ದಂಡಕ್ಕಷ್ಟೆ ವಿನಾಯಿತಿ : ದಂಡ ಮೊತ್ತ ಇಳಿದಿರಬಹುದು, ಆದರೆ ಮಾಸ್ಕ್ ಬಿಡಬೇಡಿ
Team Udayavani, Oct 8, 2020, 6:34 AM IST
ಸಾಂದರ್ಭಿಕ ಚಿತ್ರವನ್ನು ಬಳಸಲಾಗಿದೆ – Representative Image Used
ಬೆಂಗಳೂರು: ಮಾಸ್ಕ್ ಧರಿಸದವರಿಂದ ಭಾರೀ ಮೊತ್ತದ ದಂಡ ವಸೂಲಿಗೆ ತೀವ್ರ ವಿರೋಧ ವ್ಯಕ್ತವಾದ ಹಿನ್ನೆಲೆಯಲ್ಲಿ ರಾಜ್ಯಸರಕಾರವು ದಂಡದ ಪ್ರಮಾಣವನ್ನು ಇಳಿಕೆ ಮಾಡಿದೆ.
ಇನ್ನು ನಗರ ಪ್ರದೇಶದಲ್ಲಿ 1,000 ರೂ. ಬದಲಿಗೆ 250 ರೂ., ಗ್ರಾಮೀಣ ಪ್ರದೇಶದಲ್ಲಿ 500 ರೂ. ಬದಲಿಗೆ 100 ರೂ. ದಂಡ ವಸೂಲಿ ಮಾಡಲು ನಿರ್ಧರಿಸಿದೆ.
ಆದರೆ ದಂಡ ಕಡಿಮೆಯಾಗಿದೆ, ಕಟ್ಟಿದರಾಯಿತು ಎಂಬ ನಿರ್ಲಕ್ಷ್ಯ ಬೇಡ ಎಂಬುದು ತಜ್ಞರ ಕಳಕಳಿ.
ಮಣಿಪಾಲ್ ಆಸ್ಪತ್ರೆಗಳ ಅಧ್ಯಕ್ಷ ಡಾ| ಸುದರ್ಶನ್ ಬಲ್ಲಾಳ್ ಅವರು ಹೇಳುವ ಪ್ರಕಾರ, ಸರಕಾರ ದಂಡ ಹೆಚ್ಚು ಮಾಡಿದೆ ಅಥವಾ ದಂಡ ಹಾಕುತ್ತಿದೆ ಎಂದರೆ ಸೋಂಕಿನ ಹರಡುವಿಕೆ ಹೆಚ್ಚಿದೆ ಎಂದರ್ಥ. ಇಂಥ ಸಂದರ್ಭದಲ್ಲಿ ಜನರು ಜವಾಬ್ದಾರಿಯಿಂದ ನಡೆದುಕೊಂಡು ಸ್ವಯಂ ಶಿಸ್ತು ಅಳವಡಿಸಿಕೊಳ್ಳಬೇಕು.
ಸೋಂಕಿನ ಕುರಿತು ನಿರ್ಲಕ್ಷ್ಯ ವಹಿಸಿದರೆ ದಂಡ ಕಟ್ಟಲೇಬೇಕಾಗುತ್ತದೆ. ಅದು ಸರಕಾರ ವಿಧಿಸುವ ನೂರಾರು ರೂಪಾಯಿ ದಂಡವಾಗಿರಬಹುದು ಅಥವಾ ಸೋಂಕು ತಗಲಿ ಅನಾರೋಗ್ಯಕ್ಕೀಡಾಗುವುದು ಆಗಿರಬಹುದು ಎಂದು ರಾಜೀವ್ ಗಾಂಧಿ ಎದೆ ರೋಗಗಳ ಆಸ್ಪತ್ರೆ ನಿರ್ದೇಶಕ ಡಾ| ನಾಗರಾಜ್ ಎಚ್ಚರಿಕೆ ನೀಡಿದ್ದಾರೆ.
ತಜ್ಞರು ಏನನ್ನುತ್ತಾರೆ?
ಸರಕಾರ ದಂಡ ವಿಧಿಸುವ ಅಧಿಕಾರವನ್ನು ಪೊಲೀಸರಿಗೂ ನೀಡಿರುವುದು ಒಳ್ಳೆಯದೇ. ಆದರೆ ಪೊಲೀಸರ ಕಾರ್ಯ ಅತ್ಯಂತ ಪಾರದರ್ಶಕವಾಗಿರಬೇಕು. ಜನರಿಗೆ ತೊಂದರೆ ಆಗುವಂತೆ ಕಾರ್ಯನಿರ್ವಹಿಸಬಾರದು.
– ನಿವೃತ್ತ ಡಿಜಿ ಮತ್ತು ಐಜಿಪಿ ಡಾ| ಅಜಯ್‌ಕುಮಾರ್ ಸಿಂಗ್
ಮಾಸ್ಕ್ ಹಾಕದವರಿಗೆ ದಂಡ ವಿಧಿಸುವಾಗ ಪೊಲೀಸರು ಮಾನವೀಯ ದೃಷ್ಟಿಯಿಂದ ಕಾರ್ಯನಿರ್ವಹಿಸಬೇಕು. ಜನರ ಜತೆ ಹೇಗೆ ನಡೆದುಕೊಳ್ಳಬೇಕುಎಂಬ ಬಗ್ಗೆ ಹಿರಿಯ ಅಧಿಕಾರಿಗಳು ಸಿಬಂದಿಗೆ ತರಬೇತಿ ನೀಡಬೇಕು.
– ನಿವೃತ್ತ ಡಿಜಿಪಿ ಎಸ್.ಟಿ. ರಮೇಶ್
ಮುಖ್ಯಮಂತ್ರಿ ಆದೇಶ
ರಾಜ್ಯಾದ್ಯಂತ ಸಾರ್ವಜನಿಕರಿಂದ ತೀವ್ರ ವಿರೋಧ ವ್ಯಕ್ತವಾಗಲಾರಂಭಿಸುತ್ತಿದ್ದಂತೆ ಸಿಎಂ ಯಡಿಯೂರಪ್ಪ ತತ್‌ಕ್ಷಣವೇ ದಂಡ ಮೊತ್ತವನ್ನು ಗಣನೀಯವಾಗಿ ಇಳಿಸುವಂತೆ ಆದೇಶಿಸಿದ್ದಾರೆ. ಪ್ರಧಾನಿ ಮೋದಿ ಹೇಳಿರುವಂತೆ ಜೀವ ಮತ್ತು ಜೀವನ ಎರಡನ್ನೂ ಸರಿದೂಗಿಸಲು ಸರಕಾರವು ಸರ್ವ ಪ್ರಯತ್ನ ಮಾಡುತ್ತಿದೆ. ಜನರು ಸ್ವಯಂಪ್ರೇರಿತವಾಗಿ ಮಾಸ್ಕ್ ಧರಿಸುವುದು, ಸ್ಯಾನಿಟೈಸರ್ ಬಳಸುವುದು ಹಾಗೂ ಸಾಮಾಜಿಕ ಅಂತರ ಕಾಯ್ದುಕೊಳ್ಳುವುದರ ಮೂಲಕ ಸಹಕರಿಸಬೇಕು ಎಂದು ಮನವಿ ಮಾಡಿದ್ದಾರೆ.
ಅಧ್ಯಯನ ಪ್ರಕಾರ ಶೇ. 40ರಷ್ಟು ಜನ ಮಾಸ್ಕ್ ಬಳಸುತ್ತಿಲ್ಲ. ಸರಕಾರಕ್ಕೆ ಜನರಿಂದ ಹಣ ವಸೂಲು ಮಾಡಬೇಕು ಎಂಬ ಉದ್ದೇಶವಿಲ್ಲ. ದಂಡದ ಭೀತಿ ಇದ್ದರೆ ನಿಯಮ ಪಾಲಿಸುತ್ತಾರೆ ಎಂಬ ಕಾರಣಕ್ಕೆ ಈ ಕ್ರಮ.
– ಡಾ| ಸಿ.ಎನ್. ಮಂಜುನಾಥ್, ಜಯದೇವ ಹೃದ್ರೋಗ ವಿಜ್ಞಾನ ಮತ್ತು ಸಂಶೋಧನ ಸಂಸ್ಥೆಯ ನಿರ್ದೇಶಕರು
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Jayadeva Hospital ಉದ್ಘಾಟನಾ ಸಮಾರಂಭದಿಂದ ದೂರ ಉಳಿದ ಸಚಿವ ಪ್ರಿಯಾಂಕ್ ಖರ್ಗೆ
Health Programme: ಗೃಹ ಆರೋಗ್ಯ ಯೋಜನೆ ಶೀಘ್ರವೇ ರಾಜ್ಯಕ್ಕೆ ವಿಸ್ತರಣೆ: ಸಚಿವ ದಿನೇಶ್
Remark Case: ನನ್ನ ಬಂಧನ ಪ್ರಕರಣ ನ್ಯಾಯಾಂಗ ತನಿಖೆಯಾಗಲಿ: ಎಂಎಲ್‌ಸಿ ಸಿ.ಟಿ.ರವಿ
BJP; ಬಣ ರಾಜಕೀಯ ತಪ್ಪಿಸಲು ತೃತೀಯ ಬಣ ಸಭೆ?
English ತರಬೇತಿ ಮಾಧ್ಯಮವಷ್ಟೇ ಆಗಲಿ: ಗೊ.ರು.ಚನ್ನಬಸಪ್ಪ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
CT Ravi; ಚಿಕ್ಕಮಗಳೂರಿಗೆ ಬಂದ ಕೂಡಲೇ ಟೆಂಪಲ್ ರನ್ ಆರಂಭಿಸಿದ ಸಿ.ಟಿ.ರವಿ
Healt: ಶಿಶುವಿನ ಹಾಲು ಹಲ್ಲುಗಳು ನೀವು ತಿಳಿದಿರಬೇಕಾದ 9 ಲಕ್ಷಣಗಳು
Jayadeva Hospital ಉದ್ಘಾಟನಾ ಸಮಾರಂಭದಿಂದ ದೂರ ಉಳಿದ ಸಚಿವ ಪ್ರಿಯಾಂಕ್ ಖರ್ಗೆ
Kalaburagi; ಜಾಹೀರಾತು, ಫಲಕದಲ್ಲಿ ಹೆಸರಿಲ್ಲ: ಶಾಸಕ ಅಲ್ಲಮಪ್ರಭು ಬೆಂಬಲಿಗರಿಂದ ಪ್ರತಿಭಟನೆ
Viral: ಲಿಂಗ ಪರಿವರ್ತನೆ ಸರ್ಜರಿಗೆ ಒಳಗಾಗಿ ಪ್ರೀತಿಸಿದ ಯುವತಿ ಜತೆ ವಿವಾಹವಾದ ಮಹಿಳೆ.!
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.