![Kuruburu-Shanta](https://www.udayavani.com/wp-content/uploads/2025/02/Kuruburu-Shanta-415x249.jpg)
![Kuruburu-Shanta](https://www.udayavani.com/wp-content/uploads/2025/02/Kuruburu-Shanta-415x249.jpg)
Team Udayavani, Aug 14, 2023, 5:42 PM IST
ಬೆಂಗಳೂರು: ಹೇಳಿಕೆ ಕುರಿತು ದಾಖಲಾಗಿದ್ದ ಎಫ್ ಐಆರ್ ಗೆ ಹೈಕೋರ್ಟ್ ತಡೆ ನೀಡಿದ ಬೆನ್ನಲ್ಲೇ ರಿಯಲ್ ಸ್ಟಾರ್ ಉಪೇಂದ್ರ ಅವರು ಸೋಮವಾರ ಎಕ್ಸ್ ನಲ್ಲಿ ಮಾರ್ಮಿಕ ಪೋಸ್ಟ್ ಮಾಡಿ ”ದ್ವೇಷದ ಆಟಕ್ಕೆ ತಡೆ ಹಿಡಿದ ಹೈಕೋರ್ಟ್ ನಡೆ” ಎಂದು ಬರೆದಿದ್ದಾರೆ.
ಅನ್ಯಾಯದ ಅನುಮಾನಕ್ಕೇ ಹೆಡೆ ಬಿಚ್ಚಿ ಬುಸುಗುಟ್ಟಿದ ಪಡೆ. ದ್ವೇಷದ ಆಟಕ್ಕೆ ತಡೆ ಹಿಡಿದ ಹೈಕೋರ್ಟ್ ನಡೆ. ಅನಿರೀಕ್ಷಿತ ಬಿಸಿಲ ತಾಪಕ್ಕೆ ಸಹೃದಯಗಳು ಹಿಡಿದ ಪ್ರೀತಿಯ ಕೊಡೆ. ನನ್ನನ್ನು ತಿದ್ದಿ ತೀಡುತ್ತಿರುವ ನಿಮ್ಮೆಲ್ಲರನ್ನೂ ಇನ್ನೂ ಹೆಚ್ಚು ಹೆಚ್ಚು ಪ್ರೀತಿಸುವ ಹ್ರದಯ ನನಗೆ ಕೊಡೆ ತಾಯಿ… ನನಗೆ ಕೊಡೆ. ಧನ್ಯವಾದಗಳು” ಎಂದು ಮಾರ್ಮಿಕವಾಗಿ ಟ್ವೀಟ್ ಮಾಡಿದ್ದಾರೆ.
ಅನ್ಯಾಯದ ಅನುಮಾನಕ್ಕೇ ಹೆಡೆ ಬಿಚ್ಚಿ ಬುಸುಗುಟ್ಟಿದ ಪಡೆ 🙏
ಧ್ವೇಷದ ಆಟಕ್ಕೆ ತಡೆ ಹಿಡಿದ ಹೈಕೋರ್ಟ್ ನಡೆ 🙏
ಅನಿರೀಕ್ಷಿತ ಬಿಸಿಲ ತಾಪಕ್ಕೆ ಸಹ್ರದಯಗಳು ಹಿಡಿದ ಪ್ರೀತಿಯ ಕೊಡೆ 🙏
ನನ್ನನ್ನು ತಿದ್ದಿ ತೀಡುತ್ತಿರುವ ನಿಮ್ಮೆಲ್ಲರನ್ನೂ ಇನ್ನೂ ಹೆಚ್ಚು ಹೆಚ್ಚು ಪ್ರೀತಿಸುವ ಹ್ರದಯ ನನಗೆ ಕೊಡೆ ತಾಯಿ… 🙏 ನನಗೆ ಕೊಡೆ 🙏
ಧನ್ಯವಾದಗಳು Thank you…— Upendra (@nimmaupendra) August 14, 2023
ಇದನ್ನೂ ಓದಿ :Real Star ಉಪ್ಪಿಗೆ ಬಿಗ್ ರಿಲೀಫ್; ಎಫ್ಐಆರ್ ಗೆ ಹೈಕೋರ್ಟ್ ತಡೆ
ಪ್ರಜಾಕೀಯ ಲೈವ್ ಮಾತನಾಡುತ್ತಿದ್ದ ವೇಳೆ ನೀಡಿದ ಹೇಳಿಕೆ ಕುರಿತು ಆಕ್ರೋಶ, ಎಫ್ ಐಆರ್ ದಾಖಲಾಗುತ್ತಿದ್ದಂತೆ ಪೋಸ್ಟ್ ಮಾಡಿದ್ದ ಉಪೇಂದ್ರ ”ಇಂದು ನನ್ನ ವಿರುದ್ದ ಮಾತನಾಡುತ್ತಿರುವ ಹಲವರು ಅಂದು ಹುಟ್ಟೇ ಇರಲಿಲ್ಲ. 50 ವರ್ಷಗಳ ಹಿಂದೆ ನನ್ನ ಬಾಲ್ಯ ನಾನು ಎಂತಹ ಪರಿಸರದಲ್ಲಿ ಬೆಳೆದೆ.. ಆ ಬಾಲ್ಯದಲ್ಲಿ ನಾನು ಕಂಡ ಆ ಕ್ರೂರ ಬಡತನ, ನನ್ನ ಕಣ್ಣ ಮುಂದೆಯೇ ಬೆಂಕಿ ಹಚ್ಚಿಕೊಂಡು ಆದ ಆತ್ಮಹತ್ಯೆಗಳು, ಹಸಿವು, ಅಪಮಾನ, ತುಳಿತ …. ಇದನ್ನು ಅನುಭವಿಸಿ ಬೆಳೆದ ನಾನು ಇಂದು ಒಂದು ವರ್ಗದ ಜನರ ಬಗ್ಗೆ ಅವಮಾನಕಾರಿಯಾಗಿ ಮಾತನಾಡುತ್ತೇನೆಯೇ ? ನನಗೆ ಹುಚ್ಚೇ ? ಅದಕ್ಕೆ ಕಾರಣವಾದರೂ ಏನು ? ಅದರಿಂದ ನನಗೆ ಸಿಗುವ ಲಾಭವಾದರೂ ಏನು ? ಇಷ್ಟಕ್ಕೂ ಕ್ಷಮೆಯನ್ನು ಸ್ವೀಕರಿಸುವ ದೊಡ್ಡತನವೂ ಇಲ್ಲವೇ ? ಯಾಕೆ ಇಷ್ಟೊಂದು ದ್ವೇಷ ? ” ಎಂದು ಪ್ರಶ್ನಿಸಿದ್ದರು.
Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್
Mahakumbh; ಸಿದ್ದರಾಮಯ್ಯನವರೇ 5 ವರ್ಷ ಸಿಎಂ ಆಗಿರಲಿ: ಅಭಿಮಾನಿಯ ಪ್ರಾರ್ಥನೆ
Congress ಪಕ್ಷಕ್ಕೆ ಮರು ಸೇರ್ಪಡೆಯಾದ ಎಲ್.ಆರ್.ಶಿವರಾಮೇಗೌಡ, ಬ್ರಿಜೇಶ್ ಕಾಳಪ್ಪ
Siddaramaiah ನಮ್ಮ ನಾಯಕ, ಹೆಸರು ದುರ್ಬಳಕೆ ಮಾಡಿಕೊಳ್ಳುವ ಅಗತ್ಯವಿಲ್ಲ: ಡಿಕೆಶಿ
Ramanagara: ಬೆಂಗಳೂರು-ಮೈಸೂರು ಹೆದ್ದಾರಿಯಲ್ಲಿ ಭೀಕರ ಅಪಘಾತ; ತಪ್ಪಿದ ಭಾರೀ ದುರಂತ
Udayavani-MIC ನಮ್ಮ ಸಂತೆ ಸಂಭ್ರಮ: ಜೇನುಗೂಡು, ಜೇನು ಹನಿ
Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್
Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?
Bharamasagara: ವಿದ್ಯುತ್ ಕಿಡಿಗೆ ಎರಡು ಮೇವಿನ ಬಣವೆ ಸಂಪೂರ್ಣ ಭಸ್ಮ
Udayavani-MIC ನಮ್ಮ ಸಂತೆ: ತೆಂಗಿನ ಗರಟೆಯಲ್ಲಿ ಅರಳಿದ ಕಲಾಕೃತಿ
You seem to have an Ad Blocker on.
To continue reading, please turn it off or whitelist Udayavani.