ಶಾಲೆಗಳಲ್ಲಿ ಫಿಟ್ ಇಂಡಿಯಾ ಮೂವ್‌ಮೆಂಟ್
Team Udayavani, Aug 27, 2019, 3:00 AM IST
ಬೆಂಗಳೂರು: ಕೇಂದ್ರ ಸರ್ಕಾರದ ಫಿಟ್ ಇಂಡಿಯಾ ಮೂವ್‌ಮೆಂಟ್‌ನಲ್ಲಿ ಸಕ್ರಿಯವಾಗಿ ಭಾಗವಹಿಸಲು ಸಾರ್ವಜನಿಕ ಶಿಕ್ಷಣ ಇಲಾಖೆ ಶಾಲೆಗಳಿಗೆ ನಿರ್ದೇಶಿಸಿದೆ. ಆ.29ರಂದು ಪ್ರಧಾನಿ ನರೇಂದ್ರ ಮೋದಿಯವರು ದೆಹಲಿಯಲ್ಲಿ ಫಿಟ್ ಇಂಡಿಯಾ ಮೂವ್‌ಮೆಂಟ್‌ಗೆ ಚಾಲನೆ ನೀಡಲಿದ್ದಾರೆ. ದೂರದರ್ಶನದಲ್ಲಿ ಈ ಕಾರ್ಯಕ್ರಮದ ನೇರಪ್ರಸಾರ ಇರಲಿದೆ. ಎಲ್ಲ ಶಾಲೆಗಳಲ್ಲಿ ಈ ಕಾರ್ಯಕ್ರಮವನ್ನು ಕಡ್ಡಾಯವಾಗಿ ನೋಡುವ ಅಥವಾ ಕೇಳಿಸಿಕೊಳ್ಳುವ ವ್ಯವಸ್ಥೆಯನ್ನು ಮಾಡಬೇಕು ಎಂದು ಜಿಲ್ಲಾ ಉಪನಿರ್ದೇಶಕರಿಗೆ ಇಲಾಖೆ ತಿಳಿಸಿದೆ.
ಈ ಕಾರ್ಯಕ್ರಮದಲ್ಲಿ ಶಾಲಾ ಮಕ್ಕಳು ಮತ್ತು ಶಿಕ್ಷಕರು ಭಾಗವಹಿಸುವುದರೊಂದಿಗೆ ಉತ್ತಮ ಆರೋಗ್ಯದ ಪ್ರತಿಜ್ಞೆ ಸ್ವೀಕರಿಸಲು ಪ್ರೇರೇಪಿಸಬೇಕು. ಕಾರ್ಯಕ್ರಮದ ಪೂರ್ವ ಸಿದ್ಧತೆಗಾಗಿ ಕ್ಷೇತ್ರ ಶಿಕ್ಷಣಾಧಿಕಾರಿಗಳು ತಮ್ಮ ವ್ಯಾಪ್ತಿಯಲ್ಲಿ ಸಭೆ ನಡೆಸಬೇಕು. ಕಾರ್ಯಕ್ರಮಕ್ಕೆ ಬೇಕಾದ ಅಗತ್ಯ ಸಲಹೆ ಸೂಚನೆಗಳನ್ನು ನೀಡಬೇಕು ಎಂದು ಇಲಾಖೆ ಪ್ರಕಟಣೆ ತಿಳಿಸಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bypolls: ಯಡಿಯೂರಪ್ಪರನ್ನು ರಾಜಕೀಯವಾಗಿ ಮುಗಿಸಲು ಬೊಮ್ಮಾಯಿ ಪ್ಲ್ಯಾನ್: ಸಿದ್ದರಾಮಯ್ಯ
Shirola: ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಸಿಬ್ಬಂದಿ ಕೊರತೆ… ರೋಗಿಗಳ ಪರದಾಟ
Missing: 3 ದಿನದಿಂದ ಕೆಪಿಸಿ ಭದ್ರತಾ ಸಿಬ್ಬಂದಿ ನಾಪತ್ತೆ… ಮಾಣಿ ಡ್ಯಾಂ ಬಳಿ ಬೈಕ್ ಪತ್ತೆ
Excise: ಅಬಕಾರಿ ಇಲಾಖೆಯಲ್ಲಿ ಭ್ರಷ್ಟಾಚಾರ ಆರೋಪ: ನ.20ರಂದು ರಾಜ್ಯದಲ್ಲಿ ಮದ್ಯ ಮಾರಾಟ ಬಂದ್
Gadaga: ನರಿ-ನಾಯಿ, ತೋಳ-ನಾಯಿ ಮಿಶ್ರ ತಳಿ ಪತ್ತೆ!
MUST WATCH
ಹೊಸ ಸೇರ್ಪಡೆ
Bunts Hostel, ಕರಂಗಲ್ಪಾಡಿ ಜಂಕ್ಷನ್: ಶಾಶ್ವತ ಡಿವೈಡರ್ ನಿರ್ಮಾಣ ಕಾಮಗಾರಿ
Mangaluru: ರಾತ್ರಿ ಪ್ರಿಪೇಯ್ಡ್ ಆಟೋ ಇಲ್ಲದೆ ಪ್ರಯಾಣಿಕರ ಪರದಾಟ
Kanguva: 10 ಸಾವಿರಕ್ಕೂ ಹೆಚ್ಚಿನ ಸ್ಕ್ರೀನ್‌ನಲ್ಲಿ ಅದ್ಧೂರಿಯಾಗಿ ರಿಲೀಸ್ ಆಗಲಿದೆ ʼಕಂಗುವʼ
Urwa: ಬಾಯ್ದೆರೆದ ಕಾಂಕ್ರೀಟ್ ಚೇಂಬರ್‌ಗಳಿಗೆ ಬಿತ್ತು ಮುಚ್ಚಳ
Bypolls: ಯಡಿಯೂರಪ್ಪರನ್ನು ರಾಜಕೀಯವಾಗಿ ಮುಗಿಸಲು ಬೊಮ್ಮಾಯಿ ಪ್ಲ್ಯಾನ್: ಸಿದ್ದರಾಮಯ್ಯ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.