ಪ್ರಖ್ಯಾತ ಉದ್ಯಾನಗಳ ನಿರ್ವಹಣೆಗೆ ಆರ್ಥಿಕ ಸಂಕಷ್ಟ
Team Udayavani, Aug 29, 2017, 10:50 AM IST
ಬೆಂಗಳೂರು: ವೈವಿಧ್ಯತಾ ಸಸ್ಯ ಪ್ರಭೇದಗಳನ್ನು ತನ್ನೊಡಲಲ್ಲಿ ಇರಿಸಿಕೊಂಡು ರಾಷ್ಟ್ರ ಮತ್ತು ಅಂತಾರಾಷ್ಟ್ರೀಯ ಮಟ್ಟದಲ್ಲಿ ಪ್ರವಾಸಿಗರನ್ನು
ಸೆಳೆಯುವ ರಾಜ್ಯದ ಪ್ರಖ್ಯಾತ ಉದ್ಯಾನಗಳಾದ ಲಾಲ್‌ಬಾಗ್, ಕಬ್ಬನ್ ಪಾರ್ಕ್, ಕೆಆರ್‌ಎಸ್ ಸೇರಿದಂತೆ ಪಾರ್ಕ್‌ಗಳ ನಿರ್ವಹಣೆಗೆ ಬಜೆಟ್ ನಲ್ಲಿ ನೀಡಿರುವ ಅನುದಾನ ಅತ್ಯಲ್ಪವಾಗಿದ್ದು, ಹೆಚ್ಚುವರಿಯಾಗಿ 30 ಕೋಟಿ ರೂ. ಮಂಜೂರು ಮಾಡುವಂತೆ ತೋಟಗಾರಿಕೆ ಇಲಾಖೆ ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಿದೆ.
ಕಳೆದ ಹಣಕಾಸು ವರ್ಷದಲ್ಲಿ ರಾಜ್ಯದ ಪ್ರತಿಷ್ಠಿತ ಉದ್ಯಾನಗಳ ನಿರ್ವಹಣೆಗೆ ರಾಜ್ಯ ಸರ್ಕಾರ ಸುಮಾರು 34 ಕೋಟಿ ರೂ. ಅನುದಾನ ನೀಡಿತ್ತು. ಪ್ರಸಕ್ತ ವರ್ಷದಲ್ಲಿ ಉದ್ಯಾನ, ಗಿರಿಧಾಮಗಳ ನಿರ್ವಹಣೆ ವೆಚ್ಚದಲ್ಲಿ ಏರಿಕೆಯಾಗಿದ್ದು, ಸುಮಾರು 50 ಕೋಟಿ ರೂ.ಗಳಿಗೂ ಅಧಿಕ ಅನುದಾನದ ಅವಶ್ಯಕತೆ ಇದೆ. ಅಗತ್ಯ ಅನುದಾನ ಬಿಡುಗಡೆ ಮಾಡುವಂತೆ ಮನವಿ ಸಲ್ಲಿಸಿತ್ತು. ಆದರೆ, ತೋಟಗಾರಿಕೆ ಇಲಾಖೆಗೆ ಈ ಬಾರಿ ಆಯವ್ಯಯದಲ್ಲಿ ಸಿಕ್ಕಿದ 940 ಕೋಟಿ ರೂ. ಗಳಿಗೂ ಅಧಿಕ ಅನುದಾನದಲ್ಲಿ ಉದ್ಯಾನಗಳ ನಿರ್ವಹಣೆಗೆಂದು ಲಭ್ಯವಾಗಿದ್ದು ಕೇವಲ 10 ಕೋಟಿ ರೂ. ಮಾತ್ರ. ರಾಜ್ಯಾದ್ಯಂತ ಇರುವ 31 ಉದ್ಯಾನಗಳ ವಾರ್ಷಿಕ ನಿರ್ವಹಣೆಗೆ 10 ಕೋಟಿ ರೂ. ಯಾವುದಕ್ಕೂ ಸಾಲುವುದಿಲ್ಲ. ಜತೆಗೆ ಈಗಾಗಲೇ ನೀಡಿರುವ ಅನುದಾನವನ್ನು 24 ಜಿಲ್ಲೆಗಳಲ್ಲಿ ಇರುವ ಉದ್ಯಾನಗಳ ನಿರ್ವಹಣೆಗೆ ವಿತರಿಸಲಾಗಿದ್ದು, ಖರ್ಚಾಗಿ ಹೋಗಿದೆ. ಆರ್ಥಿಕ ವರ್ಷದ ಮುಕ್ತಾಯಕ್ಕೆ ಇನ್ನೂ 8 ತಿಂಗಳು ಬಾಕಿ ಇದ್ದು, ನಿರ್ವಹಣೆ ಕಷ್ಟಕರವಾಗಲಿದೆ. ಜತೆಗೆ ಈಗಾಗಲೇ ಪ್ರಗತಿಯಲ್ಲಿರುವ ಹಲವು ಉದ್ಯಾನಗಳ ಅಭಿವೃದ್ಧಿ ಕಾಮಗಾರಿಗಳು ಹಣದ ಕೊರತೆಯಿಂದ ಅರ್ಧಕ್ಕೆ ನಿಂತಿವೆ. ಆ ಕಾರಣದಿಂದ ಹೆಚ್ಚುವರಿ ಅನುದಾನ ಬಿಡುಗಡೆ ಮಾಡುವಂತೆ ತೋಟಗಾರಿಕೆ ಇಲಾಖೆ ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಿದೆ.
ಅನುದಾನ ಕೊರತೆ: ಬೆಂಗಳೂರಿನ ಲಾಲ್‌ಬಾಗ್, ಕಬ್ಬನ್ ಪಾರ್ಕ್, ಮಂಡ್ಯದ ಬೃಂದಾವನ (ಕೆಆರ್‌ಎಸ್), ಮೈಸೂರಿನ ಕರ್ಜನ್ ಉದ್ಯಾನವನ, ಚಿಕ್ಕಬಳ್ಳಾಪುರ ಜಿಲ್ಲೆಯ ನಂದಿ ಗಿರಿಧಾಮ, ಮಡಿಕೇರಿಯ ರಾಜಾಸೀಟ್ ಪಾರ್ಕ್, ಊಟಿಯ ಫರ್ನ್ಹಿಲ್ ಗಿರಿಧಾಮ, ಕೊಪ್ಪಳದ ಪಂಪಾವನ,
ಚಿಕ್ಕಮಗಳೂರು ಜಿಲ್ಲೆಯ ಕೆಮ್ಮಣ್ಣುಗುಂಡಿ ಗಿರಿಧಾಮ, ಶಿರಸಿ, ಬೆಂಗಳೂರು ಗ್ರಾಮಾಂತರದ ಕನ್ನಮಂಗಲದ ಲಾಲ್‌ಬಾಗ್ ಸೇರಿದಂತೆ ಸುಮಾರು 31 ಉದ್ಯಾನಗಳ ಅಭಿವೃದ್ಧಿ ಮತ್ತು ನಿರ್ವಹಣೆಯನ್ನು ಕೈಗೊಳ್ಳಲಾಗುತ್ತಿದೆ.
ಉದ್ಯಾನಗಳಿಗೆ ಹೊಸ ತಳಿಯ ಸಸ್ಯಗಳನ್ನು ತಂದು ಅಭಿವೃದ್ಧಿಪಡಿಸುವುದು, ಯಂತ್ರೋಪಕರಣಗಳ ಖರೀದಿ, ದುರಸ್ತಿ, ನಿರ್ವಹಣೆ, ಮೂಲಸೌಕರ್ಯ ಒದಗಿಸುವುದು, ಸಮರ್ಪಕ ವಿದ್ಯುತ್ ನಿರ್ವಹಣೆ, ನೀರು ಸರಬರಾಜು, ಭದ್ರತಾ ಸೇವೆ, ಸ್ವತ್ಛತಾ ಸೇವೆ ಮಾನವ ದಿನಗಳ ಸೇವೆ ನಿರ್ವಹಣಾ ವೆಚ್ಚ, ಗಿರಿಧಾಮಗಳ ಅತಿಥಿ ಗೃಹಗಳ ಸ್ವತ್ಛತೆ ಮತ್ತು ಊಟೋಪಚಾರ ವ್ಯವಸ್ಥೆ, ಹೊಸ ಭೂದೃಶ್ಯ ವಿನ್ಯಾಸ ಹೀಗೆ ವಿವಿಧ ಕಾಮಗಾರಿಗಳಿಗಾಗಿ ತೋಟಗಾರಿಕೆ ಇಲಾಖೆ ಹಂಚಿಕೆ ಮಾಡಿರುವ 10 ಕೋಟಿ ರೂ.ಗಳ ಅನುದಾನ ಯಾವುದಕ್ಕೂ ಸಾಲುತ್ತಿಲ್ಲ ಎಂದು ಇಲಾಖೆ ಮೂಲಗಳು ತಿಳಿಸಿವೆ.
ಪೂರ್ಣಗೊಳ್ಳದ ಕಾಮಗಾರಿ: 2015-16ನೇ ಸಾಲಿನ ಅಭಿವೃದ್ಧಿ ಕಾರ್ಯಗಳಲ್ಲಿ ಮೈಸೂರಿನಲ್ಲಿ ಗಾಜಿನ ಮನೆ ನಿರ್ಮಾಣ ಮತ್ತು ಸರ್ಕಾರಿ ಅತಿಥಿ ಗೃಹದ ಉದ್ಯಾನವನ ಅಭಿವೃದ್ಧಿ ಪೂರ್ಣಗೊಳ್ಳಬೇಕಿದೆ. ಊಟಿಯ ಫರ್ನ್ಹಿಲ್ ಗಾರ್ಡನ್. ಚಿಕ್ಕಮಗಳೂರಿನ ಕೆಮ್ಮಣ್ಣುಗುಂಡಿಯ ಶ್ರೀಕೃಷ್ಣ ರಾಜೇಂದ್ರ ಗಿರಿಧಾಮದ ರಾಜಭವನ ಅತಿಥಿ ಗೃಹ ಮತ್ತು ರಸ್ತೆಗಳು ಹಾಳಾಗಿದ್ದು, ಕಾಮಗಾರಿ ಮುಕ್ತಾಯವಾಗಬೇಕಿದೆ. ಜತೆಗೆ ಬೆಂಗಳೂರಿನ ಇಂದಿರಾಗಾಂಧಿ ಸಂಗೀತ ನೃತ್ಯ ಕಾರಂಜಿಯನ್ನು ಉನ್ನತೀಕರಿಸಿ ಅಭಿವೃದ್ಧಿಪಡಿಸುವ ಕಾರ್ಯ ನಡೆಯಬೇಕಿದ್ದು, ಅನುದಾನದ ಅವಶ್ಯಕತೆ ಇದೆ. ಈ ಎಲ್ಲಾ ಕಾರ್ಯಗಳು ಮುಂದುವರಿದು ಅಭಿವೃದ್ಧಿ ಕೆಲಸ ಪೂರ್ಣಗೊಳ್ಳಲು ಅನುದಾನದ ಅಗತ್ಯವಿದೆ.
ರಾಜ್ಯದ ಪ್ರಖ್ಯಾತ ಉದ್ಯಾನಗಳ ನಿರ್ವಹಣೆಗೆ ಅನುದಾನದ ಅವಶ್ಯಕತೆ ಇತ್ತು. ಈಗಾಗಲೇ ಇಲಾಖೆಯಿಂದ ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಲಾಗಿದ್ದು,
ಪ್ರಕ್ರಿಯೆಯಲ್ಲಿದೆ. ಸರ್ಕಾರವೂ ಕೂಡ ಸಕಾರಾತ್ಮಕವಾಗಿ ಸ್ಪಂದಿಸುವ ನಿರೀಕ್ಷೆ ಇದೆ.
ಎಸ್.ಎಸ್.ಮಲ್ಲಿಕಾರ್ಜುನ್, ತೋಟಗಾರಿಕಾ ಸಚಿವ
ಸಂಪತ್ ತರೀಕೆರೆ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Laxmi Hebbalkar; ಅವಾಚ್ಯ ಪದ ಬಳಕೆ ಕೇಸ್: ಸಿ.ಟಿ.ರವಿ ಪೊಲೀಸರ ವಶಕ್ಕೆ
Belagavi Session ಉದ್ವಿಗ್ನ:ಹೆಬ್ಬಾಳ್ಕರ್ ವಿರುದ್ದ ಅವಾಚ್ಯ ಪದ ಬಳಸಿದರೆ ಸಿ.ಟಿ.ರವಿ?
Bidar: ಕಾರಂಜಾ ಸಂತ್ರಸ್ತರ ಸಮಸ್ಯೆ ಅಧ್ಯಯನಕ್ಕೆ ತಾಂತ್ರಿಕ ಸಮಿತಿ ರಚನೆ: ಸಿಎಂ ಸಿದ್ದರಾಮಯ್ಯ
Davanagere; ಉಸ್ತುವಾರಿ ಸಚಿವರ ಬದಲಾವಣೆಗೆ ಸಿಎಂಗೆ ಪತ್ರ ಬರೆದ ಚನ್ನಗಿರಿ ಕಾಂಗ್ರೆಸ್ ಶಾಸಕ
BSY: ಬಿಎಸ್‌ವೈ ತಪ್ಪೊಪ್ಪಿಕೊಂಡಿರುವುದಾಗಿ ಸಂತ್ರಸ್ತೆ ಹೇಳಿಕೆ ದಾಖಲು: ಎಸ್‌ಪಿಪಿ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
BJP vs Congress; ಸಂಸತ್ತಿನಲ್ಲಿ ಕೋಲಾಹಲ: ಪೊಲೀಸರಿಗೆ ದೂರು,ಕಾಂಗ್ರೆಸ್ ಪ್ರತಿದೂರು
Laxmi Hebbalkar; ಅವಾಚ್ಯ ಪದ ಬಳಕೆ ಕೇಸ್: ಸಿ.ಟಿ.ರವಿ ಪೊಲೀಸರ ವಶಕ್ಕೆ
Gadaga: ನೀರಿನ ಟ್ಯಾಂಕರ್ ಹರಿದು 2 ವರ್ಷದ ಮಗು ಸಾವು
Jagdeep Dhankhar; ರಾಜ್ಯಸಭಾ ಸಭಾಪತಿ ವಿರುದ್ದದ ಪ್ರತಿಪಕ್ಷಗಳ ಅವಿಶ್ವಾಸ ನಿರ್ಣಯ ತಿರಸ್ಕೃತ
Yakshagana;ಕನ್ನಡ ಭಾಷೆಯ ಮೌಲ್ಯವನ್ನು ಉಳಿಸುವಲ್ಲಿ ಸಾರ್ವಕಾಲಿಕ ಕೊಡುಗೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.