ಎಫ್ಐಆರ್ ರದ್ದು: ಬಿಎಸ್‌ವೈ ಅರ್ಜಿ ವಿಚಾರಣೆ ಮುಂದೂಡಿಕೆ
Team Udayavani, Jul 2, 2019, 3:00 AM IST
ಕಲಬುರಗಿ: ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ವಿರುದ್ಧದ ಆಪರೇಷನ್ ಕಮಲ ಆಡಿಯೋ ಟೇಪ್ ಪ್ರಕರಣ ಸಂಬಂಧದ ಅರ್ಜಿ ವಿಚಾರಣೆಯನ್ನು ಇಲ್ಲಿನ ಹೈಕೋರ್ಟ್ ಪೀಠ ಜು.22ಕ್ಕೆ ಮುಂದೂಡಿದೆ.
ಗುರುಮಿಠಕಲ್ ಜೆಡಿಎಸ್ ಶಾಸಕ ನಾಗನಗೌಡ ಕಂದಕೂರು ಅವರನ್ನು ಬಿಜೆಪಿಗೆ ಸೆಳೆಯಲು ಪುತ್ರ ಶರಣಗೌಡ ಅವರಿಗೆ ಬಿಎಸ್‌ವೈ ಲಂಚದ ಆಮಿಷವೊಡ್ಡಿದ್ದರು ಎನ್ನಲಾದ ಆಡಿಯೋ ಪ್ರಕರಣ ಸಂಚಲನ ಮೂಡಿಸಿತ್ತು. ಈ ಕುರಿತು ಶರಣಗೌಡ ಕಂದಕೂರು ದೇವದುರ್ಗ ಠಾಣೆಯಲ್ಲಿ ಯಡಿಯೂರಪ್ಪ ವಿರುದ್ಧ ದೂರು ದಾಖಲಿಸಿದ್ದರು.
ದೂರು ರದ್ದು ಮಾಡುವಂತೆ ಕೋರಿ ಬಿಎಸ್‌ವೈ ಹೈಕೋರ್ಟ್ ಪೀಠದಲ್ಲಿ ಅರ್ಜಿ ಸಲ್ಲಿಸಿದ್ದು, ಈಗಾಗಲೇ ಪ್ರಕರಣದ ತನಿಖೆಗೆ ನ್ಯಾಯಾಲಯ ತಡೆಯಾಜ್ಞೆ ನೀಡಿದೆ. ಆದರೆ, ಪೊಲೀಸ್ ಠಾಣೆಯಲ್ಲಿ ತಮ್ಮ ವಿರುದ್ಧ ದಾಖಲಾಗಿರುವ ಎಫ್‌ಐಆರ್ ರದ್ದುಪಡಿಸಬೇಕು ಎಂದು ಬಿಎಸ್‌ವೈ ಅರ್ಜಿ ಸಲ್ಲಿಸಿದ್ದು, ಸೋಮವಾರ ಹಿರಿಯ ನ್ಯಾಯವಾದಿ ಸಿ.ವಿ.ನಾಗೇಶ ವಾದ ಮಂಡಿಸಿದರು.
ಅರ್ಜಿ ವಿಚಾರಣೆಗೆ ನೀಡಿರುವ ತಡೆಯಾಜ್ಞೆ ತೆರವುಗೊಳಿಸಬೇಕು. ಸಮಗ್ರ ತನಿಖೆಗೆ ಆದೇಶ ನೀಡಬೇಕು ಎಂದು ಶರಣಗೌಡ ಕಂದಕೂರ ಪರ ವಕೀಲರು ಪ್ರತಿವಾದ ಮಾಡಿದರು. ವಾದ-ಪ್ರತಿವಾದ ಆಲಿಸಿದ ನ್ಯಾಯಮೂರ್ತಿಗಳು ಜು.22ಕ್ಕೆ ವಿಚಾರಣೆ ಮುಂದೂಡಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Kadur; ತಾಲೂಕು ವೈದ್ಯಾಧಿಕಾರಿ ಮನೆ ಮೇಲೆ ಲೋಕಾಯುಕ್ತ ದಾಳಿ
Gangavathi; ಸಿಲಿಂಡರ್ ಸ್ಪೋ*ಟಗೊಂಡು ಅಗ್ನಿ ಅವಘಡ: ವೈದ್ಯೆ ಸೇರಿ ಇಬ್ಬರಿಗೆ ತೀವ್ರ ಗಾಯ
Karnataka Lokayukta; ಬೆಟಗೇರಿ ನಗರಸಭೆ ಇಂಜಿನಿಯರ್ ಗೆ ಬೆಳ್ಳಂಬೆಳಗ್ಗೆ ಶಾಕ್..!
Belagavi; ಸಂಘದ ಹೆಸರಲ್ಲಿ ಮಹಿಳೆಯರಿಗೆ 19.35 ಕೋಟಿ ರೂ. ಮಹಾ ವಂಚನೆ!
ಜಿ.ಪಂ.,ತಾ.ಪಂ. ಚುನಾವಣೆ ವಿಳಂಬಕ್ಕೆ ಸರಕಾರವೇ ನೇರ ಹೊಣೆ, ನಾವು ಚುನಾವಣೆಗೆ ಸಿದ್ಧ: ಆಯೋಗ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Kadur; ತಾಲೂಕು ವೈದ್ಯಾಧಿಕಾರಿ ಮನೆ ಮೇಲೆ ಲೋಕಾಯುಕ್ತ ದಾಳಿ
Gangavathi; ಸಿಲಿಂಡರ್ ಸ್ಪೋ*ಟಗೊಂಡು ಅಗ್ನಿ ಅವಘಡ: ವೈದ್ಯೆ ಸೇರಿ ಇಬ್ಬರಿಗೆ ತೀವ್ರ ಗಾಯ
Karnataka Lokayukta; ಬೆಟಗೇರಿ ನಗರಸಭೆ ಇಂಜಿನಿಯರ್ ಗೆ ಬೆಳ್ಳಂಬೆಳಗ್ಗೆ ಶಾಕ್..!
Belagavi; ಸಂಘದ ಹೆಸರಲ್ಲಿ ಮಹಿಳೆಯರಿಗೆ 19.35 ಕೋಟಿ ರೂ. ಮಹಾ ವಂಚನೆ!
Vitla; ನಿವೃತ್ತ ಶಿಕ್ಷಕ, ಅರ್ಥಧಾರಿ ಪಕಳಕುಂಜ ಶ್ಯಾಮ ಭಟ್ ವಿಧಿವಶ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.