ಡಿಕೆಶಿ ವಿರುದ್ಧ ಎಫ್ಐಆರ್: ಸಿಬಿಐಗೆ ಹೈಕೋರ್ಟ್ ನೋಟಿಸ್
Team Udayavani, Aug 1, 2022, 10:32 PM IST
ಬೆಂಗಳೂರು: ಆದಾಯ ಮೀರಿ ಆಸ್ತಿ ಸಂಪಾದಿಸಿದ ಆರೋಪದಲ್ಲಿ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ವಿರುದ್ಧ ದಾಖಲಿಸಿರುವ ಎಫ್ಐಆರ್ ಸಂಬಂಧ ಸಿಬಿಐಗೆ ಹೈಕೋರ್ಟ್ ನೋಟಿಸ್ ಜಾರಿಗೊಳಿಸಿದೆ.
ತಮ್ಮ ವಿರುದ್ಧ ಸಿಬಿಐ ದಾಖಲಿಸಿರುವ ಎಫ್ಆರ್‌ಐ ರದ್ದುಪಡಿಸುವಂತೆ ಕೋರಿ ಡಿ.ಕೆ. ಶಿವಕುಮಾರ್ ಸಲ್ಲಿಸಿದ್ದ ಅರ್ಜಿಯನ್ನು ನ್ಯಾಯಮೂರ್ತಿ ಸುನೀಲ್ ದತ್ ಯಾದವ್ ಅವರಿದ್ದ ಏಕಸದಸ್ಯ ನ್ಯಾಯಪೀಠ ಸೋಮವಾರ ವಿಚಾರಣೆ ನಡೆಸಿತು.
ಈ ವೇಳೆ ಡಿ.ಕೆ. ಶಿವಕುಮಾರ್ ಪರ ವಾದ ಮಂಡಿಸಿದ ಹಿರಿಯ ನ್ಯಾಯವಾದಿ ಬಿ.ವಿ. ಆಚಾರ್ಯ, ಸಿಬಿಐ ಕ್ರಮವನ್ನು ಬಲವಾಗಿ ಆಕ್ಷೇಪಿಸಿದರು. ಅರ್ಜಿದಾರರ ವಿರುದ್ಧ 2020ರ ಅಕ್ಟೋಬರ್ 3ರಂದು ಭ್ರಷ್ಟಾಚಾರ ತಡೆ ಕಾಯ್ದೆ-1988ರ ಕಲಂ 12 (2), 13 (1) (ಇ) ಅಡಿಯಲ್ಲಿ ದಾಖಲಿಸಿರುವ ಎಫ್ಐಆರ್ ಕಾನೂನುಬಾಹಿರ ಎಂದರು.
ಅರ್ಜಿದಾರರು ಕೃಷಿ ಕುಟುಂಬದ ಹಿನ್ನೆಲೆಯಿಂದ ಬಂದವರಾಗಿದ್ದು, 1989ರಿಂದ ವಿಧಾನಸಭೆ ಸದಸ್ಯನಾಗಿ ಒಟ್ಟು ಏಳು ಬಾರಿ ಆಯ್ಕೆಯಾಗುವ ಮೂಲಕ ಜನಪ್ರಿಯ ಸಾರ್ವಜನಿಕ ಸೇವಕ ಎನಿಸಿದ್ದಾರೆ. ಈ ಪ್ರಕರಣದಲ್ಲಿ ಅವರ ವಿರುದ್ಧ ದಾಖಲಿಸಿರುವ ಎಫ್ಐಆರ್‌ನಲ್ಲಿ ಕುಟುಂಬದ ಸದಸ್ಯರ ಹೆಸರನ್ನೂ ಸೇರ್ಪಡೆ ಮಾಡಿರುವುದು ತಪ್ಪು ಎಂದರು.
ಆದಾಯ ಮೀರಿದ ಆಸ್ತಿ ಗಳಿಕೆ ಪ್ರಕರಣಗಳಲ್ಲಿ ಅನುಸರಿಸಬೇಕಾದ ನಿಯಮಗಳು ಮತ್ತು ಎಫ್ಐಆರ್ ದಾಖಲಿಸುವ ಮುನ್ನ ಭ್ರಷ್ಟಾಚಾರ ತಡೆ ಕಾಯ್ದೆಯ ಕಲಂ17 ಎ ಅನುಸಾರ ಸಕ್ಷಮ ಪ್ರಾಧಿಕಾರದ ಪೂರ್ವಾನುಮತಿ ಪಡೆದಿಲ್ಲ. ಪರಿಶೀಲನಾ ಅವಧಿಯಲ್ಲಿನ ಅರ್ಜಿದಾರರ ಆದಾಯ, ಆಸ್ತಿ ಮತ್ತು ವೆಚ್ಚದ ಹೇಳಿಕೆಯ ವಿವರಗಳೇ ಇಲ್ಲ. ಪ್ರಾಥಮಿಕ ತನಿಖೆಯ ಅಂಶಗಳೇನು ಎಂಬುದನ್ನೂ ಎಫ್ಐಆರ್‌ನಲ್ಲಿ ಎಲ್ಲೂ ವಿವರಿಸಿಲ್ಲ. ಸಿಬಿಐ ತನ್ನದೇ ತನಿಖಾ ಮಾರ್ಗಸೂಚಿಗಳನ್ನು ಅನುಸರಿಸಿಲ್ಲ ಎಂದು ವಿವರಿಸಿದರು.
ಭ್ರಷ್ಟಾಚಾರ ನಿಗ್ರಹ ತಡೆ ಕಾಯ್ದೆ ಅನುಸಾರ ಸಾರ್ವಜನಿಕ ಸೇವಕರ ವಿರುದ್ಧ ಮಾತ್ರವೇ ತನಿಖೆ ನಡೆಸಬೇಕಿತ್ತು. ಆದರೆ, ಸಿಬಿಐ ಅರ್ಜಿದಾರರ ಕುಟುಂಬದ ಸದಸ್ಯರ ವಿರುದ್ಧವೂ ಪ್ರಕರಣ ದಾಖಲಿಸಿರುವುದು ಕಾನೂನಿಗೆ ವಿರುದ್ಧವಾಗಿದೆ. ಆದ್ದರಿಂದ, ಈ ಪ್ರಕರಣ ರದ್ದುಗೊಳಿಸಬೇಕು ಎಂದು ಕೋರಿದರು.
2013ರ ಏಪ್ರಿಲ್ 1ರಿಂದ 2018ರ ಏಪ್ರಿಲ್ 30ರವರೆಗಿನ ಪರಿಶೀಲನಾ ಅವಧಿಗೂ ಮುನ್ನ ಡಿ.ಕೆ.ಶಿವಕುಮಾರ್ ಅವರ ಸ್ಥಿರ ಮತ್ತು ಚರಾಸ್ತಿಯ ಒಟ್ಟು ಮೊತ್ತ 33,92,62,793 ಇತ್ತು. ಪರಿಶೀಲನಾ ಅವಧಿಯಲ್ಲಿ ಈ ಮೊತ್ತ 128,60,81,700ಕ್ಕೆ ಏರಿಕೆ ಆಗಿದೆ ಎಂಬುದು ಸಿಬಿಐ ಆರೋಪ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Congress; ಡಿನ್ನರ್ ಮೀಟಿಂಗ್ ನಲ್ಲಿ ವಿಶೇಷ ಇಲ್ಲ: ಸಚಿವ ಭೈರತಿ ಸುರೇಶ್
Anandpur: ಮುಂದುವರೆದ ಕಾಡಾನೆಗಳ ದಾಳಿ… ಇಲಾಖೆ ವಿರುದ್ಧ ರೈತರ ಆಕ್ರೋಶ
Bengaluru:ಕುಡಿದ ಅಮಲಲ್ಲಿದ್ದ ಚಾಲಕ; ರಕ್ಷಣೆಗಾಗಿ ಚಲಿಸುತ್ತಿದ್ದ ರಿಕ್ಷಾದಿಂದ ಜಿಗಿದ ಮಹಿಳೆ
Congress; ಔತಣಕೂಟದ ಸಭೆಗೆ ರಾಜಕೀಯ ಮಹತ್ವ ಬೇಕಿಲ್ಲ: ಸತೀಶ್ ಜಾರಕಿಹೊಳಿ
Hubli; ಅಧಿಕಾರಕ್ಕಾಗಿ ಕಾಂಗ್ರೆಸ್ ಯಾವ ಕೀಳು ಮಟ್ಟಕ್ಕೆ ಇಳಿಯಲು ಹೇಸಲ್ಲ: ಪ್ರಹ್ಲಾದ ಜೋಶಿ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
ಗದಗ: ಮಾವು ಬಂಪರ್ ಬೆಳೆ ನಿರೀಕ್ಷೆ- ಬೆಳೆಗಾರರಿಗೆ ಸಂತಸ
Congress; ಡಿನ್ನರ್ ಮೀಟಿಂಗ್ ನಲ್ಲಿ ವಿಶೇಷ ಇಲ್ಲ: ಸಚಿವ ಭೈರತಿ ಸುರೇಶ್
Test Cricket; ರೋಹಿತ್ ಆಯ್ತು, ಈಗ ವಿರಾಟ್..: ಬಿಸಿಸಿಐ ಕಳಿಸಿದ ʼಆʼ ಸಂದೇಶದಲ್ಲಿ ಏನಿದೆ?
Gangolli: ಪಂಚಾಯತ್‌ನೊಳಗೆ ನಮಾಜ್; ಹಿಂದೂ ಹಿತರಕ್ಷಣಾ ಸಮಿತಿ ಪ್ರತಿಭಟನೆ
Anandpur: ಮುಂದುವರೆದ ಕಾಡಾನೆಗಳ ದಾಳಿ… ಇಲಾಖೆ ವಿರುದ್ಧ ರೈತರ ಆಕ್ರೋಶ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.