ಸೋನಿಯಾ ಗಾಂಧಿ ವಿರುದ್ಧ ಎಫ್‌ಐಆರ್
Team Udayavani, May 21, 2020, 7:11 AM IST
ಸಾಗರ: ಕೇಂದ್ರ ಸರ್ಕಾರ, ಪ್ರಧಾನ ಮಂತ್ರಿ ಕಾರ್ಯ ನಿರ್ವಹಣೆ ಬಗ್ಗೆ ಹಾಗೂ ಪಿಎಂ ಕೇರ್ ನಿ ಧಿಯಿಂದ ಹಣ ದುರುಪಯೋಗ ಆಗಿದೆ ಎಂದು ಸಾಮಾಜಿಕ ಜಾಲತಾಣ ಗಳಲ್ಲಿ ಸಂದೇಶಗಳನ್ನು ಹರಿಯ ಬಿಟ್ಟಿರುವುದರ ಹಿನ್ನೆಲೆಯಲ್ಲಿ ಕಾಂಗ್ರೆಸ್ ಪಕ್ಷದ ಅಧ್ಯಕ್ಷೆ ಸೋನಿಯಾ ಗಾಂಧಿ ಅವರ ವಿರುದ್ಧ ಎಫ್‌ಐಆರ್ ದಾಖಲಾಗಿದೆ.
ಮೇ 11ರಂದು ಕಾಂಗ್ರೆಸ್ ಐಎನ್‌ಸಿ ಇಂಡಿಯಾ ಟ್ವಿಟರ್ ಖಾತೆ ಮೂಲಕ ಇಂತಹ ಹಲವಾರು ಸಂದೇಶಗಳನ್ನು ಅಪ್‌ಲೋಡ್ ಮಾಡಲಾಗಿದ್ದು, ಸೋನಿಯಾ ಅವರ ನವದೆಹಲಿ ಕಚೇರಿ ಈ ಖಾತೆಯನ್ನು ನಿರ್ವಹಿಸುತ್ತಿದೆ. ಪಿಎಂ ಕೇರ್ ಹಣವನ್ನು ವೈಯಕ್ತಿಕವಾಗಿ ಬಳಸಲಾಗಿದೆ. ಬಡಜನರ ಉಪಯೋಗಕ್ಕೆ ಬಳಸುತ್ತಿಲ್ಲ ಎಂದು ಸುಳ್ಳು ಸಂದೇಶದ ಮೂಲಕ ದೇಶದ ನಾಗರಿಕರನ್ನು ಎತ್ತಿ ಕಟ್ಟುವ ಕೆಲಸ ಮಾಡಲಾಗಿದೆ ಎಂದು ದೂರುದಾರ ನಗರದ ನೀಲ್‌ಕೋಡ್ ಬಡಾವಣೆ ವಕೀಲ ಪ್ರವೀಣ್ ಕೆ.ವಿ. ಆರೋಪಿಸಿ ನಗರ ಠಾಣೆಗೆ ಬುಧವಾರ ದೂರು ನೀಡಿದ್ದರು. ಪೊಲೀಸರು ಸೋನಿಯಾ ಗಾಂಧಿ ವಿರುದ್ಧ ಪ್ರಥಮ ವರ್ತಮಾನ ವರದಿ ದಾಖಲಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Udupi: ಶ್ರೀಕೃಷ್ಣ ಮಠ: ಗೀತೋತ್ಸವಕ್ಕೆ ಪರ್ತಗಾಳಿ ಶ್ರೀಗಳಿಗೆ ಆಹ್ವಾನ
Udupi: ಸಮಾಜ ರೂಪಿಸುವಲ್ಲಿ ಯಕ್ಷಗಾನ ಪಾತ್ರ ಹಿರಿದು: ಪೇಜಾವರ ಶ್ರೀ
Kaup: ಹೊಸ ಮಾರಿಗುಡಿ ದೇವಸ್ಥಾನ: ಬೆಂಗಳೂರಿನಲ್ಲಿ ವಾಗೀಶ್ವರಿ ಪೂಜೆ, ಲೇಖನ ಸಂಕಲ್ಪ
Udupi: ಗೀತಾರ್ಥ ಚಿಂತನೆ-97: ಮೋಹದ ಸ್ಥಾನದಲ್ಲಿ ಕರ್ತವ್ಯಪ್ರಜ್ಞೆಯ ಸ್ಥಾಪನೆ
ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಚಿತ್ತೂರು ಪ್ರಭಾಕರ ಆಚಾರ್ಯರಿಗೆ ಗೌರವಾರ್ಪಣೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.