯಕ್ಷ ದಿನೇಶ್ ಗುಂಡೂರಾವ್ ಅವರು ಬಿಜೆಪಿ ಕಚೇರಿ ಮುಂದೆ ಪ್ರತಿಭಟನೆ ನಡೆಸುತ್ತಿದ್ದ ಮಹದಾಯಿ ಹೋರಾಟಗಾರರನ್ನು ಭೇಟಿಯಾಗಿ ಚರ್ಚಿಸಿದರು. ಸಂಜೆ ನೀರಾವರಿ ಸಚಿವ ಎಂಬಿ ಪಾಟೀಲ್ ಭೇಟಿ ನೀಡಿ ರೈತರ ಅಹವಾಲನ್ನು ಆಲಿಸಿದರು.
ಅಮಿತ್ ಶಾ ಚಾಟಿ:
ಮಹದಾಯಿ ವಿಚಾರದಲ್ಲಿ ಏನ್ ಮಾಡ್ತಾ ಇದ್ದೀರಿ, ಕೂಡಲೇ ಕೋರ್ ಕಮಿಟಿ ಸಭೆಯಲ್ಲಿ ತೀರ್ಮಾನ ತೆಗೆದುಕೊಂಡು, ತಕ್ಷಣವೇ ಮಹದಾಯಿ ಹೋರಾಟಗಾರರನ್ನು ಭೇಟಿಯಾಗುವಂತೆ ಅಮಿತ್ ಶಾ ಖಡಕ್ ಸೂಚನೆ ರವಾನಿಸಿದ್ದರು ಎಂದು ಮಾಧ್ಯಮದ ವರದಿಗಳು ತಿಳಿಸಿದ್ದವು.
ಯಡಿಯೂರಪ್ಪ ಹೀಂಗ್ ಬಂದ್ರು…ಎಂಬಿ ಪಾಟೀಲ್ ಹಂಗ್ ಹೋದ್ರು!
ಬಿಎಸ್ ಯಡಿಯೂರಪ್ಪ ಬಿಜೆಪಿ ಕಚೇರಿ ಬಳಿ ಆಗಮಿಸಿದ್ದ ವೇಳೆ ಕಾಂಗ್ರೆಸ್ ಮುಖಂಡ, ಸಚಿವ ಎಂಬಿ ಪಾಟೀಲ್ ಮಹದಾಯಿ ಹೋರಾಟಗಾರರ ಜತೆ ಚರ್ಚೆ ನಡೆಸಿ, ಅಹವಾಲು ಸ್ವೀಕರಿಸಿದ್ದರು. ಇದನ್ನು ಕಂಡ ಬಿಎಸ್ ವೈ ದೂರದಲ್ಲೇ ನಿಂತಿದ್ದರು, ಬಳಿಕ ಪೊಲೀಸರು ಸರ್ ನೀವು ಹೀಗೆ ಬನ್ನಿ ಎಂದು ಕರೆದುಕೊಂಡು ಹೋದರು. ಎಂಬಿ ಪಾಟೀಲ್ ಅವರು ಹೊರಹೋದ ಬಳಿಕ ಬಿಎಸ್ ಯಡಿಯೂರಪ್ಪ ಮಹದಾಯಿ ಹೋರಾಟಗಾರರ ಬಳಿ ಬಂದು ಚರ್ಚಿಸಲು ಆರಂಭಿಸಿದ್ದರು!
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
KPS ಹೆಚ್ಚುವರಿ ಎಲ್ಕೆಜಿ, 1ನೇ ತರಗತಿ ತೆರೆಯಲು ಅವಕಾಶ
Setback BJP: ಜನರಿಂದ ವಿಜಯೇಂದ್ರ ನಾಯಕತ್ವ ತಿರಸ್ಕಾರ, ರಾಜೀನಾಮೆ ನೀಡಲಿ: ಶಾಸಕ ಯತ್ನಾಳ್
Basavaraj Bommai: ಹಣದ ಹೊಳೆಹರಿಸಿ ಕಾಂಗ್ರೆಸ್ ಗೆಲುವು: ಬೊಮ್ಮಾಯಿ ಆರೋಪ
By Election Result: ನಾನು ದಂತದ ಗೋಪುರದಲ್ಲಿ ಕೂತವನಲ್ಲ,ಜನರೊಂದಿಗೆ ಸದಾ ಒಡನಾಟವಿದೆ: ಸಿಎಂ
ಮಹಾರಾಷ್ಟ್ರ ಸೋಲಿನ ಬೆನ್ನಲ್ಲೇ ಇವಿಎಂ ಬಗ್ಗೆ ಅನುಮಾನ ವ್ಯಕ್ತಪಡಿಸಿದ ಸತೀಶ್ ಜಾರಕಿಹೊಳಿ
MUST WATCH
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|
ಹೊಸ ಸೇರ್ಪಡೆ
Surathkal: ಎಐಯಿಂದ ಉದ್ಯೋಗ, ನಂಬಿಕೆಗೆ ಕುತ್ತು: ಪ್ರೊ| ಗೋವಿಂದನ್ ರಂಗರಾಜನ್
Result: ಮಹಾರಾಷ್ಟ್ರದಲ್ಲಿ ಎನ್ಡಿಎಗೆ ಜಯಭೇರಿ; ಮೋದಿ ನಾಯಕತ್ವಕ್ಕೆ ಮನ್ನಣೆ: ನಳಿನ್
Mangaluru: ಗೊಂದಲ ಮೂಡಿಸುವ ಬಿಜೆಪಿಗೆ ತಕ್ಕ ಪಾಠ: ಕೆಪಿಸಿಸಿ ಪ್ರ.ಕಾರ್ಯದರ್ಶಿ ಪದ್ಮರಾಜ್
Putturu: ಬಜೆಟ್ನಲ್ಲಿ ಹೊರಡಿಸಿರುವ ಆದೇಶ ಅನುಷ್ಠಾನಿಸದೆ ಕೃಷಿಕರಿಗೆ ವಂಚನೆ: ಮಠಂದೂರು
Udupi: ಪೇಜಾವರ ಶ್ರೀವಿಶ್ವಪ್ರಸನ್ನತೀರ್ಥ ಸ್ವಾಮೀಜಿ -ಗೃಹ ಸಚಿವ ಅಮಿತ್ ಶಾ ಭೇಟಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.