ಒಳನಾಡು ಮೀನುಗಾರಿಕೆಗೆ ಉತ್ತೇಜನ ನೀಡಲು ಬದ್ಧ: ಅಂಗಾರ
Team Udayavani, Oct 20, 2022, 10:00 PM IST
ಬೆಂಗಳೂರು: ಸಾಂಪ್ರಾದಾಯಿಕ ಒಳನಾಡು ಮೀನುಗಾರಿಕೆಗೆ ಸರಕಾರ ಸಂಪೂರ್ಣ ಉತ್ತೇಜನ ನೀಡಲಿದೆ ಎಂದು ಮೀನುಗಾರಿಕೆ ಸಚಿವ ಎಸ್. ಅಂಗಾರ ಹೇಳಿದ್ದಾರೆ.
ಒಳನಾಡು ಮೀನುಗಾರಿಕೆ ಸಮಸ್ಯೆಗಳ ಕುರಿತು ಗುರುವಾರ ವಿಕಾಸಸೌಧದಲ್ಲಿ ಸಚಿವರು, ಶಾಸಕರು ಹಾಗೂ ಮೀನುಗಾರಿಕೆ ಸಂಘಟನೆಗಳೊಂದಿಗೆ ಸಭೆ ನಡೆಸಿದ ಅವರು, ಸಾಂಪ್ರದಾಯಿಕವಾಗಿ ಮೀನುಗಾರಿಕೆ ಮಾಡಿ ಬದುಕು ಕಟ್ಟಿಕೊಳ್ಳುವ ಮೀನುಗಾರರಿಗೆ ಹಾಗೂ ಒಳನಾಡು ಮೀನುಗಾರಿಕೆಗೆ ಸರಕಾರದಿಂದ ಉತ್ತೇಜನ ನೀಡಲಾಗುವುದು ಎಂದು ತಿಳಿಸಿದರು.
ಒಳನಾಡು ಮೀನುಗಾರಿಕೆಯಲ್ಲಿ ತೊಡಗಿರುವವರು ಆಯಾ ಪ್ರದೇಶಗಳಲ್ಲಿ ಸಂಘಟಿತರಾಗಿ ಗುಂಪುಗಳಾಗಬೇಕು. ಆಗ ಸರಕಾರದಿಂದ ಸೌಲಭ್ಯ ವಿತರಣೆಗೆ ಅನುಕೂಲವಾಗಲಿದೆ. ಅಲ್ಲದೆ, ಮೀನು ಉತ್ಪನ್ನಗಳಿಗೆ ಮಾರುಕಟ್ಟೆ ಒದಗಿಸಲು ಕ್ರಮ ಕೈಗೊಳ್ಳಲಾಗುವುದು ಎಂದರು.
ಮೀನುಗಾರರ ಕುಟುಂಬದವರು ತಮ್ಮ ಭೂಮಿಯಲ್ಲಿ ಮೀನುಗಾರಿಕೆಗೆ ಹೊಂಡಗಳನ್ನು ಮಾಡುವುದಾದಲ್ಲಿ ಉದ್ಯೋಗ ಖಾತ್ರಿ ಯೋಜನೆಯಡಿ ಹೊಂಡ ನಿರ್ಮಿಸಲು ಅವಕಾಶ ಕಲ್ಪಿಸಲಾಗುವುದು. ಅಲ್ಲದೆ ಅವರಿಗೆ ಉಚಿತವಾಗಿ ಮೀನುಮರಿಗಳನ್ನು ಒದಗಿಸಲು ಕ್ರಮ ಕೈಗೊಳ್ಳಲಾಗುವುದು ಎಂದು ಸಚಿವರು ತಿಳಿಸಿದರು.
ಸಭೆಯಲ್ಲಿ ಭಾಗವಹಿಸಿದ್ದ ಸಮಾಜ ಕಲ್ಯಾಣ ಮತ್ತು ಹಿಂದುಳಿದ ವರ್ಗಗಳ ಕಲ್ಯಾಣ ಸಚಿವ ಕೋಟ ಶ್ರೀನಿವಾಸ ಪೂಜಾರಿ ಅವರು, ಜಿಲ್ಲೆಗೊಂದು ಮೀನುಗಾರರ ಒಕ್ಕೂಟಗಳನ್ನು ರಚಿಸಿಕೊಳ್ಳುವುದರಿಂದ ಅನುಕೂಲವಾಗಲಿದೆ. ಅಲ್ಲದೆ, ಇಲಾಖೆಯಿಂದ ಮೀನುಗಾರಿಕೆಗೆ ತರಬೇತಿ ಹಾಗೂ ಪಂಜರ ಮೀನುಗಾರಿಕೆಗೆ ಉತ್ತೇಜನದ ಅಗತ್ಯವಿದೆ ಎಂದರು.
ಮೀನುಗಾರಿಕೆ ಇಲಾಖೆ ಮಾಜಿ ಸಚಿವ ಪ್ರಮೋದ್ ಮಧ್ವರಾಜ್ ಅವರು, ಉತ್ತರ ಕರ್ನಾಟಕ ಹಾಗೂ ಬಯಲುಸೀಮೆಯ ಒಳನಾಡು ಮೀನುಗಾರಿಕೆಗೆ ವಿಶೇಷ ಆದ್ಯತೆ ನೀಡಬೇಕು. ಈ ಮೂಲಕ ಸಾಂಪ್ರದಾಯಿಕ ಮೀನುಗಾರರಿಗೆ ಹೆಚ್ಚಿನ ಅನುಕೂಲವಾಗಲಿವೆ ಎಂದರು.
ಸಭೆಯಲ್ಲಿ ವಿವಿಧ ಭಾಗಗಳಿಂದ ಆಗಮಿಸಿದ್ದ ಮೀನುಗಾರರ ಸಂಘಗಳ ಪದಾಧಿಕಾರಿಗಳು ಒಳನಾಡು ಮೀನುಗಾರಿಕೆಗೆ ಉತ್ತೇಜನ ನೀಡುವ ಸಂಬಂಧ ಸಲಹೆಗಳನ್ನು ನೀಡಿದರು.
ಶಾಸಕರಾದ ರೂಪಾಲಿ ನಾಯಕ್, ತಳವಾರ ಸಾಬಣ್ಣ, ಮೀನುಗಾರಿಕೆ ಇಲಾಖೆ ಕಾರ್ಯದರ್ಶಿ ಸಲ್ಮಾ ಕೆ. ಫಾಹಿಮ್, ಮೀನುಗಾರಿಕೆ ಇಲಾಖೆ ನಿರ್ದೇಶಕ ರಾಮಾಚಾರಿ ಮತ್ತಿತರರು ಉಪಸ್ಥಿತರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Belagavi: ಬಿಮ್ಸ್ ಆಸ್ಪತ್ರೆಯಲ್ಲಿ ಮತ್ತೊರ್ವ ಬಾಣಂತಿ ಮೃತ್ಯು; ಕುಟುಂಬಸ್ಥರ ಆಕ್ರಂದನ
Controversy: ಕಾಂಗ್ರೆಸ್ ಪೋಸ್ಟರ್‌ನಲ್ಲಿ ಪಿಒಕೆ ತಪ್ಪಾಗಿ ಚಿತ್ರಣ; ಬಿಜೆಪಿ ತೀವ್ರ ಆಕ್ರೋಶ
Bidar; ಖರ್ಗೆ ಆಪ್ತನಿಂದ ವಂಚನೆ, ಕೊಲೆ ಬೆದರಿಕೆ; ಪತ್ರ ಬರೆದಿಟ್ಟು ಗುತ್ತಿಗೆದಾರ ಆತ್ಮಹತ್ಯೆ
Belagavi: ಪಿಒಕೆ ಬಗ್ಗೆ ಕಾಂಗ್ರೆಸ್ ನಿಲುವಿನ ಬಗ್ಗೆ ಮತ್ತೆ ಹೇಳಬೇಕಿಲ್ಲ: ಡಿಕೆ ಶಿವಕುಮಾರ್
Belagavi;ಕಾಂಗ್ರೆಸ್ ಕಾರ್ಯಕಾರಿಸಭೆಯಲ್ಲಿ ಖರ್ಗೆ,ರಾಹುಲ್ ಭಾಗಿ; ಸೋನಿಯಾ,ಪ್ರಿಯಾಂಕಾ ಗೈರು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.