Bengaluru ಹಣಕಾಸಿನ ವಿಚಾರ: ರೌಡಿ ಅನೀಸ್ ಹತ್ಯೆಗೆ ಸಂಚು; ಇಬ್ಬರ ಸೆರೆ
Team Udayavani, Sep 18, 2023, 6:02 PM IST
ಬೆಂಗಳೂರು: ಹಣಕಾಸಿನ ವಿಚಾರಕ್ಕೆ ರೌಡಿಶೀಟರ್‌ನನ್ನು ಹತ್ಯೆಗೈಯಲು ಸಂಚು ರೂಪಿಸಿದ್ದ ಇಬ್ಬರು ಆರೋಪಿಗಳನ್ನು ಬಾಣಸವಾಡಿ ಪೊಲೀಸರು ಬಂಧಿಸಿದ್ದಾರೆ.
ಕೆ.ಜಿ.ಹಳ್ಳಿಯ ಎಚ್‌ಬಿಆರ್ ಲೇಔಟ್ ನಿವಾಸಿ ಮೊಹಮ್ಮದ್ ಜುಬೇರ್(37) ಮತ್ತು ಡಿ.ಜೆ.ಹಳ್ಳಿಯ ಡ್ರೈವರ್ಸ್ ಕಾಲೋನಿಯ ಫುರ್ಕಾನ್ ಅಲಿಖಾನ್ (38) ಬಂಧಿತರು. ಆರೋಪಿಗಳಿಂದ ಒಂದು ಕಂಟ್ರಿಮೇಡ್ ಪಿಸ್ತೂಲ್ ಮತ್ತು ಎರಡು ಜೀವಂತ ಗುಂಡುಗಳನ್ನು ವಶಕ್ಕೆ ಪಡೆಯಲಾಗಿದೆ.
ಬಾಣಸವಾಡಿ ಠಾಣೆ ವ್ಯಾಪ್ತಿಯ ಚೇರ್ಮನ್ ಲೇಔಟ್ ಬಳಿ ಆರೋಪಿಗಳು ಅಕ್ರಮವಾಗಿ ಪಿಸ್ತೂಲ್ ಮತ್ತು ಗುಂಡುಗಳನ್ನು ಇಟ್ಟುಕೊಂಡು ಓಡಾಡುತ್ತಿರುವ ಮಾಹಿತಿ ಸಿಕ್ಕಿತ್ತು. ಈ ಹಿನ್ನೆಲೆಯಲ್ಲಿ ದಾಳಿ ನಡೆಸಿ ಬಂಧಿಸಲಾಗಿದೆ ಎಂದು ಪೊಲೀಸರು ಹೇಳಿದರು.
ಕೊಲೆಗೆ ಸಂಚು:
ಆರೋಪಿಗಳ ಪೈಕಿ ಮೊಹಮ್ಮದ್ ಜುಬೇರ್ ಹಾಗೂ ರೌಡಿಶೀಟರ್ ಅನೀಸ್ ಆತ್ಮೀಯ ಸ್ನೇಹಿತರಾಗಿದ್ದರು. ಆದರೆ, 3 ವರ್ಷಗಳ ಹಿಂದೆ ಇಬ್ಬರ ನಡುವೆ ಹಣಕಾಸಿನ ವಿಚಾರಕ್ಕೆ ಜಗಳವಾಗಿದ್ದು, ಪರಸ್ಪರ ದ್ವೇಷಿಸುತ್ತಿದ್ದರು. ಈ ಬೆನ್ನಲ್ಲೇ ಮೊಹಮ್ಮದ್ ಜುಬೇರ್, ಅನೀಸ್ ನಿಯಂತ್ರಣದಲ್ಲಿರುವ ಏರಿಯಾಗಳ ಕಂಟ್ರೋಲ್ ಮಾಡಲು ಮುಂದಾಗಿದ್ದ. ಈ ಮಧ್ಯೆ 2021ರಲ್ಲಿ ನಡೆದ ಅಲಿ ಎಂಬಾತನ ಕೊಲೆ ಪ್ರಕರಣದಲ್ಲಿ ಅನೀಸ್ ಕೈವಾಡ ಇತ್ತು. ಆತ ಜೈಲಿಗೂ ಹೋಗಿದ್ದ. ಹೀಗಾಗಿ ಅನೀಸ್‌ನನ್ನು ಕೊಲೆಗೈಯಲು ಮೊಹಮ್ಮದ್ ಜುಬೇರ್ ಸಂಚು ರೂಪಿಸಿದ್ದ. ಅದಕ್ಕೆ ಫುರ್ಕಾನ್ ಅಲಿಖಾನ್ ಕೂಡ ಸಹಕರಿಸಿದ್ದಾನೆ ಎಂಬುದು ಗೊತ್ತಾಗಿದೆ.
ಮಹಾರಾಷ್ಟ್ರದಲ್ಲಿ ಪಿಸ್ತೂಲ್ ಖರೀದಿ:
ಆರೋಪಿಗಳು ಅನೀಸ್ ಹತ್ಯೆಗೆ ಒಂದು ತಿಂಗಳ ಹಿಂದೆಯೇ ಸಂಚು ರೂಪಿಸಿದ್ದು, ಮಹಾರಾಷ್ಟ್ರದ ಮುಂಬೈನಲ್ಲಿ ಕಂಟ್ರಿಮೆಡ್ ಪಿಸ್ತೂಲ್ ಮತ್ತು 2 ಜೀವಂತ ಗುಂಡುಗಳನ್ನು ಖರೀದಿಸಿದ್ದರು. ಇತ್ತೀಚೆಗೆ ಜೈಲಿನಿಂದ ಬಿಡುಗಡೆಯಾಗಿದ್ದ ಅನೀಸ್‌ನ ಚಟುವಟಿಕೆಗಳು ಮತ್ತು ಆತನ ಸಹಚರರ ಬಗ್ಗೆ ಮಾಹಿತಿ ಸಂಗ್ರಹಿಸುತ್ತಿದ್ದರು. ಸೆ.12ರಂದು ಸಂಜೆ ಡಿ.ಜೆ.ಹಳ್ಳಿಯ ಚೇರ್ಮೆನ್ ಲೇಔಟ್ ಕಡೆ ಅನೀಸ್ ಬರುತ್ತಾನೆ ಎಂಬ ಮಾಹಿತಿ ಮೇರೆಗೆ ಪಿಸ್ತೂಲ್ ಮತ್ತು ಜೀವಂತ ಗುಂಡುಗಳ ಜತೆ ಕಾಯುತ್ತಿದ್ದರು. ಈ ಮಾಹಿತಿ ಮೇರೆಗೆ ಬಂಧಿಸಲಾಗಿದೆ ಎಂದು ಪೊಲೀಸರು ಹೇಳಿದರು. ಠಾಣಾಧಿಕಾರಿ ಸಂತೋಷ್ ಕುಮಾರ್ ನೇತೃತ್ವದಲ್ಲಿ ಕಾರ್ಯಾಚರಣೆನ ನಡೆದಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Leopard: ಮನೆಯ ಮಹಡಿ ಮೇಲೆ ಚಿರತೆ ಓಡಾಟ, CCTVಯಲ್ಲಿ ದೃಶ್ಯ ಸೆರೆ, ಆತಂಕದಲ್ಲಿ ಗ್ರಾಮಸ್ಥರು
B. S. Yediyurappa ವಿರುದ್ಧ ಎಫ್ಐಆರ್‌ಗೆ ಸಚಿವರ ಒತ್ತಡ
BJP ಸರಕಾರ ಕಾಲದ ಕೋವಿಡ್, ಗಣಿ ತನಿಖೆಗೆ ಎಸ್‌ಐಟಿ: ಸಚಿವ ಸಂಪುಟ ನಿರ್ಧಾರ
Karnataka; 7 ವೈದ್ಯಕೀಯ ಕಾಲೇಜುಗಳಲ್ಲಿ ಕ್ರಿಟಿಕಲ್ ಕೇರ್ ವಿಭಾಗ ಆರಂಭ
Bandh; ನ. 20ರಂದು ರಾಜ್ಯವ್ಯಾಪಿ ಮದ್ಯ ಮಾರಾಟ ಬಂದ್
MUST WATCH
ಹೊಸ ಸೇರ್ಪಡೆ
Leopard: ಮನೆಯ ಮಹಡಿ ಮೇಲೆ ಚಿರತೆ ಓಡಾಟ, CCTVಯಲ್ಲಿ ದೃಶ್ಯ ಸೆರೆ, ಆತಂಕದಲ್ಲಿ ಗ್ರಾಮಸ್ಥರು
Bangladesh: ಶೇ.90ರಷ್ಟಿ ಮುಸ್ಲಿಮರು ಇರುವ ಬಾಂಗ್ಲಾದೇಶ ಶೀಘ್ರ ಇಸ್ಲಾಮಿಕ್ ರಾಷ್ಟ್ರ?
India-South Africa; ನಾಲ್ಕನೇ ಟಿ20 ಪಂದ್ಯ ಇಂದು: ಸರಣಿ ಗೆಲುವಿನ ನಿರೀಕ್ಷೆಯಲ್ಲಿ ಭಾರತ
Marriage: ಕ್ರಿಸ್ಮಸ್‌ಗೆ ಅಮೆಜಾನ್ ಸಿಇಒ ಅದ್ಧೂರಿ ವಿವಾಹ?
Washington: ಅಮೆರಿಕ ಗುಪ್ತಚರ ಸಂಸ್ಥೆಗೆ ತುಳಸಿ ಗಬಾರ್ಡ್ ಮುಖ್ಯಸ್ಥೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.