ಚಲನಚಿತ್ರ, ಕಿರುತೆರೆ ರಂಗದವರಿಗೆ ಆರ್ಥಿಕ ನೆರವು: ಅರ್ಜಿ ಸಲ್ಲಿಸಲು ದಿನಾಂಕ ವಿಸ್ತರಣೆ
Team Udayavani, Jul 9, 2021, 4:14 PM IST
ಬೆಂಗಳೂರು: ಕೋವಿಡ್ -19 ನ ಎರಡನೇ ಅಲೆ ಹಿನ್ನೆಲೆಯಲ್ಲಿ ಜಾರಿಯಾಗಿದ್ದ ಲಾಕ್ ಡೌನ್ ನಿಂದ ಸಂಕಷ್ಟಕ್ಕೆ ಸಿಲುಕಿದ್ದ ಚಲನಚಿತ್ರ ಮತ್ತು ಕಿರುತೆರೆ ಕಲಾವಿದರು ಮತ್ತು ತಂತ್ರಜ್ಞರು ಹಾಗೂ ಚಲನಚಿತ್ರ ಮಂದಿರದ ಕಾರ್ಮಿಕರಿಗೆ ಮುಖ್ಯಮಂತ್ರಿಯವರು ಘೋಷಿಸಿದ್ದ ಮೂರು ಸಾವಿರ ರೂ. ಮೊತ್ತದ ವಿಶೇಷ ಆರ್ಥಿಕ ಪ್ಯಾಕೇಜ್ ನ ನೆರವಿಗಾಗಿ ಸೇವಾಸಿಂಧು ಪೋರ್ಟಲ್ ಮೂಲಕ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯು ಆನ್ಲೈನ್ ಮೂಲಕ ಅರ್ಜಿ ಸಲ್ಲಿಸುವ ಅವಧಿಯನ್ನು ಜುಲೈ 31ರ ವರೆಗೆ ವಿಸ್ತರಿಸಿದೆ.
ಚಲನಚಿತ್ರ ರಂಗದವರು ಮತ್ತು ಕಿರುತೆರೆ ರಂಗದವರಿಗೆ ಆರ್ಥಿಕ ನೆರವನ್ನು ಆಧಾರ್ ಕಾರ್ಡ್ ಸಂಖ್ಯೆಯನ್ನು ಆಧರಿಸಿ ನೇರವಾಗಿ ಅವರ ಬ್ಯಾಂಕ್ ಖಾತೆಗಳಿಗೆ ವರ್ಗಾಯಿಸಲು ಅನುವಾಗುವಂತೆ ಸೇವಾಸಿಂಧು ವೆಬ್ ಪೋರ್ಟಲ್ ನಲ್ಲಿ ಜುಲೈ 9ರ ವರೆಗೆ ಅರ್ಜಿ ಸಲ್ಲಿಸಲು ಅವಕಾಶ ಮಾಡಿಕೊಡಲಾಗಿತ್ತು. ಈ ಅವಧಿಯನ್ನು ವಿಸ್ತರಿಸುವಂತೆ ವಿವಿಧ ಸಂಘಗಳು ಮನವಿ ಸಲ್ಲಿಸಿದ ಹಿನ್ನೆಲೆಯಲ್ಲಿ ಅರ್ಜಿ ಸಲ್ಲಿಕೆ ಅವಧಿಯನ್ನು ಜುಲೈ 31ರ ವರೆಗೆ ವಿಸ್ತರಿಸಲಾಗಿದೆ.
ಇದನ್ನೂ ಓದಿ:ನಟ ರಕ್ಷಿತ್ ಶೆಟ್ಟಿ ಬಗ್ಗೆ ಅವಹೇಳನಕಾರಿ ಮಾತು ಖಂಡಿಸಿ ಕಾಪು ಬಂಟರ ಸಂಘದ ವತಿಯಿಂದ ದೂರು
ರಾಜ್ಯದಲ್ಲಿ ಎರಡನೇ ಅಲೆಯ ವೇಳೆ ಸರ್ಕಾರ ವಿಧಿಸಿದ್ದ ನಿರ್ಬಂಧದಿಂದಾಗಿ ಬಾಧಿತರಾಗಿದ್ದ ಸಮಾಜ ವಿವಿಧ ವರ್ಗದವರಿಗೆ ಮುಖ್ಯಮಂತ್ರಿ ಯಡಿಯೂರಪ್ಪ ಜೂನ್ 3 ರಂದು ವಿಶೇಷ ಪರಿಹಾರದ ಎರಡನೇ ಪ್ಯಾಕೇಜ್ ಘೋಷಣೆ ಮಾಡಿದ್ದರು. ಇದರಲ್ಲಿ ಚಲನಚಿತ್ರೋದ್ಯಮ ಹಾಗೂ ಕಿರುತೆರೆ ಮಾಧ್ಯರಮದಲ್ಲಿ ತೊಡಗಿಕೊಂಡಿರುವ ನೋಂದಾಯಿತ ಅಸಂಘಟಿತ ಕಾರ್ಮಿಕರಿಗೆ ತಲಾ ಮೂರು ಸಾವಿರ ರೂ. ಪರಿಹಾರವನ್ನು ನೀಡಲಾಗುತ್ತಿದೆ ಎಂದು ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ಆಯುಕ್ತ ಡಾ. ಪಿ.ಎಸ್. ಹರ್ಷ ಅವರು ತಿಳಿಸಿದ್ದಾರೆ.
ಅವಧಿ ವಿಸ್ತರಣೆ ಬಳಿಕವೂ ಅರ್ಜಿ ಸಲ್ಲಿಸುವವರು ಕಡ್ಡಾಯವಾಗಿ ಸೇವಾಸಿಂಧು ಪೋರ್ಟಲ್ನಲ್ಲೇ ಸಲ್ಲಿಸಬೇಕು. ಅರ್ಜಿ ಇಲ್ಲವೇ ಶಿಫಾರಸ್ಸು ಪತ್ರಗಳನ್ನು ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ಯಾವುದೇ ಕಚೇರಿಗಳಲ್ಲಿ ಸ್ವೀಕರಿಸಲಾಗುವುದಿಲ್ಲ. ಅರ್ಜಿ ನಮೂನೆ ಮತ್ತು ಇನ್ನಿತರ ಷರತ್ತುಗಳಿಗಾಗಿ www.sevasindhu.karnataka.gov.in ಗೆ ಭೇಟಿ ನೀಡಿ ಪಡೆದುಕೊಳ್ಳಬಹುದು.
ಆರ್ಥಿಕ ನೆರವಿಗೆ ಸಂಬಂಧಿಸಿದಂತೆ ಹೆಚ್ಚಿನ ಮಾಹಿತಿ ಮತ್ತು ಆನ್ ಲೈನ್ ನಲ್ಲಿ ಅರ್ಜಿಯನ್ನು ಭರ್ತಿ ಮಾಡಲು, ತಾಂತ್ರಿಕ ಮಾರ್ಗದರ್ಶನದ ಅಗತ್ಯವಿದ್ದಲ್ಲಿ ಕರ್ನಾಟಕ ಚಲನಚಿತ್ರ ಅಕಾಡೆಮಿಯಲ್ಲಿ ಸ್ಥಾಪಿಸಿರುವ ಸಹಾಯವಾಣಿಯ ಮೊಬೈಲ್ ಸಂಖ್ಯೆ 89046 45529 ಅನ್ನು ಸಂಪರ್ಕಿಸಬಹುದು ಇಲ್ಲವೆ [email protected] ಗೆ ಇಮೇಲ್ ಮೂಲಕ ಪಡೆದುಕೊಳ್ಳಬಹುದು ಎಂದು ಅಧಿಕೃತ ಪ್ರಕಟಣೆ ತಿಳಿಸಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Honey Trap; ಗುತ್ತಿಗೆದಾರನನ್ನು ಟೀಗೆ ಕರೆದು ಖೆಡ್ಡಾಕ್ಕೆ ಕೆಡವಿದಳು!
RTO; ಫಿಟ್ನೆಸ್ ಸರ್ಟಿಫಿಕೇಟ್ಗಿನ್ನು ಆರ್ಟಿಒ ಬೇಕಿಲ್ಲ!
High Court: ತೃತೀಯ ಲಿಂಗಿಗಳ ಜನನ, ಮರಣ ಪ್ರಮಾಣ ಪತ್ರದಲ್ಲಿ ಮಾರ್ಪಾಡು ಮಾಡಿ; ಹೈಕೋರ್ಟ್
Havyaka Sammelana; ಹೆಚ್ಚು ಮಕ್ಕಳನ್ನು ಹೆರಿ, ಮಠ ಸಲಹುತ್ತದೆ: ಸ್ವಾಮೀಜಿ ಕರೆ
Stamp Paper; ನಕಲಿ ಹಾವಳಿಗೆ ತಡೆ: ಎ.1ರಿಂದ ಡಿಜಿಟಲ್ ಪಾವತಿ ಪದ್ಧತಿ ಜಾರಿ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Puttur: ನಿಯಂತ್ರಣ ತಪ್ಪಿ ಗುಂಡಿಗೆ ಬಿದ್ದ ಕಾರು; ಮೂವರ ದುರ್ಮರಣ
INDvsAUS: ವಿಚಿತ್ರ ರೀತಿಯಲ್ಲಿ ಔಟಾದ ರಿಷಭ್ ಪಂತ್ ವಿರುದ್ದ ಕಿಡಿಕಾರಿದ ಗಾವಸ್ಕರ್
Hathras: ಶಾಲೆಗೆ ರಜೆ ಸಿಗಬೇಕೆಂದು 2ನೇ ತರಗತಿ ಮಗುವನ್ನು ಕೊಂದ ವಿದ್ಯಾರ್ಥಿ!
Meghalaya: ಚರ್ಚ್ಗೆ ನುಗ್ಗಿ ಜೈ ಶ್ರೀರಾಮ್ ಘೋಷಣೆ: ಕೇಸು ದಾಖಲು
Honey Trap; ಗುತ್ತಿಗೆದಾರನನ್ನು ಟೀಗೆ ಕರೆದು ಖೆಡ್ಡಾಕ್ಕೆ ಕೆಡವಿದಳು!
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.